Connect with us

ರಾಜಕೀಯ

Pratap simha V/s State Bjp Leaders : ಬಿಜೆಪಿಯ ಅತಿರಥ – ಮಹಾರಥ ನಾಯಕರು ಹಾಗೂ ಸಿದ್ದರಾಮಯ್ಯ ಮಧ್ಯೆ ಒಳ ಒಪ್ಪಂದ : ಪ್ರತಾಪ್ ಸಿಂಹ

Published

on



Ad Widget

Ad Widget

Ad Widget

Ad Widget
ಕೆಲವರು ಶಾಮೀಲು ಆಗಿರಬಹುದು ಬಿಜೆಪಿ ಕಾರ್ಯಕರ್ತ ಯಾವತ್ತೂ ನಿಮ್ಮ ಜೊತೆ ಶಾಮೀಲು ಆಗಿಲ್ಲ. ಆಗುವುದೂ ಇಲ್ಲ. ಚುನಾವಣೆಯಲ್ಲಿ ಬಿಜೆಪಿಯ ಕೆಲವು ಮುಖಂಡರು ಸೋತಿರಬಹುದು. ನಮ್ಮ ಕಾರ್ಯಕರ್ತರು ಸೋತಿಲ್ಲ

Pratap simha V/s State Bjp Leaders : ಮೈಸೂರು: ಬಿಜೆಪಿಯ ಕೆಲ ಅತಿರಥ- ಮಹಾರಥ ನಾಯಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಬಾಂಬ್ ಸಿಡಿಸಿದ್ದಾರೆ. ಅಲ್ಲದೆ ಕೆಲ ಮುಖಂಡರಿಂದ ಬಿಜೆಪಿ ಅವರು ಮಣ್ಣು ತಿಂದಿದೆ ಎಂದಿದ್ದಾರೆ.

Ad Widget

Ad Widget

Ad Widget

Ad Widget

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಬಿಜೆಪಿ ಸರಕಾರ ಮೇಲಿನ‌ 40 ಪರ್ಸೆಂಟ್ ಆರೋಪದ ಬಗ್ಗೆ ಯಾಕೆ ದೂರು ಕೊಟ್ಟಿರಲಿಲ್ಲ. ಕೆಂಪಣ್ಣ ಅವರ ಬರೆದ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಊರಿಗೆಲ್ಲ ತಮಟೆ ಹೊಡೆದರು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ವಿರುದ್ದ ರೀ ಡೂ, ಅರ್ಕಾವತಿ ಡಿ ನೋಟಿಫೀಕೇಷ್, ಕೆಂಪಣ್ಣ ಆಯೋಗ ವರದಿ ಅಬ್ಬರಿಸುತ್ತಿದ್ದರು. ಆದರೆ, ನಮ್ಮವರು ಒಂದು ದಿನವೂ ಹಾವಿನ ಪೆಟ್ಟಿಗೆಯಿಂದ ಹಾವು ಹೊರಗೆ ಬಿಡಲೇ ಇಲ್ಲ. ಸಿದ್ದರಾಮಯ್ಯ ಕೂಡ ಬಿಜೆಪಿ ಮೇಲೆ ಪಿಎಸ್ಐ ಹಗರಣ, ಬಿಟ್ ಕಾಯಿನ್ ಎಂದು ಅಬ್ಬರಿಸುತ್ತಿದ್ದರು. ಈಗ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಸಿದ್ದರಾಮಯ್ಯ ಅವರೆ ನಿಮ್ಮ ಮತ್ತು ಬಿಜೆಪಿಯ ಕೆಲ ನಾಯಕರ ಜೊತೆ ಹೊಂದಾಣಿಕೆ ಇಲ್ಲವೆಂದರೆ ನೀವು ಮಾಡುತ್ತಿದ್ದ ಆರೋಪಗಳ ಬಗ್ಗೆ ತನಿಖೆಗೆ ಆದೇಶ ಮಾಡಿ ಎಂದು ಸವಾಲೆಸೆದರು.

Ad Widget

Ad Widget

Ad Widget alt="Ad Widget"/>

Ad Widget

https://nikharanews.in/2023/06/14/gold-silver-price-gold-rate-today-in-bengaluru-check-latest-gold-rates-in-your-city-on-june-14th-2023/

Ad Widget

Ad Widget <> Ad Widget

ನಿಮ್ಮ ವಿರುದ್ದ ಅವರು ಅವರ ವಿರುದ್ದ ನೀವು ಸಮಯ ಬಂದಾಗ ಮಾತ್ರ ಟೀಕೆ ಮಾಡಿಕೊಳ್ಳುತ್ತೀರಿ? ನನಗೆ ತುರಿಕೆಯಾದಾಗ ನೀನು ನನ್ನ ಬೆನ್ನು ಕೆರಿ, ನಿನಗೆ ತುರಿಕೆಯಾದಾಗ ನಾನು ಬೆನ್ನು ಕೆರೆಯುತ್ತೆನೆ ಎನ್ನುವ ರೀತಿ ನಿಮ್ಮ ಒಪ್ಪಂದವೇ ಎಂದು ಪ್ರಶ್ನಿಸಿದರು.



Ad Widget

ಸಿದ್ದರಾಮಯ್ಯ ಅವರೇ ನಿಮ್ಮ ಬಗ್ಗೆ ಬಿಜೆಪಿಯ ಕೆಲವು ಅತಿರಥ ಮಹಾರಥರು ಮಾತಾಡದೆ ಇರಬಹದು. ಕೆಲವರು ಶಾಮೀಲು ಆಗಿರಬಹುದು ಬಿಜೆಪಿ ಕಾರ್ಯಕರ್ತ ಯಾವತ್ತೂ ನಿಮ್ಮ ಜೊತೆ ಶಾಮೀಲು ಆಗಿಲ್ಲ. ಆಗುವುದೂ ಇಲ್ಲ. ಚುನಾವಣೆಯಲ್ಲಿ ಬಿಜೆಪಿಯ ಕೆಲವು ಮುಖಂಡರು ಸೋತಿರಬಹುದು. ನಮ್ಮ ಕಾರ್ಯಕರ್ತರು ಸೋತಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

Ad Widget

Ad Widget

ಯಾವ ನಾಯಕರ ವಿರುದ್ಧ ಅಸಮಾಧಾನ?

ಚುನಾವಣೆಗೆ ಮುನ್ನ ಕಾಂಗ್ರೆಸ್‌ ವಿರುದ್ಧ ರೋಷಾವೇಶದ ಭಾಷಣ ಮಾಡುತ್ತಿದ್ದ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸೈಲೆಂಟ್ ಆಗಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿಗಳನ್ನು ಜಾರಿ ಮಾಡಲು ಷರತ್ತುಗಳನ್ನು ವಿಧಿಸಿದಾಗ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್ ಮಾತ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ, ಸಿಟಿ ರವಿ, ಪ್ರತಾಪ್ ಸಿಂಹ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದರೂ ಹಲವು ಹಿರಿಯ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡದಿರುವುದು ಕೋಪಕ್ಕೆ ಕಾರಣವಾಗಿದೆ

Ad Widget
Click to comment

Leave a Reply

ಅಂತರ ರಾಜ್ಯ

Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ

Published

on



Ad Widget

Ad Widget

Ad Widget

Ad Widget

ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್‌ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್‌ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Ad Widget

Ad Widget <> Ad Widget

ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.



Ad Widget

“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.

ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.

ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.

Ad Widget
Continue Reading

ಅಂತರ ರಾಜ್ಯ

Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.



Ad Widget

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.

Ad Widget

Ad Widget

ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.

Ad Widget
Continue Reading

ರಾಜಕೀಯ

Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ

Published

on



Ad Widget

Ad Widget

Ad Widget

Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.

Ad Widget

Ad Widget <> Ad Widget

ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.



Ad Widget

ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.

ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading