ಆರೋಗ್ಯ
Maternal Mortality : ಉಪ್ಪಿನಂಗಡಿ : ಹೆರಿಗೆಯ ಬಳಿಕ ತಾಯಿ ಮೃತಪಟ್ಟ ಬೆನ್ನಲ್ಲೇ ಹಸುಗೂಸು ಮೃತ್ಯು – ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ದ ಪತಿಯಿಂದ ಡಿಸಿ ಹಾಗೂ ಡಿಎಚ್‌ಒಗೆ ದೂರು
ಉಪ್ಪಿನಂಗಡಿ : ಜೂ 23 : ಮಗುವಿಗೆ ಜನ್ಮ ನೀಡಿದ ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಹಿರೇಬಂಡಾಡಿಯ ಬಾಣಂತಿ ಮೃತಪಟ್ಟ ಒಂದು ದಿನದ ಬಳಿಕ ಆಕೆ ಜನ್ಮ ನೀಡಿದ ಹಸುಕೂಸು ಕೂಡ ಮೃತಪಟ್ಟಿದೆ. ಬೆನ್ನು ಬೆನ್ನಿಗೆ ತಾಯಿ ಮತ್ತು ಮಗುವನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.
ಆಶಾ ಕಾರ್ಯಕರ್ತೆಯೂ ಆಗಿರುವ ಭವ್ಯ(28) ರವರು ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ಮೃತಪಟ್ಟಿದ್ದರು. ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. 3ನೇ ಹೆರಿಗೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಭವ್ಯರವರು . ಕಳೆದ ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಅದಾದ ಬಳಿಕ ತೀವ್ರ ರಕ್ತಸ್ರಾವ ಉಂಟಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಜನಿಸಿದ ಮಗುವನ್ನು ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗುವು ಮೃತಪಟ್ಟಿದೆ ಎಂದು ವರದಿಯಾಗಿದೆ. ಪತ್ನಿ ಹಾಗೂ ಮಗುವಿನ ಸಾವಿಗೆ ಚಿಕಿತ್ಸೆ ನೀಡಿದ ಆಸ್ಫತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಭವ್ಯರವರ ಪತಿ ಭಾಲಕೃಷ್ಣ ಗೌಡರವರು ಡಿಸಿ ಹಾಗೂ ಡಿಎಚ್‌ಒಗೆ ದೂರು ನೀಡಿದ್ದಾರೆ.

ದೂರಿನಲ್ಲಿರುವ ಅಂಶಗಳು
ಜೂ.20ರಂದು ಮಂಗಳವಾರ ಸಂಜೆ 6:30ರ ಸುಮಾರಿಗೆ ತನ್ನ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡು ನೋವಿನಿಂದ ಒದ್ದಾಡುತ್ತಿದ್ದರೂ ಆಕೆಯ ದೈಹಿಕ ಆರೋಗ್ಯ ಸ್ಥಿತಿಯ ಬಗ್ಗೆಯಾಗಲಿ , ಸಹಜ ಹೆರಿಗೆಯ ಸಾಧ್ಯತೆ ಬಗ್ಗೆಯಾಗಲಿ ಯಾವುದೇ ಪರೀಕ್ಷೆಗಳನ್ನು ನಡೆಸದೆ ನೋವಿನಲ್ಲೇ ನರಳುವಂತೆ ಮಾಡಿದ್ದರು. ಆಕೆ ಅತೀವ ನೋವಿನೊಂದಿಗೆ ಒದ್ದಾಡುತ್ತಿದ್ದರೂ ವೈದ್ಯರನ್ನು ಕರೆಸುವ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಯಾವುದೇ ಪ್ರಯತ್ನವನ್ನು ನಡೆಸಲಿಲ್ಲ ಹಾಗೂ ತಜ್ಞ ವೈದ್ಯರನ್ನು ಕರೆಸುವ ಅಥವಾ ಅವರ ಸಲಹೆ ಕೇಳುವ ಯಾವುದೇಪ್ರಯತ್ನವನ್ನು ಮಾಡಿಲ್ಲ.
ಗರ್ಭಿಣಿಯ ದೈಹಿಕ ಧಾರಣಾ ಸಾಮರ್ಥ್ಯವನ್ನು ಗಣನೆಗೆ ತೆಗೆದುಕೊಳ್ಳದೆ ಒತ್ತಡ ತಂತ್ರವನ್ನು ಅನುಸರಿಸಿ ಅವಳ ಹೆರಿಗೆ ಮಾಡಲಾಗಿದೆ. ಪರಿಣತ ವೈದ್ಯರ ಅನುಪಸ್ಥಿತಿಯಲ್ಲಿ ಗರ್ಭಿಣಿಯ ಹೊಟ್ಟೆಗೆ ಅವೈಜ್ಞಾನಿಕ ಒತ್ತಡವನ್ನು ಹಾಕಿ ರಾತ್ರಿ ಸುಮಾರು 8:30 ರ ಸುಮಾರಿಗೆ ಬಲವಂತಿಕೆಯ ಹೆರಿಗೆಯಾಗುವಂತೆ ಮಾಡಿರುವುದರಿಂದ ತನ್ನ ಪತ್ನಿ ಹಾಗೂ ಹಸುಕೂಸು ಸಾವನ್ನಪ್ಪಲು ಆಸ್ಪತ್ರೆಯ ಸಿಬ್ಬಂದಿ ಕಾರಣರಾಗಿದ್ದಾರೆ ಎಂದು ಭಾಲಕೃಷ್ಣರವರು ಜಿಲ್ಲಾ ಆರೋಗ್ಯಾಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.
ಪ್ರತಿ ಹೆರಿಗೆ ಸಾವಿನ ತನಿಖೆಯಾಗುತ್ತದೆ : ಡಿಎಚ್‌ಒ
“ಹೆರಿಗೆ ಸಂದರ್ಭ ಸಾವು ಸಂಭವಿಸಿದರೆ ಅದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿದ್ದು, ತಜ್ಞರ ಸಮಿತಿಯಿಂದ ತನಿಖೆ ನಡೆಸಿ ವರದಿಯನ್ನು ಪಡೆಯಲಾಗುತ್ತದೆ. ಜೂ 22 ರಂದು ಬೆಳಿಗ್ಗೆಯೇ ಕಮಿಟಿಯವರು ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬಂದಿಗಳನ್ನು ಕರೆಯಿಸಿ ಪರಿಶೀಲನೆ ನಡೆಸಿದ್ದು ವರದಿ ಸಿದ್ದಪಡಿಸುತ್ತಿದ್ದಾರೆ. ಅದಾದ ಬಳಿಕ ಮಧ್ಯಾಹ್ನ ಭಾಲಕೃಷ್ಣ ಗೌಡರವರು ಲಿಖಿತ ದೂರು ನೀಡಿದ್ದಾರೆ. ದೂರು ನೀಡದಿದ್ದರೂ ಹೆರಿಗೆ ಸಂದರ್ಭ ನಡೆಯುವ ಪ್ರತಿ ಸಾವಿನ ತನಿಖೆಯನ್ನು ಕಡಾಯವಾಗಿ ಮಾಡಲೇಬೇಕು ಎಂಬ ನಿಯಮವಿದೆ. ವರದಿಯನ್ನು ಸದ್ಯದಲ್ಲೆ ಜಿಲ್ಲಾಧಿಕಾರಿಯವರಿಗೆ ನೀಡಲಿದ್ದು, ಅದಾದ ಬಳಿಕ ದೂರುದಾರರನ್ನು ಹಾಗೂ ವೈದ್ಯರನ್ನು ಕರೆಯಿಸಿ ಡಿಸಿಯಯವರ ಸಮಕ್ಷಮ ದೂರಿನ ವಿಚಾರಣೆ ನಡೆಯಲಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿಯವರು ನಿಖರ ನ್ಯೂಸಿಗೆ ತಿಳಿಸಿದ್ದಾರೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಬಿಗ್ ನ್ಯೂಸ್23 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ24 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ನಿಧನ ವಾರ್ತೆ6 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು4 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ6 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ5 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ6 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
Uncategorized7 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP


















