ಬಿಗ್ ನ್ಯೂಸ್
Train Accident | ಒಡಿಶಾದಲ್ಲಿ ಬೆಂಗಳೂರು ಎಕ್ಸ್‌ಪ್ರೆಸ್ ಸೇರಿ ಭೀಕರ ಸರಣಿ ರೈಲು ಅಪಘಾತ – 233 ದಾಟಿ ಏರುತ್ತಲೇ ಇರುವ ಸಾವಿನ ಸಂಖ್ಯೆ : ಈ ಅಪಘಾತ ಹೇಗೆ ಸಂಭವಿಸಿದೆ ಗೊತ್ತೆ..? : ಸಹಾಯವಾಣಿ ವಿವರ ಇಲ್ಲಿದೆ
ಬಾಲಸೋರ್:
ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಸರಣಿ ರೈಲು ದುರಂತ (Train Accident) ಸಂಭವಿಸಿದೆ. ಅಪಘಾತಕ್ಕೀಡಾದ ರೈಲುಗಳ ಪೈಕಿ ಕರ್ನಾಟಕದಿಂದ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿದ್ದ ಯಶವಂತಪುರ ಹೌರ ಎಕ್ಸ್‌ಪ್ರೆಸ್ ಕೂಡಾ ಇದೆ. ಈ ಹಿನ್ನೆಲೆ ಪ್ರಯಾಣಿಕರ ಸಹಾಯವಾಣಿಯನ್ನು ಬೆಂಗಳೂರಿನಲ್ಲಿಯೂ ಆರಂಭಿಸಲಾಗಿದೆ.
ಪಶ್ಚಿಮ ಬಂಗಾಳದ ಕೋಲ್ಕೊತಾದಿಂದ ತಮಿಳುನಾಡಿನ ಚೆನ್ನೈಗೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು, ಮಾರ್ಗ ಮಧ್ಯೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅದೇ ಮಾರ್ಗದಲ್ಲಿ ಬಂದ ಬೆಂಗಳೂರಿಗೆ ಹೊರಟಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದೆ. ಈ ಸರಣಿ ಅಪಘಾತದಲ್ಲಿಎರಡೂ ಪ್ರಯಾಣಿಕ ರೈಲುಗಳ ಹಲವು ಬೋಗಿಗಳು ಉರುಳಿಬಿದ್ದಿವೆ. ಪೈಕಿ ಅವಘಡದಲ್ಲಿ 233 ಮಂದಿ ಪ್ರಯಾಣಿಕರು ಮೃತಪಟ್ಟು 1000ಕ್ಕೂ ಮಿಕ್ಕಿ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಉರುಳಿಬಿದ್ದ ಬೋಗಿಗಳಲ್ಲಿ ನೂರಾರು ಪ್ರಯಾಣಿಕರು ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳೀಯ ಸಾವಿರಾರು ಜನ ಜಾತಿ ಧರ್ಮ ನೋಡದೇ ಮಾನವೀಯ ನೆಲೆಯಲ್ಲಿ ರಕ್ತ ದಾನ ಮಾಡಲು ಆಸ್ಪತ್ರೆಗೆ ಬರುತ್ತಿದ್ದಾರೆ. ಭೀಕರ ಅಪಘಾತದ ಹೊಣೆ ಹೊತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕೆಂಬ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗುತ್ತಿದೆ.
ಒಡಿಶಾದಿಂದ ಪಶ್ಚಿಮ ಬಂಗಾಳದ ಕೋಲ್ಕೊತಾ ಮೂಲಕ ತಮಿಳುನಾಡಿನ ಚೆನ್ನೈಗೆ ಹೊರಟಿದ್ದ ‘ಕೋರಮಂಡಲ್ ಎಕ್ಸ್‌ಪ್ರೆಸ್’ ರೈಲು, ಬಹನಾಗ್ ಬಜಾರ್ ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿಯಾಗಿದೆ. ಇದರಿಂದ ‘ಕೋರಮಂಡಲ್ ಎಕ್ಸ್ ಪ್ರೆಸ್’ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ ಪಕ್ಕದ ಮತ್ತೊಂದು ಹಳಿ ಮೇಲೆ ಬಿದ್ದಿವೆ. ಸರಿಯಾಗಿ ಇದೇ ಸಮಯಕ್ಕೆ, ಬೆಂಗಳೂರು ಕಡೆಗೆ ಬರುತ್ತಿದ್ದ ‘ಯಶವಂತಪುರ-ಹೌರಾ ಎಕ್ಸ್‌ಪ್ರೆಸ್’ ರೈಲು ಸಹ ಅದೇ ಮಾರ್ಗದಲ್ಲಿ ಪಕ್ಕದ ಹಳಿಯ ಮೇಲೆ ಬಂದಿದೆ. ಅಪಘಾತದಿಂದ ಚೆಲ್ಲಾಪಿಲ್ಲಿಯಾಗಿ ಪಕ್ಕದ ಹಳಿಗೆ ಬಿದ್ದಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳಿಗೆ ಹೌರಾ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ. ಇದರಿಂದ ಹೌರಾ ಎಕ್ಸ್‌ಪ್ರೆಸ್‌ನ ಹಲವು ಬೋಗಿಗಳೂ ಹಳಿ ತಪ್ಪಿದ್ದು, ಸಾವು ನೋವು ಹೆಚ್ಚಿವೆ. ಎರಡೂ ಎಕ್ಸ್‌ಪ್ರೆಸ್ ರೈಲುಗಳು ಶರವೇಗದಲ್ಲಿ ಬಂದ ಕಾರಣ ಅಪಘಾತದ ತೀವ್ರತೆ ಹೆಚ್ಚಾಗಿದೆ.
ಎಕ್ಸ್‌ಪ್ರೆಸ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. 300ಕ್ಕೂ ಅಧಿಕ ಮಂದಿ ಸಾವಾಗಿರುವುದಾಗಿ ಶಂಕಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯ ಚರುಕು
3 ಎನ್‌ಡಿಆರ್‌ಎಫ್, 4 ಎಸ್‌ಡಿಆರ್‌ಎಫ್, ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ 50 ಆ್ಯಂಬುಲೆನ್ಸ್‌ಗಳು ದೌಡಾಯಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತದೆ. ಸಾರ್ವಜನಿಕರೂ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಒಡಿಶಾ ರೈಲು ಅಪಘಾತ ಸಹಾಯವಾಣಿ
ದಕ್ಷಿಣ ರೈಲ್ವೆ ಜತೆ ಪಶ್ಚಿಮ ಬಂಗಾಳ, ಒಡಿಶಾ ಸರಕಾರಗಳು ಕೈ ಜೋಡಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಗಾಯಾಳುಗಳು, ಮೃತಪಟ್ಟವರ ಮಾಹಿತಿ ಪಡೆಯಲು ಸಹಾಯವಾಣಿ ಸ್ಥಾಪಿಸಲಾಗಿದೆ.
ಬಾಲಸೋರ್- 8249591559
ಹೌರಾ- 033-26382217
ಶಾಲಿಮಾರ್-9332392339
ಖರಗ್‌ಪುರ-8972073925
ಬೆಂಗಳೂರು – 080-22356409
ಬಂಗಾರಪೇಟೆ – 08153 255253
ಕುಪ್ಪಂ – 8431403419
ವಿಶ್ವೇಶ್ವರ ಟರ್ಮಿನಲ್ ಬೈಯಪ್ಪನಹಳ್ಳಿ : 09606005129
ಕೆಆರ್ ಪುರಂ – 88612 03980
ಪಶ್ಚಿಮ ಬಂಗಾಳದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ
ಶಾಲಿಮಾರ್-ಕೋರಮಂಡ್ ಎಕ್ಸ್‌ಪ್ರೆಸ್ ರೈಲು ದುರಂತ ಆಘಾತ ತರಿಸಿದೆ. ರೈಲಿನಲ್ಲಿ ಪಶ್ಚಿಮ ಬಂಗಾಳದವರೇ ಹೆಚ್ಚಿರುವ ಸಾಧ್ಯತೆ ಇದೆ. ಒಡಿಶಾ ಸರಕಾರದ ಜತೆ ನಿರಂತರ ಸಮನ್ವಯ ಸಾಧಿಸಲಾಗುತ್ತಿದೆ. ತುರ್ತು ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ರಕ್ಷಣೆಗೆ ನಮ್ಮ ಸರಕಾರ ಎಲ್ಲ ರೀತಿಯ ನೆರವು ನೀಡಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ22 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ21 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ20 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್16 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ21 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ20 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ21 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















