Connect with us

ಬಂಟ್ವಾಳ

Drug Deal : ಬಂಟ್ವಾಳದ ಯುವಕನ ಮುಖ ಸುಟ್ಟ ಕೊಳೆತ ಶವ ದೇವರಮನೆ ಬಳಿ ಪತ್ತೆ ಪ್ರಕರಣ – ಇಬ್ಬರ ಬಂಧನ – ಡ್ರಗ್‌ ಡೀಲ್‌ ಕೊಲೆಯಲ್ಲಿ ಪರ್ಯವಸಾನ…!

Published

on

Ad Widget

Ad Widget

Ad Widget

Ad Widget

Drug Deal : ಬಂಟ್ವಾಳದ ಯುವಕನನ್ನು ಹತ್ಯೆಗೈದು  ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ (Kottigehara) ಸಮೀಪದ ಖ್ಯಾತ ಪ್ರವಾಸಿ ತಾಣ ದೇವರಮನೆ (Devaramane) ಸಮೀಪದ ರಸ್ತೆ ಬದಿಯಲ್ಲಿ ಶವ ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಸುಮಾರು ಎರಡು ವಾರದ ಹಿಂದೆ ಯುವಕನ ಮೃತ ದೇಹವೊಂದು ಮುಖ ಸುಟ್ಟ ಸ್ಥಿತಿಯಲ್ಲಿ ಚಾರ್ಮಾಡಿ ಘಾಟ್‌ (charmadi Ghat) ಬಳಿ ಪತ್ತೆಯಾಗಿತ್ತು. ಹತ್ಯೆಯಾದ ವಾರದ ಬಳಿಕ ಮೃತದೇಹ ಪತ್ತೆಯಾಗಿದ್ದು, ಅದು ಸಂಪೂರ್ಣ ಕೊಳೆತು ಹೋಗಿತ್ತು. ಡ್ರಗ್‌ ಡೀಲ್‌ (Drug Deal) ವಿಚಾರವಾಗಿ ಯುವಕನನ್ನು ಹತ್ಯೆ ಮಾಡಿ ಎಸೆಯಲಾಗಿತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ

Ad Widget

Ad Widget

Ad Widget

Ad Widget

ಬಂಟ್ವಾಳದ ಮಹಮ್ಮದ್‌ ಸಾವದ್‌ ಕೊಲೆಯಾದ ಯುವಕ. ಈತನ  ಪರಿಚಿತರು ಬಂಟ್ವಾಳದವರೇ ಆದ ರಿಜ್ವಾನ್ ಮತ್ತು ಝೈನುಲ್ಲಾ ಕೊಲೆ ಆರೋಪಿಗಳು. ಇವರನ್ನು ಬಣಕಲ್‌ ಪಿಎಸೈ ಜಂಬೂರಾಜ್‌ ಮಹಾಜನ್ ನೇತ್ರತ್ವದ ಪೊಲೀಸರ ತಂಡ‌ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಬಂಧಿಸಿದೆ. ಇವರ ಜತೆ ಕೊಲೆ ಕೃತ್ಯದಲ್ಲಿ ಇನ್ನೂ ಮೂವರು ಭಾಗಿಯಾಗಿರುವುದು  ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲೆ ಯಾಕೇ ?

Ad Widget

Ad Widget <> Ad Widget

ಸಾವದ್‌ ಹತ್ಯೆಯೂ ಮಾದಕ ವಸ್ತು ವ್ಯವಹಾರಕ್ಕೆ ಸಂಬಂಧಿಸಿ ನಡೆದಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ. ಸಾವದ್‌ ಮಾದಕ ವ್ಯಸನಿಯಾಗಿದ್ದ. ಅದರ ಜತೆಗೆ ಅದರ ಮಾರಾಟದಲ್ಲಿ ಪೆಡ್ಲರ್‌ ಆಗಿಯೂ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಈತ ಕೊಲೆ ಮಾಡಿದ ತಂಡದಿಂದಲೇ ಡ್ರಗ್ಸ್‌ ಅನ್ನು ಪಡೆದುಕೊಂಡು ವ್ಯವಹಾರ ಕುದುರಿಸುತ್ತಿದ್ದ ಎನ್ನಲಾಗಿದೆ. ಈ ವ್ಯವಹಾರದಲ್ಲಿ ಮನಸ್ತಾಪ ಉಂಟಾಗಿ ವೈಮನಸ್ಯದಿಂದ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಇದನ್ನೂ ಓದಿ : https://nikharanews.in/2023/06/10/decomposing-body-of-bantwala-youth-found-with-burnt-face-at-charmadi-ghat-drug-peddlers-killed/

Ad Widget

Ad Widget

ಮೂಡಿಗೆರೆ ತಾಲೂಕು ಬಣಕಲ್‌ ಠಾಣಾ ವ್ಯಾಪ್ತಿಯಲ್ಲಿ ಸಾವದ್‌ ಮೃತ ದೇಹ ಜೂ 8 ರಂದು ದೇವರ ಮನೆ ಸಮೀಪ ರಸ್ತೆಯಂಚಿನಲ್ಲಿ ಪತ್ತೆಯಾಗಿತ್ತು. ಮೊದಲಿಗೆ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಅಲ್ಲಿನ ಪೊಲೀಸರು  ಅಪರಿಚಿತ ಶವ ಎಂದು ಶವಗಾರದಲ್ಲಿ ಇಟ್ಟಿದ್ದರು. ಸಾವದ್‌ ಮೊದಲಿನಿಂದಲೂ ಸರಿಯಾಗಿ ಮನೆಗೆ ಬರುವ ಪರಿಪಾಠ ಇಟ್ಟುಕೊಂಡಿರಲಿಲ್ಲ.  ಆಗಾಗ ಮನೆಗೆ ಬಂದು ಹೋಗುತ್ತಿದ್ದ ಆತ ಒಮ್ಮೆ ಬಂದು ಹೋದರೆ ಮತ್ತೆ 10 -15 ದಿನ ಮನೆ ಕಡೆ ತಲೆ ಹಾಕುತ್ತಿರಲಿಲ್ಲ ಎನ್ನಲಾಗಿದೆ.

ಹತ್ಯೆಯಾಗುವುದಕ್ಕೆ ಸ್ವಲ್ಪ ದಿನ ಮುಂಚೆ ಮನೆಗೆ ಬಂದಿದ್ದವ, ಮತ್ತೆ ಇದ್ದಕ್ಕಿದಂತೆ ನಾಪತ್ತೆಯಾಗಿದ್ದ. ಆದರೇ ಮನೆಯವರು ಮತ್ತೆ ಬರುತ್ತಾನೆಂಬ ವಿಶ್ವಾಸದಲ್ಲಿ ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಸವಾದ್‌ ಗೆಳೆಯನೊಬ್ಬ ಚಾರ್ಮಾಡಿ ಘಾಟ್‌ ಬಳಿ ಆತ ಕೊಲೆಯಾಗಿರುವ ಮಾಹಿತಿಯನ್ನು ಮನೆಯವರಿಗೆ ನೀಡಿದ್ದ. ಈ ಹಿನ್ನಲೆಯಲ್ಲಿ ಮನೆಯವರು ನಾಪತ್ತೆ ಪ್ರಕರಣ ದಾಖಲಿಸಿ ಹುಡುಕಾಟ ನಡೆಸಿದಾಗ ಬಣಕಲ್‌ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ  ಬಗ್ಗೆ ಗೊತ್ತಾಗಿದೆ. ಮನೆಯವರು ಅಲ್ಲಿ ಹೋಗಿ ಶವ ಪರಿಶೀಲಿಸಿದಾಗ ಮೃತದೇಹದ ಮೈಮೇಲಿದ್ದ ಬಟ್ಟೆ ಹಾಗೂ ಕೈಯಲ್ಲಿರುವ ನೂಲನ್ನು ಆಧರಿಸಿ  ಅದು ಸವಾದ್‌ ನೆಂದು ಗುರುತಿಸಿದ್ದಾರೆ.

ಇದನ್ನೂ ಓದಿ : https://nikharanews.in/2023/06/22/kea-released-direct-recruitment-notifications-for-kfcsc-keonics-karbwwb-jobs-2023/

ಪಡುಬಿದ್ರಿಯ ಬೆಂಗ್ರೆ ಎಂಬಲ್ಲಿ ಸಾವದ್‌ ನನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಶವವನ್ನು ತಂದು ದೇವರ ಮನೆ ಬಳಿ ಎಸೆದು ಹೋಗಿದ್ದರು.ಇದನ್ನು ತನಿಖೆಯ ವೇಳೆ ಬಂಧಿತ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!