ಶಿಕ್ಷಣ
NEET 2023 Result : ನೀಟ್ 2023 ಫಲಿತಾಂಶ : ಅಂಬಿಕಾ ಪದವಿಪೂರ್ವ ವಿದ್ಯಾಲಯದಿಂದ ಉತ್ಕೃಷ್ಟ ಸಾಧನೆ – ಅತ್ಯಧಿಕ ಮಂದಿ ವೈದ್ಯಕೀಯ ವಿಭಾಗಕ್ಕೆ ಆಯ್ಕೆ
ಪುತ್ತೂರು: ವೈದ್ಯಕೀಯ ವೃತ್ತಿ ಕೋರ್ಸ್ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟçಮಟ್ಟದ ನೀಟ್ -2023 ಪರೀಕ್ಷೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆಯ ಅಂಬಿಕಾ ವಸತಿಯುತ ಪದವಿಪೂರ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಉತ್ಕೃಷ್ಟ ಫಲಿತಾಂಶ ದಾಖಲಿಸಿದ್ದಾರೆ.
ಪಡೀಲಿನ ಸಂಜೀತ್ ಕುಮಾರ್ ಮತ್ತು ಕುಮಾರಿ ಬೆನಿಟ ಸಿನ್ಹ ದಂಪತಿಯ ಪುತ್ರಿ ಖುಷಿ ಗರಿಷ್ಟ 720 ಅಂಕಗಳಲ್ಲಿ 618ಅಂಕ ದಾಖಲಿಸಿದರೆ, ಕಾಸರಗೋಡಿನ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಸುಧಾ ದಂಪತಿಗಳ ಪುತ್ರ ಅನಂತರಾಮ ಎಸ್ 592, ಬೆಳ್ಳಾರೆಯ ಬಿ ಕೆ ಸೂರ್ಯನಾರಾಯಣ ಹಾಗೂ ವಿದ್ಯಾಕುಮಾರಿ ದಂಪತಿಗಳ ಪುತ್ರ ಆಶೀಶ್ ಗೋವಿಂದ 588 ಅಂಕ ಗಳಿಸಿದ್ದಾರೆ.
,ಬೆಟ್ಟಂಪಾಡಿಯ ದಿನೇಶ್ ಮರಡಿತಾಯ ಮತ್ತು ಸಂಧ್ಯಾ ದಂಪತಿಯ ಪುತ್ರಿ ಶ್ರಾವಣಿ ಪಿ 567 ಅಂಕ, ಸುಳ್ಯದ ಸೀತಾರಾಮ ಎನ್ ಜಿ ಮತ್ತು ಜಯಲಕ್ಷ್ಮೀ ಕೆ ದಂಪತಿಯ ಪುತ್ರ ಧೀರಜ್ ಬಿ ಎಸ್ 554 ಅಂಕ, ಕೆದಂಬಾಡಿಯ ರವಿನಾರಾಯಣ ಭಟ್ ಎನ್ ಹಾಗೂ ವಿದ್ಯಾಸರಸ್ವತಿ ಎನ್ ಆರ್ ದಂಪತಿಗಳ ಪುತ್ರಿ ಚೈತ್ರ ಭಟ್ ವೈ 550 ಅಂಕ ಗಳಿಸಿದ್ದಾರೆ.
ಮೊಟ್ಟೆತಡ್ಕದ ಯಶೋಧರ ಎಸ್ ಮತ್ತು ರಶ್ಮಿ ಟಿ ಎಂ ದಂಪತಿಯ ಪುತ್ರಿ ಯಶಸ್ವಿ ಶೆಟ್ಟಿ ಎಸ್ 545, ಸಕಲೇಶ್‌ಪುರದ ಸಿ ಎಸ್ ನರಹರಿ ಭಟ್ ಹಾಗೂ ಶ್ರೀಲಕ್ಮೀ ದಂಪತಿಗಳ ಪುತ್ರಿ ವೈಭವಿ ಸಿ ಎನ್ 507 ಅಂಕ ದಾಖಲಿಸಿದ್ದಾರೆ.
ಒಟ್ಟು 7 ವಿದ್ಯಾರ್ಥಿಗಳಿಗೆ 540ಕ್ಕಿಂತ ಅಧಿಕ ಅಂಕ 11 ವಿದ್ಯಾರ್ಥಿಗಳಿಗೆ 460ಕ್ಕಿಂತ ಅಧಿಕ ಅಂಕ ದಾಖಲಾಗಿದೆ. ಜತೆಗೆ 14 ಮಂದಿ ವಿದ್ಯಾರ್ಥಿಗಳು 400ಕ್ಕಿಂತಲೂ ಅಧಿಕ ಅಂಕ ಪಡೆದು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದ ಸಂತಸ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ
Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.
2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.
2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.
ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.
ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
-
ನಿಧನ ವಾರ್ತೆ6 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಸ್ಥಳೀಯ22 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಅಂತರ ರಾಜ್ಯ6 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಅಪರಾಧ5 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಮಂಗಳೂರು22 hours agoPriyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ
-
ಅಪರಾಧ5 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ5 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಅಪರಾಧ3 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















