ಅಪರಾಧ
ಕಛೇರಿಯ ಮಹಿಳಾ ಸಿಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯಾಧಿಕಾರಿ ರತ್ನಾಕರ್ ಗೆ ಜಾಮೀನು
ಮಂಗಳೂರು :ನ 29 : ಕಛೇರಿಯಲ್ಲಿ ಗುತ್ತಿಗೆ ಅಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಬಂಧಿತನಾಗಿದ್ದ ದ.ಕ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಹಾಗೂ ಆಯುಷ್ಮಾನ್ ನೋಡಲ್ ಆಫಿಸರ್ ಡಾ ರತ್ನಾಕರ್ ಗೆ ಜಾಮೀನು ದೊರೆತಿದೆ.
ಮೂರು ದಿನಗಳ ಹಿಂದೆ ವೈದ್ಯಾಧಿಕಾರಿಯ ಅಸಭ್ಯ ವರ್ತನೆಯ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯರು ದೂರು ನೀಡಲು ಮುಂದೆ ಬಾರದ ಹಿನ್ನಲೆಯಲ್ಲಿ ಮಹಿಳಾ ಸಂಘಟನೆಯ ಸದಸ್ಯೆಯೊಬ್ಬರು ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದರು
ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಶನಿವಾರದಂದು ಆತನನ್ನು ಬಂಧಿಸಿ ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವೂ ಆರೋಪಿಗೆ ನ್ಯಾಯಾಲಾಯವೂ ಎರಡು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿತ್ತು. ಎರಡು ದಿನಗಳ ಬಳಿಕ ಪೊಲೀಸ್ ಕಸ್ಟಡಿ ಸೋಮವಾರ ಮುಗಿದದ್ದರಿಂದ ಮತ್ತೊಮ್ಮೆ ಇಂದು ಡಾ. ರತ್ನಾಕರನನ್ನು ಮೂರನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜಾರುಪಡಿಸಲಾಯಿತು.

ಈ ವೇಳೆ ಆರೋಪಿಯೂ ಜಾಮೀನು ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.
ರತ್ನಾಕರ ಕಛೇರಿಯ ಸಿಬಂದಿಗಳ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಚಾರವೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ಬಂದಿದ್ದು, ಇಲಾಖಾ ವಿಚಾರಣೆ ನಡೆಸಿದ ಅದು , ಆರೋಪ ಮೇಲ್ನೋಟಕ್ಕೆ ಕಂಡು ಬಂದ ಹಿನ್ನಲೆಯಲ್ಲಿ ನವೆಂಬರ್ 8 ರಂದು ಆತನನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.
ಅಂತರ ರಾಜ್ಯ
Kasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ಕಾಸರಗೋಡು: ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.
ನ್ಯಾಯಾಲಯದ ಆದೇಶದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮದುವೆ ರದ್ದಾದ ಬಳಿಕ ಉಡುಗೊರೆಗಳನ್ನು ಹಿಂದಿರುಗಿಸದ ಕಾರಣ ತಮ್ಮ ಕುಟುಂಬಕ್ಕೆ ₹7,57,037 ನಷ್ಟವಾಗಿದೆ ಎಂದು ವರನ ಕಡೆಯವರು ದೂರಿನಲ್ಲಿ ತಿಳಿಸಿದ್ದಾರೆ.
ಪಡನ್ನಕ್ಕಾಡ್ ಸಮೀಪದ ಯುವಕನಿಗೆ ಉದುಮ ಸಮೀಪದ ಯುವತಿಯೊಂದಿಗೆ ವಿವಾಹ ನಡೆಸಲು 2026ರ ಏಪ್ರಿಲ್‌ನಲ್ಲಿ ನಿಶ್ಚಯಿಸಲಾಗಿತ್ತು. ಈ ಸಂದರ್ಭದಲ್ಲಿ ನಿಶ್ಚಿತಾರ್ಥದ ಭಾಗವಾಗಿ ವಧುವಿಗೆ ಐಫೋನ್, ಚಿನ್ನಾಭರಣ, ವಿವಿಧ ಉಡುಗೊರೆಗಳು ಹಾಗೂ ನಗದು ಸೇರಿದಂತೆ ಸುಮಾರು ₹7.5 ಲಕ್ಷ ಮೌಲ್ಯದ ವಸ್ತುಗಳನ್ನು ವರನ ಕುಟುಂಬದವರು ನೀಡಿದ್ದರು ಎನ್ನಲಾಗಿದೆ.
ಆದರೆ, ಬಳಿಕ ಯುವತಿ ಮದುವೆಯಿಂದ ಹಿಂದೆ ಸರಿದಿದ್ದು, ಆಕೆಯ ತಾಯಿ ಹಾಗೂ ಮಾವನೊಂದಿಗೆ ಸೇರಿ ಮದುವೆ ರದ್ದುಗೊಳಿಸಲು ಸಂಚು ರೂಪಿಸಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ. ಅಲ್ಲದೆ, ನಿಶ್ಚಿತಾರ್ಥದ ವೇಳೆ ನೀಡಿದ್ದ ಐಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
-
Uncategorized16 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized19 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized17 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized18 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized20 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized17 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ2 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಬಿಗ್ ನ್ಯೂಸ್2 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















