Uncategorized
Political debate turns to murder : ಕಾರಿನಲ್ಲಿ ರಾಜಕೀಯ ಚರ್ಚೆ – ಮೋದಿ ಹಾಗೂ ಯೋಗಿಯನ್ನು ಹೊಗಳಿದ ರಾಜೇಶನನ್ನು ಕಾರು ಹತ್ತಿಸಿ ಕೊಂದ ಅಮ್ಜದ್
ಮಿರ್ಜಾಪುರ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adithyanath) ಅವರನ್ನು ಹೊಗಳಿದ ವ್ಯಕ್ತಿಯನ್ನು ಬಾಡಿಗೆ ಕಾರು ಚಾಲಕನೊಬ್ಬ (Cab Driver) ಕಾರು ಹತ್ತಿಸಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ತನ್ನ ಸಹಚರರೊಂದಿಗೆ ಬೈಕ್ನಲ್ಲಿ ಪರಾರಿಯಾಗಿದ್ದನು. ಸತತ 6 ಗಂಟೆಗಳ ಕಠಿಣ ಪರಿಶ್ರಮದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ರಾಜೇಶ್ ಧರ್ ದುಬೆ (50) ಮೃತ ದುರ್ದೈವಿ, ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುವ ಮಿರ್ಜಾಪುರದ ನಿವಾಸಿ ಅಮ್ಜದ್ ಕೊಲೆ ಆರೋಪಿ. ಸೋಮವಾರ ಮಿರ್ಜಾಪುರದಲ್ಲಿ ನಡೆಯಲಿದ್ದ ಸೋದರಳಿಯನ ಮದುವೆ ಕಾರ್ಯಕ್ರಮಕ್ಕೆ ರಾಜೇಶ್ ತೆರಳಿ ಭಾಗವಹಿಸಿದ್ದರು. ಅದಾದ ಬಳಿಕ ಅಲ್ಲಿಂದ ಅತಿಥಿಗಳನ್ನು ಕರೆದೊಯ್ಯಲು ಆಮ್ಜದ್ ಕಾರನ್ನು ಬುಕ್ ಮಾಡಲಾಗಿತ್ತು. ದುಬೆ ಮತ್ತು ಅನೇಕ ಅತಿಥಿಗಳು ಬೊಲೆರೊ ಹತ್ತಿದರು. ಪ್ರಯಾಣದ ವೇಳೆ ದುಬೆ ಮತ್ತು ಕ್ಯಾಬ್ ಡ್ರೈವರ್ ನಡುವೆ ರಾಜಕೀಯ ಚರ್ಚೆ ಪ್ರಾರಂಭವಾಗಿತ್ತು.
ರಾಜೇಶ್ ದುಬೆ ಅವರು ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿಯನ್ನು ಹೊಗಳುತ್ತಿದ್ದರು. ಇದು ಚಾಲಕ ಅಮ್ಜದ್ಗೆ ಇಷ್ಟವಾಗಲಿಲ್ಲ. ಇದಕ್ಕೆ ಒಪ್ಪದ ಚಾಲಕ ಆತನೊಂದಿಗೆ ಜಗಳ ಆರಂಭಿಸಿದ. ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಬಗ್ಗೆ ಕೆಟ್ಟದಾಗಿ ಮಾತನಾಡಲು ಆರಂಭಿಸಿದನು. ವಿಷಯ ವಾಗ್ವಾದಕ್ಕೆ ತಿರುಗುತ್ತಿರುವುದನ್ನು ಕಂಡ ಕಾರಿನಲ್ಲಿದ್ದ ಮಹೋಖರ್ ಗ್ರಾಮದ ಮಾಜಿ ಮುಖ್ಯಸ್ಥ ಧೀರೇಂದ್ರ ಪಾಂಡೆ ಸಮಾಧಾನಪಡಿಸಿದರು.
ಹಿಂದಿನಿಂದ ಗುದ್ದಿ ಪರಾರಿ
ಸ್ವಲ್ಪ ಸಮಯದ ನಂತರ ಕಾರಿನಲ್ಲಿದ್ದ ಪ್ರಯಾಣಿಕರು ಒಬ್ಬೊಬ್ಬರಾಗಿ ತಮ್ಮ ನಿಲ್ದಾಣ ಬರುತ್ತಿದ್ದಂತೆ ಇಳಿದಿದ್ದಾರೆ. ಕೊನೆಯಲ್ಲಿ ಚಾಲಕನ ಜೊತೆಗೆ ರಾಜೇಶ್ ದುಬೆ ಮಾತ್ರ ಕಾರಿನಲ್ಲಿದ್ದರು. ಸ್ವಲ್ಪ ದೂರ ಕ್ರಮಿಸಿದ ನಂತರ ಅಮ್ಜದ್ ಕಾರನ್ನು ನಿಲ್ಲಿಸಿ ದುಬೆಯನ್ನು ಕಾರಿನಿಂದ ಇಳಿಯುವಂತೆ ಹೇಳಿದ. ಹಾಗಾಗಿ ದುಬೆ ಕಾರಿನಿಂದ ಇಳಿದು ತನ್ನ ಮನೆಯ ಕಡೆಗೆ ನಡೆಯಲು ಪ್ರಾರಂಭಿಸಿದ್ದಾನೆ. ಆಗ ಅಮ್ಜದ್ ಹಿಂದಿನಿಂದ ಹೋಗಿ ಡಿಕ್ಕಿ ಹೊಡೆದಿದ್ದಾನೆ ಚಾಲಕ ಕಾರನ್ನು ಅವರ ಮೇಲೆ ಹತ್ತಿಸಿ, 29 ಮೀಟರ್ ವರೆಗೆ ಎಳೆದೊಯ್ದಿದ್ದಾನೆ. ಇದರಿಂದ ರಾಜೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
.
ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಆರು ಗಂಟೆಗಳ ಕಾಲ ಚಾಲಕನಿಗಾಗಿ ಶೋಧ ನಡೆಸಿದ್ದರು. ಕೇವಲ 6 ಗಂಟೆಗಳಲ್ಲಿ ಆರೋಪಿ ಸಿಕ್ಕಿಬಿದ್ದಿದ್ದ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳ ಆಧಾರದ ಮೇಲೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮಿರ್ಜಾಪುರ-ಪ್ರಯಾಗರಾಜ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಎಸ್ಪಿ, ಜಿಲ್ಲಾಧಿಕಾರಿ ಹಾಗೂ ವೃತ್ತ ನಿರೀಕ್ಷಕರು ಸ್ಥಳಕ್ಕೆ ಆಗಮಿಸಿ ಜನರನ್ನು ಸಮಾಧಾನ ಪಡಿಸಿದರು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು24 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ23 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ದಕ್ಷಿಣ ಕನ್ನಡ18 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ23 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು19 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















