ದಕ್ಷಿಣ ಕನ್ನಡ
CET 2023, ಸಿಇಟಿ 2023 : ಅಂಬಿಕಾ ಪದವಿಪೂರ್ವ ವಿದ್ಯಾಲಯಕ್ಕೆ 73, 114, 159ನೇ ರಾಂಕ್ ದಾಖಲು – ಇನ್ನೂರರೊಳಗೆ 3, ಐನೂರರ ಒಳಗೆ 11, ಸಾವಿರದೊಳಗೆ 19 ರಾಂಕ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ (Ambika Pri Univercity College) ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ 2023 ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮೆರೆದಿದ್ದಾರೆ.
ಕೊಕ್ಕಡದ ಕೃಷ್ಣಮೂರ್ತಿ ಕೆ ಮತ್ತು ಅನುಪಮಾ ಕೆ ದಂಪತಿಯ ಪುತ್ರ ಶ್ರೀಶ ಶರ್ಮ ಇಂಜಿನಿಯರಿಂಗ್ ವಿಭಾಗದಲ್ಲಿ 114ನೇ ರಾಂಕ್ ಗಳಿಸಿದರೆ, ಬಿ ಫಾರ್ಮಾ ಹಾಗೂ ಡಿ ಫಾರ್ಮಾ ವಿಭಾಗದಲ್ಲಿ 453ನೇ ರಾಂಕ್ ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ವಸಂತ ಕೃಷ್ಣಮೂರ್ತಿ ಹೆಗ್ಡೆ ಹಾಗೂ ರೇಖಾ ದಂಪತಿಗಳ ಪುತ್ರ ತೇಜಸ್ವಿ ವಸಂತ ಹೆಗ್ಡೆ ಇಂಜಿನಿಯರಿಂಗ್ ವಿಭಾಗದಲ್ಲಿ 156ನೇ ರಾಂಕ್ ಗಳಿಸಿದರೆ, ಬಿ ಫಾರ್ಮಾ ಹಾಗೂ ಡಿ ಫಾರ್ಮಾ ವಿಭಾಗದಲ್ಲಿ 607ನೇ ರಾಂಕ್ ಗಳಿಸಿದ್ದಾರೆ.
ಬೆಳ್ಳಾರೆಯ ಬಿ ಕೆ ಸೂರ್ಯನಾರಾಯಣ ಹಾಗೂ ವಿದ್ಯಾಕುಮಾರಿ ದಂಪತಿಗಳ ಪುತ ಆಶೀಶ್ ಗೋವಿಂದ ಅಗ್ರಿಕಲ್ಚರ್ ಬಿಎಸ್ಸಿ ವಿಭಾಗದಲ್ಲಿ 73ನೇ ರಾಂಕ್, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 250ನೇ ರಾಂಕ್, ವೆಟರ್ನರಿ ವಿಭಾಗದಲ್ಲಿ 258ನೇ ರಾಂಕ್, ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ 258ನೇ ರಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ 331ನೇ ರಾಂಕ್ ಗಳಿಸಿದರೆ, ಬಿ ಫಾರ್ಮಾ ವಿಭಾಗದಲ್ಲಿ 376ನೇ ರಾಂಕ್ ಪಡೆದಿದ್ದಾರೆ.

ಕಡಬದ ದಿವಾಕರ ಕೆ ಹಾಗೂ ಭುವನೇಶ್ವರಿ ದಂಪತಿಗಳ ಪುತ್ರಿ ವೀಕ್ಷಿತಾ ಕೆ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 1143 ರಾಂಕ್ ಗಳಿಸಿದರೆ, ಇಂಜಿನಿಯರಿಂಗ್ ವಿಭಾಗದಲ್ಲಿ 1729ನೇ ರಾಂಕ್, ನೆಟ್ಲಮುಡ್ನೂರಿನ ಕೆ ಗೋಪಾಲ ಗೌಡ ಮತ್ತು ಶೀಲಾವತಿ ಎನ್ ದಂಪತಿಯ ಪುತ್ರ ಸುಜಿತ್ ಕೆ ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 1824 ರಾಂಕ್ ಪಡೆದಿದ್ದಾರೆ. ಕಾಸರಗೋಡಿನ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಸುಧಾ ದಂಪತಿಗಳ ಪುತ್ರ ಅನಂತರಾಮ ಎಸ್ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 806, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 1470, ಇಂಜಿನಿಯರಿಂಗ್ ವಿಭಾಗದಲ್ಲಿ 1871, ವೆಟರ್ನರಿ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ 1886 ಬಿ ಫಾರ್ಮ ವಿಭಾಗದಲ್ಲಿ 2390ನೇ ರಾಂಕ್ ಗಳಿಸಿದ್ದಾರೆ.

ಮೊಟ್ಟೆತಡ್ಕದ ಯಶೋಧರ ಎಸ್ ಮತ್ತು ರಶ್ಮಿ ಟಿ ಎಂ ದಂಪತಿಯ ಪುತ್ರಿ ಯಶಸ್ವಿ ಶೆಟ್ಟಿ ಎಸ್ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 523, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ1297, ಇಂಜಿನಿಯರಿಂಗ್ ವಿಭಾಗದಲ್ಲಿ 1887, ವೆಟರ್ನರಿ ವಿಭಾಗದಲ್ಲಿ 1976 ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ 1976 ರಾಂಕ್ಗೆ ಭಾಜನರಾದರೆ, ಕಡಬದ ಜತ್ತಪ್ಪ ಗೌಡ ಮತ್ತು ಅನಿತಾ ದಂಪತಿಯ ಪುತ್ರಿ ವಿಧಾತ್ರಿ ಬಿ ಜೆ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 851, ವೆಟರ್ನರಿ ವಿಭಾಗದಲ್ಲಿ 1078, ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ 1078, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 1178, ಬಿ ಫಾರ್ಮ ವಿಭಾಗದಲ್ಲಿ 1373 ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ 2274೪ನೇ ರಾಂಕ್ ಪಡೆದಿದ್ದಾರೆ.
ಬೆಂಗಳೂರಿನ ಕುಶಿಕರ ಬಿ ಎಸ್ ಹಾಗೂ ಉದಯಕಲಾ ಎನ್ ಎಲ್ ದಂಪತಿಗಳ ಪುತ್ರ ಪ್ರಜ್ವಲ್ ಬಿ ಕೆ ಇಂಜಿನಿಯರಿಂಗ್ ವಿಭಾಗದಲ್ಲಿ 2834 ನೇ ರಾಂಕ್, ಬಲ್ನಾಡಿನ ಮಹಾಬಲೇಶ್ವರ ಭಟ್ ವೈ ಮತ್ತು ಗೀತಾ ಕುಮಾರಿ ದಂಪತಿಯ ಪುತ್ರಿ ದಿಶಾಕ ವೈ ಭಟ್ ಇಂಜಿನಿಯರಿಂಗ್ ವಿಭಾಗದಲ್ಲಿ 2856ನೇ ರಾಂಕ್ ಗಳಿಸಿದರೆ, ಬೆಟ್ಟಂಪಾಡಿಯ ದಿನೇಶ್ ಮರಡಿತಾಯ ಮತ್ತು ಸಂಧ್ಯಾ ದಂಪತಿಯ ಪುತ್ರಿ ಶ್ರಾವಣಿ ಪಿ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 998, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 1568, ವೆಟರ್ನರಿ ವಿಭಾಗದಲ್ಲಿ 2784 ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ 2784ನೇ ರಾಂಕ್ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ 3016ನೇ ರಾಂಕ್ ಪಡೆದಿದ್ದಾರೆ.
ಪಡೀಲಿನ ವಸಂತ ನಾಯ್ಕ್ ಎಂ ಮತ್ತು ಹರಿಣಾಕ್ಷಿ ಬಿ ದಂಪತಿಯ ಪುತ್ರಿ ಗ್ರೀಷ್ಮ ವಿ ನಾಯ್ಕ್ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 1270, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 2070, ವೆಟರ್ನರಿ ವಿಭಾಗದಲ್ಲಿ 2379, ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ 2380ನೇ ರಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ 3196ನೇ ರಾಂಕ್ ಗಳಿಸಿರುತ್ತಾರೆ.

ಕೆದಂಬಾಡಿಯ ರವಿನಾರಾಯಣ ಭಟ್ ಎನ್ ಹಾಗೂ ವಿದ್ಯಾಸರಸ್ವತಿ ಎನ್ ಆರ್ ದಂಪತಿಗಳ ಪುತ್ರಿ ಚೈತ್ರ ಭಟ್ ವೈ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 1565, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 2357ನೇ ರಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ 3197 ದಾಖಲಿಸಿದರೆ ಕಾಸರಗೋಡಿನ ಕೇಶವ ಶರ್ಮ ಹಾಗೂ ಶ್ರೀವತ್ಸಲ ದಂಪತಿಗಳ ಪುತ್ರಿ ಪ್ರಣಮ್ಯ ಬಿ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 1682, ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 2151ನೇ ಇಂಜಿನಿಯರಿಂಗ್ ವಿಭಾಗದಲ್ಲಿ 3785ನೇ ರಾಂಕ್ ಗಳಿಸಿದ್ದಾರೆ.
ಇನ್ನು, ಸುಳ್ಯದ ಸೀತಾರಾಮ ಎನ್ ಜಿ ಮತ್ತು ಜಯಲಕ್ಷ್ಮೀ ದಂಪತಿಯ ಪುತ್ರ ಧೀರಜ್ ಬಿ ಎಸ್ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವಿಭಾಗದಲ್ಲಿ 1986, ಬಿಎಸ್ಸಿ ನರ್ಸಿಂಗ್ ವಿಭಾಗದಲ್ಲಿ 1343ನೇ ರಾಂಕ್, ಇಂಜಿನಿಯರಿಂಗ್ ವಿಭಾಗದಲ್ಲಿ 3946ನೇ ರಾಂಕ್ ದಾಖಲಿಸಿದರೆ ಕಬಕದ ಶೈಲೇಶ್ ಎಂ ಎಲ್ ಮತ್ತು ಸರಸ್ವತಿ ರಾವ್ ಪಿ ದಂಪತಿಯ ಪುತ್ರಿ ಶಮಿತಾ ಎಂ ಎಸ್ ಅಗ್ರಿ ಬಿಎಸ್ಸಿ ವಿಭಾಗದಲ್ಲಿ 2655ನೇ ರಾಂಕ್ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ 3766ನೇ ರಾಂಕ್ ಗಳಿಸಿರುತ್ತಾರೆ. ಪುತ್ತೂರಿನ ಮಲ್ಲಿಕಾರ್ಜುನ ಹಾಗೂ ಯಶೋದಾ ದಂಪತಿ ಪುತ್ರ ಪುನೀತ್ ಎಂ.ಜಿಅಗ್ರಿ ಬಿಎಸ್ಸಿ ವಿಭಾಗದಲ್ಲಿ 2336ನೇ ರಾಂಕ್ ದಾಖಲಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದ ಸಂತಸ ವ್ಯಕ್ತಪಡಿಸಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
ನಿಧನ ವಾರ್ತೆ23 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ17 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ22 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು20 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ22 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized15 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ17 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್17 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















