Connect with us

ವಿಟ್ಲ

Vitla : ವಿಟ್ಲ : ದಾರಿ ಕೇಳುವ ನೆಪದಲ್ಲಿ ಮಹಿಳೆ ಜತೆ ಅಸಭ್ಯ ವರ್ತನೆ – ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ವಿಟ್ಲ : ಮೇ 17 :  ಬೈಕ್‌ ಸವಾರನೊಬ್ಬ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಅಬೂಬಕ್ಕರ್ ಕೆ (46 ವ) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಮೇ 13 ರಂದು  ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಬನ ಎಂಬಲ್ಲಿ ಮೋಟಾರ್ ಸೈಕಲ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜೊತೆ  ಅಸಭ್ಯವಾಗಿ ವರ್ತಿಸಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದರು.

Ad Widget

Ad Widget alt="Ad Widget"/>

Ad Widget

 ಆರೋಪಿ ಪತ್ತೆಯ ಕಾರ್ಯದಲ್ಲಿ ಪೊಲೀಸ್ ನಿರೀಕ್ಷಕ ನಾಗರಾಜ್‌ ಹೆಚ್ ಮಾರ್ಗದರ್ಶನದಂತೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ಹೆಚ್‌ಸಿ  ರಕ್ಷಿತ್ ಮತ್ತು ಪಿಸಿ ಹೇಮರಾಜರವರು ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಕೃತ್ಯ ನಡೆದ ಬೆನ್ನಲೆ ಮಹಿಳೆಯ ಮನೆಗೆ ತೆರಳಿ ಧೈರ್ಯ ತುಂಬುವ ಕಾರ್ಯ ಮಾಡಿದ್ದರು. ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಸಂತ್ರಸ್ತ ಯುವತಿಯ ಮನೆಗೆ ತೆರಳಿ 2 ದಿನಗಳಲ್ಲಿ ಆರೋಪಿಗಳ ಬಂಧಿಸದಿದ್ದರೆ ಠಾಣೆಯ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

Published

on

Ad Widget

Ad Widget

Ad Widget

Ad Widget

ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

Ad Widget

Ad Widget <> Ad Widget

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.

Ad Widget

Ad Widget

ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!