ರಾಜಕೀಯ
Congress Five ‘guarantees : ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ̲ Apl – Bpl ಅಂತೇನಿಲ್ಲ…! ಸಾರಿಗೆ ಸಚಿವರ ಘೋಷ
ಕರ್ನಾಟಕ ಚುನಾವಣೆ (Karnataka Elections) ಮುಗಿದು, ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ (Congress Govt) ಅಧಿಕಾರಕ್ಕೇರಿದೆ. ಹೀಗಿರುವಾಗ ಕಾಂಗ್ರೆಸ್ ಅಧಿಕಾರಕ್ಕೇರುವ ಮುನ್ನ ಪ್ರಚಾರ ಕಾರ್ಯದಲ್ಲಿ ನೀಡಲಾಗಿದ್ದ ಗ್ಯಾರಂಟಿಗಳ ಕತೆ ಏನು ಎಂಬ ಪ್ರಶ್ನೆ ವ್ಯಾಪಕವಾಗಿ ಎದ್ದಿತ್ತು. ಈ ನಡುವೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸುದ್ದಿಗೋಷ್ಠಿ ನಡೆಸಿ ಮಹಿಳೆಯರಿಗೆ ಉಚಿತ ಬಸ್ (Free Bus) ಪ್ರಯಾಣದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್, ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ , ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅನುಷ್ಠಾನದ ಬಗ್ಗೆ ಅವರು ಬೆಂಗಳೂರಿನ ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಚಿವರು ಈ ಸಂಬಂಧ ಚರ್ಚೆ ನಡೆಸಿದ್ದಾರೆ
ಬಳಿಕ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು.
ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆದಿದೆ. ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದು ಕೂಡ ಸಚಿವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ನಾಳೆ ಮತ್ತೊಮ್ಮೆ ಈ ಕುರಿತು ಸಿಎಂ ನೇತೃತ್ವದಲ್ಲಿ ಸಭೆ ಜರುಗಲಿದೆ, ಅಲ್ಲಿ ಅನುಷ್ಟಾನದ ಕುರಿತು ಚರ್ಚೆ ಆಗಲಿದೆ ಎಂದಿದ್ದಾರೆ.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
-
ನಿಧನ ವಾರ್ತೆ22 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
Uncategorized19 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ21 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್21 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಮಂಗಳೂರು21 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ರಾಜಕೀಯ19 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ20 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು


















