Connect with us

ಬಿಗ್ ನ್ಯೂಸ್

200 Unit Free | ಕಾಂಗ್ರೇಸ್ ನ ಅಶ್ವಾಸನೆಯಲ್ಲೊಂದಾದ 200 ಯುನಿಟ್ ಉಚಿತ ವಿದ್ಯುತ್ ಯೋಜನೆಯ ಮಾರ್ಗಸೂಚಿ ಪ್ರಕಟ – ಗೃಹ ಜ್ಯೋತಿ ಫಲಾನುಭವಿಗಳಾಗಳು ಏನೆಲ್ಲ ನಿಯಮ ಪಾಲಿಸಬೇಕು ಗೊತ್ತೇ..?

Published

on



Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಕಾಂಗ್ರೇಸ್ ಸರ್ಕಾರದ ಮಹತ್ವಾಕಾಂಕ್ಷೆಯ 200 ಯುನಿಟ್ ಉಚಿತ ವಿದ್ಯುತ್ (200 Unit Free) ನೀಡುವ ಗೃಹಜ್ಯೋತಿ ಯೋಜನೆ ಸರ್ಕಾರಿ ಆದೇಶ ಬಿಡುಗಡೆಯಾಗಿದೆ.

Ad Widget

Ad Widget

Ad Widget

Ad Widget

ಆದೇಶ ಪ್ರತಿಯಲ್ಲಿ ಹೀಗಿದೆ :
ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರೀಕರಿಗೆ ಒದಗಿಸಲು ದಿನಾಂಕ:20.05 2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಒದಗಿಸಲು ತಾತ್ವಿಕ ಅನುಮೋದನೆ ನೀಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಸಂಬಂಧ ಆಡಳಿತ ಇಲಾಖೆಯು ಸರ್ಕಾರದ ಆದೇಶ ಸಂಖ್ಯೆ: ಎನರ್ಜಿ 154/ಪಿಎಸ್ ಆರ್2023 ದಿನಾಂಕ:20.05.2023 ಅನ್ನು ಹೊರಡಿಸಿದ್ದು, ಸದರಿ ಆದೇಶದಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಸರಿಸಬೇಕಾದ ಕಾರ್ಯವಿಧಾನ ಮತ್ತು ಪಾಲಿಸಬೇಕಾದ ಷರತ್ತು ಮತ್ತು ನಿಭಂದನೆಗಳ ಬಗ್ಗೆ ಸರ್ಕಾರದಿಂದ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದೆಂದು ತಿಳಿಸಿದೆ.

Ad Widget

Ad Widget <> Ad Widget

ದಿನಾಂಕ:02.06.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ “ಗೃಹ ಜ್ಯೋತಿ” ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ. “ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2012-25ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇಕಡ 10 ರಷ್ಟು ಹೆಚ್ಚಿನ ವಿದ್ಯುತ್ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್‌ ಬಿಲ್ಲನ್ನು ಪಾವತಿಸಲು ಸಂಪುಟ ಸಭೆಯು ಅನುಮೋದಿಸಿದೆ.



Ad Widget

ಸದರಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಸಹಾಯಧನ ಮೊತ್ತವನ್ನು ಹಾಗೂ ಮುಂದಿನ ಮಾಹೆಗಳಲ್ಲಿ ನಿಗದಿಯಾಗುವ ಇಂಧನ ಮತ್ತು ವಿದ್ಯುತ್‌ ಖರೀದಿ ವೆಚ್ಚದ ಹೊಂದಾಣಿಕೆ ಶುಲ್ಕ (FPPA – Fuel and Power Purchase Cost Adjustment) ದರಕ್ಕೆ ಸಂಬಂಧಿಸಿದ ಸಹಾಯಧನವನ್ನು ಒಳಗೊಂಡಂತೆ ಒಟ್ಟು ಸಹಾಯಧನವನ್ನು ವಿದ್ಯುತ್‌ ಸರಬರಾಜು ಮುಂಗಡವಾಗಿ ಒದಗಿಸಲಾಗುವುದು. ಕಂಪನಿಗಳಿಗೆ ಸರ್ಕಾರದಿಂದ ಮುಂಗಡವಾಗಿ ಒದಗಿಸಲಾಗುವುದು.

Ad Widget

Ad Widget

ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯಡಿಯ ಫಲಾನುಭವಿಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.

‘ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು; ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್‌ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್‌ ಬಳಕೆಗೆ ಆಗಸ್ಟ್ 2023ರ ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳೊಂದಿಗೆ ಜಾರಿಗೆ ತರಲು ಆದೇಶಿಸಿದೆ.

  1. ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ; ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
  2. ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
  3. ಗೃಹ ವಿದ್ಯುತ್‌ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು.
  4. ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
  5. ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
  6. ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
  7. ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ / ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
  8. ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್‌ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
  9. ಗೃಹ ವಿದ್ಯುತ್‌ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
  10. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.

ಗ್ರಾಹಕನಿಗೆ ನೀಡಿದ ಉಚಿತ ಮೊತ್ತವನ್ನು ಸರ್ಕಾರದಿಂದ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಸಹಾಯವನದ ಮೂಲಕ ಪಾವತಿಸಲಾಗುವುದು.

Ad Widget
Click to comment

Leave a Reply

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading