Uncategorized
ಮೇ 26 ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ICSI ಅಧ್ಯಯನ ಕೇಂದ್ರದ ಉದ್ಘಾಟನೆ
ಪುತ್ತೂರು, ಮೇ 24 : ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಪ್ರಾತಿನಿಧ್ಯವನ್ನು ಹೊಂದಿರುವ ಸಂತ ಪಿಲೋಮಿನಾ ಕಾಲೇಜು, ಪುತ್ತೂರು, ವ್ಯವಹಾರ ಆಡಳಿತ ವಿಭಾಗ ಮತ್ತು ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ಟರೀಸ್ ಆಫ್ ಇಂಡಿಯಾ ( ICSI ) ಮಂಗಳೂರು ಚಾಪ್ಟರ್ ನಡುವೆ ಶೈಕ್ಷಣಿಕ ವಿನಿಮಯ ಒಡಂಬಡಿಕೆಗಳ ಹಾಗು ICS ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭವು 26- 05 -2023 ಶುಕ್ರವಾರ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ಜರಗಲಿದೆ. ICSI ರಾಷ್ಟ್ರ ಮಟ್ಟದಲ್ಲಿ ಕಂಪೆನಿ ಸೆಕ್ರೇಟರಿ ಕೋರ್ಸ್, ಸಂಯೋಜಿಸುವುದರ ಮೂಲಕ ಶ್ರೇಷ್ಟ ಗುಣಮಟ್ಟದ ಮಾನವ ಸಂಪನ್ಮೂಲವನ್ನು ಕಾರ್ಪೊರೇಟ್ ಕ೦ಪನಿಗಳಿಗೆ ಒದಗಿಸಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಾಶ್ ಮೊಂತೆರೋ ಹೇಳಿದರು.
ಉನ್ನತ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಂಪನಿ ಸೆಕ್ರೆಟರಿ ಕಾರ್ಯ ಕ್ಷೇತ್ರವು ಪ್ರಾಮುಖ್ಯತೆ ಮತ್ತು ಬೇಡಿಕೆಯನ್ನು ಹೊಂದಿದೆ. ವಿದ್ಯಾರ್ಥಿಗಳಿಗೆ ಕ೦ಪನಿ ಸೆಕ್ರೆಟರಿ ಕೋರ್ಸಿನ ಸಂಪೂರ್ಣ ಮಾಹಿತಿ, ಅಧ್ಯಯನ ವಿಚಾರಗಳ ತರಬೇತಿಯು ICSI ಕೇಂದ್ರದಲ್ಲಿ ನಡೆಯುತ್ತದೆ. ಪುತ್ತೂರು, ಸುಳ್ಯ ಬೆಳ್ತಂಗಡಿ ಬಂಟ್ವಾಳ ಕಾಲಾಗಿನ ವಿದ್ಯಾರ್ಥಿಗಳಿಗೆ ICST ಅಧ್ಯಯನ ಕೇಂದ್ರವು ತಮ್ಮ ವೃತ್ತಿ ಜೀವನಕ್ಕೆ ಪಥನಿರ್ದೇಶನವನ್ನು ಮಾಡುವ ಸಂಕಲ್ಪವನ್ನು ಹೊಂದಿದೆ.
ಸಂತ ಫಿಲೋಮಿನಾ ಸಂಸ್ಥೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದಿಂದ ಬಿಬಿಎ(ಸಿಎಸ್ ಇಂಟಿಗ್ರೇಟೆಡ್) ಪದವಿಯನ್ನು ಸಂಯೋಜಿಸಲಾಗಿದೆ. ವಿದ್ಯಾರ್ಥಿ ಸಮಾಜವನ್ನು ಸೃಜನಾತ್ಮಕವಾಗಿ ಬೆಳೆಸಿ ವ್ಯಕ್ತಿಪರತೆಯನ್ನು ಭೇದಿಸುವುದರ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ವ್ಯಕ್ತಿಜೀವನದ ಯಶಸ್ಸನ್ನು ಸಾಧಿಸಲು ಪ್ರೇರೆಪಿಸುವುದು ಅಧ್ಯಯನ ಕೇಂದ್ರದ ಉದ್ದೇಶವಾಗಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆ ಡಾ ಆ್ಯಂಟನಿ ಪ್ರಕಾಶ್ ಮೊಂತೆರೋ ಮತ್ತು ICSI ಮಂಗಳೂರು ಚಾಪ್ಟರ್ ನ ಮುಖ್ಯಸ್ಥರಿಂದ CS ಸೋನಾಲಿ ಸುರೇಶ್ ಮಲ್ಯರವರು ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಿದ್ದಾರೆ.
ICSI ಅಧ್ಯಯನ ಕೇಂದ್ರವನ್ನು CS ಪ್ರದೀಪ್ ಕುಲಕರ್ಣಿ Vice Chairman of Southern India Regional Office of ICS, ಉದ್ಘಾಟಿಸಲಿದ್ದಾರೆ
.
ಸಂತ ಫಿಲೋಮಿನಾ ಕಾಲೇಜಿನಲ್ಲಿ ICSI ಅಧ್ಯಯನ ಕೇಂದ್ರದ ಉದ್ಘಾಟನೆ
ಸಂತ ಫಿಲೋಮಿನಾ ಕಾಲೇಜಿನ ಸಂಚಾಲಕರಾದ ಅತೀ ವಂ. ಲಾರೆನ್ಸ್, ಮಸ್ಕರೇನ್ಹಸ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ರೆ | ಫಾ | ಸ್ಟ್ಯಾನಿ ಪಿಂಟೊ, ಕ್ಯಾಂಪಸ್ ನಿರ್ದೇಶಕರು, ಸಂತ ಫಿಲೋಮಿನಾ ಕಾಲೇಜು ಪುತ್ತೂರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಉಪಾಂಶುಪಾಲರಾದ ಪ್ರೊ. ಗಣೇಶ್ ಭಟ್, ಬಿಬಿಎ ವಿಭಾಗದ ಮುಖ್ಯಸ್ಥರಾದ ಡಾ. ರಾಧಾಕೃಷ್ಣ ಗೌಡ ವಿ, ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಅಧ್ಯಯನ ಕೇಂದ್ರದ ಸಂಯೋಜಕ ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.
ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.
ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.
ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.
ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.
ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.
ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
-
ಶಿಕ್ಷಣ21 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು21 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್23 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು22 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ5 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ21 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ20 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ; ಪೇಟೆಯಲ್ಲಿ ಆಮಂತ್ರಣ ವಿತರಣೆ















