Connect with us

ಉಡುಪಿ

Pejavara Sri : ಬಾವಿಗಿಳಿದು ಬೆಕ್ಕಿನ ಮರಿಯನ್ನು ರಕ್ಷಿಸಿದ ಪೇಜಾವರ ಶ್ರೀಗಳು – ವಿಡಿಯೋ ವೈರಲ್‌

Published

on

Ad Widget

Ad Widget

Ad Widget

Ad Widget

Pejavara Sri ಉಡುಪಿ : ಜೂ 19 :  ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯೊಂದನ್ನು ಪೇಜಾವರ ಮಠದ (pejavara Mutt) ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ(Vishwa Prasanna Theertha Swamiji) ರಕ್ಷಿಸಿದ್ದಾರೆ. ಉಡುಪಿಯ (udupi) ಮುಚ್ಲುಕೋಡು ಸುಬ್ರಮಣ್ಯ ದೇವಾಲಯದಲ್ಲಿ ರವಿವಾರ ಶ್ರೀಗಳು  ಬೆಕ್ಕಿನ ರಕ್ಷಣೆ ಮಾಡಿದ್ದಾರೆ. ಸ್ವಾಮೀಜಿಯವರ ಮಹತ್ಕಾರ್ಯಕ್ಕೆ ವ್ಯಾಪಕ ಶ್ಲ್ಯಾಘನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

 ರವಿವಾರ ಮುಚ್ಲುಕೋಡು ಸುಬ್ರಮಣ್ಯ ದೇವಾಲಯದ  ಅವರಣದಲ್ಲಿರುವ ಅಂದಾಜು  40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಆಕಸ್ಮಿಕವಾಗಿ ಬಿದ್ದು  ಅಳತೊಡಗಿತ್ತು.  ಇದೆ ವೇಳೆ  ಸ್ವಾಮೀಜಿ ಆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.ಈ ಸಂದರ್ಭ ಬಾವಿಗೆ ಬೆಕ್ಕೊಂದು ಬಿದ್ದಿರುವ ಬಗ್ಗೆ ದೇವಾಲಯದ ಸಿಬ್ಬಂದಿ ಮಾಹಿತಿ ನೀಡಿದರು.

Ad Widget

Ad Widget alt="Ad Widget"/>

Ad Widget

 ತಕ್ಷಣ ಸ್ವಾಮೀಜಿ ಅವರು ಬಾವಿಯ ನೀರು ಸೇದುವ ಹಗ್ಗವನ್ನು ಹಿಡಿದುಕೊಂಡು ಸುಮಾರು 40 ಅಡಿ ಆಳದ, 4-5 ಅಡಿ ಅಗಲದ ಕಲ್ಲು ಕಟ್ಟಿರುವ ಬಾವಿಗೆ ಇಳಿದೇಬಿಟ್ಟರು. ನಂತರ ಕೈಗೆ ಬಟ್ಟೆಯೊಂದನ್ನು ಗ್ಲೌಸ್ನಂತೆ ಸುತ್ತಿಕೊಂಡರು. ಜೀವದಾಸೆಗೆ ಬಾವಿಯೊಳಗೆ ಕಲ್ಲಿನ ಅಟ್ಟೆಮೇಲೆ ಕುಳಿತಿದ್ದ ಬೆಕ್ಕನ್ನು ಜಾಗ್ರತೆಯಿಂದ ಹಿಡಿದು ಹಗ್ಗಕ್ಕೆ ಕಟ್ಟಿದ್ದ  ಬಕೆಟ್ ಗೆ ಹಾಕಿದರು.

Ad Widget

Ad Widget <> Ad Widget

ಸಿಬ್ಬಂದಿ ಬಕೆಟ್ನ್ನು ಅರ್ಧಕ್ಕೆ ಎಳೆಯುವಷ್ಟರಲ್ಲಿ ಬೆಕ್ಕು ಹೆದರಿ ಪುನಃ ಬಾವಿಗೆ ಹಾರಿತು. ಪುನಃ ಒಂದು ಕೈಯಲ್ಲಿ ಬೆಕ್ಕನ್ನು ಹಿಡಿದು, ಇನ್ನೊಂದು ಕೈಯಲ್ಲಿ ಹಗ್ಗವನ್ನು ಹಿಡಿದ ಸರ್ಕಸ್ನಂತೆ ಸಾಹಸದಿಂದ ಬಾವಿಯಿಂದ ಮೇಲಕ್ಕೆ ಬಂದು, ಬೆಕ್ಕನ್ನು ರಕ್ಷಿಸಿದರು. ಪೇಜಾವರ ಶ್ರೀಗಳ ಈ ಮಾನವೀಯ ಸಾಹಸದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಪ್ರಚಾರ ಪಡೆದಿದೆ.

 ಸ್ವಾಮೀಜಿಗಳ ಮಹತ್ಕಾರ್ಯ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಪೇಜಾವರ ಶ್ರೀಗಳು  ನೀಲಾವರ ಗೋಶಾಲೆ ಮೂಲಕ ಗೋವಿನ ರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಇದರ ಜತೆಗೆ ಹಾವು, ಹದ್ದು ಹೀಗೆ ಸಕಲ ಪ್ರಾಣಿ ಪಕ್ಷಿ ಸಂಕುಲ ರಕ್ಷಣೆಯನ್ನು ಶ್ರೀಗಳು  ಮಾಡುತ್ತಿದ್ದಾರೆ. ಕಳೆದ ವಾರವಷ್ಟೆ ಅವರು ಹಲಸಿನ ಮರವೊಂದಕ್ಕೆ  ಹತ್ತಿ ಹಲಸಿನ ಹಣ್ಣುಗಳನ್ನು ಕೀಳಿ ಗೋವುಗಳಿಗೆ ನೀಡಿದ್ದರು. ಈ ವಿಡಿಯೋ ಕೂಡ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Click to comment

Leave a Reply

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!