Connect with us

ಪುತ್ತೂರು

ಮಂಗಳೂರು: ಜಿಲ್ಲೆಯ ಮತ ಎಣಿಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಗೊತ್ತೇ..?

Published

on



Ad Widget

Ad Widget

Ad Widget

Ad Widget

ಮಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಮತ ಎಣಿಕಾ ಕೇಂದ್ರದಲ್ಲಿ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಸುದ್ದಿಗೋಷ್ಟಿ ನಡೆಸಿದ್ದು, ಮತ ಎಣಿಕೆಯ ಕಾರ್ಯದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮೇ.13ರಂದು ನಡೆಯಲಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ಗಳನ್ನು ಹಾಕಲಾಗಿದೆ. ಪೋಸ್ಟಲ್ ಬ್ಯಾಲೆಟ್ ಗಾಗಿ 5 ಟೇಬಲ್ ಗಳನ್ನ ಮಾಡಲಾಗಿದೆ. ಎಂಟು ಕ್ಷೇತ್ರಗಳ ಇವಿಎಂಗೆ ಒಟ್ಟು 112 ಹಾಗೂ ಪೋಸ್ಟಲ್ ಬ್ಯಾಲೆಟ್ ಗೆ 40 ಟೇಬಲ್ ಹಾಕಲಾಗಿದೆ. ರಿಟರ್ನಿಂಗ್ ಆಫೀಸರ್ ಟೇಬಲ್ ಪಕ್ಕದಲ್ಲಿ ಅಭ್ಯರ್ಥಿ ಅಥವಾ ಏಜೆಂಟ್ ಕೂರಬಹುದು. ಬೆ.8 ಗಂಟೆಗೆ ಮೊದಲು ಪೋಸ್ಟಲ್ ಬ್ಯಾಲೆಟ್ ಎಣಿಕೆ ಆಗಲಿದೆ. 8.30ರಿಂದ ಇವಿಎಂ ಮತ ಎಣಿಕಾ ಕಾರ್ಯ ಆರಂಭ ಆಗಲಿದೆ. ಪ್ರತೀ ಕ್ಷೇತ್ರದ 19 ಟೇಬಲ್ ಗೂ ಸಿಸಿಟಿವಿ ಅಳವಡಿಸಲಾಗಿದೆ. ಇದರ ಚಿತ್ರಣವನ್ನು ಮುಖ್ಯ ಚುನಾವಣಾ ಆಯುಕ್ತರ ಕಚೇರಿಯಲ್ಲಿ ವೀಕ್ಷಿಸಲಾಗುತ್ತದೆ. ಎಣಿಕಾ ಕೇಂದ್ರಕ್ಕೆ ಮೊಬೈಲ್ ಅಥವಾ ಯಾವುದೇ ಇಲೆಕ್ಟ್ರಾನಿಕ್ ಗ್ಯಾಜೆಟ್ಸ್ ತರಲು ಅವಕಾಶ ಇಲ್ಲ. ಏಜೆಂಟ್ ಗಳು ಅಥವಾ ಅಭ್ಯರ್ಥಿಗಳು ಏಳು ಗಂಟೆಯ ಒಳಗಡೆ ಕೌಂಟಿಂಗ್ ಹಾಲ್ ಒಳಗೆ ಇರಬೇಕು. ಎಣಿಕಾ ಸಿಬ್ಬಂದಿ ಕೂಡ 7 ಗಂಟೆ ಒಳಗೆ ಕೇಂದ್ರದ ಒಳಗೆ ಬರಬೇಕು. ಎಣಿಕಾ ಸಿಬ್ಬಂದಿ ಕೂಡ ಮೊಬೈಲ್ ತರಲು ಅವಕಾಶ ಇಲ್ಲ ಎಂದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇಡೀ ಎಣಿಕಾ ಕೇಂದ್ರವನ್ನ ಕೇಂದ್ರೀಯ ಭದ್ರತಾ ಪಡೆ ಮತ್ತು ಸ್ಥಳೀಯ ಪೊಲೀಸ್ ಭದ್ರತೆಗೆ ಒಳಪಡಿಸಲಾಗಿದೆ. ಇಂದು ರಾ.12 ಗಂಟೆಯಿಂದ ನಾಳೆ ರಾ.12 ಗಂಟೆಯವರೆಗೆ ಎಣಿಕಾ ಕೇಂದ್ರದೊಳಗೆ ವಿದ್ಯುತ್ ಕಟ್ ಆಗಲ್ಲ. ಈ ಬಗ್ಗೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಪೋಸ್ಟಲ್ ಬ್ಯಾಲೆಟ್ ಮತ್ತು ಇವಿಎಂ ಮತ ಎಣಿಕೆ ಒಟ್ಟಿಗೆ ನಡೆಯಲಿದೆ. ಇವಿಎಂ ಕೌಂಟ್ ಮುಗಿದರೂ ಪೋಸ್ಟಲ್ ಬ್ಯಾಲೆಟ್ ಕೌಂಟ್ ಮುಂದುವರೆಯಲಿದೆ. ಇವಿಎಂ ಸಮಸ್ಯೆ ಇದ್ದರೆ ವಿವಿಪ್ಯಾಟ್ ಮೂಲಕ ಎಣಿಕಾ ಕಾರ್ಯ ನಡೆಯಲಿದೆ. ಅಂಥಹ ತೊಂದರೆ ಬಂದಲ್ಲಿ ಕೊನೆಯ ಸುತ್ತಿನಲ್ಲಿ ನಡೆಸಲಾಗುತ್ತದೆ.

Ad Widget

Ad Widget <> Ad Widget

20,150 ಪೋಸ್ಟಲ್ ಬ್ಯಾಲೆಟ್ ದ.ಕ ಜಿಲ್ಲೆಯಲ್ಲಿ ಬಂದಿದೆ. ಇದು ಇಡೀ ರಾಜ್ಯದಲ್ಲೇ ಅತೀ ಹೆಚ್ಚಿನ ಪೋಸ್ಟಲ್ ಬ್ಯಾಲೆಟ್ ಆಗಿದೆ. ಒಟ್ಟು 16 ರಿಂದ 18 ಸುತ್ತುಗಳಲ್ಲಿ ಎಣಿಕಾ ಕಾರ್ಯ ಮುಕ್ತಾಯವಾಗಲಿದೆ. 544 ಸಿಬ್ಬಂದಿ ಇಡೀ ಎಣಿಕಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಒಟ್ಟು 40 ಪೋಸ್ಟಲ್ ಬ್ಯಾಲೆಟ್ ಟೇಬಲ್ ಗೆ 40 ಎಆರ್ ಓ ನೇಮಕ ಮಾಡಲಾಗಿದೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಣಿಕಾ ಕಾರ್ಯ ಮುಗಿಸಲು ಯೋಜಿಸಲಾಗಿದೆ. ಕೇಂದ್ರದೊಳಗೆ ಏಜೆಂಟ್, ಅಭ್ಯರ್ಥಿ, ಎಣಿಕಾ ಸಿಬ್ಬಂದಿ ಹಾಗೂ ಮಾಧ್ಯಮದವರಿಗೆ ಮಾತ್ರ ಪ್ರವೇಶ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.



Ad Widget
Ad Widget
Click to comment

Leave a Reply

ಬಿಗ್ ನ್ಯೂಸ್

G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

Published

on



Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.



Ad Widget

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

Ad Widget
Continue Reading

ದಕ್ಷಿಣ ಕನ್ನಡ

ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಪುತ್ತೂರು: ವಾಸವಿಲ್ಲದ ಮನೆಯೊಂದಕ್ಕೆ ಬೆಂಕಿ ಬಿದ್ದು ಸುಮಾರು ₹10 ಲಕ್ಷ ಮೌಲ್ಯದ ಸೊತ್ತು ಹಾನಿಯಾಗಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಇದೇ ವೇಳೆ ಮನೆಯಲ್ಲಿದ್ದ ವಿದ್ಯುತ್ ತಂತಿ, ಸೀಲಿಂಗ್ ಫ್ಯಾನ್ ಸೇರಿದಂತೆ ಸುಮಾರು ₹30 ಸಾವಿರ ಮೌಲ್ಯದ ವಸ್ತುಗಳು ಕಳವಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಕಾಸರಗೋಡು ಮೂಲದ ರಶ್ಮಿ ಬಿ. ಭಟ್ ಅವರಿಗೆ ಸೇರಿದ ಪುತ್ತೂರಿನ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಅವರು ಮನೆಗೆ ಬಂದು ಹೋಗುತ್ತಿದ್ದರು. ಸೆ. 15ರಂದು ಮನೆಗೆ ಬಂದಿದ್ದ ಅವರು, ಬಳಿಕ ಅ. 11ರಂದು ಬೆಳಗ್ಗೆ 7 ಗಂಟೆಗೆ ಅವರ ದೊಡ್ಡಪ್ಪನ ಮಗ ಎನ್.ಟಿ. ಕಿಶೋರ್ ಅವರು ಮನೆಗೆ ಬೆಂಕಿ ಬಿದ್ದಿರುವುದಾಗಿ ಮಾಹಿತಿ ನೀಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೂಡಲೇ ಕಾಸರಗೋಡಿನಿಂದ ಪುತ್ತೂರಿಗೆ ಬಂದ ರಶ್ಮಿ ಭಟ್ ಅವರು ಮನೆ ಪರಿಶೀಲಿಸಿದಾಗ, ಮನೆಯ ಹಿಂಭಾಗದಲ್ಲಿದ್ದ ಎರಡು ಬೆಡ್‌ರೂಮ್‌ಗಳು, ಎರಡು ಬಾತ್‌ರೂಮ್‌ಗಳು ಹಾಗೂ ತೆರೆದ ಹಾಲ್‌ನಂತಹ ಛಾವಣಿಯ ಭಾಗ ಬೆಂಕಿಯಿಂದ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಅಲ್ಲದೆ, ಮನೆಯ ಹಿಂಭಾಗದಲ್ಲಿರುವ ಅಡುಗೆಮನೆಯ ಬಾಗಿಲಿನ ಕೆಳಭಾಗದ ಒಂದು ಅಡ್ಡ ಹಲಗೆಯನ್ನು ತೆಗೆದಿರುವುದು ಕಂಡುಬಂದಿದೆ. ಮನೆಯ ಒಳಗಿನ ವಿದ್ಯುತ್ ಸ್ವಿಚ್ ಬೋರ್ಡ್‌ಗಳನ್ನು ಹಾನಿಗೊಳಿಸಿ, ವಿದ್ಯುತ್ ತಂತಿಗಳನ್ನು ತೆಗೆದುಕೊಂಡು ಹೋಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಐದು ಸೀಲಿಂಗ್ ಫ್ಯಾನ್‌ಗಳು ಹಾಗೂ ಬುಟ್ಟಿಯಲ್ಲಿಟ್ಟಿದ್ದ ದೇವರ ಪೂಜಾ ಸಾಮಗ್ರಿಗಳು ನಾಪತ್ತೆಯಾಗಿವೆ. ಫ್ರಿಡ್ಜ್ ಮತ್ತು ಮೈಕ್ರೋವೇವ್‌ಗಳನ್ನು ಕೂಡ ಕಳಚಿ ಪರಿಶೀಲಿಸಿರುವುದು ಕಂಡುಬಂದಿದೆ.



Ad Widget

ಸೆ. 15ರಿಂದ ಅ. 11ರ ಬೆಳಗಿನ ಜಾವದ ನಡುವೆ ಯಾರೋ ಮನೆಯೊಳಗೆ ನುಗ್ಗಿ ವಸ್ತುಗಳನ್ನು ಕಳವು ಮಾಡಿ, ಬೆಂಕಿ ಹಚ್ಚಿರಬಹುದು ಎಂದು ರಶ್ಮಿ ಬಿ. ಭಟ್ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಕಳವಾದ ವಸ್ತುಗಳ ಅಂದಾಜು ಮೌಲ್ಯ ₹30 ಸಾವಿರವಾಗಿದ್ದು, ಬೆಂಕಿಯಿಂದ ಸುಮಾರು ₹10 ಲಕ್ಷ ನಷ್ಟವಾಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು

Published

on



Ad Widget

Ad Widget

Ad Widget

Ad Widget

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.

Ad Widget

Ad Widget <> Ad Widget

ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.



Ad Widget

120 ಎಕರೆ ಸರ್ಕಾರಿ ಜಮೀನಿನತ್ತ ಗಮನ

ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.

Ad Widget

Ad Widget

ಸಮನ್ವಯದ ಚಿಕಿತ್ಸೆಗೆ ಅವಕಾಶ

ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯಕ್ಕೆ ಒತ್ತು

ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.

ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading