Uncategorized
ಕರ್ನಾಟಕ ವಿಧಾನಸಭೆ ಚುನಾವಣೆ : ಸ್ಪಷ್ಟ ಬಹುಮತದತ್ತ ಕಾಂಗ್ರೆಸ್
Bjp : 73 Cong : 118 JDS : 28 others : 6
ಮ್ಯಾಜಿಕ್ ನಂಬರ್ ತಲುಪಿದ ಕಾಂಗ್ರೆಸ್, 115 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ. ಇಂದು ರಾತ್ರಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿರುವ ಮತ್ತೊಮ್ಮೆ ಬಿಜೆಪಿ ಸರ್ಕಾರ ಬಾರದು ಎನ್ನುವ ಸೂಚನೆ ಈ ಮೂಲಕ ಬರುತ್ತಿದೆ.
ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಜಯೇಂದ್ರ 3156 ಮತಗಳ ಮುನ್ನಡೆ
ಬಿಜೆಪಿಯ ಹಾಲಿ 11 ಸಚಿವರಿಗೆ ಹಿನ್ನಡೆ, ವರುಣದಲ್ಲಿ ಸೋಮಣ್ಣ, ಯಲಬುರ್ಗಾದಲ್ಲಿ ಹಾಲಪ್ಪ ಆಚಾರ್, ಚಿಕ್ಕಬಳ್ಳಾಪುರದಲ್ಲಿ ಸುಧಾಕರ್, ಚಿಕ್ಕನಾಯಕನಹಳ್ಳಿಯಲ್ಲಿ ಮಾಧುಸ್ವಾಮಿ, ಬಳ್ಳಾರಿ ಗ್ರಾಮೀಣದಲ್ಲಿ ಶ್ರೀರಾಮುಲು, ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ ಸೇರಿದಂತೆ ಹಲವರಿಗೆ ಹಿನ್ನಡೆ.
ಮಂಗಳೂರು ದಕ್ಷಿಣದ ಏಳನೇ ಸುತ್ತಿನ ಮತ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಗೆ 11551 ಮತಗಳ ಮುನ್ನಡೆ
ಪುತ್ತೂರು ಕ್ಷೇತ್ರ ದ ಐದನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1221 ಮತಗಳ ಮುನ್ನಡೆ
ಮ್ಯಾಜಿಕ್ ನಂಬರ್ ತಲುಪಿದ ಕಾಂಗ್ರೆಸ್, 115 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ. ಇಂದು ರಾತ್ರಿಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಾಧ್ಯತೆ.
ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಆರನೇ ಸುತ್ತಿನ ಅಂತ್ಯಕ್ಕೆ ಮುನ್ನಡೆ
ಮಂಗಳೂರು ಕ್ಷೇತ್ರದ ಐದನೇ ಸುತ್ತಿನಲ್ಲಿ ಕಾಂಗ್ರೆಸ್ ನ ಯುಟಿ ಖಾದರ್ ಗೆ 11044 ಮತಗಳ ಮುನ್ನಡೆ
ಮಂಗಳೂರು ಉತ್ತರದ ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಗೆ 6810 ಮತಗಳ ಮುನ್ನಡೆ
ಮೂಡಬಿದಿರೆ ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 3305 ಮತಗಳ ಮುನ್ನಡೆ
ಚನ್ನಪಟ್ಟಣದಲ್ಲಿ ನಾಲ್ಕನೇ ಸುತ್ತಿನ ಅಂತ್ಯಕ್ಕೆ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ 1807 ಮತಗಳಿಂದ ಮುನ್ನಡೆ
ಹಳಿಯಾಳದಲ್ಲಿ ಬಿಜೆಪಿಯ ಸುನಿಲ ಹೆಗಡೆ ಮುನ್ನಡೆ; ಕಾಂಗ್ರೆಸ್ ನ ಆರ್.ವಿ. ದೇಶಪಾಂಡೆಗೆ ಹಿನ್ನಡೆ
ಶಿರಸಿ 7 ಸುತ್ತು: ಬಿಜೆಪಿಯ ವಿಶ್ವೇಶ್ವರ ಹೆಗಡೆಗೆ ಮುನ್ನಡೆ
ಚಾಮುಂಡೇಶ್ವರಿ ನಾಲ್ಕನೇ ಸುತ್ತು: ಜೆಡಿಎಸ್ ಜಿ.ಟಿ ದೇವೇಗೌಡ 11034 ಮುನ್ನಡೆ
ಹುಣಸೂರು ಐದನೇ ಸುತ್ತು: ಜೆಡಿಎಸ್ ಹರೀಶ್ ಗೌಡ ಮುನ್ನಡೆ; ಹಾಲಿ ಶಾಸಕ ಮಂಜುನಾಥ್ ಗೆ ಹಿನ್ನಡೆ
ಮಂಗಳೂರು ದಕ್ಷಿಣದ ನಾಲ್ಕನೇ ಸುತ್ತಿನ ಮತ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಗೆ 11551 ಮತಗಳ ಮುನ್ನಡೆ
ಚಳ್ಳಕೆರೆ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಬಹುತೇಕ ಗೆಲುವಿನ ಸನಿಹಕ್ಕೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆ.
ನಿಖಿಲ್ 28,032 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 37,641 ಮತಗಳನ್ನು ಪಡೆದು ಮುನ್ನಡೆ ಗಳಿಸಿದ್ದಾರೆ.
ರಾಮನಗರ: ನಿಖಿಲ್ಗೆ 9609 ಮತಗಳ ಭಾರಿ ಹಿನ್ನಡೆ
ಲುಂಗಿಯೊಳಗೆ ಕಾಲಿಗೆ ಕಟ್ಟಿದ ಮೊಬೈಲ್ಎ, ರಡೇಟು ಬಿಗಿದು ಹೊರದಬ್ಬಿದ ಪೊಲೀಸರು
ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿರುವ ಬ್ರಹ್ಮಗಿರಿಯ ಸೈಂಟ್ ಸಿಸಿಲಿ ಶಿಕ್ಷಣ ಸಂಸ್ಥೆ ಒಳ ಹೊರಗೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.ನಾಲ್ಕು ದಿಕ್ಕುಗಳಲ್ಲೂ ಪೊಲೀಸ್ ಭದ್ರ ಕೋಟೆಯ ನಡುವೆ ಅಧಿಕೃತ ಪಾಸ್ ಇಲ್ಲದವರಿಗೆ ನೋ ಎಂಟ್ರಿ, ಬೈಂದೂರಿನ ಕಾರ್ಯಕರ್ತನೊಬ್ಬ ಲುಂಗಿಯೊಳಗೆ ಕಾಲಿಗೆ ಮೊಬೈಲ್ ಕಟ್ಟಿ ಬಂದಿದ್ದಾತ ಸಿಕ್ಕಿಬಿದ್ದ, ಎರಡೇಟು ಬಿಗಿದ ಪೊಲೀಸರು ಹೊರದಬ್ಬಿದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು10 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್16 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ14 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ16 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ14 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ16 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ9 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ15 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು

















