Connect with us

ದಕ್ಷಿಣ ಕನ್ನಡ

Environment Awareness ವಿಟ್ಲ : ರಕ್ಷಿತಾರಣ್ಯದ ಬಳಿ ತ್ಯಾಜ ಎಸೆದು ಪರಾರಿಯಾದವರನ್ನು ಹುಡುಕಿ ಕಸ ಹೆಕ್ಕಿಸಿದ ಸ್ಥಳೀಯ ಪರಿಸರ ಪ್ರೇಮಿಗಳು – ವಿಡಿಯೋ ವೈರಲ್‌ – ವ್ಯಾಪಕ ಮೆಚ್ಚುಗೆ

Published

on



Ad Widget

Ad Widget

Ad Widget

Ad Widget

Environment Awareness ವಿಟ್ಲ : ಜೂ 7 : ರಸ್ತೆ ಬದಿ ತ್ಯಾಜ್ಯ ಎಸೆಯುವ ಮೂಲಕ  ಸುಂದರ ಪರಿಸರ ಹಾಗೂ ಹಚ್ಚ ಹಸುರಿನಿಂದ ಕೂಡಿದ ಪ್ರಕೃತಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದವರನ್ನು ಪತ್ತೆ ಹಚ್ಚಿದ ಸ್ಥಳೀಯ ಯುವಕರ ತಂಡ  ಕೃತ್ಯ ಎಸಗಿದವರಿಂದಲೇ ತ್ಯಾಜವನ್ನು ಹೆಕ್ಕಿಸಿ ಪರಿಸರ ಪ್ರೇಮದ ಪ್ರಾಕ್ಟಿಕಲ್‌  ಪಾಠ  ಮಾಡಿದ ಅಪರೂಪದ ಹಾಗೂ ಅನುಕರಣೀಯ ಯೋಗ್ಯ  ಘಟನೆಯೊಂದು  ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮದ  ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಜೂ 6 ರಂದು ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.  ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಲೇ  ಮಾದರಿ ಕಾರ್ಯ ಮಾಡಿದ  ಸ್ಥಳೀಯ  ಯುವಕರ ಪರಿಸರ ಕಾಳಜಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

Ad Widget

Ad Widget

Ad Widget

Ad Widget

ಕನ್ಯಾನ – ಬೊಳ್ಪಾದೆ ಸಂಪರ್ಕ ರಸ್ತೆಯು ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಹಾದು ಹೋಗುತ್ತದೆ. ಈ ಮಾರ್ಗದಲ್ಲಿ ವಾಹನದಲ್ಲಿ  ಹಾದು ಹೋಗುವ ಸಂದರ್ಭ ಕೆಲವರು ತಮ್ಮ ಬಳಿ ಇರುವ ತ್ಯಾಜಗಳನ್ನು ರಕ್ಷಿತಾರಣ್ಯದ ನಿರ್ಜನ ಪ್ರದೇಶದಲ್ಲಿ ಕಳೆದ ಕೆಲವು ಸಮಯದಿಂದ ಎಸೆಯುತ್ತಿದ್ದರು. ಇದರಿಂದ ಈ ರಸ್ತೆ ತುಂಬಾ ತ್ಯಾಜಗಳು ತುಂಬಿದ್ದು ಪರಿಸರವಿಡಿ  ಕೊಳೆತು ನಾರುತಿತ್ತು .   ಆ ರಸ್ತೆಯಲ್ಲಿ ನಡೆದುಕೊಂಡು ಹೋಗುವವರು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿಯಿತ್ತು.   ಕುಡ್ತಮುಗೇರು, ಮಂಕುಡೆ, ಕುದ್ರಿಯ, ಕುಳಾಲು ಪರಿಸರದ ಹಸುಗಳು, ಆಡುಗಳು, ನಾಯಿ-ಬೆಕ್ಕುಗಳೆಲ್ಲಾ  ಈ ತ್ಯಾಜ್ಯ ತಿಂದು ಮಾರಕ ರೋಗಗಳಿಗೆ ತುತ್ತಾಗುತ್ತಿವೆ. ರಕ್ಷಿತಾರಣ್ಯದ ಹಚ್ಚ ಹಸಿರಿನ ತಪ್ಪಲಿನಲ್ಲಿ ನಿರಂತರವಾಗಿ ನಡೆಯುತ್ತಿದ್ದ ಈ  ದುಷ್ಕೃತ್ಯ ಪರಿಸರ ಪ್ರೇಮಿಗಳಿಗೆ ಅತೀವ ನೋವುಂಟು ಮಾಡುತಿತ್ತು.  

Ad Widget

Ad Widget

Ad Widget alt="Ad Widget"/>

Ad Widget

ಇದನ್ನು ಗಮನಿಸಿದ  ಪ್ರಕೃತಿ ಪ್ರೇಮಿಗಳು  ಕೃತ್ಯ ಎಸಗುವವರಿಗೆ ಮರೆಯಲಾಗದ ಪಾಠ ಕಲಿಸಲು ಮುಂದಾಗಿದ್ದಾರೆ.     ಮಂಗಳವಾರ ಮುಸ್ಸಂಜೆ ಗೂಡ್ಸ್ ಟೆಂಪೋದಲ್ಲಿ ಬಂದ ಇಬ್ಬರು ದುರ್ನಾತ ಬರುತ್ತಿದ್ದ ತ್ಯಾಜ್ಯಗಳ ಮೂಟೆಗಳನ್ನು ರಸ್ತೆ ಬದಿ ಎಸೆದಿದ್ದಾರೆ. ಇವರ ಬರುವಿಕೆಗೆ ಹೊಂಚು ಹಾಕಿ ಕೂತಿದ್ದ   ಸ್ಥಳೀಯರು ತಮ್ಮ  ಮೊಬೈಲ್  ನಲ್ಲಿ ಅದನ್ನು  ಚಿತ್ರೀಕರಿಸಿದ್ದರು. ಬಳಿಕ ಈ ವಿಡಿಯೋವನ್ನು ವೈರಲ್‌ ಮಾಡಲಾಗಿತ್ತು.

Ad Widget

Ad Widget <> Ad Widget

ಈ ವಿಡಿಯೋ ಸಹಾಯದಿಂದ ತ್ಯಾಜ ಎಸೆದವರನ್ನು ಪತ್ತೆ ಹಚ್ಚಿದ  ಪ್ರಕೃತಿ ಪ್ರೇಮಿ ಯುವಕರು ಅರಣ್ಯ ಇಲಾಖೆಗೂ  ಮಾಹಿತಿ ಒದಗಿಸಿದ್ದಾರೆ. ಅವರ ಸಹಾಯದಿಂದ   ತ್ಯಾಜ್ಯ ಎಸೆದವರನ್ನು ಸ್ಥಳಕ್ಕೆ ಕರೆಯಿಸಿ ಅವರಿಂದಲೇ ತ್ಯಾಜ್ಯಗಳ ಮೂಟೆಗಳನ್ನು ಪುನಹ ಟೆಂಪೋ ಗೆ ತುಂಬಿಸಿ ರಕ್ಷಿತಾರಣ್ಯ ಪರಿಸರವನ್ನು ಶುಚಿಗೊಳಿಸಿದ್ದಾರೆ. ಪ್ರಕೃತಿ ಪ್ರೇಮಿಗಳ ಕಾರ್ಯಾಚರಣೆಗೆ ಅರಣ್ಯ ಸಿಬ್ಬಂದಿಗಳು ಸಾಥ್ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.



Ad Widget
Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.



Ad Widget

ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.

Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್‌ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಅಧ್ಯಕ್ಷ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ.



Ad Widget

1994ರಲ್ಲಿ ಆರಂಭಗೊಂಡಿರುವ ಪ್ರಾವೀಣ್ ಕ್ಯಾಪಿಟಲ್, ಗ್ರಾಹಕರ ಬೆಂಬಲ ಮತ್ತು ವಿಶ್ವಾಸದೊಂದಿಗೆ ತನ್ನ ಸೇವೆಯನ್ನು ಮುಂದುವರಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪ್ರಧಾನ ಕಚೇರಿಯನ್ನು ನವೀಕರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯಶಂಕರ್, ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೋಘ್ ಜೆ. ರೈ ಅವರು ಕಾರ್ಯಕ್ರಮಕ್ಕೆ ಗಣ್ಯರು, ಗ್ರಾಹಕರು ಹಾಗೂ ಹಿತೈಷಿಗಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading