Uncategorized
ಕಾಂಗ್ರೆಸ್ ಸರ್ಕಾರ ಐದು ವರ್ಷವಿದೆ ಎಂಬ ಭಾವನೆಯಿಂದ ಕಾನೂನನ್ನು ಕೈಗೆತ್ತಿಕೊಂಡರೆ ಅದನ್ನು ಸಹಿಸುವುದಿಲ್ಲ – ಬಸವರಾಜ್ ಗೌಡ ಪಾಟೀಲ್ ಯತ್ನಾಳ್
ಪುತ್ತೂರು, ಮೇ 19 : ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಪೊಲೀಸ್ ಇಲಾಖೆಗೆ ಗೌರವ ತರುವಂತಹ ವಿಚಾರವಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿಗಳು, ಹೋರಾಟಗಳು, ಸಂಘರ್ಷಗಳು ಸಹಜ. ದೂರು ಬಂದಾಗ ತನಿಖೆ ಮಾಡುಬೇಕು. ಹೊರತು ಈ ರೀತಿ ಹೊಡೆಯುವ ವಿಧಾನ ಪೊಲೀಸರಿಗಿಲ್ಲ. ಇವರು ತಾಲೀಬಾನಿಗಳಲ್ಲ, ದೇಶದ್ರೋಹಿ ಕೆಲಸ ಮಾಡಿದವರಲ್ಲ. ಯಾರು ಮಾಡಿಸಿದರು ಎಂಬುದು ತನಿಖೆಯಾಗಬೇಕಾಗಿದೆ. ಕೆಳಗಿನ ಹಂತದ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಿದ್ದು, ಡಿವೈಎಸ್ ಪಿ ಅವರನ್ನು ತಕ್ಷಣ ಅಮಾನತ್ತು ಮಾಡಬೇಕು. ಈ ವಿಚಾರ ಸರಿಯಾಗಿ ತನಿಖೆಯಾಗಬೇಕಾಗಿದೆ ಎಂದು ಬಿಜೆಪಿ ಫೈರ್ ಬ್ರಾಂಡ್ ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದರು.
ಅವರು ಇಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪೊಲೀಸರಿಂದ ದೌರ್ಜನ್ಯ ಕ್ಕೆ ಒಳಗಾಗಿದ್ದಾರೆ ಎನ್ನಲಾದ ಹಿಂದು ಕಾರ್ಯಕರ್ತರನ್ನು ಭೇಟಿ ಮಾಡಿದರು. ಸುಮಾರು 20 ನಿಮಿಷಕ್ಕೂ ಹೆಚ್ವು ಕಾಲ ಹಲ್ಲೆಗೊಳಗಾಗಿದ್ದ ಕಾರ್ಯಕರ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಯತ್ನಾಳ್ ಸಂತ್ರಸ್ತ ಕಾರ್ಯಕರ್ತರಿಗೆ ಸರ್ಕಾರದಿಂದ ಹಾಗೂ ನಮ್ಮ ವ್ಯವಸ್ಥೆಯಿಂದ ಸೂಕ್ತ ಪರಿಹಾರ ಒದಗಿಸಬೇಕು. ವೈದ್ಯಕೀಯ ವೆಚ್ಚಕ್ಕಾಗಿ ವೈಯಕ್ತಿಕವಾಗಿ 1ಲಕ್ಷವನ್ನು ನೀಡುತ್ತಿದ್ದೇನೆ ಎಂದರು
ಇಂತಹ ಘಟನೆ ನಮಗೂ ನೋವುಂಟುಮಾಡಿದ್ದು, ಇದನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ನಾನು ನಿಮ್ಮ ಸದಾ ನಿಮ್ಮೊಂದಿಗೆ ಇದ್ದು, ಒಳಗಿನ ಸತ್ಯ ತಿಳಿದು ಬಂದಿದೆ. ಸತ್ಯವನ್ನು ಎಲ್ಲಿಗೆ ತಲುಪಿಸಬೇಕೋ ಅಲ್ಲಿಗೆ ತಲುಪಿಸುವ ಕಾರ್ಯ ಮಾಡುತ್ತೇನೆ. ಈ ಘಟನೆಯನ್ನು ಹಿಂದು, ಬಿಜೆಪಿ ಎನ್ನದೆ ಎಲ್ಲಾ ಕಾರ್ಯಕರ್ತರು ಒಂದಾಗಿ ಮನಸ್ಸಿನ ಭಾವನೆಗಳಿಗೆ ತಕ್ಕುದಾದ ನಿರ್ಣಯವನ್ನು ಪಕ್ಷ ಕೈಗೊಳ್ಳುತ್ತದೆ. ಪಕ್ಷದಿಂದ ಏನಾದರೂ ಆಗಿದೆ ಎಂದು ತಿಳಿದುಕೊಳ್ಳುವ ಹಾಗಾಗಿದ್ದರೆ ಅದನ್ನು ಮುಂದಿನ ದಿನದಲ್ಲಿ ಸರಿಪಡಿಸುವ ಕಾರ್ಯವನ್ನು ಕೇಂದ್ರದ ಹೈಕಮಾಂಡ್ ಮಾಡುತ್ತದೆ. ಪುತ್ತೂರಿನಲ್ಲಿ ನಡೆದ ಎಲ್ಲಾ ಘಟನೆಯನ್ನು ಕಾರ್ಯಕರ್ತರ ಭಾವನೆಯನ್ನು ಕೇಂದ್ರದ ನಾಯಕರಿಗೆ ತಿಳಿಸಲಾಗುವುದು ಎಂದರು.
ನಾವು ಯಾರಿಗೂ ತೊಂದರೆ ಕೊಡುವವರಲ್ಲ, ಯಾವುದೇ ರೀತಿಯಲ್ಲಿ ನಮ್ಮ ಕಡೆಯಿಂದ ತಪ್ಪಾಗದಂತೆ ನೋಡಿಕೊಳ್ಳಬೇಕಾಗಿದೆ. ನಮ್ಮ ಹೋರಟ ಇರುವುದು ಹಿಂದುತ್ವ ಹಾಗೂ ರಾಷ್ಟ್ರೀಯತೆಯ ಬಗ್ಗೆ ಹೊರತು ಯಾವುದೇ ದೇಶ ವಿರೋಧಿ ಹೊರಾಟವಿಲ್ಲ. ಕೆಲವೊಂದು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರ ಬಂತು ಎಂದು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿದರೆ, ಈ ಸರ್ಕಾರ ಐದು ವರ್ಷವಿದೆ ಎಂಬ ಭಾವನೆಯಿಂದ ಕಾನೂನನ್ನು ಕೈಗೆತ್ತಿಕೊಂಡರೆ ಅದನ್ನು ಸಹಿಸುವುದಿಲ್ಲ ಮತ್ತು ಕಾರ್ಯಕರ್ತರ ಜತೆಗೆ ಇರುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದು, ಇನ್ನು ಮುಂದಿನದಲ್ಲಿ ಹಿಂದೂ ಕಾರ್ಯಕರ್ತರಿಗೆ ದೊಡ್ಡ ಸವಾಲಿದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಿಂದು ಕಾರ್ಯಾಕರ್ತರ, ಬಿಜೆಪಿ ಕಾರ್ಯಕರ್ತರ, ಗೋರಕ್ಷಕರ ಮಾರಣಹೋಮ ನಡೆದಿದೆ.ದುರ್ದೈವದಿಂದ ಮತ್ತೆ ಅದೇ ನಾಯಕತ್ವದ ಸರ್ಕಾರ ಆಡಳಿತಕ್ಕೆ ಬಂದಿದ್ದು, ತಾಲೀಬಾನ್ ಸರ್ಕಾರ ಬಂತು ಎಂದು ಕಾರ್ಯಕರ್ತರಲ್ಲಿ ಅನಾಥ ಪ್ರಜ್ಞೆ, ಭಯ ಮೂಡುತ್ತಿದೆ. ದೇಶದಲ್ಲಿ ಹಿಂದುಗಳ ರಕ್ಷಣೆ ಮಾಡುವುದು ಬಿಜೆಪಿಯ ಕರ್ತವ್ಯವಾಗಿದೆ ಎಂದರು.
ಕಾರಣಾಂತರಗಳಿಂದ ಪಕ್ಷದ ಕೆಲವು ನಿರ್ಣಯಗಳಿಂದ ನೋವಾಗಿದೆ. ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ನೋವುಗಳಾಗಿರಬಹುದು. ಚುನಾವಣೆಯಲ್ಲಿ ಅರುಣ್ ಕುಮಾರ್ ಅವರಿಗೆ ಹೆಚ್ಚಿನ ಮತವನ್ನು ನೀಡಿದ್ದಾರೆ. ಅವರ ಮೇಲೆ ಹೆಚ್ಚಿನ ಗೌರವ ಇದೆ ಎಂಬುದನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಈ ಎಲ್ಲಾ ವಿಚಾರಗಳು ಪಕ್ಷದ ಗಮನಕ್ಕೆ ಬಂದಿತ್ತು ಉತ್ತಮ ರೀತಿಯಲ್ಲಿ ಮುಂದಿನ ಸ್ಪಂದಿಸುವ ಕಾರ್ಯವನು ಮಾಡಲಿದೆ. ಒಳಗಿನ ಜಗಳದಿಂದ, ವೈಯಕ್ತಿಕ ಪ್ರತಿಷ್ಠೆಯಿಂದ ಚುನಾವಣೆಯಲ್ಲಿ ಸಮಸ್ಯೆಯಾಗಿದ್ದು, ಇದಕ್ಕೆ ತೇಪೆ ಹಚ್ಚುವ ಕೆಲಸ ಮಾಡುವುದಿಲ್ಲ. ಮುಂದಿನ ದಿನ ಕಠಿಣವಾಗಿದ್ದು, ಅದಕ್ಕೆ ಸಿದ್ದವಾಗಬೇಕಾಗಿದೆ. ಎಲ್ಲರೂ ಆತ್ಮಾವಲೋಕನ ಮಾಡಿಕೊಂಡು ತಪ್ಪನ್ನು ಸರಿಪಡಿಸುವ ಕಾರ್ಯವಾಗಬೇಕಾಗಿದೆ. ಬೊಮ್ಮಾಯಿಯವರು ಡಿಜಿ ಹಾಗೂ ಐಜಿ ಯವರಲ್ಲಿ ಮಾತನಾಡಿದ್ದು, ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಒಟ್ಟಾರೆ ನೋವು ತರುವಂತಹ, ತಲೆ ತಗ್ಗಿಸುವ ಘಟನೆಯಾಗಿದ್ದು, ಅವರು ಇವರು ಎನ್ನುವ ಬೇಧವಿಲ್ಲದೆ ಅವರೂ ಪಕ್ಷದ ಕಾರ್ಯಕರ್ತರೇ ಆಗಿದ್ದಾರೆ ಎಂದು ತಿಳಿಸಿದರು.
ಪಕ್ಷ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಸಂದರ್ಭಗಳು ಬಂದಾಗ ಪಕ್ಷ ವಿಪಕ್ಷವನ್ನು ಟೀಕೆ ಮಾಡಿ ಗಟ್ಟಿಯಾಗಿ ಹಿಂದುತ್ವದ ಜತೆಗೆ ನಿಂತಿದ್ದೇನೆ, ಮಾತನಾಡಿದ್ದೇನೆ. ನಮಗೆ ಸ್ಥಾನ ಮಾನ ಮುಖ್ಯವಲ್ಲ, ಪಕ್ಷದಿಂದ ದೂರವಾದ ಒಳ್ಳೆಯ ಕಾರ್ಯಕರ್ತರನ್ನು ಪ್ರೀತಿಯಿಂದ ಪಕ್ಷಕ್ಕೆ ಕರೆಸಿಕೊಳ್ಳುವ ಕಾರ್ಯವಾಗಬೇಕಾಗಿದೆ ಹೊರತು ಮತ್ತಷ್ಟು ಬಿರುಕು ಮೂಡಿಸಲು ನಾನು ಬಂದಿಲ್ಲ. ಎಷ್ಟೇದೊಡ್ಡವರಾದರೂ ಸ್ವ ಪ್ರತಿಷ್ಠಿಯಿಂದ ಕಾಯಕರ್ತರಿಗೆ ಸಮಸ್ಯೆಯನ್ನು ಮಾಡಬಾರದು. ಸ್ವಪ್ರತಿಷ್ಠೆಯಿಂದ ಹಿಂದುಗಳಿಗೆ, ಹಿಂದುತ್ವಕ್ಕೆ ಅನ್ಯಾಯವಾಗುತ್ತದೆ. ಪಕ್ಷಕ್ಕೆ ನ್ಯಾಯಕೊಟ್ಟಹಾಗೆ ಆಗುವುದಿಲ್ಲ. ಎಲ್ಲರೂ ಒಂದಾಗಿ ಹೋಗುವ ಹೊಸ ಸೂತ್ರವನ್ನು ಕಂಡುಕೊಂಡಿದ್ದೇವೆ ಎಂದು ತಿಳಿಸಿದರು.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಸ್ಥಳೀಯ18 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ11 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್17 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಮಂಗಳೂರು11 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್13 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು12 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ11 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















