Connect with us

ಸುಳ್ಯ

Kadaba Youth sucide : ʼಸಾರಿ ಅಣ್ಣಾʼ ಎಂದು ಒಂದು ಲೈನಿನ ಪತ್ರ ಬರೆದು ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾದ ಕಡಬದ ಯುವಕ

Published

on

Ad Widget

Ad Widget

Ad Widget

Ad Widget

ಕಡಬ : ಮೇ 30 : ವಿದೇಶದಲ್ಲಿ ಉದ್ಯೋಗಿಯಾಗಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕ ಭಾನುವಾರ ಅಲ್ಲಿ ಸಹೋದರನ ಜತೆ  ತಾನು ವಾಸವಿದ್ದ  ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32)  ಆತ್ಮಹತ್ಯೆ ಮಾಡಿಕೊಂಡವರು.  

Ad Widget

Ad Widget

Ad Widget

Ad Widget

ಸಂದೇಶ್‌ ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗಿಯಾಗಿದ್ದರು.  ಇವರು  ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು.  ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು, ಇವರಿಬ್ಬರು  ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಇವರ ಸಂಬಂಧಿ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಕೂಡಾ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದು  ಪಕ್ಕದ ಕೊಠಡಿಯಲ್ಲಿ ವಾಸವಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೇ 29 ರಂದು  ಸಂದೇಶ್  ಎಂದಿಗಿಂತ ಬೇಗ ಕೆಲಸ  ಮುಗಿಸಿ ತನ್ನ ವಾಸ್ತವ್ಯದ ಕೊಠಡಿಗೆ ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲ ಹೊತ್ತಿನ ಬಳಿಕ ಚರಣ್ ಅಲ್ಲಿಗೆ ಬಂದಾಗ  ಕೊಠಡಿ ಬಾಗಿಲು ಬಂದ್ ಆಗಿದ್ದು,  ಬಾಗಿಲು ಬಡಿದಾಗ ಒಳಗಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಹೀಗಾಗಿ ಚರಣ್‌ ಅವರು  ಸಂದೇಶ್ ಸಹೋದರ ಸಂತೋಷ್‌ಗೆ ಕರೆ ಮಾಡಿ ಕೊಠಡಿ ಬಳಿ  ಕರೆಸಿಕೊಂಡಿದ್ದಾರೆ. ಕೊಠಡಿಯ ಒಂದು ಕೀ ಸಂತೋಷ್ ಅವರಲ್ಲಿ ಇದ್ದುದರಿಂದ ಬಾಗಿಲು ತೆರೆದು ನೋಡುವಾಗ ಕೊಠಡಿಯ ಒಳಗಿನ ಫ್ಯಾನ್‌ಗೆ ಸಂದೇಶ ಮೃತದೇಹ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ
 
ಸಂದೇಶ ಸಹೋದರ ಸಂತೋಷ್ ಏಳು ವರ್ಷಗಳ ಹಿಂದೆ ಮಸ್ಕತ್‌ಗೆ ಉದ್ಯೋಗಕ್ಕೆ ತೆರಳಿದ್ದರು.  ಸಂದೇಶ್‌   ಚೆನೈನಲ್ಲಿ ಹೋಟೇಲ್‌ನಲ್ಲಿ ಕೆಲಸ  ಮಾಡುತ್ತಿದ್ದು 7 ತಿಂಗಳ ಹಿಂದೆಯಷ್ಟೆ ಓಮನ್ ಗೆ ತೆರಳಿದ್ದರು. ಆರಂಭದಲ್ಲಿ ವಿಸಿಟಿಂಗ್ ವೀಸಾದಲ್ಲಿ ಮಸ್ಕತ್‌ಗೆ ತೆರಳಿದ್ದ ಅವರು ಬಳಿಕ ಅಲ್ಲಿ ಕೆಲಸದ ವೀಸಾ ಪಡೆದು   ಉದ್ಯೋಗ  ಮಾಡುತ್ತಿದ್ದರು.

Ad Widget

Ad Widget <> Ad Widget

ಸಂಸ್ಥೆಯಲ್ಲಿ ಉತ್ತಮ ವೇತನ ಹಾಗೂ ಯಾವುದೇ ಕಿರಿಕಿಯಿಲ್ಲದ ಉದ್ಯೋಗ ಇದ್ದು ಯಾವುದೇ ಸಮಸ್ಯೆಗಳಿರಲಿಲ್ಲ ಎನ್ನಲಾಗಿದೆ. ಆದರೇ ಆತ್ಮಹತ್ಯೆಗೆ ಮುನ್ನ  ಸಾರಿ ಅಣ್ಣ ಎಂದು ಒಂದು ಲೈನ್ ನ ಪತ್ರ  ಬರೆದಿಟ್ಟು ಆತ್ಮ ಹತ್ಯೆ ಮಾಡಿಕೊಂಡಿದ್ದು ಕುಟುಂಬದವರಿಗೆ ಅಘಾತ ಉಂಟು ಮಾಡಿದೆ.

 ಮೃತರು ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಸಂತೋಷ್, ಊರಿನಲ್ಲಿ ಅಟೋ ಚಾಲಕನಾಗಿರುವ ಸಹೋದರ ಸತೀಶ್ ಹಾಗೂ ತಾಯಿ ವಿಮಲರನ್ನು ಆಗಲಿದ್ದಾರೆ.  . ಆ ದೇಶದ ನಿಯಮವಾಳಿಗಳ ಪ್ರಕಾರ ಮರಣೋತ್ತರ ಪರೀಕ್ಷೆಗಳ ಪ್ರಕ್ರಿಯೆ ಮುಗಿದು ಮಂಗಳವಾರ ಅಥವಾ ಬುಧವಾರ ಮೃತದೇಹ ಊರಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

Click to comment

Leave a Reply

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಸುಳ್ಯ

Areca nut-ಅಡಿಕೆ ರೇಟ್‌ ಜಂಪ್‌ : ಹೊಸ ಅಡಿಕೆಗೆ ₹360; ಒಂದೇ ದಿನದಲ್ಲಿ ₹10 ಏರಿಕೆ! ಡಬಲ್ ಚೋಲ್ ಧಾರಣೆಯಲ್ಲೂ ಹೆಚ್ಚಳ

Published

on

Ad Widget

Ad Widget

Ad Widget

Ad Widget

ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget

Ad Widget

Ad Widget

ಸುಳ್ಯ, ನ.12: ಕಳೆದ ಕೆಲ ತಿಂಗಳುಗಳಿಂದ ಏರಿಕೆ ಕಾಣದೆ ನಿಸ್ತೇಜವಾಗಿದ್ದ ಅಡಿಕೆ ಮಾರುಕಟ್ಟೆಯಿಂದೆ ಕೊಂಚ ಸಮಾಧಾನಕರ ಸುದ್ದಿ ಲಭಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯ ಧಾರಣೆಯಲ್ಲಿ ಏರಿಕೆ ದಾಖಲಾಗಿದ್ದು, ಹೊಸ ಅಡಿಕೆಯ ಗರಿಷ್ಠ ಬೆಲೆ ಒಂದೇ ದಿನದಲ್ಲಿ ಕೆ.ಜಿ.ಗೆ ₹10 ಹೆಚ್ಚಳವಾಗಿ ₹360ಕ್ಕೆ ತಲುಪಿದೆ. ಡಬಲ್ ಚೋಲ್ ಅಡಿಕೆಯ ಧಾರಣೆಯೂ ₹560ರ ಗಡಿಗೆ ಏರಿಕೆಯಾಗಿದೆ.

Ad Widget

Ad Widget alt="Ad Widget"/>

Ad Widget

ನ.11 ಮತ್ತು ನ.12ರ ಮಾರುಕಟ್ಟೆ ದರಗಳನ್ನು ಹೋಲಿಸಿದಾಗ ಹೊಸ ಅಡಿಕೆಯ ಗರಿಷ್ಠ ಧಾರಣೆ ₹350ರಿಂದ ₹360ಕ್ಕೆ ಏರಿಕೆಯಾಗಿದೆ. ಆದರೆ ಕನಿಷ್ಠ ಧಾರಣೆ ₹280ರಲ್ಲೇ ಸ್ಥಿರವಾಗಿದೆ. ಕನಿಷ್ಠ ದರದಲ್ಲಿ ಬದಲಾವಣೆಯಾಗದಿದ್ದರೂ ಗರಿಷ್ಠ ದರದಲ್ಲಿ ಕಂಡುಬಂದಿರುವ ಏರಿಕೆ ಮಾರುಕಟ್ಟೆಯಲ್ಲಿ ಚೇತರಿಕೆಯ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಡಬಲ್ ಚೋಲ್ ಅಡಿಕೆಗೂ ಬೆಲೆ ಏರಿಕೆ
ಡಬಲ್ ಚೋಲ್ ಅಡಿಕೆಯ ಮಾರುಕಟ್ಟೆಯಲ್ಲೂ ಉತ್ತಮ ಬೆಳವಣಿಗೆ ಕಂಡುಬಂದಿದೆ. ಹಿಂದಿನ ದಿನ ₹525ರಷ್ಟಿದ್ದ ಕನಿಷ್ಠ ಧಾರಣೆ ₹530ಕ್ಕೆ ಏರಿಕೆಯಾಗಿದ್ದರೆ, ಗರಿಷ್ಠ ಧಾರಣೆ ₹550ರಿಂದ ₹560ಕ್ಕೆ ತಲುಪಿದೆ. ಈ ಮೂಲಕ ಕನಿಷ್ಠ ದರದಲ್ಲಿ ₹5 ಹಾಗೂ ಗರಿಷ್ಠ ದರದಲ್ಲಿ ₹10ರಷ್ಟು ಹೆಚ್ಚಳ ದಾಖಲಾಗಿದೆ.

ಸಿಂಗಲ್ ಚೋಲ್ ಸೇರಿದಂತೆ ಇತರ ಅಡಿಕೆ ದರ ಸ್ಥಿರ
ಹೊಸ ಅಡಿಕೆ ಮತ್ತು ಡಬಲ್ ಚೋಲ್ ಹೊರತುಪಡಿಸಿ ಮಾರುಕಟ್ಟೆಯ ಇತರ ಪ್ರಮುಖ ಅಡಿಕೆ ವರ್ಗಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸಿಂಗಲ್ ಚೋಲ್ ಅಡಿಕೆ ಕೆ.ಜಿ.ಗೆ ಕನಿಷ್ಠ ₹450 ಹಾಗೂ ಗರಿಷ್ಠ ₹480ರ ದರದಲ್ಲಿ ವಹಿವಾಟು ನಡೆಸಿದೆ.

Ad Widget

Ad Widget

ಬೆಳೆಗಾರರ ಕಣ್ಣು ಮುಂದಿನ ಮಾರುಕಟ್ಟೆ ದರದತ್ತ
ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ಕಂಡುಬರುತ್ತಿರುವ ಏರಿಳಿತಗಳು ಬೆಳೆಗಾರರಲ್ಲಿ ಗೊಂದಲ ಮೂಡಿಸಿದ್ದವು. ಅದರಲ್ಲೂ ಉತ್ಪಾದನಾ ವೆಚ್ಚ, ಕೂಲಿ ವೆಚ್ಚ ಹಾಗೂ ನಿರ್ವಹಣಾ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಮಾರುಕಟ್ಟೆ ದರದ ನಿರೀಕ್ಷೆ ಬೆಳೆಗಾರರಲ್ಲಿದೆ.

ಇದೀಗ ಹೊಸ ಅಡಿಕೆ ಹಾಗೂ ಡಬಲ್ ಚೋಲ್ ಅಡಿಕೆಯಲ್ಲಿ ದಾಖಲಾಗಿರುವ ಏರಿಕೆ ಮಾರುಕಟ್ಟೆಗೆ ಹೊಸ ಚೈತನ್ಯ ನೀಡಿದೆ. ಆದರೆ ಈ ಏರಿಕೆ ಮುಂದಿನ ದಿನಗಳಲ್ಲೂ ಮುಂದುವರಿಯಲಿದೆಯೇ ಅಥವಾ ಮತ್ತೆ ಧಾರಣೆ ಸ್ಥಿರವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯದ ಮಟ್ಟಿಗೆ ಅಡಿಕೆ ಬೆಳೆಗಾರರ ಚಿತ್ತ ಮುಂದಿನ ಮಾರುಕಟ್ಟೆ ವಹಿವಾಟಿನತ್ತ ನೆಟ್ಟಿದೆ.

Ad Widget
Continue Reading
ಕಾರ್ಯಕ್ರಮಗಳು1 hour ago

Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್

ಬಿಗ್ ನ್ಯೂಸ್2 hours ago

Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

ಬಿಗ್ ನ್ಯೂಸ್6 hours ago

Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!