Connect with us

Uncategorized

ಬೆಂಗಳೂರಿನ ಮುಳಿಯ ಜ್ಯುವೆಲ್ಸ್‌ʼನಲ್ಲಿ ಕನ್ನಡ ರಾಜ್ಯೋತ್ಸವ ವಿಶೇಷ : ಚಿಂತನ ಮಂಥನ ‘ಮನೆ-ಮನದಲ್ಲಿ ಕನ್ನಡʼ‌ | ಉದ್ಯಮ ಸಂಸ್ಥೆಗಳ ಪ್ರೋತ್ಸಾಹವೂ  ಕನ್ನಡದ ಬೆಳವಣಿಗೆಗೆ ಸಹಕಾರಿ : ಸಚಿವ ವಿ. ಸುನಿಲ್‌ ಕುಮಾರ್

Published

on



Ad Widget

Ad Widget

Ad Widget

Ad Widget

ಬೆಂಗಳೂರು: ಬೆಂಗಳೂರಿನಲ್ಲಿ ಮುಳಿಯ ಪ್ರತಿಷ್ಠಾನ ಮತ್ತು ಕರ್ನಾಟಕ ಲೇಖಕಿಯರ ಸಂಘದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ  ಚಿಂತನ ಮಂಥನ ‘ಮನೆ-ಮನದಲ್ಲಿ ಕನ್ನಡʼ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಶುಕ್ರವಾರ ಉದ್ಘಾಟಿಸಿದರು.

Ad Widget

Ad Widget

Ad Widget

Ad Widget

ಬಳಿಕ ಮಾತನಾಡಿದ ಅವರು “ ‘ಎಲ್ಲ ಉದ್ಯಮ ಸಂಸ್ಥೆಗಳು ಕನ್ನಡದ ಕಾಳಜಿ ತೋರಿ ಪ್ರೋತ್ಸಾಹಿಸಿದರೆ ಭಾಷೆಯ ಉಳಿವು, ಬೆಳವಣಿಗೆ ಏನೂ ಕಷ್ಟವಲ್ಲ ́ಎಂದರು  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

   ‘ಭಾಷೆ ಭಾಷಣದ ವಸ್ತು ಅಲ್ಲ. ಅದು ನಮ್ಮ ಸಂಸ್ಕೃತಿ, ನಡವಳಿಕೆಯನ್ನು ಒಳಗೊಂಡಿದೆ. ಸಂಸ್ಕೃತಿ ಶ್ರೀಮಂತಗೊಳಿಸಲು ಕನ್ನಡದಷ್ಟು ಶ್ರೀಮಂತ ಭಾಷೆ ಇನ್ನೊಂದು ಇಲ್ಲ. ಇತ್ತೀಚೆಗೆ ‘ಮಾತಾಡ್‌ ಮಾತಾಡ್‌ ಕನ್ನಡ’ ಪರಿಕಲ್ಪನೆಗೆ ಸುಮಾರು 20 ಲಕ್ಷಕ್ಕೂ ಅಧಿಕ ಜನ ಸ್ಪಂದಿಸಿದ್ದರು. ಅಂದರೆ ನಮ್ಮಲ್ಲಿ ಭಾಷಾಭಿಮಾನ ಖಂಡಿತವಾಗಿಯೂ ಇದೆ. ಆದರೆ, ಅಭಿವ್ಯಕ್ತಿಗೆ ವೇದಿಕೆ ಬೇಕಿತ್ತು ಅಷ್ಟೇ’ ಎಂದರು.

Ad Widget

Ad Widget <> Ad Widget

ಬಂಗಾರದ ಮಳಿಗೆಯಲ್ಲಿ ಕನ್ನಡ ವಜ್ರ ಆಗಬೇಕು : ಹಂಪನಾ



Ad Widget

ಸಾಹಿತಿ, ಸಂಶೋಧಕಿ ಡಾ.ಕಮಲಾ ಹಂಪನಾ ಮಾತನಾಡಿ, ‘ಹಿಂದಿಯೊಂದೇ  ರಾಷ್ಟ್ರಭಾಷೆ ಅಲ್ಲ. ಹೆಚ್ಚು ಬಳಕೆಯಲ್ಲಿ ಇರುವ ಕಾರಣ ಅದು ರಾಷ್ಡ್ರಭಾಷೆ ಎಂದು ಕರೆಸಿಕೊಂಡಿದೆ ಅಷ್ಟೆ. ಕನ್ನಡ ಸಹಿತ ಭಾರತದ 23 ಭಾಷೆಗಳೂ ರಾಷ್ಟ್ರಭಾಷೆಗಳೇ ಆಗಿವೆ. ಹೀಗಿದ್ದೂ  ಹಿಂದಿಯ ಒತ್ತಡ ಹೇರಿದಾಗ ನಾವು ಪ್ರತಿರೋಧ ತೋರಲೇಬೇಕಾಗಿದೆ’ ಎಂದರು.

Ad Widget

Ad Widget

‘ಬಂಗಾರದ ಮಳಿಗೆಯಲ್ಲಿ ಕನ್ನಡ ವಜ್ರ ಆಗಬೇಕು. ನಮ್ಮ ಮನೆಗಳಲ್ಲಿ ಕನ್ನಡದ ಪದಗಳು ನಲಿದಾಡಬೇಕು. ಅಂಥ ಪದಸಮೃದ್ಧತೆಯನ್ನು ಕನ್ನಡ ಹೊಂದಿದೆ. ಹಾಗಿದ್ದರೂ ನಮ್ಮ ವ್ಯವಹಾರಗಳಿಗೆ ಪರಭಾಷೆಯನ್ನು ನೆಚ್ಚಿಕೊಂಡಿರುವುದನ್ನು ನೋಡಿದಾಗ ನೋವೆನಿಸುತ್ತದೆ’ ಎಂದು ಹೇಳಿದರು.

‘ನನ್ನ ಬ್ಯಾಂಕ್‌ ವ್ಯವಹಾರ ಎಲ್ಲವೂ ಕನ್ನಡದಲ್ಲೇ ನಡೆಯುತ್ತಿದೆ. ಯಾರೂ ನನ್ನ ಕನ್ನಡದ ವ್ಯವಹಾರವನ್ನು ತಿರಸ್ಕರಿಸಿಲ್ಲ. ಹಾಗೊಂದು ವೇಳೆ ತಿರಸ್ಕರಿಸಿದರೆ ಅವರು ಉಳಿಯುವುದೂ ಇಲ್ಲ’ ಎಂದರು.

ಸಾಹಿತಿ, ಶಿಕ್ಷಣ ತಜ್ಞೆ ಡಾ.ಗೀತಾ ರಾಮಾನುಜಮ್‌ ಮಾತನಾಡಿ, ‘ಮೂಲತಃ ತಮಿಳು ಮಾತೃಭಾಷೆಯವಳಾದ ನಾನು 22ನೇ ವಯಸ್ಸಿನಲ್ಲಿ ಕನ್ನಡ ಕಲಿತು ಪತ್ರಿಕೆಯಲ್ಲಿ ಮುಖಪುಟ ಲೇಖನ ಬರೆಯುವಂತಾಯಿತು. ಶಿಕ್ಷಕಿಯಾಗಿದ್ದಾಗ ಮಕ್ಕಳಿಗೆ ಕನ್ನಡ ಕಲಿಸಲಾಗದೇ ಅತ್ತಿದ್ದೂ ಇದೆ. ಪಾಠ ಕಲಿಸಬೇಕಾದಾಗ ಕನ್ನಡ ಕಲಿಯಲೇಬೇಕಾಯಿತು. ಕನ್ನಡವನ್ನು ಸ್ವಾಗತಿಸಿ ಆಸ್ವಾದಿಸಿದ್ದಕ್ಕೆ ನನಗೆ ಕನ್ನಡ ತಾಯಿ ಸಿಕ್ಕಿದಳು. ಹಾಗೆ ನೋಡಿದರೆ ಮಹಿಳೆಯರಿಗೇ ಇಂಗ್ಲಿಷ್‌ ವ್ಯಾಮೋಹ ಹೆಚ್ಚು. ಇದೇ ಬೇಸರದ ಸಂಗತಿ’ ಎಂದರು.                         ’

ಹಾಸ್ಯ ಸಾಹಿತಿ ಪ್ರೊ.ಭುವನೇಶ್ವರಿ ಹೆಗಡೆ ಮಾತನಾಡಿ, ‘ಲಕ್ಷ್ಮಿಯ ಜಾಗಕ್ಕೆ ಸರಸ್ವತಿಯನ್ನು ಕರೆದಿದ್ದೀರಿ. ಸರಸ್ವತಿ ಭುವನೇಶ್ವರಿ (ಕನ್ನಡ ತಾಯಿ) ಇಲ್ಲಿ ಬಂದಿದ್ದಾಳೆ. ಉದ್ಯಮ ಬೆಳವಣಿಗೆಗೆ ನೂರಾರು ಮಾರ್ಗಗಳು ಇವೆ. ಆದರೆ, ಕನ್ನಡತನವನ್ನು ಸೇರಿಸಿಕೊಂಡು ನಾಡಿನ ಅಸ್ಮಿತೆಯನ್ನು ಮುಳಿಯ ಸಂಸ್ಥೆ ಸಾರಿದೆ. ಮುಳಿಯ ತಿಮ್ಮಪ್ಪ ಅವರು ಕಡು ಬಡತನವನ್ನೂ ಕಂಡವರು. ಬಡತನವೇ ಅನೇಕ ಕವಿಗಳನ್ನು ಹುಟ್ಟು ಹಾಕಿದೆ. ಅವರ ಪರಂಪರೆಯನ್ನು ಕುಟುಂಬದವರು ಮುಂದುವರಿಸಿಕೊಂಡು ಹೋಗುತ್ತಿರುವುದು ಅಭಿನಂದನೀಯ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಳಿಯ ಆಭರಣ ಸಂಸ್ಥೆಯ ಆಡಳಿತ ನಿರ್ದೇಶಕ ಕೇಶವ ಪ್ರಸಾದ್‌ ಮುಳಿಯ ಮಾತನಾಡಿ, ‘ಕನ್ನಡದ ಭಾಷೆಯೆಂದರೆ ಕೇವಲ ಆಡು ನುಡಿಯಲ್ಲ. ಅಲ್ಲೊಂದು ಜನಸಂಸ್ಕೃತಿ, ಉಡುಗೆ, ತೊಡುಗೆ ಆಭರಣಗಳು ಇವೆ. ಕನ್ನಡನಾಡಿನಲ್ಲಿ ಅದ್ಭುತವಾದ ಆಭರಣ ವೈವಿಧ್ಯ ಇದೆ. ದಕ್ಷಿಣಕನ್ನಡದ ಕರಿಮಣಿ, ಕೊಡವರ ವಿಶಿಷ್ಟ ಆಭರಣಗಳು ಹೀಗೆ ಪ್ರದೇಶವಾರು ವಿಶಿಷ್ಟತೆಯನ್ನು ಹೊಂದಿವೆ. ಅವುಗಳಿಗೆ ನಮ್ಮ ಸಂಸ್ಥೆ ಆದ್ಯತೆ ನೀಡಿ ಗ್ರಾಹಕರಿಗೆ ಪರಿಚಯಿಸುತ್ತಿದೆ’ ಎಂದರು.

‘ದಾಸ ಸಾಹಿತ್ಯದ ಮೇಲೆ ಒಂದು ಕಮ್ಮಟ, ವ್ಯಾಪಾರಿಗಳಿಗಾಗಿ ವಾಣಿಜ್ಯ ಕನ್ನಡ, ಮಾಧ್ಯಮದವರ ಭಾಷಾಶುದ್ಧತೆಯ ಕಮ್ಮಟಗಳನ್ನು ನಡೆಸಲೂ ಮುಳಿಯ ಪ್ರತಿಷ್ಠಾನ ಚಿಂತನೆ ನಡೆಸಿದೆ’ ಎಂದರು.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್‌ ಮಾತನಾಡಿ, ‘ ನಮ್ಮ ಭಾಷೆಯನ್ನು ಮಾತನಾಡಲು ನಮ್ಮ ತಾಯಂದಿರಿಗೇ ಕೀಳರಿಮೆ ಇದೆ. ಅದು ತೊಲಗಬೇಕು. ಮೊದಲು ನಮ್ಮ ಸಂಸ್ಕೃತಿಯ ಅದ್ಭುತಗಳನ್ನು ಅರಿತು ಮಕ್ಕಳಿಗೆ ಕಲಿಸಬೇಕು. ಈ ನಿಟ್ಟಿನಲ್ಲಿ ಲೇಖಕಿಯರ ಸಂಘ ಮುಳಿಯದಂತಹ ಸಂಸ್ಥೆಯೊಂದಿಗೆ ಕೈಜೋಡಿಸಿ ನಿರಂತರ ಶ್ರಮಿಸಲಿದೆ’                  ಎಂದರು.

ಲಂಡನ್‌ನ ಲ್ಯಾಂಬೆತ್‌ನ ಮಾಜಿ ಮೇಯರ್‌ ಡಾ.ನೀರಜ್‌ ಪಾಟೀಲ್‌ ಮಾತನಾಡಿ, ‘ನಾನು ಕನ್ನಡದ ಪ್ರಮುಖ ಕವಯಿತ್ರಿ ಅಕ್ಕಮಹಾದೇವಿ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗ ಪಕ್ಷಿಗಳಿಗೆ ಅಂಜಿದೊಡೆಂತಯ್ಯಾ ಎಂಬ ಸಾಲಿನಂತೆ, ರಾಜಕಾರಣಕ್ಕೆ ಬಂದ ಮೇಲೆ ಟೀಕೆಗಳಿಗೆ ಅಂಜಬಾರದು ಎಂದು ಕಲಿತಿದ್ದೇನೆ’ ಎಂದರು.

‘ಲಂಡನ್‌ನಲ್ಲಿ ಕನ್ನಡ ಕಲಿಸುವ ಕೆಲಸ ಸಾಗಿದೆ. ಅನಿವಾಸಿ ಕನ್ನಡ ಲೇಖಕರ ಸಂಘ ಇದೆ. ಅಲ್ಲಿಯೂ ಸಾಕಷ್ಟು ಕೆಲಸಗಳಾಗಿವೆ. ನಾವು ಹಿಂದಿ ವಿರೋಧಿಗಳಲ್ಲ. ಆದರೆ, ಹಿಂದಿ ಜೊತೆಗೆ ಬೇರೆ ಭಾಷೆಗಳನ್ನೂ ಪ್ರೋತ್ಸಾಹಿಸಬೇಕು. ಅದಕ್ಕಾಗಿ ಸಂವಿಧಾನದ 343ನೇ ವಿಧಿಯನ್ನು ತಿದ್ದಿಪಡಿ ಮಾಡಿ ಇತರ ಭಾಷೆಗಳಿಗೆ ಮಹತ್ವ ನೀಡುವಂತಾಗಲು ನಮ್ಮ ಜನಪ್ರತಿನಿಧಿಗಳು ಪ್ರಯತ್ನ ಮಾಡಬೇಕು’ ಎಂದರು.

ಕಾರ್ಯಕ್ರಮ ಸಂಯೋಜಕ ವೇಣು ಶರ್ಮಾ ತಮ್ಮ ಆಶಯ ಭಾಷಣದಲ್ಲಿ, ‘ಗುಡ್‌ಮಾರ್ನಿಂಗ್‌ ಅನ್ನುವುದು ನಮಸ್ಕಾರ ಆದಾಗ, ರೈಸ್‌ ಅನ್ನವಾದಾಗ, ರಸಂ ಸಾರು ಆದಾಗ ನಮ್ಮ ನಿತ್ಯ ಜೀವನವೂ ಕನ್ನಡಮಯವಾಗಿರುತ್ತದೆ. ಈ ಕೆಲಸ ಅಮ್ಮಂದಿರಿಂದಲೇ ಆರಂಭವಾಗಬೇಕು ಕನ್ನಡತನ ನಮ್ಮದಾಗಬೇಕು’ ಎಂದರು.

ಹಿರಿಯ ಸಾಹಿತಿ ನಾ.ದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ಹೇಮಾ ವಿನಾಯಕ ಪಾಟೀಲ್‌ ಅವರು ಕಾರ್ಯಕ್ರಮದ ಆಶಯ ಸಾರುವ ನಾಡದೇವಿ ಭುವನೇಶ್ವರಿಯ ಚಿತ್ರ ಬಿಡಿಸಿದರು. ಲೇಖಕಿಯರ ಸಂಘ ಹಾಗೂ ಮುಳಿಯ ಪ್ರತಿಷ್ಠಾನದ ಪದಾಧಿಕಾರಿಗಳು ಭಾಗವಹಿಸಿದ್ದರು.

Ad Widget
Click to comment

Leave a Reply

Uncategorized

Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ‌ ಬಹುಮಾನ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ  ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,

Ad Widget

Ad Widget <> Ad Widget

ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ  ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.



Ad Widget

14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ  ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್  ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ  ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.

Continue Reading

Uncategorized

Kumaraswamy-ಸ್ಟಿಂಗ್ ಆಪರೇಷನ್‌ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸುವುದರ ಜೊತೆಗೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್‌ಗಳ ಹಿಂದೆ ಯಾರಿದ್ದಾರೆ, ಅವುಗಳನ್ನು ಯಾರು ನಡೆಸಿದ್ದಾರೆ ಮತ್ತು ಇದರಲ್ಲಿ ಯಾರ ಪಾತ್ರವಿದೆ ಎಂಬುದನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.



Ad Widget

ಸಿದ್ದರಾಮಯ್ಯ ಮೌನವಾಗಿರಬಾರದು: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರಕ್ಕೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಹೋರಾಟದ ಮನೋಭಾವದೊಂದಿಗೆ ಮಾತನಾಡಬೇಕು. ಇಂತಹ ಬೆಳವಣಿಗೆಗಳ ಬಗ್ಗೆ ಮೌನ ವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

Ad Widget

Ad Widget

ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲಾಗಿತ್ತು. ಬಳಿಕ ರಮೇಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರ ವಿಚಾರಗಳೂ ಮುನ್ನೆಲೆಗೆ ಬಂದವು. ಇದೀಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ಸದಾಶಿವನಗರದಲ್ಲಿ ನಿಗಾ ವ್ಯವಸ್ಥೆ ಇದೆ ಎಂಬ ಆರೋಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು, ಅತ್ಯಾಧುನಿಕ ಉಪಕರಣಗಳ ಮೂಲಕ ಸಚಿವರು ಹಾಗೂ ಇತರರ ಮಾತುಕತೆಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ತಮಗೆ ಲಭಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.

ರಾಜಕೀಯ ನಾಯಕರು ಹಾಗೂ ಸಚಿವರ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಲ್ಲೂ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಅವರು ಹೇಳಿದರು.

ಆದರೆ, ಮುಖ್ಯಮಂತ್ರಿ ಸ್ವತಃ ಇಂತಹ ಚಟುವಟಿಕೆಗಳಿಗೆ ಆದೇಶ ನೀಡಿದ್ದಾರೆ ಎಂದು ತಾನು ಹೇಳುತ್ತಿಲ್ಲ. ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪರಿಶೀಲಿಸಬೇಕು ಎಂದು ಸ್ಪಷ್ಟಪಡಿಸಿದರು.

ಪೆನ್‌ಡ್ರೈವ್ ಪ್ರಕರಣದ ಬಗ್ಗೆಯೂ ಪ್ರಶ್ನೆ
2024ರ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಮಂಡ್ಯ ಮತ್ತು ಹಾಸನ ಭಾಗಗಳಲ್ಲಿ ವಿಡಿಯೊಗಳನ್ನು ಪೆನ್‌ಡ್ರೈವ್‌ಗಳಲ್ಲಿ ಹಂಚಲಾಗಿದೆ ಎಂದು ಹೇಳಿದ ಕುಮಾರಸ್ವಾಮಿ ಅವರು, ವಿಡಿಯೋಗಳಲ್ಲಿ ಇದ್ದ ಮಹಿಳೆಯರ ಮುಖಗಳನ್ನು ಮರೆಮಾಚಲಿಲ್ಲ. ಲೋಕಸಭೆಯ ಇವತ್ತಿನ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಆ ನಾನೂರು ಜನ ಮಹಿಳೆಯರಲ್ಲಿ ಎಷ್ಟು ಜನ ಬಂದು ಕೇಸು ದಾಖಲು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.

ಆ ವಿಡಿಯೊಗಳನ್ನು ಸಿದ್ಧಪಡಿಸಿದವರು ಯಾರು, ಅವುಗಳನ್ನು ಯಾವ ಸ್ಥಳದಲ್ಲಿ ಸಿದ್ಧಪಡಿಸಲಾಯಿತು ಮತ್ತು ಹಂಚಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಕುಟುಂಬದವರ ಬಗ್ಗೆಯೂ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗಿತ್ತು. ತಮ್ಮ ತಾಯಿಯ ವಿರುದ್ಧವೂ ಆರೋಪಗಳು ಮತ್ತು ಸುದ್ದಿಗಳನ್ನು ಹರಡಲಾಗಿತ್ತು. ಇಂತಹ ಸಂದರ್ಭಗಳಲ್ಲಿಯೂ ತಮ್ಮ ಕುಟುಂಬ ನ್ಯಾಯಾಲಯದ ಮೊರೆ ಹೋಗಿರಲಿಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದಕ್ಕೆ ಆಕ್ಷೇಪ
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಯಾವುದೇ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ನ್ಯಾಯಾಂಗದ ಮೂಲಕ ಹೊರಬರಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂಬುದು ತಮ್ಮ ನಿಲುವು ಎಂದು ತಿಳಿಸಿದರು.
ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ನ್ಯಾಯಾಲಯದ ತಡೆಯಾಜ್ಞೆ ಪಡೆಯುವ ಬದಲು ದಿಟ್ಟವಾಗಿ ನಿಂತು ಇಂತಹ ಬೆಳವಣಿಗೆಗಳನ್ನು ಎದುರಿಸಬೇಕು ಎಂದು ಅವರು ಮನವಿ ಮಾಡಿದರು.

ಸಿಬಿಐ ತನಿಖೆಗೆ ಮತ್ತೆ ಒತ್ತಾಯ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಿರುವುದನ್ನು ತಾವು ವಿರೋಧಿಸಿಲ್ಲ ಎಂದ ಕುಮಾರಸ್ವಾಮಿ, ಇದೇ ರೀತಿಯ ಗಂಭೀರತೆಯನ್ನು ಇತರ ಪ್ರಕರಣಗಳಲ್ಲಿಯೂ ತೋರಿಸಬೇಕು ಎಂದು ಹೇಳಿದರು.

ಸ್ಟಿಂಗ್ ಆಪರೇಷನ್‌ಗಳ ಹಿಂದೆ ಇರುವವರನ್ನು ಪತ್ತೆಹಚ್ಚಿ, ಆರೋಪಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲು ಸಿಬಿಐ ತನಿಖೆ ಅಗತ್ಯವಿದೆ. ಈ ಕುರಿತು ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸುವುದಾಗಿ ಪುನರುಚ್ಚರಿಸಿದರು.

Ad Widget
Continue Reading

Uncategorized

Lawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್

Published

on



Ad Widget

Ad Widget

Ad Widget

Ad Widget

ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂದು ಹೇಳಿದರು.

Ad Widget

Ad Widget

Ad Widget

Ad Widget

ಬೆಂಗಳೂರು: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದ ಮರುತನಿಖೆ, ಸಂತೋಷ್ ರಾವ್ ಪಾತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದು ತಮ್ಮ ವಾದವಾಗಿದೆ ಎಂದು ಹೇಳಿದರು. ಸಿಬಿಐ ತನಿಖೆಯ ವೇಳೆ ಫೋರೆನ್ಸಿಕ್ ವರದಿಗಳಲ್ಲಿ ಸಂತೋಷ್ ರಾವ್ ಅವರ ದೇಹದಲ್ಲಿದ್ದ ಗಾಯಗಳ ಬಗ್ಗೆ ಉಲ್ಲೇಖವಾಗಿತ್ತು ಎಂದು ತಿಳಿಸಿದರು.



Ad Widget

ಸಿಬಿಐನ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಬಿ.ಆರ್. ಶಿವಾನಂದ ಅವರು ಪ್ರಕರಣದ ವಿಚಾರದಲ್ಲಿ ನಿರ್ದಿಷ್ಟ ಸಂಘಟನೆಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರವಾಗಿ ದೃಢೀಕರಿಸಿದ ಮಾಹಿತಿ ಲಭ್ಯವಿಲ್ಲ.

Ad Widget

Ad Widget

ಕ್ಷೇತ್ರದ ವಿರುದ್ಧ ಅಪಪ್ರಚಾರದ ಆರೋಪ
ಸೌಜನ್ಯಾ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಲವರು ಹಣ ಸಂಪಾದಿಸಿದ್ದಾರೆ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಪ್ರಕರಣದ ಹಿಂದೆ ಎಡಪಂಥೀಯರು ಹಾಗೂ ನಗರ ನಕ್ಸಲರ ಕೈವಾಡವಿದೆ ಎಂಬ ಆರೋಪವನ್ನೂ ಅವರು ಮಾಡಿದರು.

ಬುರುಡೆ ಪ್ರಕರಣದ ಅಂತಿಮ ವರದಿ ಬಹಿರಂಗಪಡಿಸಲು ಆಗ್ರಹ
ಸೌಜನ್ಯಾ ಪ್ರಕರಣದಲ್ಲಿ ಹಿನ್ನಡೆಯಾದ ಬಳಿಕ ಕೆಲವು ಗುಂಪುಗಳು ಬುರುಡೆ ಪ್ರಕರಣವನ್ನು ಮುನ್ನೆಲೆಗೆ ತಂದವು ಎಂದು ಅಮೃತೇಶ್ ಹೇಳಿದರು. ಸರ್ಕಾರದ ವೆಚ್ಚದಲ್ಲಿ ನಡೆದಿದ್ದ ಅನಧಿಕೃತ ಶವಗಳ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ತನಿಖೆಯ ಅಂತಿಮ ವರದಿ ಇನ್ನೂ ಬಹಿರಂಗವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.

ಚಿನ್ನಯ್ಯ ಆರೋಪಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗದಿರುವುದರ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.

ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವುದು ಕಷ್ಟ
ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಕೆಲವು ಗ್ಯಾಂಗ್ ಹಣ ಮಾಡುವ ಉದ್ದೇಶದಿಂದ ಕ್ಷೇತ್ರದ ವಿರುದ್ಧ ಕುತಂತ್ರ ನಡೆಸುತ್ತಿದೆ. ಕೆಲವು ವಿಷಯ ಮುಚ್ಚಿಟ್ಟು ಅವರು ಸುಪ್ರೀಂಕೋರ್ಟ್‌ಗೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಸಂಪೂರ್ಣವಾಗಿ ಹೊಸದಾಗಿ ತನಿಖೆ ಮಾಡಲು ಎಸ್‌ಐಟಿ ರಚನೆ ಮಾಡಲು ಸೂಚಿಸಿದೆ. ಆದರೆ ಮೂರು ತಿಂಗಳಲ್ಲಿ ಪ್ರಕರಣದ ತೀರ್ಪು ಬರಲು ಸಾಧ್ಯವಿಲ್ಲ. 14 ವರ್ಷದ ಸಾಕ್ಷ್ಯಾಧಾರಗಳು ಈಗ ಸಿಗಲು ಸಾಧ್ಯವಿಲ್ಲ. ಈ ಗ್ಯಾಂಗ್‌ನ ನಿಜವಾದ ಟಾರ್ಗೆಟ್ ಮಲ್ಲಿಕ್ ಜೈನ್, ಧೀರಜ್ ಜೈನ್, ಉದಯ್ ಜೈನ್ ಅಲ್ಲ. ಬದಲಾಗಿ ಕ್ಷೇತ್ರವೇ ಆಗಿದೆ ಎಂದು ಅಮೃತೇಶ್ ತಿಳಿಸಿದ್ದಾರೆ.

ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ವಕೀಲ
ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ ಎಂದು ತಿಳಿಸಿದ ಅಮೃತೇಶ್, ಆರಂಭದಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಮೃತದೇಹ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು ಎಂದು ವಿವರಿಸಿದರು.

ಘಟನೆಯ ಬಳಿಕ ಸೌಜನ್ಯಾ ಅವರ ಕುಟುಂಬದವರು ಬೆಳ್ತಂಗಡಿಯಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಧರ್ಮಸ್ಥಳದಿಂದ ಯಾವುದೇ ಒತ್ತಡ ಅಥವಾ ಬೆದರಿಕೆ ಇರಲಿಲ್ಲ ಎಂದು ಹೇಳಿದ್ದರೆಂದು ಅಮೃತೇಶ್ ಉಲ್ಲೇಖಿಸಿದರು. ಬಳಿಕ ಕೆಲವು ಗುಂಪುಗಳು ಧಾರ್ಮಿಕ ಗುರುಗಳು ಹಾಗೂ ಮಠಾಧೀಶರನ್ನು ಗುರಿಯಾಗಿಸಿಕೊಂಡು ಕ್ಷೇತ್ರದ ವಿರುದ್ಧ ಆರೋಪಗಳನ್ನು ಹರಡಿವೆ ಎಂದು ದೂರಿದರು.
ಸಂತೋಷ್ ರಾವ್ ಅವರನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ಸಾಕಷ್ಟು ಹಣ ಖರ್ಚು ಮಾಡಿರುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರೇ ಹೇಳಿದ್ದಾರೆ ಎಂದೂ ಅಮೃತೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಕೀಲ ಸದಾನಂದ ಗೌಡ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading