ವಿಟ್ಲ
ವಿಟ್ಲದ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಸತಿ ನಿಲಯ ಸಮಸ್ಯೆಗಳ ಆಗರ – ದುರ್ನಾತ ಬೀರುವ ಅನ್ನವೇ ಇಲ್ಲಿ ಆಹಾರ
ವಿಟ್ಲ: ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಗ್ರಾಮೀಣ ಭಾಗದಲ್ಲಿ ವಸತಿ ನಿಲಯಗಳನ್ನು ನಿರ್ಮಿಸಿದೆ.ಆದರೇ ಅದರ ನಿರ್ವಹಣೆ ಮಾಡುವ ಅಧಿಕಾರಿಗಳ ಉದಾಸೀನ ಪ್ರವೃತ್ತಿ, ದಿವ್ಯ ನಿರ್ಲಕ್ಷ್ಯದಿಂದಾಗಿ ಅದು ಸಮಸ್ಯೆಯ ಆಗರವಾಗಿ ಪರಿವರ್ತಿತವಾಗಿದೆ. ವಿದ್ಯಾರ್ಥಿಗಳನ್ನು ಕೈ ಬೀಸಿ ಕೈಬಿಸಿ ಕರೆಯ ಬೇಕಾದ ಈ ವಿದ್ಯಾರ್ಥಿ ನಿಲಯಗಳು ಅವ್ಯವಸ್ಥೆಯಿಂದ ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳ ಪಾಲಿಗೆ ನರಕ ಸದೃಶ್ಯವಾಗಿದೆ
ಗ್ರಾಮೀಣ ಬಾಗದ ಅದರಲ್ಳೂ ವಿಶೇಷವಾಗಿ ಬಡ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹಲವು ವರ್ಷಗಳ ಹಿಂದೆ ವಿಟ್ಲ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಆರಂಭಿಸಲಾಯಿತು. ಸರ್ಕಾರಿ ಮಾದರಿ ಪ್ರೌಢ ಶಾಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅನುದಾನಿತ ವಿಠಲ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು ಸೇರಿ ಸ್ಥಳೀಯ ಸಂಸ್ಥೆಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಭಾಗಗಳಿಂದ ಬಂದಿರುವ ಮಃಇಳಾ ಶಿಕ್ಷಾಣಾರ್ಥಿಗಳು ಪುತ್ತೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ವಸತಿ ನಿಲಯದ ಫಲಾನುಭವಿಗಳು.
ಈ ಸಾಲಿನ ಶೈಕ್ಷಣಿಕ ವರ್ಷ ಆರಂಭದ ಅಮಯ ವಸತಿ ನಿಲಯಕ್ಕೆ ಆಗಮಿಸಿದ ಹೊರ ಜಿಲ್ಲೆಗಳಿಂದ ಆಗಮಿಸಿದ ನೂತನ ವಿದ್ಯಾರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸಿಲ್ಲ ಎಂಬ ಕಾರಣ ನೀಡಿ ವಅಧಿಕಾರಿಗಳು ಅವರನ್ನು ರಸ್ತೆಯಲ್ಲಿ ಕೂರುವಂತೆ ಮಾಡಿದ್ದರು. ಬಳಿಕ ಆವ್ಯವಸ್ಥೆಯನ್ನು ಸರಿಪಸುವ ಕಾರ್ಯವಾಯಿತು. ಸದ್ಯ 40ವಿದ್ಯಾರ್ಥಿಗಳು ಈ ವಸತಿ ನಿಲಯದ ಪ್ರಯೋಜನ ಪಡೆಯುತ್ತಿದ್ದಾರೆ. ಇಲ್ಲಿ ಮಕ್ಕಳಿಗೆ ಒದಗಿಸುವ ದೇವರಿಗೆ ಪ್ರೀತಿ. ಹಸಿದ ವಿದ್ಯಾರ್ಥಿನಿಯರ ಹೊಟ್ಟೆಯನ್ನು ತಂಪಾಗಿಸಬೇಕಾದ ಅನ್ನ ಗಬ್ಬು ನಾರುತ್ತಿದೆ ಎನ್ನುವುದು ಅಲ್ಲಿನ ಮಕ್ಕಳ ಅಳಲು.
ವಸತಿ ನಿಲಯದ ಗೋದಾಮಿನಲ್ಲಿರುವ ಅಕ್ಕಿ ದುರ್ನಾತ ಬೀರುತ್ತಿಲ್ಲ. ಆದರೇ ಅಕ್ಕಿಯನ್ನು ಬೇಯಿಸಿದ ಬಳಿಕ ಬಾಯಿಗೆ ಹಾಕಲಾಗದ ಪರಿಸ್ಥಿತಿಯಿದೆ. ಅಕ್ಕಿ ಹಳೆಯದಾಗಿ ನೀರು ತಾಗುವುದರಿಂದ ಉಂಟಾಗುವ ಪಂಗಸ್ ಅಕ್ಕಿಯ ತರಹ ನಾರುತ್ತಿದೆ. ಮಳೆಗೆ ಕೊಠಡಿಯಲ್ಲಿ ನೀರಿನ ತೇವ ಬರುತ್ತಿರುವುದರಿಂದ ಅಕ್ಕಿ ಹಾಳಾಗುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇದೇ ಅಕ್ಕಿಯ ಊಟವನ್ನು ನಿತ್ಯ ವಿದ್ಯಾರ್ಥಿಗಳು ತಿಂದಲ್ಲಿ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳಿದೆ. ಆಧರೇ ಈ ಬಗ್ಗೆ ಗಮನಹರಿಸಿ ಪರಿಶೀಲನೆ ಮಾಡಬೇಕಾದ ಅಧಿಕಾರಿಗಳು ವಸತಿನಿಲಯಕ್ಕೆ ತಮಗೆ ಬೇಕಾದಾಗ ಬರುತ್ತಿರುವುದ್ದರಿಂದ ವಿದ್ಯಾರ್ಥಿನಿಯರಿಗೆ ದುರ್ನಾತ ಬೀರುವ ಅಕ್ಕಿಯೇ ಆಹಾರವಾಗಿದೆ .
ಮಂಗಳೂರಿಗೆ ವರ್ಗಾಯಿಸುವ ಸಂಚು
ವಿಟ್ಲದಲ್ಲಿರುವ ಹಿಂದುಳಿದ ವರ್ಗಗಳ ಬಾಲಕಿಯರ ವಸತಿನಿಲಯವನ್ನು ಮಂಗಳೂರಿಗೆ ವರ್ಗಾಯಿಸುವ ಬಗ್ಗೆ ಹಿಂದಿನ ಸರ್ಕಾರ ಉತ್ಸುಕವಾಗಿತ್ತು. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಅಗತ್ಯ ವ್ಯವಸ್ಥೆಯನ್ನು ನೀಡದೆ, ದೂರು ನೀಡುವ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆಯಾಗುವಂತೆ ಪ್ರಯತ್ನಿಸಿತ್ತು. ವಿದ್ಯಾರ್ಥಿಗಳಿಲ್ಲ ಎಂಬ ಕಾರಣ ನೀಡಿ ಮಂಗಳೂರಿಗೆ ವರ್ಗಾಯಿಸುವ ಹುನ್ನಾರ ಇದರ ಹಿಂದಿತ್ತು. .
ವಿದ್ಯಾರ್ಥಿಗಳ ಪ್ರವೇಶಾತಿಗೆ ತಡೆ
ಹಿಂದುಳಿದ ವರ್ಗದ ಇಲಾಖೆಯಿಂದ ನಡೆಸಲ್ಪಡುವ ವಸತಿ ನಿಲಯಗಳಿಗೆ ರಾಜ್ಯಾದ್ಯಂತ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕೆಂಬ ನಿಯವನ್ನು ಸರ್ಕಾರ ಮಾಡಿದೆ. ಹಾಗೆಂದು ಶಾಲೆ ಕಾಲೇಜುಗಳಿಗೆ ವಿದ್ಯಾರ್ಥಿಗಳು ಮೇ ಕೊನೆಯಿಂದ ಸೇರ್ಪಡೆಯಾಗಿ ಜೂ.1ಕ್ಕೆ ಪ್ರಾರಂಭವಾದರೂ, ಇಲಾಖೆ ಮಾತ್ರ ವಿದ್ಯಾರ್ಥಿಗಳಿಗೆ ವಸತಿ ನಿಲಯದ ಅರ್ಜಿಯನ್ನು ಜೂ.15ರ ಬಳಿಕವೇ ಬಿಡುಗಡೆ ಮಾಡುವುದು. ಆ ಬಳಿಕವೇ ಅರ್ಜಿ ಪರಿಶೀಲನೆ ನಡೆಸಿ ವಸತಿನಿಲಯಕ್ಕೆ ನೂತನ ವಿದ್ಯಾರ್ಥಿಗಳ ಸೇರ್ಪಡೆ ಮಾಡಲಾಗುವುದು ಎಂಬ ತಗಾದೆ ತೆಗೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳೂ ವಸತಿ ನಿಲಯದಿಂದ ದೂರ ಉಳಿಯುವಂತಾಗಿದೆ.
ಎಜುಕೇಶನ್ ಸೊಸೈಟಿಯಿಂದ ದೂರು!
ವಸತಿ ನಿಲಯದಲ್ಲಿನ ಸಿಬ್ಬಂದಿಯೊಬ್ಬರ ಅನುಚಿತ ವರ್ತನೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಮಹಿಳಾ ವಿದ್ಯಾರ್ಥಿ ನಿಲಯವನ್ನು ಉಳಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವಿಠಲ ಎಜುಕೇಶನ್ ಸೊಸೈಟಿ ವತಿಯಿಂದ ದೂರು ನೀಡುವ ಕಾರ್ಯ ಮಾಡಲಾಗಿತ್ತು.
ಕಾರ್ಯಕ್ರಮಗಳು
Vitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ.
ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಜೆಯಲ್ಲಿ ನ.25, ಬುಧವಾರ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಿತು.
ಮೈತ್ರೇಯಿ ಆಯುರ್ವೇದ ಗುರುಕುಲಂನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಸುಧಾರಾವ್ ಮಾತನಾಡಿ “1994ರಲ್ಲಿ ಸ್ಥಾಪನೆಯಾದ ಮೈತ್ರೇಯಿ ಗುರುಕುಲಂನ ಸುದೀರ್ಘ ಸೇವಾ ಪರಂಪರೆಯಿಂದ ಪ್ರೇರಣೆ ಪಡೆದು, ಅಜೇಯ ಟ್ರಸ್ಟ್‌ನ ಮಹತ್ವಾಕಾಂಕ್ಷೆಯ ಯೋಜನೆಯಾಗಿ ಮೈತ್ರೇಯಿ ಆಯುರ್ವೇದ ಗುರುಕುಲಂರೂಪುಗೊಳ್ಳುತ್ತಿದೆ. ಹೆಣ್ಣುಮಕ್ಕಳಿಗೆ ಮೌಲ್ಯಾಧಾರಿತ ವಸತಿ ಸಹಿತ ಶಿಕ್ಷಣವನ್ನು ನೀಡುತ್ತಾ ಬಂದಿರುವ ಸಂಸ್ಥೆಯು ಇದೀಗ ಆಯುರ್ವೇದ ಶಿಕ್ಷಣ ಕ್ಷೇತ್ರಕ್ಕೂತನ್ನ ಸೇವೆಯನ್ನು ವಿಸ್ತರಿಸುತ್ತಿದೆ.

ಮೈತ್ರೇಯಿ ಆಯುರ್ವೇದ ಗುರುಕುಲಂ ಮಹಿಳೆಯರಿಗಾಗಿ ಮೀಸಲಾದ ವಸತಿ ಸಹಿತ ಶಿಕ್ಷಣ ಸಂಸ್ಥೆಯಾಗಿದ್ದು, ಒಟ್ಟು 7½ ವರ್ಷಗಳ ಸಮಗ್ರ ಶಿಕ್ಷಣ ಕಾರ್ಯಕ್ರಮವನ್ನು ರೂಪಿಸಿದೆ. ಇದರಲ್ಲಿ 2 ವರ್ಷಗಳ ಪೂರ್ವ ಆಯುರ್ವೇದ ಶಿಕ್ಷಣ, 4½ ವರ್ಷಗಳ BAMS ಪದವಿ ಶಿಕ್ಷಣ ಹಾಗೂ 1 ವರ್ಷದ ಕಡ್ಡಾಯ ಇಂಟರ್ನ್‌ಶಿಪ್ ಒಳಗೊಂಡಿರುತ್ತದೆ. ಮೈತ್ರೇಯಿ ಆಯುರ್ವೇದ ಗುರುಕುಲಂ ಕೇಂದ್ರ ಸಂಸ್ಕೃತ ವಿಶ್ವವಿದ್ಯಾಲಯ, ನವದೆಹಲಿ ಇದರ ಸಂಯೋಜನೆ ಹೊಂದಿದ್ದು, ಭಾರತ ಸರ್ಕಾರದ ಆಯುಷ್ ಸಚಿವಾಲಯ ಹಾಗೂ ನವದೆಹಲಿಯ ಭಾರತೀಯ ವೈದ್ಯಕೀಯ ಪದ್ಧತಿಗಳ ರಾಷ್ಟ್ರೀಯ ಆಯೋಗದ (NCISM) ಮಾನ್ಯತೆ ಮತ್ತು ಅನ್ವಯಿಸುವ ನಿಯಂತ್ರಣಾತ್ಮಕ ಅನುಮೋದನೆಗಳಿಗೆ ಒಳಪಟ್ಟಿರುತ್ತದೆ. ಈ ಶಿಕ್ಷಣ ಕಾರ್ಯಕ್ರಮವು ಸಂಸ್ಕೃತ, ಯೋಗ, ಭಾರತೀಯ ಜ್ಞಾನಪರಂಪರೆ, ಶಿಸ್ತು ಮತ್ತು ನೈತಿಕ ಮೌಲ್ಯಗಳೊಂದಿಗೆ ಆಯುರ್ವೇದ ಶಿಕ್ಷಣವನ್ನು ಸಂಯೋಜಿಸುವ ಉದ್ದೇಶವನ್ನು ಹೊಂದಿದೆ. ಆಯುರ್ವೇದದ ಶಾಸ್ತ್ರೀಯ ಗ್ರಂಥಗಳನ್ನು ಸಂಸ್ಕೃತ ಭಾಷೆಯಲ್ಲಿ ಅಧ್ಯಯನ ಮಾಡುವುದಕ್ಕೆ ವಿಶೇಷ ಒತ್ತು ನೀಡುವುದರ ಜೊತೆಗೆ, ಜ್ಞಾನವಂತ, ಕೌಶಲ್ಯ ಪೂರ್ಣ ಹಾಗೂ ಕರುಣಾಮಯಿ ಆಯುರ್ವೇದ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಆಶಯವಾಗಿದೆ. ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್‌ನ ಪ್ರಮುಖ ಉದ್ದೇಶವಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ಮಹಿಳೆಯರಿಗೆ ಗುಣಮಟ್ಟದ ವಸತಿ ಸಹಿತ ಶಿಕ್ಷಣವನ್ನು ಒದಗಿಸುವುದರ ಜೊತೆಗೆ, ಜನಸಾಮಾನ್ಯರಿಗೆ ಗುಣಮಟ್ಟದ ಆಯುರ್ವೇದ ಆರೋಗ್ಯ ಸೇವೆಗಳನ್ನು ನೀಡುವ ಆಶಯವನ್ನು ಸಂಸ್ಥೆ ಹೊಂದಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ರಾಜೇಶ್ ನಾಯಕ್ ವಹಿಸಲಿದ್ದಾರೆ.ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸೆಂಚುರಿ ಗ್ರೂಪ್ ಆಫ್ ಕಂಪನೀಸ್‌ನ ಅಧ್ಯಕ್ಷರು ಡಾ. ಪಿ. ದಯಾನಂದ ಪೈ, ಮೈಸೂರು ಮಂಗಳೂರು ಗಣೇಶ್ ಬೀಡಿ ವರ್ಕ್ಸ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜಗನ್ನಾಥ ಶೆಣೈ, ಬರೋಡಾದ ಶಶಿ ಕ್ಯಾಟರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶಶಿಧರ ಶೆಟ್ಟಿ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ಅಹಲ್ಯಾ ಅವರು ಉಪಸ್ಥಿತರಿರಲಿದ್ದಾರೆ.
ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಸಂಸ್ಕೃತ ಭಾರತಿ ಸಂಘಟನೆಯ ದಿನೇಶ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಜೇಯ ಟ್ರಸ್ಟ್‌ನ ಅಧ್ಯಕ್ಷರಾದ ಸುಬ್ರಾಯ ಪೈ, ಮೈತ್ರೇಯಿ ಆಯುರ್ವೇದ ಗುರುಕುಲಂನ ಪ್ರಾಂಶುಪಾಲರಾದ ಡಾ. ರವಿಗಣೇಶ್ ಮೊಗ್ರ ಉಪಸ್ಥಿತರಿದ್ದರು.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
ಮಂಗಳೂರು23 hours agoSoujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
-
ಬಿಗ್ ನ್ಯೂಸ್7 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ದಕ್ಷಿಣ ಕನ್ನಡ21 hours ago
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ
-
ಅಪರಾಧ6 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ನಿಧನ ವಾರ್ತೆ6 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸ್ಥಳೀಯ7 hours agoDharmasthala-ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನ ಸಂಭ್ರಮ; ಧರ್ಮಸ್ಥಳದ ಮ್ಯೂಸಿಯಂಗೆ ಕಲಾಂ ಕಾರು, ಸಚಿತ್ರ ಅಂಚೆಚೀಟಿಗಳು, ಬಗ್ಗಿ ವಾಹನ ಕೊಡುಗೆ
-
ನಿಧನ ವಾರ್ತೆ7 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು
-
ಅಂತರ ರಾಜ್ಯ4 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?















