ಸಾಮಾಜಿಕ ಮಾಧ್ಯಮ
Deer Eats Snake : ಕೋಡಗನ ಕೋಳಿ ನುಂಗಿತ್ತಾ ತಂಗಿ ಜಿಂಕೆ ಹಾವ ನುಂಗಿತ್ತಾ ….! ಹಾವನ್ನು ಜಗಿದು ತಿನ್ನುತ್ತಿರುವ ಜಿಂಕೆ – ವಿಡಿಯೋ ವೈರಲ್
Deer Eats Snake ಕನ್ನಡದಲ್ಲಿ ಸಂತ ಶಿಶುನಾಳ ಷರೀಫರು ಬರೆದ ಕೋಡಗನ ಕೋಳಿ ನುಂಗಿತ್ತಾ ಹಾಡು ಬಲು ಜನಪ್ರಿಯ . ಜೀವನದ ಸಾರವನ್ನು ತಿಳಿಸಲು ಆ ಹಾಡಿನಲ್ಲಿ ಅಸಾಧ್ಯವಾದ ಘಟನೆಗಳನ್ನು ಪ್ರತಿಮೆ ರೂಪದಲ್ಲಿ ನೀಡಿದ್ದಾರೆ. ಆದರೇ ಇಂತಹದೊಂದು ಪ್ರಾಣಿ ಆಹಾರ ಸರಪಳಿಯಲ್ಲಿ ಅಸಾಧ್ಯ ಎಂದೇ ಭಾವಿಸಲಾದ ಘಟನೆಯೊಂದು ಜಾಲತಾಣದಲ್ಲಿ ವೈರಲ್ ಆಗಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಭಾರತೀಯ ಅರಣ್ಯ ಸೇವೆ (ಐಎಫ್ ಎಸ್) ಅಧಿಕಾರಿ ಸುಸಂತ ನಂದ ಅವರು ಈ ವಿಸ್ಮಯಕಾರಿ ವೀಡಿಯೋ ಹಂಚಿಕೊಂಡಿದ್ದು ಅದರಲ್ಲಿ ಸಸ್ಯಹಾರಿ ಜೀವಿ ಜಿಂಕೆಯೊಂದು ಹಾವನ್ನು ಕಚ್ಚಿ ತಿನ್ನುತ್ತಿದೆ…. ಅರೇ ಇದು ಹೇಗೆ ಅಂತೀರಾ ? ಹಾಗಾದರೇ ಈ ವರದಿ ಓದಿ
ಐಎಫ್ ಎಸ್ ಅಧಿಕಾರಿ ಸುಸಂತ ನಂದ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ಅಗಾಗ ವಿಸ್ಮಯಕಾರಿ ವನ್ಯಜೀವಿ ವಿಡಿಯೋಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ತನ್ನ ಫಾಲೋವರ್ಸ್ ಗಳನ್ನು ಚಕಿತಗೊಳಿಸುತ್ತಿರುತ್ತಾರೆ. ಜೂ 11 ರಂದು ಅವರೊಂದು ವೀಡಿಯೋ ಹಾಕಿದ್ದು ಅದರಲ್ಲಿ ಜಿಂಕೆಯೊಂದು ಹಾವನ್ನು ಬಾಯಲ್ಲಿ ಇಟ್ಟುಕೊಂಡು ಜಗಿಯುತ್ತಿದೆ. ಸದ್ಯ ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿದೆ. ಈ ವಿಡಿಯೋ ವನ್ನು ಅರಣ್ಯ ಪ್ರದೇಶದ ಮೂಲಕ ಕಾರಿನಲ್ಲಿ ಹಾದು ಹೋಗುವ ಯಾತ್ರಿಕರೊಬ್ಬರು ಚಿತ್ರಿಸಿದ್ದಾರೆ. ಅವರು ಈ ವೀಡಿಯೋ ಮಾಡುತ್ತ ಅಚ್ಚರಿ ವ್ಯಕ್ತಪಡಿಸುವದನ್ನು ಕೂಡ ಕಾಣಬಹುದಾಗಿದೆ.
ಜಿಂಕೆಗಳು ಶುದ್ಧ ಸಸ್ಯಹಾರಿ ಪ್ರಾಣಿಗಳು, ಕಾಡುಗಳಲ್ಲಿ ಹಸಿರು ಹುಲ್ಲನ್ನು ಗಿಡ ಪೊದೆಗಳಲ್ಲಿ ಬೆಳೆದ ಹಸಿರು ಚಿಗುರೆಲೆಗಳನ್ನು ತಿಂದು ಇವು ಬದುಕುತ್ತವೆ. ಆದರೆ ನಮ್ಮ ಈ ನಂಬಿಕೆಯನ್ನೇ ಇಲ್ಲೊಂದು ಜಿಂಕೆ ಬುಡಮೇಲು ಮಾಡಿದ್ದು, ಕಂದು ಜಿಂಕೆಯೊಂದು ಹಾವನ್ನು ಹುಲ್ಲಿನಂತೆ ಬಾಯಲ್ಲಿ ಜಗಿಯುತ್ತಿದೆ.
@TheFigen_ ಎಂಬ ಇನ್ಸ್ಟಾಗ್ರಾಮ್ ಪೇಜ್ನಿಂದ ಈ ವೀಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ನಾನು ಜಿಂಕೆಯೊಂದು ಹಾವನ್ನು ತಿನ್ನುತ್ತಿರುವುದನ್ನು ಮೊದಲ ಬಾರಿ ನೋಡುತ್ತಿದ್ದೇನೆ. ಇವುಗಳಿಗೆ ಹುಲ್ಲು ನೀಡುತ್ತಿಲ್ಲವೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ. 21 ಸೆಕೆಂಡ್ಗಳ ಈ ವೀಡಿಯೋದಲ್ಲಿ ಹಾವನ್ನು ಜಿಂಕೆ ಬಬಲ್ಗಮ್ ತರ ಜಗಿಯುವುದನ್ನು ಕಾಣಬಹುದಾಗಿದೆ.
ವೈರಲ್ ವಿಡಿಯೋ ನೋಡಿ
ಜಿಂಕೆಗಳು ಹಾವುಗಳನ್ನು ತಿನ್ನುತ್ತವೆಯೇ?
ಜಿಂಕೆಗಳನ್ನು ಸಸ್ಯಾಹಾರಿ ಪ್ರಾಣಿಗಳೆಂದು ವರ್ಗೀಕರಿಸಲಾಗಿದೆ. ಅವು ಸಸ್ಯ ಜನ್ಯ ವಸ್ತುಗಳನ್ನು ಆಹಾರವಾಗಿ ಸೇವಿಸುತ್ತವೆ. ಆದಾಗ್ಯೂ, ಅವರ ದೇಹದಲ್ಲಿ ರಂಜಕ, ಕ್ಯಾಲ್ಸಿಯಂ ಮತ್ತು ಉಪ್ಪಿನಂತಹ ಕೆಲವು ಖನಿಜಗಳ ಕೊರತೆಯುಂಟಾದಲ್ಲಿ ಅದು ಮಾಂಸ ಸೇವನೆಯತ್ತ ತಿರುಗಬಹುದು. ನ್ಯಾಷನಲ್ ಜಿಯಾಗ್ರಫಿಕ್ ಪ್ರಕಾರ, ಈ ಅಸಾಮಾನ್ಯ ನಡವಳಿಕೆಯು ಸಾಮಾನ್ಯವಾಗಿ ಚಳಿಗಾಲದ ಋತುವಿನಲ್ಲಿ ಅಥವಾ ಸಸ್ಯಗಳ ಲಭ್ಯತೆಯು ಪರಿಸರದಲ್ಲಿ ವಿರಳವಾಗಿದ್ದಾಗ ಸಂಭವಿಸುತ್ತದೆ.
ಸಸ್ಯಹಾರಿಗಳು ಬೇಕಾದರೆ ಮಾಂಸಾಹಾರವನ್ನು ತಿನ್ನಬಹುದು. ಆದರೆ ಮಾಂಸಾಹಾರಿ ಪ್ರಾಣಿಗಳು ಸಸ್ಯಗಳನ್ನು ತಿನ್ನುವುದು ತೀರ ಕಮ್ಮಿ. ಸಸ್ಯಹಾರಿಗಳು ಮಾಂಸಾಹಾರ ಸೇವಿಸುವುದು ಕರುಳಿಗೆ ಸಂಬಂಧಪಟ್ಟ ರಸಾಯನ ಶಾಸ್ತ್ರವಾಗಿದೆ. ಸಸ್ಯಾಹಾರಿ ಪ್ರಾಣಿಯೊಂದು ಮಾಂಸಾಹಾರ ಸೇವಿಸುತ್ತಿದೆಯೆಂದರೆ ಅದು ಅಹಾರಕ್ಕಿಂತಲೂ ಬದುಕುಳಿಯುವ ತಂತ್ರ ಮಾಡುತ್ತಿದೆಯೇಂದೆ ಎಂದು ಅರ್ಥ ಎಂದು ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್ನಿಂದ ಇಂಟರ್ನೆಟ್ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್ನಲ್ಲಿ ಹೃತಿಕ್ ರೋಷನ್ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್ಗಾಗಿ ಸಖತ್ ಆಗಿ ಜಿಮ್ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ದಕ್ಷಿಣ ಕನ್ನಡ12 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ10 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಸುಳ್ಯ11 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
ಕಾರ್ಯಕ್ರಮಗಳು4 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
Uncategorized10 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್11 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ10 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಮಂಗಳೂರು10 hours agoD.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ



















