ಜೂ.13ರ ಸೋಮವಾರ ರಾತ್ರಿ ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡಿದ್ದರು. ಮರುದಿನ ಮುಂಜಾನೆ […]" /> ಜೂ.13ರ ಸೋಮವಾರ ರಾತ್ರಿ ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡಿದ್ದರು. ಮರುದಿನ ಮುಂಜಾನೆ […]"> ಉಡುಪಿ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ - ಪ್ರತಿಭಾನ್ವಿತ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು : ತೀವ್ರಗೊಂಡ ಪ್ರತಿಭಟನೆ - Nikhara News | Kannada News Website
Connect with us

ಉಡುಪಿ

ಉಡುಪಿ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ – ಪ್ರತಿಭಾನ್ವಿತ ವಿದ್ಯಾರ್ಥಿನಿ ಸಂಶಯಾಸ್ಪದ ಸಾವು : ತೀವ್ರಗೊಂಡ ಪ್ರತಿಭಟನೆ

Published

on

Ad Widget

Ad Widget

Ad Widget

Ad Widget

ಉಡುಪಿ : ಇಲ್ಲಿನ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಎರ್ಮಾಳ್‌ನ ಕೆಮ್ಮುಂಡೆಲ್‌ನ ಪ್ರತಿಭಾನ್ವಿತ ವಿದ್ಯಾರ್ಥಿನಿಯ ಸಾವಿನ ತನಿಖೆಗೆ ಆಗ್ರಹಿಸಿ ಶುಕ್ರವಾರ ಎಬಿವಿಪಿ ಸಂಘಟನೆ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದೆ . ನ್ಯಾಯಕ್ಕಾಗಿ ಇದೀಗ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲು ತಯಾರಿ ನಡೆಸಿವೆ.

Ad Widget

Ad Widget

Ad Widget

Ad Widget

ಎರ್ಮಾಳ್‌ನ ಜನಾರ್ದನ ಮೂಲ್ಯ ಹಾಗೂ ಶೋಭಾ ಅವರ ಏಕೈಕ ಪುತ್ರಿ ನಿಖಿತ ಕುಲಾಲ್ (20 ವ.) ಮೃತಪಟ್ಟ ದುರ್ದೈವಿ.

Ad Widget

Ad Widget alt="Ad Widget"/>

Ad Widget

ಜೂ.13ರ ಸೋಮವಾರ ರಾತ್ರಿ ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡಿದ್ದರು. ಮರುದಿನ ಮುಂಜಾನೆ 4.30 ಮನೆಯವರು ಆಕೆಯನ್ನು ಉಡುಪಿಯ ಸಿಟಿಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget <> Ad Widget

ಬಳಿಕ ಪ್ರತಿದಿನ‌ ಎಂಬಂತೆ ನಾಲ್ಕೈದು ಸ್ಕ್ಯಾನಿಂಗ್ ನಡೆಸಿದ ವೈದ್ಯರು ಆಕೆಯ ಆರೋಗ್ಯ ಸಮಸ್ಯೆ ಪತ್ತೆ ಹಚ್ಚಲು ವಿಫಲವಾಗಿದ್ದಾರೆ ಎಂದು ಮೃತ ನಿಖಿತ ಚಿಕ್ಕಮ್ಮ ಶೈಲಜಾ ತಿಳಿಸಿದ್ದಾರೆ.

ಶನಿವಾರ ರಾತ್ರಿ 12 ಗಂಟೆಗೆ ಆಸ್ಪತ್ರೆಯಿಂದ ನಿಖಿತ ತಂದೆಗೆ ಮಗಳ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ತಕ್ಷಣವೇ ಬರುವಂತೆ ಕರೆ ಬಂದಿತ್ತು.

Ad Widget

Ad Widget

ಮಗಳ ದೇಹ ಸ್ಥಿತಿ ಗಂಭೀರವಾಗಿರುವುದನ್ನು ಕಂಡ ಜನಾರ್ದನ ಅವರು ಮಗಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ನಾವು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆ ಕರೆದುಕೊಂಡು ಹೋಗುವುದಾಗಿ ಕೇಳಿಕೊಂಡರು ಆಸ್ಪತ್ರೆಯ ವೈದ್ಯರು ಒಪ್ಪಲಿಲ್ಲ.

ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ ರವಿವಾರ ಮೃತಪಟ್ಟಿದ್ದರು. ನಿಖಿತ ಸಾವಿಗೆ ಆಸ್ಪತ್ರೆಯ ನಿರ್ಲಕ್ಷವೇ ಕಾರಣ ಎಂದು ಆಕೆಯ ಚಿಕ್ಕಮ್ಮ ಶೈಲಜಾ ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯ ಚಿಕ್ಕಮ್ಮ ಮಾತನಾಡಿರುವ ವಾಯ್ಸ್ ರೆಕಾರ್ಡ್ ವೈರಲ್ : ಆಸ್ಪತ್ರೆಯ ನಿರ್ಲಕ್ಷ್ಯ ಹಾಗೂ ವೈದ್ಯರು ನಿಖಿತ ಆರೋಗ್ಯ ಸ್ಥಿತಿ ಬಿಗಾಡಾಯಿಸಿದರೂ ಬೇರೊಂದು ಆಸ್ಪತ್ರೆಗೆ ಕಳುಹಿಸಿ ಕೊಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ ರೆಕಾರ್ಡ್ ವೈರಲ್ ಆಗಿದ್ದು. ಆಸ್ಪತ್ರೆಯ ಬೇಜವಾಬ್ದಾರಿ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯ ಎದುರು ಎಬಿವಿಪಿ ಪ್ರತಿಭಟನೆ: ಕೆಪಿಟಿ ದ್ವೀತಿಯ ವರ್ಷದ ಡಿಪ್ಲೋಮ ವಿದ್ಯಾರ್ಥಿನಿಯ ಸಾವು ಅನೇಕ ಗೊಂದಲದಿಂದ ಕೂಡಿದ್ದು, ಸೂಕ್ತ ತನಿಖೆ ನಡೆಸಿ ನಿಖಿತಾ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುವುದಾಗಿ ಎಬಿವಿಪಿ ಪ್ರತಿಭಟನೆ ನಡೆಸಿದೆ.

Ad Widget
Click to comment

Leave a Reply

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಉಡುಪಿ

Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Published

on

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget

Ad Widget

Ad Widget

Ad Widget

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad Widget

Ad Widget <> Ad Widget

ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Ad Widget

Ad Widget

ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ ಹಾಗೂ ಸಿಬ್ಬಂದಿಗಳಾದ ಆನಂದ ಗಾಣಿಗ, ಎಲ್ಲಾಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!