Connect with us

ದಕ್ಷಿಣ ಕನ್ನಡ

Sexual Harasment ಬೆಳ್ತಂಗಡಿ : ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತೆಗೆ ಉದ್ಯಮಿಯಿಂದ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಬೆಳ್ತಂಗಡಿ : ಮೇ 15 :  ಕೆಲಸ ಕೊಡಿಸುವ ನೆಪದಲ್ಲಿ ಯುವತಿಗೆ ಉದ್ಯಮಿಯೊಬ್ಬರು  ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಉಜಿರೆಯಲ್ಲಿರುವ ಮಹಾವೀರ ಟೆಕ್ಸ್ ಟೈಲ್ ಹಾಗೂ ಧರ್ಮಸ್ಥಳದಲ್ಲಿರುವ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ಮಹಿಳಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ

Ad Widget

Ad Widget

Ad Widget

Ad Widget

ತನ್ನ ಕಾರಿನಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ತನ್ನ ಸೂಪರ್ ಮಾರ್ಕೇಟ್ ನ ಬಿಲ್ಲಿಂಗ್ ತೋರಿಸೋ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಮಾಡಿ ಮೈಗೆ ಕೈ ಹಾಕಿ ಲೈಂಗಿಕ ಕಿರಿಕುಳ ನೀಡಿದ್ದಾರೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿಯನ್ನು ಬೈಕ್ ನಲ್ಲಿ ಬಂದ ಯುವಕರು ಮಹಿಳೆಯ ರಕ್ಷಣೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

20ರ ಹರೆಯದ ವಿವಾಹಿತೆ ದೂರುದಾರೆ.ಮಹಿಳೆ ಹಾಗೂ ಆಕೆಯ ಪತಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಬಂದು ಪ್ರಕರಣ ದಾಖಲಿಸುತ್ತಲೇ ಆರೋಪಿ ಪರಾರಿಯಾಗಿರುವುದಾಗಿ ವರದಿಯಾಗಿದೆ.

Ad Widget

Ad Widget <> Ad Widget

Ad Widget
Click to comment

Leave a Reply

ಮಂಗಳೂರು

Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.



Ad Widget

ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ

Published

on



Ad Widget

Ad Widget

Ad Widget

Ad Widget

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Ad Widget

Ad Widget

Ad Widget

Ad Widget

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ  ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.

Ad Widget

Ad Widget <> Ad Widget

ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.



Ad Widget
Ad Widget
Continue Reading

ಕಾರ್ಯಕ್ರಮಗಳು

Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Ad Widget

ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು.

ಸಾರ್ವಜನಿಕರು ಹಾಗೂ ಆಸ್ಪತ್ರೆಯಲ್ಲಿರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading