Connect with us

ಬೆಂಗಳೂರು

Mani Mysore Highway Construction ರಾಷ್ಟ್ರೀಯ ಹೆದ್ದಾರಿ ಸೌತ್ ಇಂಡಿಯಾ ಝೋನ್ ಅಧಿಕಾರಿಯ ಭೇಟಿಯಾದ ಅಶೋಕ್‌ ರೈ – ಮಾಣಿ ಮೈಸೂರು ರಾ. ಹೆದ್ದಾರಿ ಚತುಷ್ಪಥ ನಿರ್ಮಾಣಕ್ಕೆ ಅಗ್ರಹ  

Published

on

Ad Widget

Ad Widget

Ad Widget

Ad Widget

Mani Mysore Highway Construction ಪುತ್ತೂರು ;  ಪುತ್ತೂರು ಶಾಸಕ ಅಶೋಕ್ ರೈಯವರು (Puttur MLA Ashok Rai)  ರಾ. ಹೆದ್ದಾರಿ (national Highway) ವಿಭಾಗದ ದಕ್ಷಿಣ ಭಾರತ ಮಟ್ಟದ  ಅಧಿಕಾರಿಗಳನ್ನು ಬೆಂಗಳೂರಿನಲ್ಲಿ ಭೇಟಿಯಾಗಿ  ಮಾಣಿ-ಮೈಸೂರು ರಾ. ಹೆದ್ದಾರಿ ( NH -275) ರ (Mani Mysore Highway) ಮಾಣಿಯಿಂದ  ಪುತ್ತೂರು ತನಕ ಚತುಷ್ಪಥ ರಸ್ತೆ ನಿರ್ಮಿಸುವಂತೆ ಅಗ್ರಹಿಸಿದ್ದಾರೆ ̤

Ad Widget

Ad Widget

Ad Widget

Ad Widget

ಅಶೋಕ್‌ ರೈಯವರು  ರಾಷ್ಟ್ರೀಯ ಹೆದ್ದಾರಿ ದಕ್ಷಿಣ ಭಾರತ ಪ್ರಾಂತೀಯ (ನ್ಯಾಷನಲ್ ಹೈವೇ ಸೌತ್ ಇಂಡಿಯಾ ಝೋನ್) ಅಧಿಕಾರಿ ಮಹೇಂದ್ರ ಶರ್ಮ ಅವರನ್ನು  ಜೂ 7 ರಂದು  ಭೇಟಿಯಾಗಿ ಮಾತುಕತೆ ನಡೆಸಿದರು.  ಈ ಸಂದರ್ಭ ಮಾಣಿಯಿಂದ ಪುತ್ತೂರು ತನಕ ಚತುಷ್ಪಥ  ಕಾಮಗಾರಿಯನ್ನು ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

 ಪ್ರಸಕ್ತ ಸಾಲಿನ ವಾರ್ಷಿಕ ಯೋಜನೆಯಲ್ಲಿ ಸೇರಿಸಿಕೊಂಡಲ್ಲಿ ಮಾತ್ರ ಮುಂದಿನ ಅವಧಿಗೆ ಈ ಕಾಮಗಾರಿಗೆ ಚಾಲನೆ ದೊರೆಯಬಹುದಾಗಿದ್ದು ಇಲ್ಲವಾದಲ್ಲಿ ಇನ್ನಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಉಂಟಾಗಬಹುದು. ಈ ಕಾರಣಕ್ಕೆ ಪ್ರಸಕ್ತ ಸಾಲಿನಲ್ಲೇ ಈ ಬೇಡಿಕೆಯನ್ನು ಮಂಡಿಸುವಂತೆ ಶಾಸಕರು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

Ad Widget

Ad Widget <> Ad Widget

 ಶಾಸಕರ ಮನವಿಯನ್ನು ಸ್ವೀಕರಿಸಿದ ಅಧಿಕಾರಿ ಮಹೇಂದ್ರ ಶರ್ಮ ಅವರು ತಮ್ಮ ಬೇಡಿಕೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುವುದಾಗಿಯೂ , ಕಾಮಗಾರಿಯ ಬೇಡಿಕೆಯ ಬಗ್ಗೆ ವಿವರಣೆ ನೀಡುವುದಾಗಿಯೂ ತಿಳಿಸಿದ್ದಾರೆ.

ಮಾಣಿಯಿಂದ ಪುತ್ತೂರು ತನಕ ಚತುಷ್ಪಥ ರಸ್ತೆ ಈ ಬಾಗದ ಬಹುಕಾಲದ ಬೇಡಿಕೆಯಾಗಿದ್ದು ,ಇದು  ನಿರ್ಮಾಣವಾದಲ್ಲಿ ಜನರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ.  ಈ  ರಸ್ತೆ  ರಾ. ಹೆದ್ದಾರಿಯಾಗಿ ಈಗಾಗಲೇ  ಮೇಲ್ದರ್ಜೆಗೇರಿರುವುದ್ದರಿಂದ ಚತುಷ್ಪಥ ರಸ್ತೆ ಕಾಮಗಾರಿ ಬೇಡಿಕೆಯನ್ನು ಕೂಡ  ಕೇಂದ್ರ ಸರಕಾರ ಮಾನ್ಯ ಮಾಡಲಿದೆ  ಎಂಬ ನಂಬಿಕೆಯಿದೆ.    ಈ ಹಿನ್ನಲೆಯಲ್ಲಿ  ಅಧಿಕಾರಿಗಳ ಶೀಘ್ರ ಸ್ಪಂದಿಸುವಂತೆ  ಮನವಿ  ಮಾಡಿದ್ದೇನೆ

ಶಾಸಕ ಅಶೋಕ್  ರೈ
Ad Widget
Click to comment

Leave a Reply

ರಾಜಕೀಯ

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.

1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Ad Widget

Ad Widget

2018ರಲ್ಲಿ ರೈತರ ಸಾಲಮನ್ನಾ ಮಾಡುವ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನವನ್ನೂ 1,000 ರೂ. ಹೆಚ್ಚಳ ಮಾಡಿದ್ದೆ ಎಂದು ಸ್ಮರಿಸಿದ ಅವರು, ‘ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕು ಎಂದು ಮುಖ್ಯಮಂತ್ರಿಗಳು ಕೇಳುತ್ತಾರೆ. ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿ?’ ಎಂದು ಪ್ರಶ್ನಿಸಿದರು.

Ad Widget
Continue Reading

ಅಪರಾಧ

Gym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ

Published

on

Ad Widget

Ad Widget

Ad Widget

Ad Widget

ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.25: ಜಿಮ್‌ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಮಾತನಾಡಿದ ಅವರು, ಜಿಮ್‌ಗೆ ಹೋಗುವವರು ಸೇವಿಸುವ ಪ್ರೊಟೀನ್ ಉತ್ಪನ್ನಗಳ ಮೇಲೆ ಆರೋಗ್ಯ ಇಲಾಖೆ ನಿಗಾ ಇರಿಸಲಿದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಲವು ಪ್ರೊಟೀನ್ ಉತ್ಪನ್ನಗಳು ಗುಣಮಟ್ಟದಿಂದ ಕೂಡಿದ್ದರೆ, ಇನ್ನು ಕೆಲವು ಉತ್ಪನ್ನಗಳು ಎಲ್ಲಿಂದ ಪೂರೈಕೆಯಾಗುತ್ತವೆ ಎಂಬುದೇ ಸ್ಪಷ್ಟವಾಗಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಾರಾಟವಾಗುತ್ತಿರುವ ಪ್ರೊಟೀನ್ ಪೌಡರ್ ಮತ್ತು ಸಪ್ಲಿಮೆಂಟ್‌ಗಳನ್ನು ಪರೀಕ್ಷಿಸಲು ನಿರ್ಧರಿಸಲಾಗಿದೆ. ಮೆಡಿಕಲ್ ಸ್ಟೋರ್‌ಗಳು, ಜಿಮ್ ಕೇಂದ್ರಗಳು ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Ad Widget

Ad Widget <> Ad Widget

ಯಾಕೆ ಈ ಪರೀಕ್ಷೆ?
ಮಾರುಕಟ್ಟೆಯಲ್ಲಿ ಅನಧಿಕೃತವಾಗಿ ಮಾರಾಟವಾಗುವ ಕೆಲವು ಪ್ರೊಟೀನ್ ಪೌಡರ್‌ಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಪ್ರೊಟೀನ್ ಅಂಶವಿರುವುದು ಹಾಗೂ ಅವುಗಳಿಗೆ ಸ್ಟೆರಾಯ್ಡ್‌ಗಳು ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬೆರೆಸುವ ಸಾಧ್ಯತೆಗಳ ಬಗ್ಗೆ ಆಹಾರ ಸುರಕ್ಷತಾ ಇಲಾಖೆ ಈ ಹಿಂದೆಯೇ ಕಳವಳ ವ್ಯಕ್ತಪಡಿಸಿತ್ತು.

ಅಲ್ಲದೆ, ಅಗತ್ಯ ಪರವಾನಗಿ ಇಲ್ಲದೆ ಜಿಮ್‌ಗಳಲ್ಲಿ ನೇರವಾಗಿ ಸಪ್ಲಿಮೆಂಟ್‌ಗಳನ್ನು ಮಾರಾಟ ಮಾಡುವುದು ಕಾನೂನುಬಾಹಿರವಾಗಿದೆ. ಹಲವು ಪ್ರೊಟೀನ್ ಸಪ್ಲಿಮೆಂಟ್‌ಗಳ ಪ್ಯಾಕೆಟ್‌ಗಳ ಮೇಲೆ ನಮೂದಿಸಿರುವ ಪ್ರೊಟೀನ್ ಪ್ರಮಾಣಕ್ಕೂ, ಉತ್ಪನ್ನದಲ್ಲಿರುವ ನೈಜ ಪ್ರಮಾಣಕ್ಕೂ ವ್ಯತ್ಯಾಸವಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಲು ಸರ್ಕಾರ ಮುಂದಾಗಿದೆ.

Continue Reading

ಬಿಗ್ ನ್ಯೂಸ್

Tulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ರಾಜ್ಯದ ಎರಡನೇ ಭಾಷೆಯ ಸ್ಥಾನಮಾನ ನೀಡಲು ಅನುಮೋದನೆ ನೀಡಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಬುಧವಾರ ಸರ್ಕಾರ ಅನುಷ್ಠಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

Ad Widget

Ad Widget <> Ad Widget

ಹೊಸ ಆದೇಶದ ಪ್ರಕಾರ, ತುಳು ಭಾಷೆಯನ್ನು ಕನ್ನಡ ಲಿಪಿಯಲ್ಲಿ ಬಳಸಬೇಕಾಗಿದೆ. ಜಿಲ್ಲಾಡಳಿತ ಕಚೇರಿಗಳಲ್ಲಿ ತುಳು ಭಾಷೆ ಅನುಷ್ಠಾನಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸುವುದರ ಜೊತೆಗೆ ತುಳು ಭಾಷಾಂತರಕಾರರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

ಇದಲ್ಲದೆ, ಸಾರ್ವಜನಿಕರು ಸಲ್ಲಿಸುವ ಮನವಿ ಹಾಗೂ ಅರ್ಜಿಗಳನ್ನು ತುಳು ಭಾಷೆಯಲ್ಲಿಯೂ ಸ್ವೀಕರಿಸಬೇಕು. ಅವುಗಳಿಗೆ ನೀಡುವ ಉತ್ತರಗಳನ್ನು ಕನ್ನಡದ ಜೊತೆಗೆ ತುಳು ಭಾಷೆಯಲ್ಲಿಯೂ ಒದಗಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

Ad Widget

Ad Widget

ಈ ಮೂಲಕ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಡಳಿತ ವ್ಯವಸ್ಥೆಯಲ್ಲೂ ತುಳು ಭಾಷೆಯ ಬಳಕೆಗೆ ಅಧಿಕೃತವಾಗಿ ಅವಕಾಶ ಕಲ್ಪಿಸಿದಂತಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!