Connect with us

Uncategorized

Pratap Simha: ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ಸಿಟ್ಟು ಹೊರ ಹಾಕುವ ಹಕ್ಕಿದೆ- ನಮ್ಮನ್ನು ಕ್ಷಮಿಸಿ : ಸಂಸದ ಪ್ರತಾಪ್‌ ಸಿಂಹ ಹೀಗಂದದ್ದು ಯಾಕೇ ?

Published

on

Ad Widget

Ad Widget

Ad Widget

Ad Widget

ಮೈಸೂರು  ಮೇ. 18: ಪುತ್ತೂರಿನಲ್ಲಿ ಬಿಜೆಪಿ  ಮುಖಂಡರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಪೊಲೀಸ್‌ ದೌರ್ಜನ್ಯ ನಡೆದ ಹಾಗೂ ಇದರ ವಿರುದ್ದ ವ್ಯಾಪಕ ಆಕ್ರೋಶ  ವ್ಯಕ್ತವಾದ ಬೆನ್ನಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ (pratap Simha) ಕಾರ್ಯಕರ್ತರ ಪರ ಬ್ಯಾಟಿಂಗ್‌ ಮಾಡಿದ್ದರೆ.

Ad Widget

Ad Widget

Ad Widget

Ad Widget

ನಮ್ಮ ಪರವಾಗಿ, ಪಕ್ಷದ ಪರವಾಗಿ ದುಡಿಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ ಎಂದು ಹೇಳಿರುವ ಅವರು  ಇದರ ಜೊತೆಗೆ ಪಕ್ಷದ ಹೀನಾಯ ಸೋಲಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆಯನ್ನು ಕೂಡ ಯಾಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ಬಳಿಕ ಪುತ್ತೂರಿನಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಅವರ ಶ್ರದ್ದಾಂಜಲಿ ಬ್ಯಾನರ್‌ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಂಧಿತ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದರು. ಮಾರಣಾಂತಿಕವಾಗಿ ಗಾಯಗೊಂಡ ಕಾರ್ಯಕರ್ತರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿ ನಾಯಕರ ಸೂಚನೆಯಂತೆ ಕಾರ್ಯಕರ್ತರಿಗೆ ಪೊಲೀಸರು ಥಳಿಸಿದ್ದು, ನಳಿನ್ ಕುಮಾರ್ ಆಪ್ತ, ಪುತ್ತೂರಿನ ಬಿಜೆಪಿ ನಾಯಕರ ಒತ್ತಡಕ್ಕೆ ಬಿದ್ದು ಥಳಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು.

Ad Widget

Ad Widget <> Ad Widget

“ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗು ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರ ಹಾಕುವ ಹಕ್ಕೂ ಇರುತ್ತದೆ. ಪಕ್ಷ ಸೋತು ಅನಾಥವಾಗಿರುವುದು, ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ” ಎಂದಿದ್ದಾರೆ.

ಮುಂದುವರೆದು, “ಹಾಗೂ…ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ” ಎಂದು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

Ad Widget

Ad Widget

 ಹಲ್ಲೆ  ಘಟನೆಗೆ ಪ್ರತಿಕ್ರಿಯಿಸಿದ್ದ ನಳಿನ್ ಕುಮಾರ್ ಕಟೀಲ್, “ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

Ad Widget
Click to comment

Leave a Reply

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!