Uncategorized
Nayana Mottamma ನಯನಾ ಮೋಟಮ್ಮ ಖಾಸಗಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್- ಪ್ರಸಾರ ಮಾಡಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ಮೂಡಿಗೆರೆ ಶಾಸಕಿ
ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಶಾಸಕಿಯಾಗಿರುವ ನಯನಾ ಮೋಟಮ್ಮ ( Nayana Mottamma) ಅವರ ಖಾಸಗಿ ವಿಡಿಯೋಯೊಂದು (Private Video) ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದ್ದು, ಗೆಲುವಿನ ಬಳಿಕ ನನ್ನ ಮೇಲೆ ಸೈಬರ್ ದಾಳಿ ( Cyber Attack) ತೀವ್ರವಾಗಿದೆ ಎಂದು ಆಕೆ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ನ್ನ ವಿರುದ್ದ ಸೋತವರು ಭ್ರಮನಿರಸನಗೊಂಡು ಸೈಬರ್ ದಾಳಿ ನಡೆಸುತ್ತಿದ್ದಾರೆ. ಇಂತಹ ದುಷ್ಕೃತ್ಯಗಳಿಂದ ನನ್ನನ್ನು ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ . ಈ ಮೂರ್ಖರಿಗೆ ರಾಜಕೀಯ ಜೀವನ ಹಾಗೂ ಖಾಸಗಿ ಜೀವನದ ಮದ್ಯೆ ವ್ಯತ್ಯಾಸ ತಿಳಿದಿಲ್ಲ ಎಂದಿದ್ದಾರೆ.
ರಾಜಕಾರಣಿಯಾದ ಮಾತ್ರಕ್ಕೆ ಸಾಮಾನ್ಯರಂತೆ ಬದುಕಬಾರದ? ಮುಖವಾಡ ಧರಿಸಿ ಬದುಕಬೇಕಾ? ರಾಜಕಾರಣಿಗಳು ಖೂಡ ಬೇರೆಯರಂತೆ ಮನುಷ್ಯರು. ನಾನು ಕೆಲವೊಮ್ಮೆ ಗೋವಾಕ್ಕೆ ಹೋಗುತ್ತೇನೆ. ಅಲ್ಲಿ ಸೀರೆ ಉಟ್ಟುಕೊಳ್ಳಲು ಅಗುತ್ತದ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಇನ್ನೂ ಈ ವಿಡಿಯೋವನ್ನು ಸ್ವತಃ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ನಯನಾ ಮೋಟಮ್ಮ ʼಸೋಲಿನ ಹತಾಶೆ ನಿಮ್ಮನ್ನ ಇನ್ನಷ್ಟು ಕಾಡದಿರಲಿ. ಹೌದು… ರಾಜಕೀಯ, ನಾನು, ನನ್ನತನ, ನನ್ನ ವೈಯುಕ್ತಿಕ ಜೀವನ ಇವೆಲ್ಲದರ ವ್ಯತ್ಯಾಸ ತಿಳಿಯದ ಅವಿವೇಕಿಗಳಿಗೆ ಉತ್ತರವಿದು.ʼ ಎಂದು ಬರೆದುಕೊಂಡಿದ್ದಾರೆ.
ನಯನಾ ಅವರ ಈ ನೇರ ನಡೆ ಮತ್ತು ಧೈರ್ಯ ಅವರ ಅಭಿಮಾನಿಗಳಿಗೆ ಇಷ್ಟವಾಗಿದೆ. ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಮೇಡಂ ನೀವು ನಿಮ್ಮ ಕಾರ್ಯ ಮುಂದುವರಿಸಿ. ಯಾವುದಕ್ಕೂ ತಲೆ ಕೊಡಿಸಬೇಕಾದ ಅವಶ್ಯಕತೆಯಿಲ್ಲ. ನಿಮ್ಮಿಂದ ಸಮಾಜ ಸೇವೆ ಮುಂದುವರಿಯಲ್ಲಿ ಎಂದು ಬೆಂಬಲದ ಮಾತುಗಳನ್ನು ಆಡಿದ್ದಾರೆ.
ಯಾರು ಈ ನಯನಾ ಮೋಟಮ್ಮ?
ಈ ಬಾರಿ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಬರೋಬ್ಬರಿ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಬಾರಿಯ ವಿಶೇಷತೆ ಎಂದರೆ ಮೊದಲ ಬಾರಿಗೆ ಟಿಕೆಟ್ ಪಡೆದಿದ್ದ ಮಹಿಳಾ ಮಣಿಗಳು ಗೆದ್ದು ಕಮಾಲ್ ಮಾಡಿದ್ದಾರೆ. ಅದರಲ್ಲಿ ನಯನ ಮೋಟಮ್ಮ ಕೂಡ ಒಬ್ಬರು. ನಯನ ಮೋಟಮ್ಮ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ದಲಿತವಾದಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ನಯನ ಅವರು ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ವಿರೋಧದ ನಡುವೆಯೂ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಗೆದ್ದು ಬಂದಿದ್ದಾರೆ.
ಬಿಜೆಪಿಯ ಶಾಸಕರಾಗಿದ್ದ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದ ಹಿನ್ನೆಲೆ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಬಿಜೆಪಿ ದೀಪಕ್ ದೊಡ್ಡಯ್ಯ ಅವರಿಗೆ ಮಣೆ ಹಾಕಿತ್ತು. ಆದ್ರೆ ನಯನಾ ಮೊಟಮ್ಮ ಗೆಲುವು ಸಾಧಿಸಿ ಶಾಸಕಿಯಾಗಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
Uncategorized
Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.
ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.
ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.
ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.
ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Uncategorized
Soujanya case-Big Breaking: ಸೌಜನ್ಯ ಪ್ರಕರಣ: ಎಸ್‌ಐಟಿ ಕಚೇರಿಯಲ್ಲಿ ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳ ಹೇಳಿಕೆ ದಾಖಲು
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ. ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಮಂಗಳೂರಿನ ಎಸ್‌ಐಟಿ ಕಚೇರಿಯಲ್ಲಿ ಐವರ ವಿಚಾರಣೆ ನಡೆಸಲು ಮುಂದಾಗಿದೆ.
ಸೌಜನ್ಯಾಳನ್ನು ಕೊನೆಯದಾಗಿ ನೋಡಿದ್ದ ಐವರು ಸಾಕ್ಷಿಗಳಾದ ಆಕೆಯ ಮಾವ ವಿಠಲ ಗೌಡ, ಕೃಷ್ಣಪ್ಪ, ಪುರಂದರ ಗೌಡ, ಯಶೋಧಾ ಹಾಗೂ ಯಶೋಧಾ ಅವರ ಪುತ್ರ ಪ್ರತೀಕ್ ಅವರು ಇಂದು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಪೈಕಿ ಸೌಜನ್ಯಾಳ ಮಾವ ವಿಠಲ ಗೌಡ ಹಾಗೂ ಪುರಂದರ ಗೌಡ ಅವರು ವಿಚಾರಣೆಗೆ ಹಾಜರಾಗಿದ್ದು, ಕೃಷ್ಣಪ್ಪ, ಯಶೋಧಾ ಮತ್ತು ಪ್ರತೀಕ್ ಅವರು ಜೀಪಿನಲ್ಲಿ ಆಗಮಿಸಿದ್ದಾರೆ.
ಇಂದು ಐವರ ಹೇಳಿಕೆಗಳನ್ನು ಎಸ್‌ಐಟಿ ತಂಡ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್19 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ21 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ4 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಅಪರಾಧ3 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸ್ಥಳೀಯ3 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ2 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ3 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
Uncategorized5 hours ago
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ















