ದಕ್ಷಿಣ ಕನ್ನಡ
Soujanya Case | ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ಪರ ವಕಲತ್ತು ವಹಿಸಿ ಸಿಬಿಐ ಎದುರು ಗೆದ್ದ ಪುತ್ತೂರಿನ ಯುವ ವಕೀಲ
ಉಜಿರೆ: 2012ರಲ್ಲಿ ನಡೆದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ (17 ವ.) (Soujanya Case) ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂತೋಷ್ ರಾವ್ನನ್ನು ಕೋರ್ಟ್ ದೋಷಮುಕ್ತಗೊಳಿಸಿದೆ.
ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್.ಸಿ.ಬಿ. ಇಂದು ತೀರ್ಪು ಪ್ರಕಟಿಸಿ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮೋಹಿತ್ ಕುಮಾರ್ ವಾದ ಮಂಡಿಸಿದ್ದರು.
ಆತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ರೇಪ್ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಇರಲಿಲ್ಲ. ಎರಡು ದಿನ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು. ಸೌಜನ್ಯ ಮೃತಪಟ್ಟ ದಿನ ಭಾರೀ ಮಳೆ ಇತ್ತು. ಅಂದು 500 ಜನ ಹುಡುಕಾಟ ನಡೆಸಿದ್ದರು. ಆದರೆ ಅಂದು ಶವ ಪತ್ತೆಯಾಗಿರಲಿಲ್ಲ. ಮರುದಿನ ಅದೇ ಸ್ಥಳದಲ್ಲಿ ಮೃತದೇಹ ಪತ್ತೆಯಾಗಿತ್ತು.
ನದಿ ದಾಟಿ ಹೋಗಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ ಪೊಲೀಸರು ಎರಡು ದಿನದ ಬಳಿಕ ಸಂತೋಷ್ ರಾವ್ನನ್ನು ಬಂಧಿಸಿದ್ದರು. ಪ್ರಕೃತಿ ಚಿಕಿತ್ಸಾಲಯ ಸಿಸಿಟಿವಿ ಸಂಗ್ರಹಿಸಿಲ್ಲ.
ಮರಣೋತ್ತರ ಪರೀಕ್ಷೆಯಲ್ಲಿ ರಾತ್ರೋರಾತ್ರಿ ಕೆಟ್ಟ ಬೆಳಕಿನಲ್ಲಿ ಮಾಡಲಾಗಿದೆ. ಸಂತೋಷ್ ರಾವ್ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ ಎಂದು ಮೋಹಿತ್ ವಾದಿಸಿದ್ದರು.
ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸೌಜನ್ಯ 2012ರ ಅ.9 ರಂದು ಕಾಣೆಯಾಗಿದ್ದಳು. ಆಕೆಯ ತಂದೆ ಚಂದ್ರಪ್ಪಗೌಡ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಅ.10 ರಂದು ಸೌಜನ್ಯಾ ಶವ ಪತ್ತೆಯಾಗಿತ್ತು. ಆಕೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು.
ಸಂತೋಷ್ ಸೌಜನ್ಯ ಅತ್ಯಾಚಾರಿ ಎಂದು ರುಜು ಮಾಡುವಲ್ಲಿ ಸಾಕ್ಷ್ಯದರಗಳನ್ನು ಒದಗಿಸುವಲ್ಲಿ ದೇಶದ ಪ್ರಮುಖ ತನಿಖಾ ತಂಡ ಸಿಬಿಐಗೆ ಸಾಧ್ಯವಾಗಿಲ್ಲ.
ಪುತ್ತೂರಿನ ಪೆರ್ಲಂಪಾಡಿಯ ಕೊಳ್ತಿಗೆ ಅಡ್ಕರಮಜಲ್ ರಾಮಣ್ಣ ಗೌಡರ ಪುತ್ರ ಮೋಹಿತ್ ಸಂತೋಷ್ ಪರ ವಾದಿಸಿ ದೋಷಮುಕ್ತಗೊಳಿಸಿದ ವಕೀಲ.
ಪೆರ್ಲಂಪಾಡಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ, ಸುಳ್ಯದಲ್ಲಿ ಎಲ್ ಎಲ್ ಬಿ ಮುಗಿಸಿ ಬೆಂಗಳೂರಿನಲ್ಲಿ ಹಿರಿಯ ವಕೀಲರ ಅಡಿಯಲ್ಲಿ ವೃತ್ತಿ ಮಾಡುವ ಮೋಹಿತ್ ಈ ಕೇಸ್ ನ್ನು ಕೈಗೆತ್ತಿಕೊಂಡರು.
ಸಂತೋಷ್ ಪರ ವಾದಿಸಲು ಮೋಹಿತ್ ಬಿಡಿಗಾಸು ತೆಗೆದುಕೊಂಡಿಲ್ಲ ಎಂದು ಅವರ ಆಪ್ತರು ಹೇಳಿದ್ದಾರೆ.
ಅಪರಾಧ
Punacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪುತ್ತೂರು: ಪುಣಚದಲ್ಲಿ ಬೈಕ್ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.
ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.
ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಅಪರಾಧ
Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.
ಅಲ್ಲದೆ, ಬಿಎನ್ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.
ನಿಧನ ವಾರ್ತೆ
Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ. ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ಮಂಗಳೂರು: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ ನಡೆದಿದೆ.
ಕಂಕನಾಡಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕ ಮೃತಪಟ್ಟ ದುರ್ದೈವಿ.
ನ.25ರಂದು ಸಂಜೆ ಸುಮಾರು 4.15ರ ವೇಳೆಗೆ ಶಾಲೆ ಮುಗಿದ ಬಳಿಕ ಬಾಲಕ ಮನೆಗೆ ತೆರಳಲು ಶಾಲೆಯ ಮುಂಭಾಗದಲ್ಲಿರುವ ಕಂಕನಾಡಿ–ಫಳ್ನೀರ್ ರಸ್ತೆಯನ್ನು ದಾಟುತ್ತಿದ್ದ. ಈ ವೇಳೆ ಫಳ್ನೀರ್ ಕಡೆಗೆ ತೆರಳಲು ನಿಂತಿದ್ದ ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯಿಂದ ಏಕಾಏಕಿ ಬಸ್ಸನ್ನು ಬಲಕ್ಕೆ ತಿರುಗಿಸಿ ಚಲಾಯಿಸಿದ್ದಾನೆ ಎನ್ನಲಾಗಿದೆ.
ಬಸ್ಸಿನ ಬಲಭಾಗ ಬಾಲಕನಿಗೆ ಡಿಕ್ಕಿಯಾದ ಪರಿಣಾಮ ಆತ ರಸ್ತೆಗೆ ಎಸೆಯಲ್ಪಟ್ಟಿದ್ದು, ಬಸ್ಸಿನ ಬಲ ಹಿಂಬದಿಯ ಚಕ್ರ ಬಾಲಕನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಬಸ್ ಚಾಲಕ ಹಾಗೂ ಸ್ಥಳೀಯರು ತಕ್ಷಣವೇ ಸಮೀಪದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5.50ರ ಸುಮಾರಿಗೆ ಬಾಲಕ ಮೃತಪಟ್ಟಿದ್ದಾನೆ.
-
ಸುಳ್ಯ20 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ23 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ23 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ20 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ಬಿಗ್ ನ್ಯೂಸ್23 hours agoTulu language-ತುಳು ಭಾಷೆ ಅನುಷ್ಠಾನಕ್ಕೆ ಸರ್ಕಾರದಿಂದ ಅಧಿಕೃತ ಆದೇಶ; ಸರ್ಕಾರಿ ಕಚೇರಿಗಳಲ್ಲೂ ತುಳುವಿಗೆ ಮನ್ನಣೆ..!
-
ಅಂತರ ರಾಜ್ಯ23 hours agoWhatsApp-ವಾಟ್ಸಾಪ್ನಲ್ಲಿ ಬಂತು ಹೊಸ ಫೀಚರ್; ಎರಡು ವಾರ ಮೊದಲೇ ಮೆಸೇಜ್ ಟೈಪ್ ಮಾಡಿ ಶೆಡ್ಯೂಲ್ ಮಾಡುವ ಅವಕಾಶ..!
-
ಸ್ಥಳೀಯ17 hours agoKadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು
-
ಅಪರಾಧ23 hours agoGym protein powder-ಸ್ಟೆರಾಯ್ಡ್, ಹಾನಿಕಾರಕ ರಾಸಾಯನಿಕ ಬೆರೆಸಿರುವ ಶಂಕೆ; ಜಿಮ್ ಪ್ರೊಟೀನ್ ಪೌಡರ್ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸಿದ್ಧತೆ















