ದಕ್ಷಿಣ ಕನ್ನಡ
Puttur Government Hospital : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಮ್ ಗೆ ಲಂಚ ಆರೋಪ – ಖಂಡಿಸಿ ಸಿಬ್ಬಂದಿಯಿಂದ ಮರಣೋತ್ತರ ಪರೀಕ್ಷೆ ನಡೆಸದೆ ಪ್ರತಿಭಟನೆ! ಶವಗಾರದಲ್ಲಿ ಗಂಟೆಗಟ್ಟಲೆ ಕಾದ ಎರಡು ಮೃತದೇಹಗಳು
Puttur Government Hospital ಪುತ್ತೂರು : ಜೂ 17 : ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಅಲ್ಲಿನ ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆಂದು ಮಾಧ್ಯಮವೊಂದು ಸಾಮಾಜಿಕ ಸಂಘಟನೆಯ ಹೇಳಿಕೆಯನ್ನು ಆಧಾರಿಸಿ ವರದಿ ಪ್ರಕಟಿಸಿದೆಯೆಂದು ಆರೋಪಿಸಿ, ಶವಗಳ ಮರಣೋತ್ತರ ಪರೀಕ್ಷೆ ನಡೆಸುವುದಿಲ್ಲ ಎಂದು ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳು ದಿಢೀರ್ ಮುಷ್ಕರ ನಡೆಸಿದ ಘಟನೆ ಶನಿವಾರ ನಡೆದಿದೆ.
ಸಿಬ್ಬಂದಿಗಳ ಹಠಾತ್ ಮುಷ್ಕರದಿಂದಾಗಿ ಮರಣೋತ್ತರ ಪರೀಕ್ಷೆಗೆ ಬಂದಿದ್ದ ಉಪ್ಪಿನಂಗಡಿ ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎರಡು ಶವಗಳು ಮೂರು ಗಂಟೆಗೂ ಅಧಿಕ ಕಾಲ ಶವಗಾರದಲ್ಲಿ ಶವ ಪರೀಕ್ಷೆಗಾಗಿ ಕಾಯುವ ಪರಿಸ್ಥಿತಿ ಎದುರಾಯಿತು. ಇದರಿಂದ ಮೃತರ ಕುಟುಂಬದವರು ಹಲವು ಗಂಟೆಗಳ ಕಾಲ ಪರಿತಪಿಸುವಂತಾಗಿ ಶವಗಾರದ ಮುಂಭಾಗ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಮೃತಪಟ್ಟವರ ಕುಟುಂಬಸ್ಥರು ಹಾಗೂ ಆಪ್ತರಿಗೆ ಒಂದೆಡೆ ತಮ್ಮ ಪ್ರೀತಿ ಪಾತ್ರರನ್ನು ಕಳಕೊಂಡ ನೋವು, ಮತ್ತೊಂದೆಡೆ ಶವ ಪರೀಕ್ಷೆಗಾಗಿ ಕಾಯುವ ಅಸಹನೀಯ ಪರಿಸ್ಥಿತಿ ಏಕಕಾಲದಲ್ಲಿ ಎದುರಾಗಿದ್ದು ಆಕ್ರೋಶದ ಕಟ್ಟೆಯೊಡೆಯುವಂತೆ ಮಾಡಿತ್ತು.
ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹಾಗೂ ಡಾ. ಯತಿರಾಜ್ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟನಾ ಸ್ಥಳಕ್ಕೆ ಬೇಟಿ ನೀಡಿ ಮರಣೋತ್ತರ ಪರೀಕ್ಷೆಯನ್ನು ನಡೆಸುವ ಗುತ್ತಿಗೆ ನೌಕರರಲ್ಲಿ ಮಾತುಕತೆ ನಡೆಸಿ ಮುಷ್ಕರವನ್ನು ಕೈ ಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾದರು. ಆ ಬಳಿಕ ಬೆಳ್ಳಾರೆ ಹಾಗೂ ಉಪ್ಪಿನಂಗಡಿಯಿಂದ ಬಂದಿದ್ದ ಶವಗಳ ಮರಣೋತ್ತರ ಪರೀಕ್ಷೆಯನ್ನು ವೈದ್ಯರು ಹಾಗೂ ಹೊರ ಗುತ್ತಿಗೆ ಸಿಬ್ಬಂದಿಗಳು ನಡೆಸಿ ಮೃತ ದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.

ಹೊರ ಗುತ್ತಿಗೆ ನೌಕರರು ಹೇಳಿದ್ಧೇನು ?
ಈ ಸಂದರ್ಭ ಮಾದ್ಯಮಗಳ ಜತೆ ಮಾತನಾಡಿದ ಹೊರ ಗುತ್ತಿಗೆ ನೌಕರ ಸುಧಾಕರ್ “ ಅಧಾರ ರಹಿತವಾಗಿ ಪತ್ರಿಕೆಯೊಂದು ನಾವು ಲಂಚ ಬೇಡಿಕೆ ಇಡುತ್ತೇವೆಂದು ವರದಿ ಪ್ರಕಟಿಸಿದೆ. ನಾವು ಯಾರಲ್ಲಿಯೂ ಕೇಳಿ ಹಣ ಪಡೆದಿಲ್ಲ. ಅವರಾಗಿಯೇ ಕೊಟ್ಟಾಗ ಪಡೆದುಕೊಂಡಿದ್ದೇವೆ ಹೊರತು ಬೇಡಿಕೆ ಇಟ್ಟಿಲ್ಲ. ನಮಗೆ ಈ ಕೆಲಸಕ್ಕೆ ಸಿಗುವ ಸಂಭಾವನೆ ತೀರ ಕಡಿಮೆ. ಸುಮಾರು 23 ವರ್ಷಗಳಿಂದ ನಾನ್ ಕ್ಲಿನಿಕ್ ಆಗಿ ಹೊರ ಗುತ್ತಿಗೆ ಅಧಾರದಲ್ಲಿ ದುಡಿಯುತ್ತಿದ್ದರೂ ನನಗಿರುವ ಸಂಬಳ ಕೇವಲ 10 ಸಾವಿರ ರೂಪಾಯಿಗಳು ಮಾತ್ರ. ರಾತ್ರಿ ಹಗಲೆನ್ನದೆ, ಕೊಳೆತ ಶವಗಳನ್ನು ಸೇರಿದಂತೆ ಎಲ್ಲ ಮೃತದೇಹಗಳ ಪೋಸ್ಟ್ ಮಾರ್ಟಮ್ ಮಾಡುವ ಮೂಲಕ ನಿಷ್ಠೆಯಿಂದ ದುಡಿಯುತ್ತಿರುವ ನಮ್ಮ ಮೇಲೆ ಲಂಚಕೋರರು ಎಂದು ಪತ್ರಿಕೆಯೊಂದು ಬರೆದಿರುವುದು ಬೇಸರ ತಂದಿದೆ. ಹೀಗಾಗಿ ಪ್ರತಿಭಟನಾರ್ಥವಾಗಿ ಇಂದು ನಾವು ಶವ ಪರೀಕ್ಷೆಯನ್ನು ನಡೆಸುತ್ತಿಲ್ಲ. ಸುಳ್ಳು ಆರೋಪವನ್ನು ಸಹಿಸಲು ಸಾಧ್ಯವಿಲ್ಲ. ಆರೋಪ ಮಾಡಿದವರೆ ಇವತ್ತು ಬಂದು ಪೋಸ್ಟ್ ಮಾರ್ಟಮ್ ಮಾಡಲಿ ಎಂದರು.
ತಾಲೂಕು ವೈದ್ಯಾಧಿಕಾರಿ ಹೇಳಿದ್ದೇನು ?
ಪುತ್ತೂರು ಸರಕಾರಿ ಆಸ್ಫತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಯಲ್ಲಿ ಮೂವರು ಹೊರ ಗುತ್ತಿಗೆ ನೌಕರರು ಸಹಾಯಕರಾಗಿ ದುಡಿಯುತ್ತಿದ್ದಾರೆ. ಈ ಸರಕಾರಿ ಆಸ್ಫತ್ರೆಯಲ್ಲಿ ಒಟ್ಟು 34 ಡಿ ದರ್ಜೆ ನೌಕರರ ಹುದ್ದೆಯಿದ್ದು ಅದರಲ್ಲಿ 2 ಮಾತ್ರ ಭರ್ತಿಯಾಗಿದೆ. ಉಳಿದ ಹುದ್ದೆಗಳು ಖಾಲಿ ಇವೆ. ಈ ಖಾಲಿ ಹುದ್ದೆಗಳನ್ನು ಹೊರ ಗುತ್ತಿಗೆ ನೌಕರರ ಮೂಲಕ ನಿಭಾಯಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ನಡೆಸುವುದು ನುರಿತ ಕೆಲಸಗಾರರ ತಂಡದಿಂದ ಮಾತ್ರ ಸಾಧ್ಯವೇ ಹೊರತು ಅನನುಭವಿ ಕೆಲಸಗಾರರಿಂದ ಸಾಧ್ಯವಿಲ್ಲ. ಸುಧಾಕರ್ ಮತ್ತು ಅವರ ತಂಡ ಕೆಲಸದಲ್ಲಿ ನೈಪುಣ್ಯತೆಯನ್ನು ಹೊಂದಿದ್ದು ಕಳೆದ ಹಲವು ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರಿಗೆ ಸಿಗುವ ಸಂಭಾವನೆ ತುಂಬಾ ಕಡಿಮೆ. ಮುಂದಿನ ದಿನಗಳಲ್ಲಿ ಆರೋಗ್ಯ ರಕ್ಷಣಾ ಸಮಿತಿಯ ಮೂಲಕ ಪ್ರತಿ ಮರಣೋತ್ತರ ಪರೀಕ್ಷೆಗೂ ಇಂತಿಷ್ಟೆಂದು ಹಣ ನಿಗದಿ ಮಾಡಿ ನೀಡಬೇಕು ಎಂದು ಸಹಾಯಕ ಆಯುಕ್ತರಲ್ಲಿ ಮತ್ತು ಶಾಸಕರಲ್ಲಿ ಮನವಿ ಮಾಡಿದ್ದೇನೆ. ಅಲ್ಲದೇ ಪತ್ರಿಕೆಯಲ್ಲಿ ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿಗಳು ಲಂಚಕ್ಕೆ ಬೇಡಿಕೆ ಯಿಡುತ್ತಿದ್ದಾರೆಂದು ಪ್ರಕಟಿಸಿದ್ದು ಇದು ಸುಳ್ಳು ವರದಿ. ಇದರ ಹಿಂದಿನ ಸತ್ಯ ಬಯಲಿಗೆ ಬರಬೇಕೆಂದು ಅಗ್ರಹಿಸಿದರು.

ಮೃತರ ಕುಟುಂಬ ಸದಸ್ಯರು ಹೊರ ಹಾಕಿದರು ನೋವು
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವರ ಜಗಳದಲ್ಲಿ ನಾವು ಹೈರಾಣಾಗಿದ್ದೇವೆ . ಕೇವಲ 21 ವರ್ಷದ ಯುವಕನನ್ನು ಕಳಕೊಂಡು ನೋವಿನಲ್ಲಿದ್ದೇವೆ. 7 ಗಂಟೆಗೆ ಸರಕಾರಿ ಆಸ್ಫತ್ರೆಗೆ ಬಂದಿದ್ದೇವೆ.ಪೊಲೀಸ್ ಅಗತ್ಯ ಕ್ರಮಗಳು ಮುಗಿದರು ಇಲ್ಲಿಯವರೆಗೆ ಶವ ಪರೀಕ್ಷೆ ನಡೆದಿಲ್ಲ. ಈ ಸಂದರ್ಭ ಮೃತರ ತಾಯಿ , ಅಕ್ಕ ಮತ್ತು ಚಿಕ್ಕಪ್ಪ ತಲೆ ತಿರುಗಿ ಬಿದ್ದಿದ್ದು, ಇನ್ನಾದರೂ ಈ ಸಮಸ್ಯೆಗೊಂದು ಪರಿಹಾರ ಸಿಗಲಿ ಎಂದು ಬೆಳ್ಳಾರೆಯಲ್ಲಿ ಮೃತಪಟ್ಟ ಯುವಕನ ಸಂಬಂಧಿ ಮಾದ್ಯಮದ ಮುಂದೆ ಅಲವತ್ತುಕೊಂಡರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ
ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.
ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















