ದಕ್ಷಿಣ ಕನ್ನಡ
ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ ಸೇವೆ ಮುಂದುವರಿಸುವೆ : ಸಂಜೀವ ಮಠಂದೂರು
ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಹೀಗಾಗಿ ಚುನಾವಣೆ ಮುಕ್ತಾಯವಾಗುತ್ತಲೇ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಮುಂದುವರಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಮಠಂದೂರಿಗೆ ಟಿಕೆಟ್ ಕೈ ತಪ್ಪಿದ್ದು ಆಶಾ ತಿಮ್ಮಪ್ಪ ಗೌಡರವರು ಅಚ್ಚರಿಯ ಆಯ್ಕೆಯಾಗಿದ್ದರು.
ಮೇ 13 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಆ ಬಳಿಕ ಮಠಂದೂರು ಅಧಿಕಾರ ಅವಧಿ ಮುಗಿಯಲಿದೆ. ಈ ಹಿನ್ನಲೆಯಲ್ಲಿ ಇಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಅವರು “ನನ್ನ 35 ವರ್ಷಗಳ ಸಮಾಜ ಸೇವೆ ಮತ್ತು 5 ವರ್ಷಗಳ ಕಾಲ ಶಾಸಕನಾಗಿ ಸಲ್ಲಿಸಿದ ಸೇವೆ ಇಲ್ಲಿಗೆ ಮುಗಿಯುವುದಿಲ್ಲ. ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ ನನ್ನ ಸೇವೆ ಮುಂದುವರೆಯುವುದು.ಜೈ ಹಿಂದ್, ಜೈ ಬಿಜೆಪಿ ಎಂದು ಬರೆದುಕೊಂಡಿದ್ದಾರೆ.
ಐದು ವರ್ಷಗಳ ಕಾಲ ನಿಮ್ಮೆಲ್ಲರಿಗೂ ಸೇವೆ ಸಲ್ಲಿಸಲು ಅವಕಾಶ ನೀಡಿದಕ್ಕಾಗಿ ಧನ್ಯವಾದಗಳು. ನನಗೆ ಶಾಸಕ ಸ್ಥಾನ ಇಲ್ಲದಿದ್ದರೂ, ನನ್ನ ಕಡೆಯಿಂದ ನಿಮಗೆಲ್ಲರಿಗೂ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಲು ನಾನು ಸಿದ್ದ.ನೀವೆಲ್ಲರೂ ಯಾವಾಗ ಬೇಕಾದರೂ ನನ್ನನ್ನೂ ಸಂಪರ್ಕಿಸಬಹುದು ಎಂದು ಅವರು ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ .

ಪುತ್ತೂರು ಶಾಸಕರಾಗುವ ಮೊದಲು ಅವರು ಬಿಜೆಪಿ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2013 ಹಾಗೂ 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪುತ್ತೂರಲ್ಲಿ ಚುನಾವಣೆ ಸ್ಪರ್ಧಿಸಿದ್ದ ಅವರು ಒಂದು ಬಾರಿ ಸೋತು ಒಂದು ಬಾರಿ ಗೆಲುವು ಸಂಪಾದಿಸಿದರು. ತನ್ನ ಶಾಸಕತ್ವದ ಅವಧಿಯಲ್ಲಿ ಸಾವಿರ ಕೋಟಿ ಮಿಕ್ಕಿ ಅನುದಾನಕ್ಷೇತ್ರಕ್ಕೆ ತಂದಿದ್ದಾರೆ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ24 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು19 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು22 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ23 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ23 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ23 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ19 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ23 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ




















