ದಕ್ಷಿಣ ಕನ್ನಡ
ಪುತ್ತೂರು : ಮತ ಚಲಾಯಿಸಿದ ಅಶೋಕ್ ರೈ, ಪುತ್ತಿಲ, ಆಶಾ ತಿಮ್ಮಪ್ಪ ಹಾಗೂ ದಿವ್ಯಪ್ರಭಾ ಗೌಡ – ಬೆಳಿಗ್ಗೆ 11 ಗಂಟೆಯವರೆಗೆ 28 ಶೇ ಮತದಾನ
ಪುತ್ತೂರು : ಮೇ 10 : ಪುತ್ತೂರು: ಪುತ್ತೂರು 206 ಕ್ಷೇತ್ರದಲ್ಲಿ ಬೆಳಗ್ಗೆ ನಿಗದಿತ ಸಮಯಕ್ಕೆ ಮತದಾನ ಆರಂಭವಾಗಿದ್ದೂ, ಅಧಿಕಾರಿಗಳು ನಿರಾಸಕ್ತಿಯಿಂದ ಕರ್ತವ್ಯ ನಿರ್ವಹಿಸಿದ ಹಿನ್ನಲೆಯಲ್ಲಿ ನಿಧಾನಗತಿಯಿಂದ ಮತದಾನ ನಡೆದಿದ್ದು, ಮತದಾರರು ಗಂಟೆ ಗಟ್ಟಲೆ ಕಾದು ಮತದಾನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 28.16% ಮತದಾನವಾಗಿದೆ.
ಅಭ್ಯರ್ಥಿಗಳಿಂದ ಮತದಾನ
ಮತದಾನಕ್ಕೆ ಮೊದಲು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಕ್ಕೆ ತೆರಳಿ ಪ್ರಾರ್ಥನೆಯನ್ನು ನಡೆಸಿದರು. ಬಳಿಕ ಮುಂಡೂರು ಶಾಲೆಯಲ್ಲಿ ಮತದಾನ ಮಾಡಿದರು. ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಠಂತಬೆಟ್ಟು ಮಹಿಷಾಮರ್ಧಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆಯನ್ನು ನಡೆಸಿ ಕೋಡಿಂಬಾಡಿ ಶಾಲೆಯಲ್ಲಿ ಮತದಾನ ನಡೆಸಿದರು.
ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಂತೂರು ಶಾಲೆಯಲ್ಲಿ ಮತದಾನ ನಡಸಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು ಹಿರೇಬಂಡಾಡಿಯ ಶಾಲೆಯಲ್ಲಿ ಮತದಾನ ಮಾಡಿದರು. ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಚಿಲ್ತಡ್ಕರವರು ಸುಳ್ಯ ವಿಧಾನಸಭಾ ಕ್ಷೇತ್ರದ ಮೆಟ್ಟಿನಡ್ಕ ಗುತ್ತಿಗಾರು ಕೇಂದ್ರದಲ್ಲಿ ಮತ ಚಲಾಯಿಸಿದರು.
ಬಿಸಿಲಿನ ಬೇಗೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಹಾಗೂ ಕಛೇರಿಗೆ ತೆರಳುವ ವ್ಯಕ್ತಿಗಳು ಬೆಳಗ್ಗೆ ಬೇಗನೆ ಮತಕೇಂದ್ರದ ಮುಂದೆ ಹಾಜರಾಗಿದ್ದು, ಮತಯಂತ್ರಗಳು ನಿಧಾನಗತಿಯಲ್ಲಿ ಕೆಲಸ ನಿರ್ವಹಿಸುವ ಪರಿಣಾಮ ತಾಸುಗಟ್ಟಲೆ ಮತದಾರರು ಸರತಿ ಸಾಲಿನಲ್ಲಿ ಕಾಯುವಂತಾಗಿದೆ. .
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.
ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
-
ಮಂಗಳೂರು23 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್24 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
Uncategorized19 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ನಿಧನ ವಾರ್ತೆ5 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಮಂಗಳೂರು24 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ಸ್ಥಳೀಯ5 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಕ್ರೀಡೆ22 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಸ್ಥಳೀಯ4 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!






















