Uncategorized
ಮತದಾರರ ಒಲವು ಕಾಂಗ್ರೆಸ್ ಪರವಾಗಿ ಇದೆ. ಬಹುಮತದಿಂದ ಗೆದ್ದು ಬರುವ ಆತ್ಮವಿಶ್ವಾಸ ನಮ್ಮಲ್ಲಿದೆ – ಅಭ್ಯರ್ಥಿ ಅಶೋಕ್ ಕುಮಾರ್ ರೈ
ಪುತ್ತೂರು, ಮೇ 6 : ‘ನನ್ನ ಬೂತ್ ನಾನು ಅಭ್ಯರ್ಥಿ’ ಎಂಬ ಮೂಲಕ 5 ಸಾವಿರಕ್ಕೂ ಅಧಿಕ ಕಾರ್ಯಕರ್ತರಿಂದ ಅಭಿಯಾನ ನಡೆದಿದ್ದು, ಒಂದು ಬೂತ್ ನಲ್ಲಿ 120 ರಿಂದ 130 ಮನೆಯನ್ನು ಸಂಪರ್ಕ ಮಾಡುವ ಕಾರ್ಯ ಮಾಡಲಾಗಿದೆ. ಮೇ.7ರಂದು ಉಪ್ಪಿನಂಡಿ ಹಾಗೂ ವಿಟ್ಲದಲ್ಲಿ ಮತಯಾಚನೆ ರ್ಯಾಲಿ ನಡೆಯಲಿದೆ. ಮತಯಾಚನೆಯ ಕೊನೆಯ ದಿನವಾದ ಮೇ.8 ರಂದು ಮಧ್ಯಾಧ್ನ 3 ಗಂಟೆಯಿಂದ ಬೊಳುವಾರಿನಿಂದ ದರ್ಬೆ ವೃತ್ತದವರೆಗೆ ಮತಯಾಚನೆ ರ್ಯಾಲಿ ಮೂಲಕ ನಡೆಯಲಿದೆ. ಇದರಲ್ಲಿ 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದು, ಎಲ್ಲಾ ಭಾಗದಿಂದ ಕಾರ್ಯಕರ್ತರು ಭಾವಹಿಸಲು ಉತ್ಸುಕರಾಗಿದ್ದಾರೆ. ರ್ಯಾಲಿಯಲ್ಲಿ ಸ್ಟಾರ್ ಪ್ರಚಾರಕರಾಗಿ ಚಿತ್ರ ನಟಿ ರಮ್ಯ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ನಡೆಸಿ ತಿಳಿಸಿದರು.
ಎಲ್ಲಾ ಭಾಗದಲ್ಲಿ ಮತದಾರರ ಒಲವು ಕಾಂಗ್ರೆಸ್ ಪರವಾಗಿ ಇರುವುದು ಕಂಡು ಬಂದಿದೆ. ಚುನಾವಣೆಯಲ್ಲಿ ರಾಜ್ಯದಲ್ಲಿ ಬಹುಮತದಿಂದ ಗೆದ್ದು ಬರುವ ಆತ್ಮವಿಶ್ವಾಸ ನಮ್ಮಲ್ಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರನಾಳಿಕೆಯಂತೆ ಹಾಗೂ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯವನ್ನು ಇಟ್ಟುಕೊಂಡು ಮನೆ ಮನೆಯಲ್ಲಿ ಮತಯಾಚನೆಯನ್ನು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದರು.
ಕ್ಷೇತ್ರದಲ್ಲಿ ಮುಖ್ಯವಾಗಿ ಪುತ್ತೂರಿಗೆ ವೈದ್ಯಕೀಯ ಕಾಲೇಜು, ಕುಡಿಯುವ ನೀರಿನ ವ್ಯವಸ್ಥೆ, ಕೊಲದಲ್ಲಿ ಎನಿಮಲ್ ಹಬ್ ಸೃಷ್ಟಿಸುವ ಜತೆಗೆ, ಪಶು ವೈದ್ಯಕೀಯ ಕಾಲೇಜು ಸ್ಥಾಪನೆಯ ಮೂಲಕ ಉದ್ಯೋಗ ಸೃಷ್ಟಿಸುವ ಕಾರ್ಯ, ಒಳಚರಂಡಿಯನ್ನು ನಿರ್ಮಾಣ ಮಾಡುವ ಕಾರ್ಯ, ಕಟ್ ಕನ್ವರ್ಷನ್, ಸಿಂಗಲ್ ಸೈಟ್, 94 ಸಿ ಹಾಗೂ ಅಕ್ರಮ ಸಕ್ರಮ ಅರ್ಜಿ ವಿಲೇವಾರಿಯಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಭರವಸೆಯನ್ನು ಜನರಿಗೆ ನೀಡಲಾಗುತ್ತಿದೆ. ಜನ ಆಶೀರ್ವಾದ ಮಾಡಿದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಗ್ರಾಮ ಗ್ರಾಮದಲ್ಲಿ ಸಿಟ್ಟಿಂಗ್ ಮಾಡಲಾಗುವುದು ಎಂದರು.
ತಮ್ಮಣ ಶೆಟ್ಟಿ ರವರು ಆರೋಪ ಮಾಡಿರುವುದು ಚುನಾವಣೆಯ ಸಮಯದಲ್ಲಿದ್ದು, 8.5 ವರ್ಷ ಹಿಂದೆಯ ಹಣಕೊಡಬೇಕೆಂದು ಹೇಳಿತ್ತಾರೆ. ಆದರೆ ಅವರು ದಾಖಲೆಗಳನ್ನು ನೀಡದೆ, ಆರೋಪ ಮಾಡುವುದು ಸರಿಯಲ್ಲ. ಮೂರು ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಅರೆಸ್ಟ್ ವಾರೆಂಟ್ ಆಗಿದೆ. 10 ಕೋಟಿಗೆ ಮಾನನಷ್ಟ ಮುಕದ್ದಮೆ ಪ್ರಕರಣ ದಾಖಲಿಸಲಾಗಿದೆ. ಅವರಿಗೆ ಹಣ ನೀಡಲಿದ್ದರೆ ಪ್ರಕರಣ ದಾಖಲಿಸಬಹುದಿತ್ತು. ಇಲ್ಲಿಯವರೆಗೆ ಅದನ್ನು ಮಾಡಿಲ್ಲ. ಕಾನೂನು ಹೋರಾಟ ಮಾಡಲಾಗುವುದು ಎಂದರು.
ಕಾಂಗ್ರೆಸ್ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ನೀಡಿದ್ದು, ಗೂಂಡಾಗಿರಿ ಯಾವ ಸರ್ಕಾರದಿಂದಲೂ ಸಾಧ್ಯವಿಲ್ಲ ಮತ್ತು ಕಾನೂನಿನ ಪ್ರಕಾರ ಅವರವರ ಹಕ್ಕು ಸಿಗುತ್ತದೆ. ಕಾಂಗ್ರೆಸ್ ಗೆ ನೇರ ಎದುರಾಳಿ ಬಿಜೆಪಿಯೇ ಹೊರತು ಇನ್ಯಾವುದಲ್ಲ. ಪ್ರನಾಳಿಕೆಯನ್ನು ಪಕ್ಷದ ಮುಖ್ಯಸ್ಥರು ಮಾಡಿದ್ದು, ಪಕ್ಷ ಅಧಿಕಾರಕ್ಕೆ ಬಂದ ನಂತರ ಅದರಿಂದ ಆಗುವ ತೊಂದರೆಯ ಬಗ್ಗೆ ಚರ್ಚೆಯನ್ನು ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಜನರ ಮನಸ್ಸಿಗೆ ನೋವಾಗುವ ರೀತಿಯ ವಿಚಾರಗಳನ್ನು ತಿಳಿಸುವ ಕಾರ್ಯ ಮಾಡಲಾಗುವುದು ಎಂದರು.
ಹಿಂದಿನ ಕಾಂಗ್ರೆಸ್ ಸರ್ಕಾರ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಕಾರ್ಯವನ್ನು ಮಾಡಿದಾಗ, ಇದನ್ನು ಉಚಿತ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳುವ ಜತೆಗೆ ಮೀಟರ್ ಅಳವಡಿಸುವ ಕಾರ್ಯವನ್ನೂ ಮಾಡಿತ್ತು. ಆದರೂ ಇಂದಿಗೂ ಉಚಿತವಾಗಿ ನೀಡಲಾಗುತ್ತಿದೆ. ಕಾಂಗ್ರೆಸ್ ಆರಂಭಿಸುವ ಯೋಜನೆಗಳು ಸಿಲ್ಲಿಸಲಾಗದಂತ ಯೋಜನೆಗಳಾಗಿದೆ. ಎತ್ತಿನಹೊಳೆ ಯೋಜನೆಯೂ ನೀರಿನ ಸಮಸ್ಯೆಗೂ ಯಾವುದೇ ಸಂಬಂಧವಿಲ್ಲ. ಉಪ್ಪಿನಂಗಡಿಯಲ್ಲಿ ಡ್ಯಾಮ್ ಮಾಡಿ ಪ್ರತಿ ಗ್ರಾಮದ ಟ್ಯಾಂಕ್ ಗೂ ಸಂಪರ್ಕ ಕಲ್ಪಿಸುವ ಕಾರ್ಯ ಮಾಡಿದರೆ ಅಂತರ್ಜಲದ ಮಟ್ಟ ಹೆಚ್ಚಿಸಬಹುದಾಗಿದೆ. ಪಕ್ಷದ ಅಭಿವೃದ್ಧಿ ಬಗ್ಗೆ ಮಾತ್ರ ಚರ್ಚಿಸಲಾಗುತ್ತದೆ ಹೊರತು ಯಾರನ್ನೂ ಟಾರ್ಗೆಟ್ ಮಾಡುವ ಕಾರ್ಯ ನಡೆದಿಲ್ಲ. ರಾಷ್ಟ್ರೀಯಾ ಪಕ್ಷಗಳು ಯೋಜನೆಯನ್ನು ಘೋಷಿಸುವ ಮೊದಲು ಆ ಬಗ್ಗೆ ಲೆಕ್ಕಾಚಾರಗಳನ್ನು ಮಾಡುತ್ತದೆ ಎಂದರು.
ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಮ ಕೆ. ಬಿ., ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ, ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಡಿ, ವಕ್ತಾರ ಅಮಳ ರಾಮಚಂದ್ರ ಉಪಸ್ಥಿತರಿದ್ದರು.
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ
ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಲಕ್ಷ್ಯ ಕೌನ್ಸೆಲಿಂಗ್ ಸೆಂಟರ್ ನ ಮಕ್ಕಳ
ಸಲಹೆಗಾರರಾದ ದುರ್ಗಾಪರಮೇಶ್ವರ ಭಟ್ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿನಲ್ಲಿ ಮಾರ್ಗದರ್ಶಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರೀಕ್ಷಾ ಸಿದ್ಧತೆ ಮತ್ತು ತರಗತಿಯ ಶಿಸ್ತು ಅತೀ ಮುಖ್ಯವಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ಸದಾ ಚುರುಕಾಗಿರಬೇಕು. ಕಾಲಕ್ಕೆ ತಕ್ಕಂತೆ ಆಗುವ ಬದಲಾವಣೆಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ, ಉತ್ತಮ ಮಾಹಿತಿ ಹಾಗೂ ಜ್ಞಾನವನ್ನು ನಿರಂತರವಾಗಿ ಪಡೆದುಕೊಳ್ಳುತ್ತಿರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮಾನಸಿಕವಾಗಿ ಅತ್ಯಂತ ದೃಢವಾಗಿರಬೇಕು. ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಮಾತ್ರ ಸೀಮಿತವಾಗದೆ, ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ಕೌಶಲ್ಯ ಮತ್ತು ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು.
ವಾಣಿಜ್ಯ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ಸದೃಢವಾದ ಮನಸ್ಸು ಇರಬೇಕು. ಹೊಸ ಆಲೋಚನೆಗಳು, ಸೃಜನಶೀಲತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯ ಎಂದು ಹೇಳಿದರು.
ವೇದಿಕೆಯಲ್ಲಿ ವಾಣಿಜ್ಯ ಸಂಘದ ನಿರ್ದೇಶಕರಾದ ಭರತ್ ಜಿ ಫೈ ಹಾಗೂ ಪೂರ್ಣಿಮಾ ಡಿ. ಎಸ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ದೇಶ್ನ ಎ. ಎಲ್ ಸ್ವಾಗತಿಸಿ, ಸ್ವಿನಿಕಾ ಎಸ್ ಲೋಬೋ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
Uncategorized
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ
ಘಟನೆ ಬಳಿಕ ಮೊಬೈಲ್ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!
ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.
ದೂರು ದಾಖಲಿಸಲು ಹಿಂದೇಟು?
ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ
ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.
ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
-
ನಿಧನ ವಾರ್ತೆ8 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಪರಾಧ8 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ8 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ8 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ8 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ6 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಬಿಗ್ ನ್ಯೂಸ್3 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್3 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ















