Connect with us

Uncategorized

NIA RAid : Big Breaking : ದ.ಕ ಜಿಲ್ಲೆಯ 16 ಕಡೆ NIA ದಾಳಿ – ಪುತ್ತೂರಿನ ನಾಲ್ವರು ವಶಕ್ಕೆ ?

Published

on



Ad Widget

Ad Widget

Ad Widget

Ad Widget

NIA Raid ಮಂಗಳೂರು: ಬಿಹಾರದಲ್ಲಿ ಮೋದಿ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಸಂಚುರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ (National Investigation Agency) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆಗಳಲ್ಲಿ ದಾಳಿ ನಡೆಸಲಾಗಿದೆ.ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ಮನೆ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಾಳಿಯ ವೇಳೆ ಜಿಲ್ಲೆಯಾದ್ಯಂತ ನಾಲ್ವರನ್ನ ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.  ಪುತ್ತೂರಿನ ಮೂರು ಕಡೆ ನಾಲ್ವರನ್ನ NIA ವಶಕ್ಕೆ  ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೂರ್ನಡ್ಕ, ತಾರಿಪಡ್ಪು, ಕುಂಬ್ರದ ಭಾಗದ  ಒಟ್ಟು ನಾಲ್ವರನ್ನು ಎನ್‌ ಐಎ ಅಧಿಕಾರಿಗಳು  ವಶಕ್ಕೆ ಪಡೆದಿದ್ದಾರೆಂದು ಉನ್ನತ  ಮೂಲಗಳಿಂದ ತಿಳಿದು ಬಂದಿದೆ.

Ad Widget

Ad Widget <> Ad Widget

ಭಾರತದಲ್ಲಿ ಭಯೋತ್ಪಾದನೆಗೆ ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ದೇಶದಲ್ಲಿ ಕೋಮುಗಲಭೆ ಸೃಷ್ಟಿ ಯತ್ನ ಆರೋಪದ ತನಿಖೆ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಹಲವು ತಿಂಗಳ ಹಿಂದೆ  ಎನ್‌ಐಎ ದಾಳಿ ನಡೆಸಿತ್ತು.



Ad Widget

ಈ ಸಂದರ್ಭ ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್  ಎಂಬವರನ್ನು NIA ಅಧಿಕಾರಿಗಳು ಬಂಧಿಸಿದ್ದರು. ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು NIA ಅಧಿಕಾರಿಗಳು ಬಂಧಿಸಿದ್ದರು. ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆಗಳನ್ನು ಅಧಿಕಾರಿಗಳು  ಪತ್ತೆಹಚ್ಚಿದ್ದರು.

Click to comment

Leave a Reply

Uncategorized

Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

Published

on



Ad Widget

Ad Widget

Ad Widget

Ad Widget

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.

Ad Widget

Ad Widget <> Ad Widget

ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.



Ad Widget

ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.

Ad Widget

Ad Widget

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಎಸ್‌ಐಆರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಮಾಧ್ಯಮ ವರದಿಗಳ ಆಧಾರದಲ್ಲಿ, ‘ವೋಟ್ ಚೋರಿ’ ಆರೋಪಿಸಿ ವಿರೋಧ ಪಕ್ಷಗಳ ಸಂಸದರು ಈ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸುಮಾರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಮುಂದುವರಿದ ಧರಣಿಯ ಬಳಿಕ, ಪೊಲೀಸರು ಸ್ಥಳ ತೆರವುಗೊಳಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Ad Widget
Continue Reading

Uncategorized

Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

Uncategorized

ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್‌ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .

Ad Widget

Ad Widget <> Ad Widget

ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ದಸ್ತಗಿರಿ ವಾರೆಂಟ್‌ ಜಾರಿಗೊಳಿಸಿತ್ತು.ವಾರೆಂಟ್‌ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.



Ad Widget

ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading