Connect with us

ಬೆಂಗಳೂರು

ಬಡತನದಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ ತಾಯಿಯ ಪುತ್ರ ‘ಪರಿಶ್ರಮ’ ದ ಪ್ರದೀಪ್ ಈಶ್ವರ್ ಇಂದು ಶಾಸಕ – ಪ್ರಭಾವಿ ಸಚಿವ ಸುಧಾಕರ್ ನ ಮಣಿಸಿದ ಬೀದಿಯಲ್ಲಿ ಓಡಾಡಿಕೊಂಡಿದ್ದ ಸಾಮಾನ್ಯ ಯುವಕ..!

Published

on



Ad Widget

Ad Widget

Ad Widget

Ad Widget

ಇಡೀ ರಾಜ್ಯ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ನೋಡುತ್ತಿದೆ. ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಏಳೆಂಟು ವರ್ಷಗಳ ಹಿಂದೆ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಇಂದು ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಏಳೆಂಟು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರದ ರಸ್ತೆಗಳಲ್ಲಿ ಸಾಮಾನ್ಯನಂತೆ ಓಡಾಡುತ್ತಿದ್ದ, ವಾಸಿಸುತ್ತಿದ್ದ ಕೊಠಡಿ ಬಾಡಿಗೆ ಕಟ್ಟಲು ಹಣವಿಲ್ಲದ ಹುಡುಗ ಈಗ ಚಿಕ್ಕಬಳ್ಳಾಪುರದ ಶಾಸಕ!

Ad Widget

Ad Widget

Ad Widget alt="Ad Widget"/>

Ad Widget

ಡಾ ಕೆ ಸುಧಾಕರ್‌ ತವರೂರು ಪೆರೇಸಂದ್ರದವರೇ ಆದ ಪ್ರದೀಪ್‌ ಈಶ್ವರ್‌ ನ ಹೆತ್ತವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಿಕ್ಕ ವಯಸ್ಸಲ್ಲೇ ಹೆತ್ತವರು ಕಳೆದುಕೊಂಡು ಕಷ್ಟದಲ್ಲೇ ಬೆಳೆದರು ಪ್ರದೀಪ್. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿಕ್ಷಣ ಪಡೆದ ನಂತರ ನಗರದ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಬೋಧಕ ವೃತ್ತಿ ಆರಿಸಿಕೊಂಡರು. ಒಬಿಸಿ ಬಲಿಜ ಸಮುದಾಯಕ್ಕೆ ಸೇರಿರುವ ಪ್ರದೀಪ್‌ ಈಶ್ವರ್‌, ಕೋಚಿಂಗ್‌ ಸೆಂಟರ್‌ಗಳಲ್ಲಿ ಪಾಠ ಮಾಡುತ್ತಿದ್ದ ಇವರು ಕೆಲವು ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದರು.

Ad Widget

Ad Widget <> Ad Widget

ಬಡತನ, ಅವಮಾನ, ಮೂದಲಿಕೆ ಮಾತುಗಳನ್ನು ಅನುಭವಿಸಿದವರು. ಪ್ರದೀಪ್ ಈ ಮಟ್ಟಕ್ಕೆ ಬೆಳೆಯಲು ಕಾರಣ ಅವರಲ್ಲಿರುವ ಧೈರ್ಯ ಮತ್ತು ವಾಕ್‌ ಚಾತುರ್ಯ.



Ad Widget

ಪ್ರದೀಪ್‌ ಈಶ್ವರ್‌ ಮೊದಲು ಕಾಣಿಸಿಕೊಂಡಿದ್ದು 2016ರಲ್ಲಿ. ದೇವನಹಳ್ಳಿ ಬಳಿಯ ವಿಜಯಪುರವನ್ನು ತಾಲೂಕು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆ ಪ್ರತಿಭಟನೆ ವಿಫಲವಾದ ಬಳಿಕ ಸ್ಥಳೀಯ ಟಿವಿ ಚಾನೆಲ್‌ ಒಂದರಲ್ಲಿ ನಿರೂಪಕರಾಗಿ ಕೆಲಸ ಆರಂಭಿಸಿದರು. ಬಳಿಕ ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡ ಪ್ರದೀಪ್‌ ಈಶ್ವರ್‌ ಡಾ ಕೆ ಸುಧಾಕರ್‌ ವಿರುದ್ಧ ಸಣ್ಣ ಸಣ್ಣ ವಿಡಿಯೋಗಳನ್ನು ಮಾಡಿದ್ದರು

Ad Widget

Ad Widget

2018ರ ವಿಧಾನಸಭೆ ಚುನಾವಣೆ ವೇಳೆ ಹಾಲಿ ಶಾಸಕರಾಗಿದ್ದ ಡಾ ಕೆ ಸುಧಾಕರ್‌ ಅವರನ್ನು ಎದುರು ಹಾಕಿಕೊಂಡರು. ಅವರ ವಿರುದ್ಧ ನಾನಾ ವಿಡಿಯೋಗಳನ್ನು ಮಾಡಿದ್ದರು. ಸುಧಾಕರ್‌ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ದ ಕೆ ವಿ ನವೀನ್‌ಕಿರಣ್‌ ಪರ ಭರ್ಜರಿ ಪ್ರಚಾರ ಮಾಡಿ ಸದ್ದು ಮಾಡಿದ್ದರು. ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್‌ ದೌರ್ಜನ್ಯ ಖಂಡಿಸಿ ಏಕಾಂಗಿಯಾಗಿ ಪ್ರತಿಭಟನೆಯೂ ಮಾಡಿದ್ದರು.

ಪರಿಶ್ರಮ ನೀಟ್‌ ಅಕಾಡೆಮಿಯ ಯಶಸ್ಸು..!
2018ರಲ್ಲಿ ಡಾ ಕೆ ಸುಧಾಕರ್‌ ಗೆದ್ದ ನಂತರ ಬೆಂಗಳೂರಿಗೆ ತೆರಳಿದ್ದರು. ಆನಂತರ ಸಣ್ಣ ಮಟ್ಟದಲ್ಲಿ ಹುಟ್ಟು ಹಾಕಿದ ಪರಿಶ್ರಮ ನೀಟ್‌ ಅಕಾಡೆಮಿಯನ್ನು ಇಡೀ ರಾಜ್ಯವೇ ಎದ್ದು ನೋಡುವಂತೆ ಕಟ್ಟಿ ಬೆಳೆಸಿದ್ದರು. ‘ನಾನು ದ್ವೇಷ ರಾಜಕಾರಣ ಮಾಡಲ್ಲ. ಕ್ಷೇತ್ರದ ಪ್ರತಿ ಗ್ರಾಮಕ್ಕೂ ಭೇಟಿ ನೀಡುತ್ತೇನೆ. ನಗರದಲ್ಲಿ ಮನೆ ಮಾಡಲ್ಲ. ಪ್ರತಿ ದಿನ 4 ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುತ್ತೇನೆ. ಕ್ಷೇತ್ರದ ಅಭಿವೃದ್ಧಿಯಷ್ಟೇ ನನ್ನ ಉದ್ದೇಶ’ ಎನ್ನುತ್ತಾರೆ ನೂತನ ಶಾಸಕ ಪ್ರದೀಪ್‌ ಈಶ್ವರ್‌.

ತಮ್ಮ ತೆಲುಗು ಡೈಲಾಗ್‌ಗಳಿಂದಲೇ ಚುನಾವಣಾ ಪ್ರಚಾರದ ವೇಳೆ ಪ್ರದೀಪ್‌ ಈಶ್ವರ್‌ ಗಮನ ಸೆಳೆದಿದ್ದರು. ಸಚಿವ ಡಾ ಕೆ ಸುಧಾಕರ್‌ ಅವರಿಗೆ ಚುನಾವಣಾ ಕಣದಲ್ಲಿ ತಕ್ಕ ತಿರುಗೇಟು ನೀಡಿದ್ದರು. ಅದರ ಪರಿಣಾಮವೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಇಡೀ ರಾಜ್ಯವೇ ನೋಡುವಂತಹ ಫಲಿತಾಂಶ ಹೊರಬಿದ್ದಿದೆ. ಚಿಕ್ಕಬಳ್ಳಾಪುರದ ಜನ ಈ ಬಾರಿ ಬದಲಾವಣೆ ಬಯಸಿ ಪ್ರದೀಪ್‌ ಈಶ್ವರ್‌ ಅವರನ್ನು ಗೆಲ್ಲಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Lalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

Published

on



Ad Widget

Ad Widget

Ad Widget

Ad Widget

ನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ.4: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಲಲಿತಮ್ಮ (65) ಅವರು ಭಾನುವಾರ ನಿಧನರಾಗಿದ್ದಾರೆ. ಕಳೆದ ಎರಡೂವರೆ ತಿಂಗಳಿಂದ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಲವು ದಶಕಗಳಿಂದ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಲಲಿತಮ್ಮ ಅವರು ಇತ್ತೀಚಿನ ದಿನಗಳಲ್ಲಿ ಅನಾರೋಗ್ಯದ ಜೊತೆಗೆ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ‘ಅಮ್ಮನ ಮಡಿಲು ಟ್ರಸ್ಟ್’ ಅವರ ನೆರವಿಗೆ ನಿಂತು ಆಸರೆ ನೀಡಿತ್ತು.

Ad Widget

Ad Widget <> Ad Widget

ನಟ ದರ್ಶನ್ ಅಭಿನಯದ ‘ಸುಂಟರಗಾಳಿ’ ಸಿನಿಮಾದಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಲಲಿತಮ್ಮ ಅವರು ತಮ್ಮ ನೈಜ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು. ಈ ಸಿನಿಮಾದ ಪಾತ್ರ ಅವರಿಗೆ ಕನ್ನಡ ಚಿತ್ರರಂಗದಲ್ಲಿ ಅಪಾರ ಜನಪ್ರಿಯತೆ ತಂದುಕೊಟ್ಟಿತ್ತು.



Ad Widget

ಬಳಿಕ ‘ಜಂಗ್ಲಿ’, ‘ಲೈಫ್ ಇಷ್ಟೇನೆ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದ ಅವರು, ತಮ್ಮ ವಿಭಿನ್ನ ನಟನಾ ಶೈಲಿಯಿಂದ ಗುರುತಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ‘ರಂಗೋಲಿ’ ಸೇರಿದಂತೆ ಹಲವು ಜನಪ್ರಿಯ ಧಾರಾವಾಹಿಗಳು ಹಾಗೂ ನಾಟಕಗಳಲ್ಲಿಯೂ ಅಭಿನಯಿಸಿ ಮೆಚ್ಚುಗೆ ಗಳಿಸಿದ್ದರು.

Ad Widget

Ad Widget

ಹಿರಿಯ ನಟಿ ಲಲಿತಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಕಿರುತೆರೆ ಹಾಗೂ ರಂಗಭೂಮಿಯ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಗಲಿಕೆಗೆ ತೀವ್ರ ಕಂಬನಿ ಮಿಡಿದಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಶಿಕ್ಷಣ

Special classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ

Published

on



Ad Widget

Ad Widget

Ad Widget

Ad Widget

ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರಿಂದ ಕಡ್ಡಾಯವಾಗಿ ಲಿಖಿತ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಇಲಾಖೆ ಸೂಚಿಸಿದೆ.

Ad Widget

Ad Widget <> Ad Widget

ಅಲ್ಲದೆ, ವಿಶೇಷ ತರಗತಿಗಳನ್ನು ನಡೆಸುವ ಕುರಿತು ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ನಡವಳಿ ದಾಖಲಿಸಬೇಕು. ತರಗತಿಗಳನ್ನು ನಡೆಸುತ್ತಿರುವ ಮಾಹಿತಿಯನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ನೀಡುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.



Ad Widget

ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading