ಬೆಂಗಳೂರು
DV Sadananda Gowda | ಸಂಸದರಿಗೆ ಮಾಡುವ ಅವಮಾನ ಕ್ಷೇತ್ರದ ಜನರಿಗೆ ಮಾಡಿದಂತೆ ..! 13 ಸಂಸದರಿಗೆ ಟಿಕೇಟ್ ಇಲ್ಲ ಎನ್ನುವ ಸುದ್ದಿ ಬಗ್ಗೆ ಹೈಕಮಾಂಡ್ ಮೌನ ಮುರಿಯಬೇಕು: ಆತ್ಮವಲೋಕನ ಮಾಡಲು ಆತ್ಮಗಳೇ ಇಲ್ಲ ಎಂದು ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ ಡಿವಿ ಸದಾನಂದ ಗೌಡ
ಬೆಂಗಳೂರು : ಹದಿಮೂರು ಜನ ಸಂಸದರಿಗೆ ಟಿಕೆಟ್ ನೀಡುವುದಿಲ್ಲವೆಂಬ ಸುದ್ದಿ ಹರಿಬಿಡುವ ಮೂಲಕ ಮನೋಸೈರ್ಯ ಕುಂದಿಸುವ ಕೆಲಸ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ವಿ. ಸದಾನಂದ ಗೌಡ (DV Sadananda Gowda) ಸ್ವಪಕ್ಷದವರ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 13 ಸಂಸದರ ತೇಜೋವಧೆ ಮಾಡಲಾಗುತ್ತಿದೆ. ಆ ನಿರ್ಧಾರ ಯಾರೂ ತೆಗೆದುಕೊಂಡಿಲ್ಲ. ಕೆಲ ಮಾಧ್ಯಮಗಳಲ್ಲಿ ಮಾತ್ರ ಈ ರೀತಿಯ ಸುದ್ದಿ ಬರುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದರೊಂದಿಗೆ ತನ್ನ ತೇಜೋವಧೆಗೆ ನಾಲ್ಕನೇ ಪ್ರಯತ್ನ ನಡೆಯುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಡಿವಿಎಸ್ ಸ್ವ ಪಕ್ಷದವರ ಮೇಲೆಯೇ ಪತ್ರಿಕಾಗೋಷ್ಠಿ ನಡೆಸಿದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಮುಖ್ಯಮಂತ್ರಿ ಪಕ್ಷ ತೊರೆಯುತ್ತಾರೆಯೇ ಎನ್ನುವ ಚರ್ಚೆ ಪ್ರಾರಂಭವಾಗಿದೆ.
ಅಯೋಗ್ಯ ಸಂಸದರು, ಮುದುಕರು, ಅನಾರೋಗ್ಯ, ಟಿಕೆಟ್ ಕೊಡಲ್ಲ ಅಂತ ಸುದ್ದಿ ಬರುತ್ತಿವೆ. ಆ ಮೂಲಕ ಆ ಸಂಸದರಿಗೆ ಅಪಮಾನ ಮಾಡಲಾಗುತ್ತಿದೆ, ಅದು ಅ ಕ್ಷೇತ್ರಗಳ ಜನರಿಗೂ ಅಪಮಾನ ಎಂದರು. ಹಾವೇರಿಯ ಸಂಸದ ಶಿವಕುಮಾರ್ ಉದಾಸಿ ಅವರು ಮುಂದೆ ಅವಮಾನ ಆಗಬಾರದು ಎಂಬ ಕಾರಣಕ್ಕೆ ಚುನಾವಣಾ ನಿವೃತ್ತಿ ಘೋಷಿಸಿರಬಹುದು, ಪಕ್ಷದ ಸಂಸದರ ಬಗ್ಗೆ ಈ ಥರ ಎಲ್ಲ ಸುದ್ದಿ ಬರುತ್ತಿದ್ದರು, ನಮ್ಮ ನಾಯಕರು ಸ್ಪಷ್ಟಿಕರಣ ಕೊಡದೆ ಮೌನವಾಗಿರುವುದು ಸರಿಯಲ್ಲ ಎಂದು ರಾಜ್ಯ ನಾಯಕರ ವಿರುದ್ಧ ಕಿಡಿಕಾರಿದರು. ಬಿಜೆಪಿಯ ಕೇಂದ್ರ ಹಾಗೂ ರಾಜ್ಯದ ನಾಯಕರು ಕೂಡಲೇ ಮಧ್ಯೆ ಪ್ರವೇಶಿಸಬೇಕು. ಟಿಕೆಟ್ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಸದಾನಂದಗೌಡ ಆಗ್ರಹಿಸಿದರು.
ತನ್ನನ್ನು ಈಗಾಗಲೇ 3 ಸಲ ತೇಜೋವಧೆ ಮಾಡಲಾಗಿದೆ. ನಾನು ಎಂದಿಗೂ ಮಾಧ್ಯಮದ ಮುಂದೆ ಬಂದಿಲ್ಲ. ಇದೀಗ ಮತ್ತೊಮ್ಮೆ ತೇಜೋವಧೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಹೊಸ ಅನುಮಾನದ ಬಾಂಬ್ ಸಿಡಿಸಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಹಲವು ಪಾಠ ಕಲಿಸಿದೆ. ನಾಲಿಗೆ ಹರಿಬಿಡುವವರನ್ನು ಸೋಲಿಸಿದೆ. ಕೇವಲ ಹಣದಿಂದ ನಡೆಯಲ್ಲ ಅಂತ ತೋರಿಸಿಕೊಟ್ಟಿದೆ. ಇದನ್ನು ಅರಿತುಕೊಂಡು ನಾವು ಪಕ್ಷ ಸಂಘಟನೆ ಮಾಡುವ ಕಡೆ ಗಮನ ಹರಿಸಬೇಕಾಗಿದೆ ಎಂದರು.
ಸಂಸದರಾದವರು ಪಕ್ಷದ ನಾಯಕರ ಮುಂದೆ ಭಿಕ್ಷಾ ಪಾತ್ರೆ ಹಿಡಿದು ನಿಲ್ಲುವ ಅಗತ್ಯವೇನು ಇಲ್ಲ. ಮಾಧ್ಯಮಗಳು ಸಹ ಟಿಆರ್‌ಪಿಗಾಗಿ ಸುಳ್ಳು ಸುದ್ದಿಗಳನ್ನು ಬಿತ್ತರಿಸುವ ಮೂಲಕ ತೇಜೋವಧೆ ಮಾಡಬಾರದು ಎಂದು ತಾಕೀತು ಮಾಡಿದರು.
ಪಕ್ಷ ನನಗೆ ಎಲ್ಲ ಹುದ್ದೆ ನೀಡಿದೆ. ನಾನು ಪಕ್ಷದಲ್ಲಿ ಯಾವುದೇ ಗುಂಪಿನಲ್ಲೂ ಇಲ್ಲ. ಕೆಎಂಎಫ್ ಅಧ್ಯಕ್ಷ ಸ್ಥಾನ ಕೇಳಿದ್ದು ಬಿಟ್ಟರೆ ಉಳಿದ ಯಾವ ಸ್ಥಾನವನ್ನೂ ನಾನು ಕೇಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ, ನಾವೆಲ್ಲರೂ ಅಳೆದೂ ತೂಗಿ ಮಾತಾಡುವ ಸಂದರ್ಭ ಬಂದಿದೆ. ಹಿಂದೆ ಸೋಲಿನ ನಂತರ ಆತ್ಮವಲೋಕನ ನಡೆಯುತ್ತಿತ್ತು. ಈಗ ಆತ್ಮಾವಲೋಕನ ಮಾಡಿಕೊಳ್ಳಲು ಆತ್ಮಗಳೇ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಬಗ್ಗೆಯೇ ಅನುಮಾನ ವ್ಯಕ್ತಪಡಿಸಿದರು.
ಸೋಲಿಗೆ ಕಾರಣಗಳನ್ನು ಹುಡುಕಿ ಸರಿಪಡಿಸಬೇಕಿದೆ. ಕಾರ್ಯಕರ್ತರಲ್ಲಿ ಧೈರ್ಯ, ಉತ್ಸಾಹ ತುಂಬಬೇಕಿದೆ. ಸೋಲು ನಮಗೆ ಹೊಸದಲ್ಲ. ಸೋಲು ಎಲ್ಲವನ್ನೂ ಮುಗಿಸಲ್ಲ. ಸೋಲು ಒಂದು ತಾತ್ಕಾಲಿಕ ಹಿನ್ನಡೆ, ಪಕ್ಷ ಸದೃಢ ಮಾಡುವ ಪ್ರಯತ್ನ ನಮ್ಮವರಿಂದ ಆಗಬೇಕಾಗಿದೆ ಎಂದು ವ್ಯಾಖ್ಯಾನಿಸಿದರು. ಪಕ್ಷದ ಕಾರ್ಯಕರ್ತರಾರು ಧೈರ್ಯಗುಂದುವ ಅಗತ್ಯವಿಲ್ಲ. ವ್ಯತ್ಯಾಸಗಳು, ಸಾಂದರ್ಭಿಕ, ತಪ್ಪುಗಳಾಗಿರಬಹುದು. ಸೋಲು ಅರಗಿಸಿಕೊಂಡು ಮತ್ತೆ ಎದ್ದೇಳುವ ಮಾಸ್ಟರ್ ಪ್ಲಾನ್ ಮಾಡಬೇಕು.
ಪಕ್ಷಕ್ಕೆ ಸೋಲಾದ ಹಿನ್ನೆಲೆಯಲ್ಲಿ ಗೂಬೆ ಕೂರಿಸುವ ಪ್ರಯತ್ನಗಳು ಆಗುತ್ತಿರುತ್ತವೆ. ಎಂದು ಸದಾನಂದಗೌಡ ಅಭಿಪ್ರಾಯಪಟ್ಟರು.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
FIR-ಮತದಾರರ ಹೆಸರು ಅಳಿಸಲು ಫಾರಂ-7 ಅರ್ಜಿ ದುರ್ಬಳಕೆ; ಬೆಂಗಳೂರಿನಲ್ಲಿ ಐವರ ವಿರುದ್ಧ FIR
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು 5,698 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದಡಿ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಕ್ಷೇತ್ರದ ವಿವಿಧ ಭಾಗಗಳಲ್ಲಿನ 5,698 ಮತದಾರರ ಹೆಸರುಗಳನ್ನು ಅಳಿಸುವಂತೆ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಸಂಪರ್ಕ ಹೊಂದಿರುವ ಬೂತ್ ಮಟ್ಟದ ಏಜೆಂಟ್‌ಗಳಾದ ರಾಮಕೃಷ್ಣ ಹಾಗೂ ಯೋಗೇಶ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಅರ್ಜಿಗಳಲ್ಲಿ ಕೆಲವರ ವೈಯಕ್ತಿಕ ವಿವರಗಳನ್ನು ಅವರ ಅನುಮತಿಯಿಲ್ಲದೆ ಬಳಸಲಾಗಿದೆ ಹಾಗೂ ಕೆಲವು ಅರ್ಜಿಗಳಲ್ಲಿನ ಸಹಿಗಳ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಫಾರಂ-7 ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಅರ್ಜಿಗಳಲ್ಲಿನ ಸಹಿಗಳು ನಕಲಿಯಾಗಿವೆಯೇ ಹಾಗೂ ಮತದಾರರ ವೈಯಕ್ತಿಕ ಮಾಹಿತಿಯನ್ನು ದುರ್ಬಳಕೆ ಮಾಡಲಾಗಿದೆಯೇ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಗಳು ತನಿಖೆಯ ಹಂತದಲ್ಲಿದ್ದು, ಪ್ರಕರಣದ ಸತ್ಯಾಸತ್ಯತೆ ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
-
ಮಂಗಳೂರು7 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಸ್ಥಳೀಯ12 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ10 hours agoRaid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್12 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ12 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ10 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್10 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ7 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















