ಪುತ್ತೂರು
ಚುನಾವಣೆಗೆ ಕಾರ್ಯಕರ್ತರ ಖರ್ಚಿನಲ್ಲಿ ನಿಂತ ಏಕೈಕ ವ್ಯಕ್ತಿ ಪುತ್ತಿಲ | ಈ ಬಾರಿ ವಿಜಯಶಾಲಿಯಾಗಿ ಅವರನ್ನು ವಿಧಾನಸೌಧದಲ್ಲಿ ಕಾಣಬೇಕು – ವಾಗ್ಮಿ ಆದರ್ಶ್ ಕೇಲ
ಪುತ್ತೂರು: ಮತಾಂಧ ಒಬ್ಬ ಎಸ್ಡಿಪಿಐ ಪಕ್ಷದಲ್ಲಿ ನಿಲ್ಲುತ್ತಾನಾದರೆ, ಅರುಣ್ ಕುಮಾರ್ ಪುತ್ತಿಲ ಅವರನ್ನು ಹಿಂದುಗಳು ಬೆಂಬಲಿಸಬೇಕು. ಪುತ್ತೂರಿನ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿ ಈಗ ಮೂಲೆಗೂಂಪು ಆದದ್ದು ಯಾಕೆ ಎಂದು ಒಮ್ಮೆ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ಮಾಡಬೇಕಾಗಿದೆ. ಮೋದಿ ದೇಶದ ಪ್ರಧಾನಿ ಅವರ ಪೋಟೋ ಉಪಯೋಗಿಸಬಾರದೆಂದು ಹೇಳುವುದನ್ನು ಯಾವ ನ್ಯಾಯಾಲಯವೂ ಒಪ್ಪಲು ಸಾಧ್ಯವಿಲ್ಲ ಎಂದು ಉಡುಪಿ ವಕೀಲ ರಾಜೇಶ್ ಹೇಳಿದರು.
ಅವರು ಈಶ್ವರಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಪುತ್ತೂರಿನ ಮಣ್ಣಿನಲ್ಲಿ ಒಬ್ಬ ವ್ಯಕ್ತಿಯ ಶಕ್ತಿಯನ್ನು ಮಾಡಬೇಕು. ಪುತ್ತಿಲರು ತನ್ನಲ್ಲಿ ದುಡ್ಡು ಇದೆಯೆಂದು ಹೊರಟಿದ್ದಲ್ಲ, ಕಾರ್ಯಕರ್ತರಿದ್ದಾರೆಂದು ಹೊರಟಿದ್ದಾರೆ. ಪುತ್ತಿಲ ವಿರುದ್ಧ ಒಕ್ಕಲಿಗರನ್ನು, ಬಿಲ್ಲವರನ್ನು ಕರೆತಂದರು, ಬ್ರಾಹ್ಮಣರನ್ನು ಕರೆತಂದರು ಯಾವುದು ನಡೆಯಲಿಲ್ಲ. ಭಾರತ್ ಮಾತಾ ಪೂಜನಾ ಕಾರ್ಯಕ್ರಮದಲ್ಲಿ ಮೊಟ್ಟ ಮೊದಲ ಬಾರಿ ಒಬ್ಬ ವ್ಯಕ್ತಿಯ ವಿರುದ್ಧ ಮಾತನಾಡಲಾಯಿತು ಎಂದು ತಿಳಿಸಿದರು.
ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಈ ಸ್ಪರ್ಧೆ ಅಧಿಕಾರಕ್ಕೋಸ್ಕರವಾಗಿ ಅಲ್ಲ, ಈ ಭಾರಿಯ ಚುನಾವಣೆಯ ಗೆಲುವು ಕಾರ್ಯಕರ್ತನ ಗೆಲುವಾಗಿದೆ. ಯಾವುದೇ ರೀತಿಯ ಗೂಂಡಾ ಸಂಸ್ಕೃತಿಯನ್ನು ಈ ಕ್ಷೇತ್ರದ ಜನತೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಉಡುಪಿಯ ವಾಗ್ಮಿ ಆದರ್ಶ ಖೇಲ ಮಾತನಾಡಿ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅಭ್ಯರ್ಥಿಯೊಬ್ಬರು ಹಣವನ್ನು ಖರ್ಚು ಮಾಡದೇ ಚುನಾವಣೆಗೆ ಕಾರ್ಯಕರ್ತರ ಖರ್ಚಿನಲ್ಲಿ ನಿಂತ ಏಕೈಕ ವ್ಯಕ್ತಿ ಪುತ್ತಿಲರಾಗಿದ್ದಾರೆ. ಈ ಚುನಾವಣೆ ಹಿಂದುತ್ವದ ಚುನಾವಣೆಯಾಗಿದ್ದು, ವಿಧಾನಸೌಧದಲ್ಲಿ ನಾವು ಅರುಣ್ ಕುಮಾರ್ ಪುತ್ತಿಲರನ್ನು ಕಾಣಬೇಕು ಎಂದು ಹೇಳಿದರು.
ನಿಧನ ವಾರ್ತೆ
Puttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
ಪುತ್ತೂರು ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪುತ್ತೂರು: ನಗರದ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರು ಪುತ್ತೂರು ಕೆಎಸ್ಆರ್ಟಿಸಿಯಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿರುವ ಸೀತಾರಾಮ ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಶಿಕ್ಷಣ
Air Force Day-ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ 94ನೇ ವಾಯುಸೇನಾ ದಿನಾಚರಣೆ
ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.
ಪುತ್ತೂರು: ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ಯರದಲ್ಲಿ ನಗರದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಗುರುವಾರ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುಡಾ ಅಧ್ಯಕ್ಷ ಅಮಲಾ ರಾಮಚಂದ್ರ ಮಾತನಾಡಿ ದೇಶಕ್ಕಾಗಿ ಸೇವೆ ಸಲ್ಲಿಸುವುದು ಜೀವನದಲ್ಲಿ ಸಿಗುವ ಅಪೂರ್ವ ಕ್ಷಣ. ಸಾಹಸ, ಧೈರ್ಯ, ದೇಶಸೇವೆಗೆ ವಾಯುಸೇನೆ ಉತ್ತಮ ಆಯ್ಕೆ. ಆಧುನಿಕ ಕಾಲದ ಯುದ್ಧದಲ್ಲಿ ವಾಯುಸೇನೆಯ ಕೊಡುಗೆ ಅತ್ಯಂತ ಮಹತ್ವದ್ದು ಎಂದರು.
ಶ್ರೀಪ್ರಕಾಶ್ ಕುಕ್ಕಾಜೆ ಪ್ರಧಾನ ಭಾಷಣಗೈದು ವಾಯುಪಡೆಯ ಬಗೆಗೆ ಹಾಗೂ ಸಶಸ್ತ್ರ ಪಡೆಗಳಲ್ಲಿನ ಉದ್ಯೋಗಾವಕಾಶಗಳ ಬಗೆಗೆ ಮಾಹಿತಿ ನೀಡಿದರು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸಾರ್ಜೆಂಟ್ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮತ್ತು ಕರ್ನಲ್ ಡಿ.ಜಿ. ಭಟ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಂಬಿಕಾ ವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150ನೇ ವರ್ಷದ ಆಚರಣೆ; ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ ಗುರುತು : ರಾಜೇಶ ಪದ್ಮಾರ್
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಮಾತನಾಡಿದರು.
ಪುತ್ತೂರು, ಅ. 15: ವಂದೇ ಮಾತರಂ ಗೀತೆಯೂ ಏಕತೆಯನ್ನು ಸಾರುವುದರ ಜೊತೆಗೆ ಜನರಲ್ಲಿ ಪ್ರೇರಣೆಯನ್ನು ಮೂಡಿಸುತ್ತದೆ. ಇದರ ನಿರ್ಮಾತೃ ಬಂಕಿಮ ಚಂದ್ರ ಚಟರ್ಜಿ. ಯಾವುದೇ ಜಾತಿ, ಬೇಧವಿಲ್ಲದೆ ರೂಪಿಸಿದ ಈ ವಂದೇ ಮಾತರಂ ಗೀತೆಯು ಬ್ರಿಟಿಷರ ಆಳ್ವಿಕೆಯನ್ನು ಅಂತ್ಯಗೊಳಿಸುವ ಉದ್ದೇಶದಿಂದ ಬಂಗಾಳ ವಿಭಜನೆಯ ವಿರೋಧವಾಗಿ ವಂಗ ಭಂಗ ಚಳವಳಿಯ ಧ್ಯೇಯ ಗೀತೆಯಾಗಿ ಮೂಡಿಬಂದ ಗೀತೆಯಿದು. ಕೊಲ್ಕತ್ತಾದಿಂದ ಹೊರಟ ಹೋರಾಟದ ಗೀತೆ ವಿಶ್ವಾದ್ಯಂತ ವ್ಯಾಪಿಸಿತು ಮತ್ತು ಯುಗಾಂತರ ಸಂಘಟನೆಯ ಆರಂಭಕ್ಕೆ ಮುಂದಡಿಯಿಟ್ಟಿತು. ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಈ ಜಯಘೋಷವನ್ನು ಕೂಗಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಸಮಾಜದ ಪ್ರತಿಯೊಂದು ಸ್ಥರಗಳಲ್ಲೂ ವಂದೇ ಮಾತರಂ ಕುರಿತು ಜಾಗೃತಿ ಮೂಡಬೇಕು. ವಂದೇ ಮಾತರಂ ಕುರಿತ ಈ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯನ್ನು ರಾಷ್ಟ್ರೀಯತೆಯೆಡೆಗೆ ಎಚ್ಚರಿಸುವ ಕಾರ್ಯ ಇದು ಎಂದರು.
ಸಮಾರಂಭದ ಬಳಿಕ ವಿದ್ಯಾರ್ಥಿಗಳು ಒಕ್ಕೊರಲಿನಿಂದ ವಂದೇ ಮಾತರಂ ಗೀತೆಯನ್ನು ಹಾಡಿದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ವಿಶೇಷ ಅಧಿಕಾರಿ ಹಾಗೂ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಜೆ.ರೈ ನಿರೂಪಿಸಿದರು.
-
ಬಿಗ್ ನ್ಯೂಸ್21 hours agoPuttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ
-
ಸ್ಥಳೀಯ19 hours agoKadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!
-
ಅಂತರ ರಾಜ್ಯ23 hours agoRamleela-ನವದೆಹಲಿ: ರಾಮಲೀಲಾದಲ್ಲಿ ಈ ಬಾರಿ ಅಸುರರ ಜತೆಗೆ ʻಜಿರಳೆʼಯೂ ದಹನ..!
-
ಕಾರ್ಯಕ್ರಮಗಳು22 hours agoMangalore-ಮಂಗಳೂರಿಗೆ ಲಗ್ಗೆ ಇಟ್ಟ ಅಲರ್ಜಿ ಪರೀಕ್ಷೆಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರಾಜ್ಯದ ಪ್ರತಿಷ್ಠಿತ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ : ಅ.19ರಂದು 11ನೇ ಶಾಖೆ ಉದ್ಘಾಟನೆ
-
ಅಪರಾಧ23 hours agoUdupi-ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ
-
ಅಂತರ ರಾಜ್ಯ23 hours agoTruecaller service-ಟೆಲಿಕಾಂ ಸಂಸ್ಥೆಗಳೇ ಒದಗಿಸಲಿವೆ ಟ್ರೂ ಕಾಲರ್ ಸೇವೆ; ಅಪರಿಚಿತ ನಂಬರ್ನಿಂದ ಕರೆ ಬಂದರೂ ಹೆಸರು ಪ್ರದರ್ಶನ ಕಡ್ಡಾಯ?
-
ಅಂತರ ರಾಜ್ಯ18 hours agoSupreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!
-
ಶಿಕ್ಷಣ17 hours agoVidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ




















