ಬಿಗ್ ನ್ಯೂಸ್
Free Bus | ನಾಳೆ ಮಧ್ಯಾಹ್ನ 1 ಗಂಟೆಯಿಂದ ರಾಜ್ಯದಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ – ‘ಶಕ್ತಿ’ ಯೋಜನೆಗೆ ಸಿಎಂ ಚಾಲನೆ – 41.8 ಲಕ್ಷ ಬಡ ಮತ್ತು ಕೆಳ ಮಧ್ಯಮ ವರ್ಗದ ದುಡಿಯುವ ಮಹಿಳೆಯರ ಖರ್ಚಿನ ಹೊರೆ ಇಳಿಕೆ – ಯೋಜನೆಯ ಸಂಪೂರ್ಣ ವಿವರ ಓದಿ
ಬೆಂಗಳೂರು: ಜೂನ್ 10- ರಾಜ್ಯದ ಎಲ್ಲಾ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ʼಶಕ್ತಿʼ ಯೋಜನೆಯಡಿ (Free Bus) ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ನಾಳೆ, ಜೂನ್ 11 ರಂದು ಚಾಲನೆ ನೀಡಲಿದ್ದಾರೆ.
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಕಾರ್ಯಗತವಾಗಿರುವ ಮೊದಲ ಯೋಜನೆ ಇದಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗಾಗಿ ಜಾರಿಗೊಳ್ಳುತ್ತಿರುವುದು ಗಮನಾರ್ಹ.
ರಾಜ್ಯಾದ್ಯಂತ ಏಕಕಾಲಕ್ಕೆ ಉದ್ಘಾಟನೆ- ಮಹಿಳಾ ಸಬಲೀಕರಣಕ್ಕೆ ಹೊಸ ಮುನ್ನುಡಿ : ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ʼಶಕ್ತಿʼ ಯೋಜನೆಗೆ ಚಾಲನೆ ನೀಡುವ ಮೂಲಕ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಗೆ ಮುನ್ನುಡಿ ಬರೆಯಲಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಶಾಸಕರು ಈ ಯೋಜನೆಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ ದೊರೆಯಲಿದೆ.
41.8 ಲಕ್ಷ ಮಹಿಳೆಯರಿಗೆ ಅನುಕೂಲ: ʼಉಚಿತ ಪ್ರಯಾಣʼ ಯೋಜನೆಯು ಪ್ರತಿದಿನ 41.8 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅನುಕೂಲವಾಗಲಿದೆ. ಬಡ ಮತ್ತು ಕೆಳ ಮಧ್ಯಮ ವರ್ಗದ ದುಡಿಯುವ ಮಹಿಳೆಯರ ದಿನದ ಖರ್ಚಿನ ಹೊರೆಯನ್ನು ಇಳಿಸಿ, ಮಹಿಳಾ ಸಬಲೀಕರಣಕ್ಕೆ ಈ ಯೋಜನೆ ಹೊಸ ಭಾಷ್ಯ ಬರೆಯಿದೆ.
ಉಳಿತಾಯವಾಗುವ ಪ್ರಯಾಣದ ವೆಚ್ಚ ಕುಟುಂಬದ ನಿರ್ವಹಣೆಗೆ ಬಳಕೆಯಾಗುವುದರಿಂದ ಮಹಿಳೆಯರಲ್ಲಿ ಸ್ವಾವಲಂಬನೆಯ ಭಾವ ಮೂಡಿಸಿದೆ.
ಲಿಂಗತ್ವ ಅಲ್ಪಸಂಖ್ಯಾತರಿಗೂ ʼಶಕ್ತಿʼ: ಜಾತಿ, ಮತ, ವರ್ಗಗಳ ಭೇದವಿಲ್ಲದೆ ವಿದ್ಯಾರ್ಥಿನಿಯೂ ಸೇರಿದಂತೆ ಎಲ್ಲ ಮಹಿಳೆಯರು ಈ ಸೌಲಭ್ಯ ಪಡೆಯಬಹುದಾಗಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಯೋಜನೆಯ ಅನುಕೂಲ ದೊರೆಯಲಿದೆ. ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯಲಿದ್ದು, 18,609 ಬಸ್‌ಗಳ ಸೇವೆಯು ಉಚಿತ ಪ್ರಯಾಣಕ್ಕೆ ಲಭ್ಯವಿದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ಕೆ.ಎಸ್. ಆರ್.ಟಿ.ಸಿ, ಬಿಎಂಟಿಸಿ, ಎನ್.ಡಬ್ಲ್ಯು.ಕೆ.ಆರ್.ಟಿ.ಸಿ; ಹಾಗೂ ಎನ್.ಇ.ಕೆ.ಆರ್.ಟಿ.ಸಿ. ಬಸ್ ಗಳಲ್ಲಿ ಈ ಸೌಲಭ್ಯ ಒದಗಿಸಲಾಗುತ್ತಿದೆ.ಈ ಯೋಜನೆಗೆ ವಾರ್ಷಿಕವಾಗಿ 4051.56 ಕೋಟಿ ರೂ. ವೆಚ್ಚವಾಗುವುದು ಎಂದು ಅಂದಾಜಿಸಲಾಗಿದೆ.
ಯೋಜನೆಯ ಮುಖ್ಯಾಂಶಗಳು:
• ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಜಾರಿ.
• ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಮಾತ್ರ ಪ್ರಯಾಣಕ್ಕೆ ಮಾನ್ಯ.
• ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿನ ಬಸ್‌ಗಳಲ್ಲಿ ಸಂಚರಿಸಲು ಅವಕಾಶ.
• ಬೆಂಗಳೂರು ಮಹಾನಗರ ಸಾರಿಗೆ ಮತ್ತು ಇತರ ನಗರ ಸಾರಿಗೆ ಬಸ್‌ಗಳಿಗೂ ಅನ್ವಯ.
• ರಾಜ್ಯದೊಳಗಿನ ಪ್ರಯಾಣಕ್ಕೆ ರಾಜ್ಯದಲ್ಲಿ ವಾಸಿಸುವ ಮಹಿಳೆಯರಿಗೆ ಮಾತ್ರ ಸೀಮಿತ.
• ʼಶಕ್ತಿ ಸ್ಮಾರ್ಟ್ ಕಾರ್ಡ್‌ಗಾಗಿʼ ಸೇವಾ ಸಿಂಧುವಿನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಿ.
• ಮೂರು ತಿಂಗಳವರೆಗೆ ಗುರುತಿನ ಚೀಟಿ ತೋರಿಸಿ ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಲು ಅವಕಾಶ.
ಭಾರತ / ಕರ್ನಾಟಕ ಸರ್ಕಾರ ಇಲ್ಲವೆ ಸರ್ಕಾರಿ ಸ್ವಾಮ್ಯದ ಕಚೇರಿಗಳು ನೀಡಿರುವ ಭಾವಚಿತ್ರ ಇರುವ ಐಡಿ ಕಾರ್ಡ್ ಮಾನ್ಯ ಮಾಡಲಾಗುವುದು.
ಸ್ಥಳೀಯ
Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.
ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಅಂತರ ರಾಜ್ಯ
WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.
ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.
WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.
CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.
CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.
CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.
ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.
CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.
ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.















