ಕ್ರೈಂ
Ilicit Relationship : ಕಾಸರಗೋಡು : ಲಾಡ್ಜ್‌ನಲ್ಲಿ ವಿವಾಹಿತ ಬ್ಯೂಟಿಷಿಯನ್‌ನ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ – ಪತ್ನಿಗೆ ವಿಚ್ಛೇದನ ನೀಡಿ ವಿವಾಹವಾಗುವಂತೆ ಒತ್ತಡ ಹೇರಿದ್ದಕ್ಕೆ ಕೊಲೆಗೈದೆ ಎಂದ ಆರೋಪಿ
Ilicit Relationship ಕಾಸರಗೋಡು, ಮೇ 16 : ಬ್ಯೂಟಿ ಪಾರ್ಲರ್ (Beauty Parlour) ನಡೆಸುತ್ತಿದ್ದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ವಸತಿಗ್ರಹಕ್ಕೆ ಕರೆಸಿ ಕೊಲೆಗೈದ ಘಟನೆ ಕೇರಳದ (Kerala) ಕಾಞ೦ಗಾಡ್ ಸಮೀಪ ಮಂಗಳವಾರ ಸಂಜೆ ನಡೆದಿದೆ. ಉದುಮ ಮಾಂಗಾಡ್ ನ ದೇವಿಕಾ(34) ಹತ್ಯೆಗೀಡಾದವರು. ಕೊಲೆ ನಡೆಸಿದ ಬಳಿಕ ಈಕೆಯ ಪ್ರಿಯಕರ ಕೃತ್ಯ ನಡೆದ ಸ್ಥಳದಿಂದ ಸುಮಾರು 500 ಮೀ ದೂರದಲ್ಲಿರುವ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಶರಣಾದ ಆರೋಪಿ. ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ.
ಆರೋಪಿ ಸತೀಶ್ ಭಾಸ್ಕರನ್ ವಿವಾಹಿತನಾಗಿದ್ದು ಆತನಿಗೆ ಒಂದು ಮಗುವಿದೆ. ಹತ್ಯೆಯಾದ ದೇವಿಕಾರಿಗೂ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಬಳಿಕ ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಕೃತ್ಯ ನಡೆಸುವುದಕ್ಕೆ ವಾರ ಮೊದಲೇ ಸತೀಶ್ ವಸತಿಗೃಹದಲ್ಲಿ ರೂಮ್ ಪಡೆದು ವಾಸಿಸುತ್ತಿದ್ದ. ಮಂಗಳವಾರ ಮಧ್ಯಾಹ್ನ ಆತ ದೇವಿಕಾಳನ್ನು ತಾನು ತಂಗಿದ್ದ ಲಾಡ್ಜ್ ನ ರೂಮ್ ಗೆ ಕರೆದುಕೊಂಡು ಬಂದು ಮಧ್ಯಾಹ್ನ 1.30ರ ಸುಮಾರಿಗೆ ಆಕೆಯ ಹತ್ಯೆ ಮಾಡಿದ ಆತ ರೂಮ್ ನ ಬಾಗಿಲಿಗೆ ಲಾಕ್ ಹಾಕಿ ಅಲ್ಲಿಂದ ಹೊರ ಹೋಗಿದ್ದ.

ಬಳಿಕ ಸಂಜೆ 5 ಗಂಟೆಯ ಸುಮಾರಿಗೆ ಕೃತ್ಯ ನಡೆದ ಸ್ಥಳದಿಂದ 500 ಮೀ ದೂರದಲ್ಲಿರುವ ಠಾಣೆಗೆ ಬಂದ ಆರೋಪಿ ಪೊಲೀಸರ ಮುಂದೆ ಕೊಲೆ ಮಾಡಿರುವುದನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ತಕ್ಷಣ ಪೊಲೀಸರು ವಸತಿ ಗೃಹಕ್ಕೆ ಪೊಲೀಸರು ಧಾವಿಸಿದ್ದು, ಈ ವೇಳೆ ದೇವಿಕಾ ಮೃತಪಟ್ಟಿಯ ಆಕೆಯ ಕತ್ತನ್ನು ಸೀಳಲಾಗಿತ್ತು ಎಂದು ಕಾಞ೦ಗಾಡ್ ಡಿವೈಎಸ್ಪಿ ಭಾಲಕೃಷ್ಣನ್ ನಾಯರ್ ಮಾಹಿತಿ ನೀಡಿದ್ದಾರೆ.

ದೇವಿಕಾ ಆರೋಪಿ ಬಳಿ ಪತ್ನಿಗೆ ವಿಚ್ಚೇಧನ ನೀಡಿ ತನ್ನನೂ ವಿವಾಹವಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ತಾನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಸತೀಶ್ ಹೇಳಿಕೊಂಡಿದ್ದು ಈ ಬಗ್ಗೆ ತನಿಖೆ ಮುಂದುವರಿದಿದೆ. ಸಿಐಟಿಯು ಅಂಗಸಂಸ್ಥೆಯಾದ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ದೇವಿಕಾ ತನ್ನ ಮನೆಯಿಂದ 20 ಕಿ.ಮೀ ದೂರದಲ್ಲಿರುವ ಕಾಞಂಗಾಡ್‌ಗೆ ಬಂದಿದ್ದರು. ಸಭೆಯ ನಂತರ ಸತೀಶ್ ಆಕೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ22 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು24 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಉದ್ಯೋಗ18 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















