ಸ್ಥಳೀಯ
Drug Mafia : ಚಾರ್ಮಾಡಿ ಘಾಟ್ ನಲ್ಲಿ ಮುಖ ಸುಟ್ಟ ಸ್ಥಿತಿಯಲ್ಲಿ ಬಂಟ್ವಾಳದ ಯುವಕನ ಕೊಳೆತ ಶವ ಪತ್ತೆ – ಡ್ರಗ್ ಪೆಡ್ಲರ್ ಗಳು ಕೊಲೆಗೈದು ಬೀಸಾಡಿದರೇ
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಗೆ ಸೇರಿದ ಕುಕ್ಕಾಜೆ ನಿವಾಸಿಯ ಮೃತದೇಹ ಚಾರ್ಮಾಡಿ ಘಾಟ್ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಡ್ರಗ್ಸ್ ಡೀಲ್ ಮಾಡುವ ತಂಡವೊಂದು ಕೊಲೆಗೈದು ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ಪತ್ತೆಯಾದ ಶವ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಕುಕ್ಕಾಜೆ – ಕಾಪಕಾಡ್ ನಿವಾಸಿ ದಿ ಅಬ್ಬಾಸ್ ಎಂಬವರ ಪುತ್ರ ಸವಾದ್ (35) ಎಂಬವರದು.
ಸವಾದ್ ನ ಗೆಳೆಯನೊಬ್ಬ ಆತನ ಮನೆಯವರಿಗೆ ನೀಡಿದ ಮಾಹಿತಿಯ ಮೇರೆಗೆ ಶೋಧ ನಡೆಸಿದಾಗ ಸವಾದ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸವಾದ್ ಗಾಂಜಾ ವ್ಯಸನಿಯಾಗಿದ್ದು , ಮನೆಯಲ್ಲಿರುತ್ತಿದ್ದದ್ದೆ ಕಮ್ಮಿ ಎನ್ನಲಾಗುತ್ತಿದೆ. ಅಗಾಗ ಮನೆಗೆ ಬರುತ್ತಿದ್ದ ಆತ ಬಳಿಕ ತಿಂಗಳುಗಟ್ಟಲೆ ನಾಪತ್ತೆಯಾಗಿರುತ್ತಿದ್ದ. ಬಳಿಕ ಇದ್ದಕ್ಕಿದಂತೆ ಮನೆಗೆ ಎಂಟ್ರಿ ಕೊಡುತ್ತಿದ್ದ.
10 ದಿನಗಳ ಹಿಂದೆ ಮನೆಗೆ ಬಂದಿದ್ದವ ಮತ್ತೆ ಎಂದಿನಂತೆ ನಾಪತ್ತೆಯಾಗಿದ್ದ. ಹೀಗಾಗಿ ಆತ ಕಾಣೆಯಾಗಿರುವುದನ್ನು ಮನೆಯವರು ಕೂಡ ಲಕ್ಷ್ಯಕ್ಕೆ ತೆಗೆದುಕೊಂಡಿರಲಿಲ್ಲ. ಈ ಹಿಂದಿನ ಅಭ್ಯಾಸದಂತೆ ಮತ್ತೆ ಯಾವತ್ತದರೂ ಮನೆಗೆ ವಾಪಸ್ಸು ಬರಬಹುದೆಂದು ಮನೆಯವರು ಎನಿಸಿದರು.
ಆದರೆ ಆತನೊಂದಿಗೆ ಇರುತ್ತಿದ್ದ ಮಾರಿಪಳ್ಳದ ವ್ಯಕ್ತಿಯೊಬ್ಬ ಸವಾದ್ ನ ಅಣ್ಣನ ಬಳಿ ನಿನ್ನ ತಮ್ಮ ಚಾರ್ಮಾಡಿಯಲ್ಲಿ ಕೊಲೆಯಾಗಿದ್ದಾನೆ ಎಂದು ತಿಳಿಸಿದ್ದಾನೆ. ಈ ಬಗ್ಗೆ ವಿಚಾರಿಸಿದಾಗ ಚಾರ್ಮಾಡಿಯಲ್ಲಿ ಅಜ್ಞಾತ ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಮನೆಯವರಿಗೆ ಮಾಹಿತಿ ಲಭ್ಯವಾಗಿದೆ. ಮೃತದೇಹ ಪತ್ತೆಯಾದ ಸ್ಥಳ ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣಾ ವ್ಯಾಪ್ತಿಗೆ ಸೇರಿತ್ತು. ಹೀಗಾಗಿ ಅಲ್ಲಿನ ಠಾಣೆಗೆ ತೆರಳಿ ಸವಾದ್ ಮನೆಯವರು ವಿಚಾರಿಸಿದ್ದಾರೆ.
ಸವಾದ್ ಮೃತ ದೇಹ ಮೂಡಿಗೆರೆಯ ಚಾರ್ಮಾಡಿ ಘಟ್ ಸಮೀಪದ ಪ್ರಸಿದ್ದ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವದ ಗುರುತು ಸಿಗಬಾರದು ಎಂಬ ಉದ್ದೇಶದಿಂದ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ಮೃತದೇಹದ ಮೈಮೇಲಿನ ಬಟ್ಟೆ ಮತ್ತು ಕೈಯಲ್ಲಿರುವ ನೂಲನ್ನು ಆಧರಿಸಿ ಅದು ಸವಾದ್ ನದೆ ಮೃತದೇಹ ಎಂದು ಮನೆಯವರು ಅಭಿಪ್ರಾಯಪಟ್ಟಿದ್ದಾರೆ
ಚಾರ್ಮಡಿಯ ಬಣಕಲ್ ವ್ಯಾಪ್ತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿತ್ತು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಮೃತ ವ್ಯಕ್ತಿಯ ಮನೆಯವರು ಬಂದು ಮೃತದೇಹವನ್ನು ನೋಡಿದ್ದು, ಶೇ.90ರಷ್ಟು ಹೋಲಿಕೆ ಇದೆ ಎಂದು ತಿಳಿಸಿದ್ದಾರೆ. ಶೇ.100 ರಷ್ಟು ಹೋಲಿಕೆಯಾಗದಿದ್ದರೆ ಡಿಎನ್ಎ ಟೆಸ್ಟ್ ನಡೆಸಿ, ಅವನದ್ದೇ ಆಗಿದ್ದರೆ ಎಫ್ಐಆರ್ ದಾಖಲಿಸಲಾಗುವುದು ಎಂದು ಬಣಕಲ್ ಠಾಣಾ ಪೊಲೀಸ್ ನಿರೀಕ್ಷಕರು ಮಾಧ್ಯಮಕ್ಕೆ ತಿಳಿಸಿದ್ದಾರೆ
ಸವಾದ್ ನೊಂದಿಗೆ ಇದ್ದ ಇತರ ಮೂವರು ಆತನನ್ನು ಕರೆದು ಕೊಂಡು ಹೋಗಿ ಕೊಲೆ ಮಾಡಿ ಬಿಸಾಕಿರಬಹುದು ಎಂದು ಶಂಕೆ ವ್ಯಕವಾಗಿದೆ. ಸವಾದ್ ಸಾವಿಗೂ ಗಾಂಜಾ ಪ್ರಕರಣವೇ ಕಾರಣವಾಗಿರಬಹುದು ಎಂಬ ಶಂಕೆ ಕುಕ್ಕಾಜೆ ಪರಿಸರದಲ್ಲಿದೆ. ಅಲ್ಲಿ ಗಾಂಜಾ ಸಹಿತ ವಿವಿಧ ಮಾದರಿಯ ಡ್ರಗ್ ಹಾವಳಿ ವಿಪರೀತವಾಗಿದ್ದು ಯುವ ಜನತೆ ಇದಕ್ಕೆ ಬಲಿ ಬೀಳುತ್ತಿದ್ದಾರೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ. ಮೃತದೇಹವನ್ನು ಚಿಕ್ಕಮಗಳೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ಹಂತಕರು ಕಾವಳಕಟ್ಟೆ – ವಗ್ಗ ಮೂಲದ ಪೆಡ್ಲರ್ ತಂಡದವರು ಎಂಬ ಬಗ್ಗೆ ಪೊಲೀಸರಿಗೆ ಈಗಾಗಲೇ ಮಾಹಿತಿ ಲಭ್ಯವಾಗಿದೆ. ಪೊಲೀಸರು ಚುರುಕಿನ ತನಿಖೆ ನಡೆಸುತ್ತಿದ್ದಾರೆ
.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಪರಾಧ
Uppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹೇಳಿ ತೋಟದ ಮಾಲಕರೊಬ್ಬರಿಂದ ₹2 ಸಾವಿರ ಪಡೆದು ವ್ಯಕ್ತಿಯೊಬ್ಬ ನಾಪತ್ತೆಯಾಗಿರುವ ಘಟನೆ ಕೋಡಿಂಬಾಡಿ ಪರಿಸರದಲ್ಲಿ ನಡೆದಿದೆ.
ಕೋಡಿಂಬಾಡಿ ಪರಿಸರದ ಪ್ರಗತಿಪರ ಕೃಷಿಕರೊಬ್ಬರ ಮನೆಗೆ ನಾಲ್ಕು ದಿನಗಳ ಹಿಂದೆ ತೆರಳಿದ ಅಪರಿಚಿತ ವ್ಯಕ್ತಿ, ತಾನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವನು ಎಂದು ಪರಿಚಯಿಸಿಕೊಂಡಿದ್ದಾನೆ. ತೋಟದ ಕೆಲಸಕ್ಕೆ ಶಾಶ್ವತವಾಗಿ ಕಾರ್ಮಿಕರು ಬೇಕೇ ಎಂದು ವಿಚಾರಿಸಿದ್ದಾನೆ. ಕೆಲಸಗಾರರ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕೃಷಿಕರು ಬೇಕು ಎಂದು ತಿಳಿಸಿದಾಗ, ತಾನು ಸದ್ಯ ಗೇರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದ ತನ್ನ ಬಟ್ಟೆ-ಬರೆ ಹಾಗೂ ಇತರ ಸಾಮಗ್ರಿಗಳನ್ನು ತೆಗೆದುಕೊಂಡು, ಹೆಂಡತಿ-ಮಕ್ಕಳೊಂದಿಗೆ ಬರುವುದಾಗಿ ಹೇಳಿದ್ದಾನೆ.
ಆದರೆ ರಿಕ್ಷಾ ಮಾಡಿಕೊಂಡು ಬರಲು ತನ್ನ ಬಳಿ ಹಣವಿಲ್ಲ ಎಂದು ಹೇಳಿ ಮೊದಲಿಗೆ ₹1 ಸಾವಿರ ಕೇಳಿದ್ದಾನೆ. ಆತನ ಮಾತನ್ನು ನಂಬಿದ ತೋಟದ ಮಾಲಕರು ಹಣ ನೀಡಿದ್ದಾರೆ. ಬಳಿಕ ಅಂಗಡಿಯಲ್ಲಿ ಸ್ವಲ್ಪ ಸಾಲವಿದ್ದು, ಅದನ್ನು ತೀರಿಸಲು ಮತ್ತೊಂದು ₹1 ಸಾವಿರ ನೀಡುವಂತೆ ಕೇಳಿಕೊಂಡಿದ್ದಾನೆ. ಇದಕ್ಕೂ ಒಪ್ಪಿದ ಕೃಷಿಕರು ಒಟ್ಟು ₹2 ಸಾವಿರ ನೀಡಿದ್ದಾರೆ.
ಹಣ ಪಡೆದುಕೊಂಡು ತೆರಳಿದ ವ್ಯಕ್ತಿ ನಾಲ್ಕು ದಿನ ಕಳೆದರೂ ಮತ್ತೆ ಕೃಷಿಕರ ಮನೆಗೆ ಬಂದಿಲ್ಲ. ಆತನ ಮೊಬೈಲ್ ನಂಬರ್ ಕೇಳಿದಾಗ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದ ಎನ್ನಲಾಗಿದೆ.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಬಿಗ್ ನ್ಯೂಸ್18 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















