ಸ್ಥಳೀಯ
ಗ್ಯಾಸ್ ವಿತರಣೆಯಲ್ಲಿ ವಿಳಂಬ, ಅವಾಚ್ಯ ಶಬ್ದಗಳಿಂದ ನಿಂದನೆ ; ಗ್ರಾಹಕ – ವಿತರಕರಿಂದ ದೂರು ಪ್ರತಿದೂರು
ವಿಟ್ಲ, ಮೇ 15 ಸರಿಯಾದ ಸಮಯಕ್ಕೆ ಗ್ಯಾಸ್ ಸಿಲಿಂಡರ್ ಸರಬರಜು ಮಾಡದ ಹಿನ್ನಲೆಯಲ್ಲಿ ಗ್ರಾಹಕ ಹಾಗೂ ಗ್ಯಾಸ್ ಏಜೆನ್ಸಿ ಮಧ್ಯೆ ವಾಗ್ವಾದ ನಡೆದು ,ವಿಟ್ಲ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಾಗಿದೆ.
ಚಿಕನ್ ಸೆಂಟರ್ ಮಾಲಕನೊರ್ವ ಗ್ಯಾಸ್ ಸಿಲಿಂಡರ್ ಗಾಗಿ ವಿಟ್ಲದ ಗ್ಯಾಸ್ ಏಜೆನ್ಸಿ ಗೆ ಬೇಡಿಕೆ ಸಲ್ಲಿಸಿದ್ದು, 3 ದಿನ ಕಳೆದರೂ ಗ್ಯಾಸ್ ಒದಗಿಸದೇ ಬೇಜವಬ್ದಾರಿ ತೋರಿದ್ದಾರೆಂದು ವಿತರಕ ಹಾಗೂ ಗ್ರಾಹಕ ನ ಮಧ್ಯೆ ವಾಗ್ವದ ನಡೆದಿದೆ.
ಈ ವೇಳೆ ಗ್ಯಾಸ್ ವಿತರಿಸಲು ಬಂದ ಎಜೆನ್ಸಿ ಸಿಬಂದಿ ಗ್ರಾಹಕನನ್ನು ಉದ್ದೇಶಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭ ರೊಚ್ಚಿಗೆದ್ದ ಗ್ರಾಹಕ ಹಲ್ಲೆಗೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಏಜೆನ್ಸಿಯು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೂಕ್ತ ಸಮಯಕ್ಕೆ ಸಿಲಿಂಡರ್ ಒದಗಿಸದೆ ವ್ಯಾಪಾರಕ್ಕೆ ನಷ್ಟ ಉಂಟು ಮಾಡಿದ್ದು ಹಾಗೂ ಅವಾಚ್ಯ ಶಬ್ದ ಗಳಿಂದ ನಿಂದಿಸಿರುವುದಾಗಿ ಗ್ರಾಹಕ ಪ್ರತಿ ದೂರು ನೀಡಿದ್ದಾರೆ.
ಪೊಲೀಸ್ ಠಾಣೆಯ ಮೂಲಕ ಈ ಪ್ರಕರಣವನ್ನು ಮುಚ್ಚಿ ಹಾಕಲು ಗ್ಯಾಸ್ ಏಜೆನ್ಸಿ ಪ್ರಯತ್ನ ನಡೆಸಿತ್ತು ಎಂಬ ಆರೋಪವು ಕೇಳಿ ಬಂದಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಾರ್ವಜನಿಕ ವಲಯದಿಂದ ದೂರು ಹೋದ ಹಿನ್ನಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ವಿಫಲಗೊಂಡಿದೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್ಫೆಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್ಅಪ್ ಸ್ಥಾನ ಗಳಿಸಿತು.
ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.
ವಿಜೇತರಿಗೆ ಪ್ರಶಸ್ತಿ ಪ್ರದಾನ
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್ಅಪ್ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಕಾರ್ಯಕ್ರಮಗಳು
Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.
ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.
-
ರಾಜಕೀಯ24 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ದಕ್ಷಿಣ ಕನ್ನಡ9 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ7 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ9 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized7 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್8 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ7 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು7 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ



















