Uncategorized
ಡಿ.ವಿ ಸದಾನಂದ ಗೌಡ, ಸಂಸದ ನಳಿನ್ ಕಟೀಲ್ ಒತ್ತಡದಲ್ಲಿ ಡಿವೈಎಸ್ಪಿ ತಾಳಕ್ಕೆ ತಕ್ಕಂತೆ ಕುಣಿದು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ – ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಗಂಭೀರ ಆರೋಪ
ಪುತ್ತೂರು, ಮೇ 19 : ಬಿಜೆಪಿ ನಾಯಕರ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಕಾರ್ಯಕರ್ತರಿಗೆ ಪೊಲೀಸ ರ ಮೂಲಕ ಹಲ್ಲೆ ನಡೆಸಿದ್ದರಲ್ಲಿ ಕೇಂದ್ರ ಮಾಜಿ ಸಚಿವ ಡಿ.ವಿ ಸದಾನಂದ ಗೌಡ ಹಾಗೂ ಸಂಸದ ನಳಿನ್ ಕಟೀಲ್ ನೇರ ಭಾಗಿಯಾಗಿದ್ದರೆ. ಅಲ್ಲದೆ ಅವರ ಒತ್ತಡದಲ್ಲಿ ಡಿವೈಎಸ್ಪಿ ತಾಳಕ್ಕೆ ತಕ್ಕಂತೆ ಕುಣಿದು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಗಂಭೀರ ಆರೋಪ ಮಾಡಿದ್ದಾರೆ.
ಮೇ. 19 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದ್ ಆಲಿ ಮಾತನಾಡಿ, ಇವರೇ ಅನ್ಯಾಯ ಮಾಡಿ, ಎಸ್ಪಿಗೆ ಒತ್ತಡ ಹಾಕಿರುವುದಲ್ಲದೆ ಅಧಿಕಾರಿಗಳನ್ನು ಅಮಾನತು ಮಾಡಿರುವುದೂ ಇವರೇ ಇದು ರಾಜಕಾರಣಿಗಳ ಕಾಲಕ್ಕೆ ತಕ್ಕಂತೆ ಕುಣಿಯುವ ಅಧಿಕಾರಿಗಳಿಗೆ, ಮುಂದಕ್ಕೆ ಕಾನೂನು ಮೀರಿ ನಡೆಯುವ ಪೊಲೀಸರಿಗೆ ಪಾಠವಾಗಿದೆ ಎಂದರು
ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ ಸದಾನಂದ ಗೌಡರೇನು ಸ್ವಾತಂತ್ರ್ಯ ಹೋರಾಟಗಾರರ ಅಥವಾ ಹುತಾತ್ಮರಾದವರಾ ?
ಇಂತಹ ಘಟನೆಗಳು ಬೇರೆಲ್ಲಿಯೂ ನಡೆದಿಲ್ವಾ. ಅಷ್ಟೊಂದು ದೊಡ್ಡ ಅಪರಾಧವಾ? ನಗರ ಠಾಣೆಯಲ್ಲಿ ವಿಚಾರಣೆ ಮಾಡಬೇಕಾದ ಪ್ರಕರಣವನ್ನು ಡಿವೈಎಸ್ಪಿ ಕಚೇರಿಯಲ್ಲಿ ಸಂಪ್ಯ ಪೊಲೀಸರನ್ನು ಕರೆಯಿಸಿ ಹಲ್ಲೆ ನಡೆಸಿದ್ದಾರೆ. ಡಿವೈಎಸ್ಪಿಯವರು ಯಾರ ಕುಮ್ಮಕ್ಕಿನಲ್ಲಿ ಪುತ್ತೂರಿಗೆ ಬಂದಿದ್ದಾರೆ ಅವರ ನಡವಳಿಕೆಯ ಬಗ್ಗೆ ನಮಗೆ ಗೊತ್ತಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಮಾಜಿ ಸಚಿವ ಸದಾನಂದ ಗೌಡರವರ ಒತ್ತಡ ಹಾಕಿ ಹಲ್ಲೆ ನಡೆಸಿದ್ದಾರೆ ಎಂದರು.
ಪ್ರಭಾಕರ ಭಟ್ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬಿಜೆಪಿಯವರ ಆರೋಪಗಳನ್ನು ಜನ ನಂಬುವುದಿಲ್ಲ. ಇವರ ನಾಟಕ, ದೊಂಬರಾಟಗಳೆಲ್ಲವೂ ಜನರಿಗೆ ತಿಳಿದಿದೆ. ಪ್ರಭಾಕರ ಭಟ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಪುತ್ತಿಲರವರ ಮೇಲೆ ಆರೋಪ ಮಾಡದೆ ಕಾಂಗ್ರೆಸ್ ಮೇಲೆ ಮಾಡಿದ್ದಾರೆ. ಪುತ್ತಿಲರ ಮೇಲೆ ಆರೋಪ ಮಾಡಲು ಪ್ರಭಾಕರ ಭಟ್ ಹೆದರಿದ್ದಾರೆ. ನೇರವಾಗಿ ಆರೋಪ ಮಾಡದ ಪುತ್ತಿಲರವರಿಗೂ ಒಂದು ಕಡೆ ಭಯವಿದೆ ಎಂದರು.
ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದರೆ ಪುತ್ತಿಲರನ್ನು ಚಪಾತಿ ಮಾಡುತ್ತಿದ್ದರು :
ರಾಜ್ಯದಲ್ಲಿ ಬಿಜೆಪಿ ಸರಕಾರ ಬಹುಮತ ಬರುತ್ತಿದ್ದರೆ ಕಾರ್ಯಕರ್ತರನಲ್ಲ ಪುತ್ತಿಲರನ್ನು ಚಪಾತಿ ಮಾಡುತ್ತಿದ್ದರು. ಕಾಂಗ್ರೆಸ್‌ಗೆ ಅಧಿಕಾರ ಬಂದಿರುವುದರಿಂದ ಪುತ್ತಿಲ ಬದುಕಿದ್ದಾರೆ. ಶನಿಪೂಜೆಯ ಸಂದರ್ಭದಲ್ಲಿ ಎನ್‌ಕೌಂಟರ್ ಮಾಡಲು ಮುಂದಾದಾಗ ಅವರಿಗೆ ರಕ್ಷಣೆ ಕೊಟ್ಟವರು ಯಾರೆಂಬುದನ್ನು ಹೇಳಲಿ ಎಂದರು.
ಪುತ್ತೂರಿನಲ್ಲಿ ಶಾಸಕರು ಇಲ್ವಾ? :
ಹರೀಶ್ ಪೂಂಜ ಬೆಳ್ತಂಗಡಿಯಲ್ಲಿ ಸಾಕಷ್ಟು ಕೆಲಸವಿದ್ದರೂ ಇಲ್ಲಿಗೆ ಬಂದು ಲಾಭ ಪಡೆಯಲು ಯತ್ನಿಸುತ್ತಾರೆ. ನಾನು ಮಾಡುತ್ತೇನೆಂದು ಹರೀಶ್ ಪೂಂಜ ಹೇಳಲು ಪುತ್ತೂರಿನಲ್ಲಿ ಶಾಸಕರು ಇಲ್ವಾ ಎಂದು ಆಲಿಯವರು ಪ್ರಶ್ನಿಸಿದರು.
ಅಶೋಕ್ ರೈ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ :
ಕಾರ್ಯಕರ್ತರಿಗೆ ನಡೆದ ಹಲ್ಲೆಯನ್ನು ಪ್ರಥಮ ಭಾರಿಗೆ ತೀವ್ರವಾಗಿ ಖಂಡಿಸಿದವರು ಶಾಸಕ ಅಶೋಕ್ ಕುಮಾರ್ ರೈಯವರು. ಹಾಗಿದ್ದರೂ ಅಶೋಕ್ ರೈಯವರು ಶಾಸಕರಾಗಿ ಗೆದ್ದ ಬಳಿಕ ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಾರೆ. ಘಟನೆಯ ಬಗ್ಗೆ ದೂರು ಕೊಟ್ಟವರು, ಪ್ರತಿಭಟನೆ ನಡೆಸಿದವರು ಯಾರೆಂದು ಗೊತ್ತಿದ್ದರೂ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಾರೆ.
ಡಿವೈಎಸ್ಪಿಯವರು ಕರೆ ಮಾಡಿದವರು ಯಾರೆಂದು ಬಹಿರಂಗ ಪಡಿಸಲಿ :
ಘಟನೆ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದರೂ ಡಿವೈಎಸ್ಪಿ ಕಚೇರಿಯಲ್ಲಿ ಯಾಕೆ ತನಿಕೆ ನಡೆಸಬೇಕು. ಸಂಪ್ಯ ಎಸೈ ಹಾಗೂ ಸಿಬ್ಬಂಧಿಗಳಿಗೆ ಇದರಲ್ಲಿ ಏನು ಸಂಬಂಧಿವಿದೆ? ಡಿವೈಎಸ್ಪಿ ಕಚೇರಿಯಲ್ಲಿ ಅವರ ಅದೇಶವಿಲ್ಲದೆ ಸಿಬ್ಬಂಧಿಗಳು ಕೆಲಸ ಮಾಡುತ್ತಾರಾ? ಡಿವೈಎಸ್ಪಿಯವರ ಆದೇಶದಂತೆ ಕೆಲಸ ಮಾಡಿದವರಿಗೆ ಅಮಾನತು ಶಿಕ್ಷೆ. ಇವರ ಮೇಲೆ ಮಾತ್ರ ಶಿಸ್ತು ಕ್ರಮ. ತನಗೆ ಒತ್ತಡ ಹೇರಿ ನೂರಾರು ಕರೆಗಳು ಬಂದಿವೆ ಎಂದು ಹೇಳುವ ಡಿವೈಎಸ್ಪಿಯವರು ಕರೆ ಮಾಡಿದವರು ಯಾರೆಂದು ಬಹಿರಂಗ ಪಡಿಸಲಿ ಎಂದರು.
ಬಿಜೆಪಿಯವರೇ ದೂರು ನೀಡಿ, ಪ್ರತಿಭಟನೆ ನಡೆಸಿ ಮಾನ ಮರ್ಯಾದಿ ಇಲ್ಲದೆ ಅವರು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಜನರೇನು ಕಿವಿಗೆ ಹೂ ಇಟ್ಟಿದ್ದಾರಾ? ಜನರಿಗೂ ಗೊತ್ತಿದೆ ಯಾರು ಮಾಡಿದ್ದು ಎನ್ನುವುದು. ದೂರು ನೀಡಿದ್ದು ಯಾರು ಎಂದು ಗೊತ್ತಿದ್ದರೂ ಅರುಣ್ ಪುತ್ತಿಲರವರು ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿಲ್ಲ. ಯಾರ ಒತ್ತಡದಲ್ಲಿ ಬಂಧಿಸಿ, ಹಲ್ಲೆ ನಡೆಸಿದ್ದಾರೆ. ಅದಕ್ಕಿರುವ ಕಾರಣ, ಅದರ ಹಿಂದಿರುವವವರ ಬಗ್ಗೆ ಗೊತ್ತಿದ್ದರೂ ಪುತ್ತಿಲ ನುಣುಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದರು.
ಆರೋಪ ಮಾಡುವ ಬಿಜೆಪಿಗರಿಗೆ ಕನಿಷ್ಠ ಜ್ಞಾನವೂ ಇಲ್ಲ
ಘಟನೆಯ ಬಗ್ಗೆ ಪ್ರಭಾಕರ್ ಭಟ್ ಹಾಗೂ ಹರೀಶ್ ಪೂಂಜ ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಾಜ ರಾಧಾಕೃಷ್ಣ ಆಳ್ವ ಹಾಗೂ ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ಮೊದಲು ದೂರು ನೀಡಿ ಪತ್ತೆ ಮಾಡಿ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಸಂಜೀವ ಮಠಂದೂರು ಹಿಂದೂ ಕಾರ್ಯಕರ್ತರ ಮೇಲೆ ಧಿಕ್ಕಾರ ಕೂಗಿದ್ದರು. ಆದರೂ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಾರೆಂದರೆ ಅವರಿಗೆ ಕನಿಷ್ಠ ಜ್ಞಾನವು ಇಲ್ಲದಂತಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಷನ್ ರೈ ಬನ್ನೂರು, ನಗರ ಕಾಂಗ್ರೆಸ್ ಉಪಾಧ್ಯಕ್ಷರಾದ ಮುಕೇಶ್ ಕೆಮ್ಮಿಂಜೆ, ಮಂಜುನಾಥ ಹಾಗೂ ಕಾರ್ಯದರ್ಶಿ ವಿಕ್ಟರ್ ಪಾಯಸ್ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಸ್ಥಳೀಯ18 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ11 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್17 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಮಂಗಳೂರು11 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್13 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು12 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ11 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















