Connect with us

ಶಿಕ್ಷಣ

Srikanth Shetty : ಮಂಗಳೂರು ವಿವಿ ಕಾಲೇಜಿನ ಪ್ರತಿಭಾ ದಿನಾಚರಣೆಗೆ ಹಿಂದೂ ಮುಖಂಡನಿಗೆ ABVPಯಿಂದ ಆಹ್ವಾನ – NSUI ತೀವ್ರ ವಿರೋಧಕ್ಕೆ ಮಣಿದು ಕಾರ್ಯಕ್ರಮ ರದ್ದು

Published

on

Ad Widget

Ad Widget

Ad Widget

Ad Widget

ವಿವಿ ಕಾಲೇಜು ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂದೂ ಜಾಗರಣೆ ವೇದಿಕೆ ಮುಖಂಡನನ್ನು ಅತಿಥಿಯಾಗಿ ಆಹ್ವಾನಿಸಿದಕ್ಕೆ , ವಿದ್ಯಾರ್ಥಿ ಸಂಘಟನೆಯೊಂದರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲೇಜ್ ಮಂಡಳಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ವರದಿಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ‌ ಜೂ.23 ರಂದು ಪ್ರತಿಭಾ ದಿನಾಚರಣೆ ಹಾಗೂ ಜೂ.24ರಂದು ಕಾಲೇಜು ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಯಾಗಿ ಆಗಮಿಸುವವರಿದ್ದರು. ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು.

Ad Widget

Ad Widget alt="Ad Widget"/>

Ad Widget

ಎನ್ಎಸ್ ಯುಐ ತೀವ್ರ ವಿರೋಧ -ಮುತ್ತಿಗೆ ಹಾಕುವ ಎಚ್ಚರಿಕೆ

Ad Widget

Ad Widget <> Ad Widget

ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಿದ್ದಕ್ಕೆ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕಾಲೇಜಿನಲ್ಲಿ ಕೋಮು ವಿಷಬೀಜ ಭಿತ್ತಲು ಯತ್ನ ಎಂದು ಆರೋಪಿಸಿ ಯಾವುದೇ ಕಾರಣಕ್ಕೂ ಕಾರ್ಯಕ್ರಮ ನಡೆಯಲು ಬಿಡಲ್ಲ ಎಂದು ಎಬಿವಿಪಿಗೆ ಎಚ್ಚರಿಕೆ ನೀಡಿದೆ. ಅಲ್ಲದೇ ಮಂಗಳೂರು ಕಮಿಷನರ್ ಹಾಗೂ ಕಾಲೇಜು ಪ್ರಾಂಶುಪಾಲರಿಗೂ ಎನ್ಎಸ್ ಯುಐ ದೂರು ನೀಡಿದ್ದು, ಶ್ರೀಕಾಂತ್ ಶೆಟ್ಟಿ ಅತಿಥಿಯಾದ್ರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿತ್ತು.

ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನಿಯೋಗ ಮಂಗಳೂರು ಕಮಿಷನರ್ ಭೇಟಿಯಾಗಿ ಮನವಿ ಸಲ್ಲಿಸಿತ್ತು. ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಭಾವನೆ ಕೆರಳಿಸುವ ಕಾರ್ಯ ಇವರಿಂದ ಆಗುತ್ತದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ ಎಂದಿತ್ತು.‌ ಆದರೆ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ.

Ad Widget

Ad Widget

ಕಾರ್ಯಕ್ರಮ ಮುಂದೂಡಿದ ವಿವಿ
ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಆಡಳಿತ ಕಾರ್ಯಕ್ರಮ ಮುಂದೂಡಿದೆ. ನಾಳೆ ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ಶನಿವಾರದ ಕಾಲೇಜು ವಾರ್ಷಿಕೋತ್ಸವ ಮುಂದೂಡಿಕೆ ಮಾಡಿದೆ. ನಾಳೆ ಎಂದಿನಂತೆ ತರಗತಿ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

2011ರಲ್ಲಿ ಚಕ್ರವರ್ತಿಗೆ ನಿಷೇಧ- 15 ದಿನ ಬಂದ್

2011ರಲ್ಲಿ ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ‌ ಪ್ರತಿಭಾ ದಿನಾಚರಣೆ ಹಾಗೂ ವಿವೇಕೋತ್ಸವಕ್ಕೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಆ ಸಂದರ್ಭ ಕೊಣಾಜೆಯಲ್ಲಿರುವ ಮಂಗಳೂರು ವಿವಿ ಅವರನ್ನು ವಿವಿ ಕಾಲೇಜಿಗೆ ಬರದಂತೆ ಅಧಿಕೃತವಾಗಿ ತಡೆದಿತ್ತು. ಈ ಸಂದರ್ಭ ಅಂದಿನ ವಿದ್ಯಾರ್ಥಿ ನಾಯಕರಾದ ಶ್ರವಣ್ ಕುಮಾರ್ ನಾಳ (ಇಂದು ವಿಜಯವಾಣಿಯ ಜಿಲ್ಲಾ ಪತ್ರಕರ್ತ), ಗುರುಪ್ರಸಾದ್ ಉಳ್ಳಾಲ (ಇಂದು ವಿ ಎಚ್ ಪಿ ಮುಖಂಡ ), ಶಿವಪ್ರಸಾದ್ ನೇತೃತ್ವದಲ್ಲಿ ಸತತ 15 ದಿನ ತರಗತಿ ಸಹಿತ ಇಡೀ ಕಾಲೇಜು ಬಂದ್ ಮಾಡಲಾಗಿತ್ತು.

ಪ್ರತಿಭಟನೆಯನ್ನು ನಿಯಂತ್ರಿಸಲು ಪ್ರತಿದಿನ 50ಪೊಲೀಸರನ್ನು ನಿಯೋಜಿಸಲಾಗಿತ್ತು. ಕೊನೆಗೆ ಪ್ರತಿಭಟನೆ ತಾರಕಕ್ಕೆ ಏರಿ ರಾಜಕೀಯ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತ ಮಂಗಳೂರು ವಿಶ್ವವಿದ್ಯಾನಿಲಯ ಷರತ್ತು ವಿಧಿಸಿ ವಿವಿ ಕಾಲೇಜಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಆಗಮನಕ್ಕೆ ಅವಕಾಶ ನೀಡಿತ್ತು.

ಈ ಬಾರಿ ಎಬಿವಿಪಿ ಮತ್ತು ಕಾಲೇಜು ಸಂಘದ ಮುಖಂಡರು ಅತಿಥಿ ಬದಲಾವಣೆ ಮಾಡಲ್ಲ ಎಂದು ಪಟ್ಟು ಹಿಡಿದಿದ್ದು, ನಾಳೆ ಕಾರ್ಯಕ್ರಮ ನಡೆಯದಿದ್ದರೂ ಮುಂದಿನ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿಯನ್ನೇ ಅತಿಥಿ ಮಾಡುವಂತೆ ಪಟ್ಟು ಹಿಡಿದಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”

Published

on

Ad Widget

Ad Widget

Ad Widget

Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಯ ಮಹತ್ತರ ಉದ್ದೇಶವನ್ನಿಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಘಟಕವಾದ ನರೇಂದ್ರ ಪದವಿ ಪೂರ್ವ ಕಾಲೇಜು ಶಿಕ್ಷಣದ ಮೂಲಕ ವಿದ್ಯಾರ್ಥಿಯ ಬೌಧ್ಧಿಕ, ಸಾಮಾಜಿಕ, ಭೌತಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ,ಆಧ್ಯಾತ್ಮಿಕ ಮೌಲ್ಯಗಳಿಂದ ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಬೆಳೆಸುವ ಉದ್ದೇಶವನ್ನು ಹೊಂದಿದೆ.

Ad Widget

Ad Widget alt="Ad Widget"/>

Ad Widget

2017ರಲ್ಲಿ ತೆಂಕಿಲದ ವಿವೇಕನಗರದಲ್ಲಿ ಸ್ಥಾಪನೆಗೊಂಡ ಸಂಸ್ಥೆ ನರೇಂದ್ರ ಪದವಿ ಪೂರ್ವ ಕಾಲೇಜು ಇದೀಗ ಒಂಬತ್ತು ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂಭ್ರಮದಲ್ಲಿದೆ.

Ad Widget

Ad Widget <> Ad Widget

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರಾರಂಭಗೊಳ್ಳಲಿದೆ. ಅಪರಾಹ್ನ 3 ಗಂಟೆಯಿಂದ ಸಭಾ ಕಾರ‍್ಯಕ್ರಮ ನಡೆಯಲಿದ್ದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಯಾಗಿ ಕರ್ನಾಟಕ ಹೈಕೋರ್ಟ್ನ ಹಿರಿಯ ವಕೀಲರು, ಕರ್ನಾಟಕದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಮತ್ತು ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಸ್ವತಂತ್ರ ನಿರ್ದೇಶಕರು ಮತ್ತು ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಎಮ್. ಅರುಣ್ ಶ್ಯಾಮ್ ರವರು ಭಾಗವಹಿಸಲಿದ್ದಾರೆ. ಇನ್ನೋರ್ವ ಅತಿಥಿಯಾಗಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಇವರು ಭಾಗವಹಿಸಲಿದ್ದಾರೆ.

Ad Widget

Ad Widget

ನವೆಂಬರ್ 28 ರಂದು ಅಪರಾಹ್ನ 2 ಗಂಟೆಯಿಂದ ವಿದ್ಯಾರ್ಥಿ ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕವಾಗಿ, ಸಾಂಸ್ಕೃತಿಕ ,ಕ್ರೀಡೆ ಮತ್ತು ಇನ್ನಿತರ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ“ ಪ್ರತಿಭಾ ಪುರಸ್ಕಾರ” ನಡೆಯಲಿದೆ. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ಮಹಾಲಕ್ಷ್ಮೀ ಕೆ. ಇವರು ವಹಿಸಿಕೊಳ್ಳಲಿದ್ದಾರೆ.

ಮುಖ್ಯಅತಿಥಿಗಳಾಗಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು ನರಿಮೊಗರು ಪುತ್ತೂರು ಇಲ್ಲಿನ ಮುಖ್ಯಗುರುಗಳಾದ ಪ್ರಸನ್ನ ಕೆ. ಅವರು ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಶ ನಾಯಕ್ ಬಿ.ಸಿ. , ಸದಸ್ಯರಾದ ಸತ್ಯನಾರಾಯಣ ಬಿ., ರಮೇಶ ನಾಯಕ್ ಕೆ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ತೀರ್ಥರಾಜ್ ಕೆ. ಉಪಸ್ಥಿತಿ ಇರಲಿದ್ದಾರೆ. ಮತ್ತು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಶ್ರೀಶಾನ್ ಡಿ.ಕೆ., ಕನ್ನಿಕಾ ಕೆ.ಆರ್., ಪ್ರಥಮ ವಿಜ್ಞಾನ ವಿಭಾಗದ ಜೆ.ಶೃಜಾ ಭಾಗವಹಿಸಲಿದ್ದಾರೆ.ಸಭಾಕರ‍್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕರ‍್ಯಕ್ರಮಗಳು ನಡೆಯಲಿದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget
Continue Reading

ಶಿಕ್ಷಣ

Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

Published

on

Ad Widget

Ad Widget

Ad Widget

Ad Widget

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Ad Widget

Ad Widget alt="Ad Widget"/>

Ad Widget

ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

Ad Widget

Ad Widget <> Ad Widget

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

Ad Widget

Ad Widget <> Ad Widget

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್‌ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.

Ad Widget

Ad Widget

ರವಿಕೃಷ್ಣ.ಡಿ.ಕಲ್ಲಾಜೆ ಸ್ವಾಗತಿಸಿ, ಡಾ.ಪುರುಷೋತ್ತಮ ಚಿಪ್ಪಾರ್ ವಂದಿಸಿದರು. ಪ್ರೊ.ನಿರುಪಮಾ.ಕೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!