ಬಿಗ್ ನ್ಯೂಸ್
ಮಂಗಳೂರು : ಯುವಕನ ಮೇಲೆ ಮಾರಾಕಾಯುದ್ದಗಳಿಂದ ದಾಳಿ | 2 ವರ್ಷಗಳ ಹಿಂದೆ ನೆಡದ ಕೊಲೆಗೆ ಪ್ರತಿಕಾರ ಶಂಕೆ
ಮಂಗಳೂರು : ನ 30 : ಯುವಕನಿಗೆ ತಂಡವೊಂದು ಮಾರಾಕಾಯುದ್ದಗಳಿಂದ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ರವಿವಾರ ತಡ ರಾತ್ರಿ ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನ ವಿರುದ್ದ ದಾಳಿ ನಡೆದಿದ್ದೂ ಆತನ ಗ್ಯಾಂಗಿನ ವಿರುದ್ದ ತಂಡದ ರೌಡಿಗಳು ಈ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ
ಅಳಕೆ ಗ್ಯಾಂಗ್ಗೆ ಸೇರಿದ ಶ್ರವಣ್ ಗ್ಯಾಂಗ್ ವಾರ್ನಿಂದ ಗಂಭೀರವಾಗಿ ಗಾಯಗೊಂಡ ಯುವಕ. ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದೆ. ಗಾಯಾಳು ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
2020ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಇಂದ್ರಜಿತ್‌ನನ್ನು ತಲವಾರ್ ಜಗ್ಗ ಗ್ಯಾಂಗ್ (ಬೋಳೂರು ಗ್ಯಾಂಗ್) ಕೊಲೆಗೈದಿತ್ತು. ಅದೇ ದ್ವೇಷದಿಂದ ಶ್ರವಣ್‌ನ ಕೊಲೆಯತ್ನ ಮಾಡಲಾಗಿದ್ದು, ಪೊಲೀಸರು ಆರೋಪಿಗಳ ವಿರುದ್ದ ಸೆ.307ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದೀಗ ಆಸ್ಪತ್ರೆಯಲ್ಲಿ ಚಿಕಿತಸೆ ಪಡೆಯುತ್ತಿರುವ ಶ್ರವಣ್ ಇಂದ್ರಜೀತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರ. ಈ ಕೊಲೆಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರಂಭದಲ್ಲಿ ಇದೊಂದು ಕೊಲೆಯತ್ನ ಎಂದು ಭಾವಿಸಲಾಗಿತ್ತು. ಆದರೆ ತನಿಖೆಯ ವೇಳೆ ಇದು ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ನಡೆದ ಗ್ಯಾಂಗ್ ವಾರ್ ಎಂಬುದು ಬಯಲಾಗಿದೆ̤
ಬಿಗ್ ನ್ಯೂಸ್
Puttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು: ದೇವಸ್ಥಾನದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆಯದ ಹಿನ್ನೆಲೆಯಲ್ಲಿ, ನೂತನ ರಸ್ತೆಗೆ ಪೂರಕವಾದ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಂರಕ್ಷಣಾ ವೇದಿಕೆ ನಗರಸಭೆಗೆ ಮನವಿ ಸಲ್ಲಿಸಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಉತ್ತರ ಭಾಗದಲ್ಲಿ ಪೂರ್ವ-ಪಶ್ಚಿಮ ದಿಕ್ಕಿನಲ್ಲಿ 30 ಅಡಿ ಅಗಲ ಹಾಗೂ ಸುಮಾರು 1,000 ಮೀಟರ್ ಉದ್ದದ ಸಾರ್ವಜನಿಕ ರಸ್ತೆ ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಭಕ್ತರು ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರವಾಗಿ ಸೆ.10ರಂದು ನೀಡಿದ ಆದೇಶದಲ್ಲಿ, ಅರ್ಜಿದಾರರ ಆಕ್ಷೇಪಗಳನ್ನು ಆಲಿಸಿ ನಿಯಮಾನುಸಾರ ವಿಚಾರಣೆ ನಡೆಸಿ ಮುಂದಿನ ಆದೇಶ ಹೊರಡಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಸ್ತೆ ನಿರ್ಮಾಣಕ್ಕೆ ಇಲಾಖೆಯ ಆಯುಕ್ತರು ದೇವಸ್ಥಾನದ ಸಮಿತಿ ಅಥವಾ ಕಾರ್ಯನಿರ್ವಹಣಾಧಿಕಾರಿಗೆ ಈವರೆಗೆ ಅನುಮತಿ ನೀಡಿಲ್ಲ. ಆದರೂ, ದೇವಸ್ಥಾನದ ಬಳಿಯ ಹಿಂದಿನ ಗಣೇಶ್ ಪ್ರಸಾದ್ ಹೋಟೆಲ್‌ನಿಂದ ಮಡಿವಾಳಕಟ್ಟೆಯವರೆಗಿನ ನೂತನ ಕಾಂಕ್ರೀಟ್ ರಸ್ತೆಗೆ ಪೂರಕವಾಗಿ ನಿರ್ವಾತ ತಂತ್ರಜ್ಞಾನದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಟೆಂಡರ್ ಪ್ರಕಟಿಸಿದೆ ಎಂದು ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ.
ದೇವಸ್ಥಾನದ ಜಮೀನಿನಲ್ಲಿ ಸಾರ್ವಜನಿಕ ರಸ್ತೆ ನಿರ್ಮಿಸಲು ಇಲಾಖೆಯ ಆಯುಕ್ತರ ಅನುಮತಿ ಕಡ್ಡಾಯವಾಗಿದ್ದು, ಈ ಸಂಬಂಧ ಭಕ್ತರ ಆಕ್ಷೇಪಗಳು ಹಾಗೂ ನ್ಯಾಯಾಲಯದ ನಿರ್ದೇಶನಗಳು ಇರುವಾಗ ಟೆಂಡರ್ ಪ್ರಕ್ರಿಯೆ ಮುಂದುವರಿಸುವುದು ಸರಿಯಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.
ರಸ್ತೆ ನಿರ್ಮಾಣದ ಕುರಿತ ಸಾರ್ವಜನಿಕ ದೂರು ಮತ್ತು ಆಕ್ಷೇಪಗಳ ವಿಚಾರಣೆ ಇಲಾಖೆಯ ಆಯುಕ್ತರ ಮುಂದೆ ಇತ್ಯರ್ಥವಾಗುವವರೆಗೆ ಒಳಚರಂಡಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ದೇವಸ್ಥಾನದ ಸಂರಕ್ಷಣಾ ವೇದಿಕೆ ಪುತ್ತೂರು ನಗರಸಭೆ ಪೌರಾಯುಕ್ತರನ್ನು ಒತ್ತಾಯಿಸಿದೆ. ನ್ಯಾಯಾಲಯದ ನಿರ್ದೇಶನ ಉಲ್ಲಂಘಿಸಿ ಕಾಮಗಾರಿ ಮುಂದುವರಿಸಿದರೆ ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದೂ ಎಚ್ಚರಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized15 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized18 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized17 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized17 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized19 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized16 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಸ್ಥಳೀಯ2 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಬಿಗ್ ನ್ಯೂಸ್1 hour agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ


















