Connect with us

ಸುಳ್ಯ

Heart Attack : ಬೆಳ್ಳಾರೆ : ಎಂಬಿಎ ವಿದ್ಯಾರ್ಥಿ ಶರತ್‌ ಜೋಷಿ ದಿಢೀರ್‌ ಅಸ್ವಸ್ಥಗೊಂಡು ನಿಧನ

Published

on

Ad Widget

Ad Widget

Ad Widget

Ad Widget

ಪುತ್ತೂರು : ಜೂ 17: ಎಂಬಿಎ ವಿದ್ಯಾರ್ಥಿ ದಿಢೀರ್‌ ಅಸ್ವಸ್ಥಗೊಂಡು ನಿದನ ಹೊಂದಿದ್ದ ಅಘಾತಕಾರಿ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ನಡೆದಿದೆ. ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ ವೇರ್ಸ್ ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಶಿ (21 ) ಮೃತಪಟ್ಟ ಯುವಕ.

Ad Widget

Ad Widget

Ad Widget

Ad Widget

ಶರತ್‌ ಜೋಷಿಯವರು ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಪರೀಕ್ಷೆ ಬರೆದು ಮನೆಗೆ ಬಂದಿದ್ದರು.  ರಾತ್ರಿ ತೀವ್ರ ಅಸೌಖ್ಯಗೊಂಡಿದ್ದಾರೆ.  ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಫತ್ರೆಗೆ ಕರೆ ತರಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಮೃತರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

Ad Widget

Ad Widget alt="Ad Widget"/>

Ad Widget

ಹೃದಯಘಾತಕ್ಕೆ ತುತ್ತಾಗಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ಬಳಿಕ ಸಾವಿನ ನಿಖರ ಕಾರಣ ತಿಳಿದು ಬರಲಿದೆ.

Ad Widget

Ad Widget <> Ad Widget

ಮೃತರು ತಂದೆ, ತಾಯಿ ಶ್ಯಾಮಲ ಎಸ್. ಜೋಶಿ,  ಸಹೋದರಿ ಡಾ. ಶರಣ್ಯ ಅಖಿಲೇಶ್ ಸೇರಿದಂತೆಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

Ad Widget
Click to comment

Leave a Reply

ಸುಳ್ಯ

Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

Published

on

Ad Widget

Ad Widget

Ad Widget

Ad Widget

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget

Ad Widget

Ad Widget

ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.

Ad Widget

Ad Widget

ರೈನಾ ಮಡಿಕೇರಿಯ ಲೀಲಾ ಪ್ಯಾಲೇಸ್ ಗೆ ತೆರಳಿದರು.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಸುಳ್ಯ

Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ

Published

on

Ad Widget

Ad Widget

Ad Widget

Ad Widget

ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

Ad Widget

Ad Widget

Ad Widget

Ad Widget

ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.

Ad Widget

Ad Widget alt="Ad Widget"/>

Ad Widget

ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.

Ad Widget

Ad Widget <> Ad Widget

ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!