ಬಿಗ್ ನ್ಯೂಸ್
UT Khader | ಅಟೋರಿಕ್ಷಾ ಪಲ್ಟಿ: ಯು.ಟಿ ಖಾದರ್ ಆಪ್ತ ಬಾಲ್ಯದ ಗೆಳೆಯ ಪುಣಚದ ‘ರಿಕ್ಷಾ ಜಗ್ಗಣ್ಣ’ ಇನ್ನಿಲ್ಲ – ಬಾಲ್ಯದ ತುಂಟಾಟಗಳ ಸವಿಸವಿ ನೆನಪು ಹಂಚಿಕೊಂಡ ಸ್ಪೀಕರ್
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಜಗನ್ನಾಥ ಪೈಸಾರಿ(57) ಮೃತಪಟ್ಟ ದುರ್ದೈವಿ ಚಾಲಕ.
ಮೃತ ಜಗನ್ನಾಥ ಪೂಜಾರಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ (UT Khader) ಬಾಲ್ಯದ ಆಪ್ತ ಗೆಳೆಯ.
ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಅಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ,ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.
ಆಪ್ತ ಗೆಳೆಯನ ಅಗಳಿಕೆಯಿಂದ ನೊಂದ ಖಾದರ್ ತನ್ನ ಬಾಲ್ಯದ ನೆನಪಿನ ಬಗ್ಗೆ ಹೀಗೆಂದು ಬರೆದುಕೊಂಡಿದ್ದಾರೆ.
“ನನ್ನ ಶಾಲಾ ಜೀವನದ ರಜಾದಿನಗಳಲ್ಲಿ ವಿಟ್ಲ ಪುಣಚದ ಅಜ್ಜನ ಮನೆಗೆ ಹೋದಾಗ ಅಜ್ಜನ ತೋಟಕ್ಕೆ ಜತೆಯಾಗಿ ತೆರಳುವುದು,ಮಾವಿನ ಮರಕ್ಕೆ ಕಲ್ಲು ಹೊಡೆದು ಮಾವು ಕೀಳುವುದು,ಜತೆಯಾಗಿ ಗೋವು ಮೇಯಿಸಲಿಕ್ಕೆ ಹೋಗುವುದು,ಪುಣಚ ಶಾಲೆಯ ಮೈದಾನದ ಸುಡು ಬಿಸಿಲಿನಲ್ಲಿ ಕ್ರಿಕೆಟ್ ಆಡುವುದು,ತೋಟದ ಕೊಳದಲ್ಲಿ ಈಜಾಡುವುದು ಹೀಗೆ ನನ್ನ ರಜಾದಿನದ ಪ್ರತೀ ಘಳಿಗೆಯಲ್ಲೂ ನನ್ನ ಸಹಪಾಠಿಯಾಗಿದ್ದ ಜಗನ್ನಾಥ ರವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವಾಗಿದೆ.
ಜಗನ್ನಾಥ ಪೂಜಾರಿರವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ,ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ ‘ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು. ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು. ಪತ್ನಿ, ಪುತ್ರಿ, ಪುತ್ರ ಇದ್ದಾರೆ.
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಬಿಗ್ ನ್ಯೂಸ್
KSRTC-ಮೈಸೂರು ದಸರಾ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್: ₹950ಕ್ಕೆ ಬೆಂಗಳೂರು-ಮೈಸೂರು ಒನ್ ಡೇ ಟೂರ್ ಪ್ಯಾಕೇಜ್..!
ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್ ಪ್ಯಾಕೇಜ್ ಪರಿಚಯಿಸಿದೆ.
ಬೆಂಗಳೂರು: ಮೈಸೂರು ದಸರಾ ಸೇರಿದಂತೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನಿಂದ ಮೈಸೂರು ಹಾಗೂ ಐತಿಹಾಸಿಕ ಶ್ರೀರಂಗಪಟ್ಟಣದ ಪ್ರಮುಖ ಸ್ಥಳಗಳನ್ನು ಒಂದೇ ದಿನದಲ್ಲಿ ವೀಕ್ಷಿಸಿ ಮರಳಲು ವಿಶೇಷ ಟೂರ್ ಪ್ಯಾಕೇಜ್ ಪರಿಚಯಿಸಿದೆ.
ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ‘ಬೆಂಗಳೂರು–ನಿಮಿಷಾಂಬ–ಶ್ರೀರಂಗಪಟ್ಟಣ–ಮೈಸೂರು’ ವಿಶೇಷ ಪ್ರವಾಸ ಸೇವೆ ಆರಂಭಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ಜನಪ್ರಿಯ ‘ಅಶ್ವಮೇಧ ಕ್ಲಾಸಿಕ್’ ಬಸ್‌ಗಳನ್ನು ನಿಯೋಜಿಸಲಾಗಿದೆ.
ಈ ಪ್ರವಾಸ ಪ್ಯಾಕೇಜ್ ಅಕ್ಟೋಬರ್ 13ರಿಂದ 28ರವರೆಗೆ ಕಾರ್ಯನಿರ್ವಹಿಸಲಿದ್ದು, ಅಕ್ಟೋಬರ್ 20 ಮತ್ತು 21ರಂದು ಸೇವೆ ಇರುವುದಿಲ್ಲ.
ಪ್ರವಾಸದ ವೇಳಾಪಟ್ಟಿ ಹೀಗಿದೆ
ಪ್ರವಾಸವು ಬೆಳಗ್ಗೆ ಬೆಂಗಳೂರಿನಿಂದ ಆರಂಭವಾಗಿ, ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ರಾತ್ರಿ ಮತ್ತೆ ಬೆಂಗಳೂರಿಗೆ ಮರಳಲಿದೆ.
ಬೆಳಗ್ಗೆ 6ರಿಂದ 8: ಬೆಂಗಳೂರು-ನಿಮಿಷಾಂಬ ಪ್ರಯಾಣ
ಬೆಳಗ್ಗೆ 8ರಿಂದ 9: ನಿಮಿಷಾಂಬ ದೇವಸ್ಥಾನ ದರ್ಶನ ಮತ್ತು ಉಪಾಹಾರ
ಬೆಳಗ್ಗೆ 9ರಿಂದ 11: ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ, ದರಿಯಾ ದೌಲತ್, ಗುಂಬಜ್ ಹಾಗೂ ಸಂಗಮ ವೀಕ್ಷಣೆ
ಬೆಳಗ್ಗೆ 11ರಿಂದ 11.30: ಶ್ರೀರಂಗಪಟ್ಟಣದಿಂದ ಮೈಸೂರಿಗೆ ಪ್ರಯಾಣ
ಬೆಳಗ್ಗೆ 11.30ರಿಂದ ಮಧ್ಯಾಹ್ನ 12: ಸೇಂಟ್ ಫಿಲೋಮಿನಾ ಚರ್ಚ್ ಭೇಟಿ
ಮಧ್ಯಾಹ್ನ 12ರಿಂದ 1: ಊಟದ ವಿರಾಮ
ಮಧ್ಯಾಹ್ನ 1ರಿಂದ 2: ಕಾವೇರಿ ಆರ್ಟ್ ಗ್ಯಾಲರಿ ಮತ್ತು ಕ್ರಾಫ್ಟ್ ಎಂಪೋರಿಯಂ ವೀಕ್ಷಣೆ
ಮಧ್ಯಾಹ್ನ 2ರಿಂದ ಸಂಜೆ 4: ಮೈಸೂರು ಅರಮನೆ ವೀಕ್ಷಣೆ
ಸಂಜೆ 4ರಿಂದ 5.30: ಮೈಸೂರು ಮೃಗಾಲಯ ಭೇಟಿ
ಸಂಜೆ 5.30ರಿಂದ ರಾತ್ರಿ 8: ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ
ರಾತ್ರಿ 8ರಿಂದ 10: ಎಕ್ಸ್‌ಪ್ರೆಸ್‌ವೇ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ
ಟೂರ್ ಪ್ಯಾಕೇಜ್ ದರ ಎಷ್ಟು?
ಕೆಎಸ್‌ಆರ್‌ಟಿಸಿ ನಿಗದಿಪಡಿಸಿರುವ ಪ್ರಯಾಣ ದರಗಳು ಹೀಗಿವೆ:
ವಯಸ್ಕರಿಗೆ: ₹950
6ರಿಂದ 12 ವರ್ಷದ ಮಕ್ಕಳಿಗೆ: ₹750
ಗಮನಿಸಿ: ಈ ಪ್ಯಾಕೇಜ್‌ನ ಪ್ರಯಾಣ ದರದಲ್ಲಿ ಊಟ ಮತ್ತು ಪ್ರವಾಸಿ ತಾಣಗಳ ಪ್ರವೇಶ ಟಿಕೆಟ್‌ಗಳು ಸೇರಿರುವುದಿಲ್ಲ. ಅವುಗಳ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕು.
ಟಿಕೆಟ್ ಬುಕ್ಕಿಂಗ್ ಮಾಡುವುದು ಹೇಗೆ?
ಪ್ರವಾಸಿಗರು ಕೆಎಸ್‌ಆರ್‌ಟಿಸಿಯ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
www.ksrtc.in
www.ksrtc.karnataka.gov.in
ಹೆಚ್ಚಿನ ಮಾಹಿತಿ ಹಾಗೂ ಬುಕ್ಕಿಂಗ್ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ಸಹಾಯವಾಣಿ ಸಂಖ್ಯೆಗಳು: 080-26252625, 7760990100, 7760990560, 7760990287.
ಒಂದೇ ದಿನದಲ್ಲಿ ನಿಮಿಷಾಂಬ ದೇವಸ್ಥಾನ, ಶ್ರೀರಂಗಪಟ್ಟಣದ ಐತಿಹಾಸಿಕ ತಾಣಗಳು, ಮೈಸೂರು ಅರಮನೆ, ಮೃಗಾಲಯ ಹಾಗೂ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲು ಬಯಸುವವರಿಗೆ ಈ ಪ್ಯಾಕೇಜ್ ಅನುಕೂಲಕರ ಆಯ್ಕೆಯಾಗಿದೆ.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
-
ಮಂಗಳೂರು21 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್22 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
Uncategorized17 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಮಂಗಳೂರು22 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ನಿಧನ ವಾರ್ತೆ4 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಕ್ರೀಡೆ21 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಮಂಗಳೂರು21 hours agoMangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
-
ಸ್ಥಳೀಯ3 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!


















