Connect with us

ದಕ್ಷಿಣ ಕನ್ನಡ

Arun Kumar Puttila ನೆಟ್ಟಾರ್ ಪತ್ನಿ ನೂತನರಿಗೆ ಸರಕಾರಿ ಉದ್ಯೋಗ ಮರು ನೀಡುವಂತೆ ಡಿಸಿಗೆ ಅರುಣ್ ಪುತ್ತಿಲ ಪತ್ರ

Published

on



Ad Widget

Ad Widget

Ad Widget

Ad Widget

ಪುತ್ತೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅಡಳಿತಕ್ಕೆ ಬರುತ್ತಲೇ, ಈ ಹಿಂದಿನ ಬೊಮ್ಮಾಯಿ ಸರಕಾರ ತಾತ್ಕಲಿಕ ನೆಲೆಯಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನರವರಿಗೆ ನೀಡಿದ್ದ ತಾತ್ಕಲಿಕ ಸರಕಾರಿ ಹುದ್ದೆ ರದ್ದಾಗಿದ್ದು, ಇದನ್ನು ಮುಂದುವರಿಸುವಂತೆ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಮೇ 27ರಂದು ಜಿಲ್ಲಾಧಿಕಾರಿ ಗಳಿಗೆ ಪತ್ರ ಬರೆದಿದ್ದಾರೆ.

Ad Widget

Ad Widget

Ad Widget

Ad Widget

ಪ್ರವೀಣ್ ನೆಟ್ಟಾರು ಹತ್ಯೆಯಾದ ಸಂದರ್ಭದಲ್ಲಿ ನೂತನ ಅವರಿಗೆ ಸರ್ಕಾರಿ ಕೆಲಸವನ್ನು ನೀಡಲಾಗಿತ್ತು. ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಇಂತಹ ಕುಟುಂಬಕ್ಕೆ ಅನ್ಯಾಯವಾಗದಂತೆ ಗಮನಹರಿಸಬೇಕು ಮತ್ತು ಜೀವನೋಪಾಯಕ್ಕೆ ಮಾನವೀಯ ನೆಲೆಯಲ್ಲಿ ಉದ್ಯೋಗವನ್ನು ಮುಂದುವರಿಸಬೇಕೆಂದು ಪತ್ರದಲ್ಲಿ ಕೇಳಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅದಕ್ಕೊ ಮೊದಲು ನೂತನರವರ ಹುದ್ದೆ ರದ್ದಾಗಿರುವುದು ಮಾದ್ಯಮಗಳ ಮೂಲಕ ಬಹಿರಂಗವಾಗುತ್ತಲೇ ಪುತ್ತಿಲರವರು ಪತ್ರಿಕಾ ಹೇಳಿಕೆ ನೀಡಿದ್ದು, ಈ ವಿಚಾರದಲ್ಲಿ ಯಾರು ರಾಜಕೀಯ ಚರ್ಚೆಗಿಳಿಯದೆ ಆಕೆಗೆ ಮಾನವೀಯ ನೆಲೆಯಲ್ಲಿ ಸರಕಾರಿ ಕೆಲಸ ನೀಡುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ.

Ad Widget

Ad Widget <> Ad Widget

ನೂತನ ಅವರು ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದಿದ್ದು, ಯಾವುದೇ ರಾಜಕೀಯ ಚರ್ಚೆ ಮಾಡುವುದು ಬಿಟ್ಟು ಅವರಿಗೆ ಸರ್ಕಾರ ಅದೇ ಉದ್ಯೋಗ ಮರುನೇಮಕಾತಿ ಮಾಡಬೇಕು. ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದವರು ಎಲ್ಲರೂ ಒಂದಿಲ್ಲೊಂದು ಸಮಸ್ಯೆ ಎದುರಿಸಿದವರಾಗಿದ್ದಾರೆ. ಸರ್ಕಾರ ಅನುಕಂಪದ ಆಧಾರದಲ್ಲಿ ಪಡೆದ ಉದ್ಯೋಗಿಗಳ ಉದ್ಯೋಗದ ನಿಯಮವನ್ನು ಮರುಪರಿಶಿಲಿಸಬೇಕು ಎನ್ನುವುದು ಎಲ್ಲರ ಒತ್ತಾಯವಾಗಿದೆ ಎಂದು ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಆಗ್ರಹಿಸಿದ್ದಾರೆ.



Ad Widget
Ad Widget
Click to comment

Leave a Reply

ಶಿಕ್ಷಣ

Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget

Ad Widget

ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget alt="Ad Widget"/>

Ad Widget

ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ‌ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Ad Widget

Ad Widget <> Ad Widget

ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ‌ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.



Ad Widget

ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು‌ ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಮಂಗಳೂರು

Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!

Published

on



Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading