Connect with us

ಶಿಕ್ಷಣ

Vivekananda PU College : ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಪ್ರತಿಭಾ ಪ್ರದೀಪ್ತಿ ; ಪ್ರತಿಭಾನ್ವಿತ ಕುಡಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Published

on



Ad Widget

Ad Widget

Ad Widget

Ad Widget

Vivekananda PU College ಪುತ್ತೂರು, ಜೂ 24 : ಉತ್ತಮ ಅಂಕಗಳನ್ನು ಮತ್ತು  Rank ಗಳನ್ನು ಗಳಿಸುವುದು ವಿದ್ಯಾರ್ಥಿಗಳು ಮಾಡಿದಂತಹ ಸತತ ಪರಿಶ್ರಮದಿಂದಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿನ  ಪ್ರತಿಭೆಯನ್ನು ಗೌರವಿಸಿ, ಸಮಾಜಕ್ಕೆ ತೋರ್ಪಡಿಸುವಂತಾಗಬೇಕು. ಉತ್ತಮ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜವು ಗುರುತಿಸುವಂತಹ ಕಾರ್ಯಗಳನ್ನು ಕೈಗೊಂಡು ಕಾಲೇಜಿನಲ್ಲಿ ಕಲಿತ ಪ್ರತಿಭಾನ್ವಿತ ಕುಡಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2022-23  ನೇ ಶೈಕ್ಷಣಿಕ ವರ್ಷದ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಪ್ರತಿಭಾ ಪ್ರದೀಪ್ತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಮನುಷ್ಯನ ಮನಸ್ಸಿನಲ್ಲಿ ನಾವು ಪರಿಪೂರ್ಣವೆನ್ನುವ ಭಾವನೆ ಇರಬೇಕು. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪುವ ಮುಖಾಂತರ ಸಾಧನೆಗೈಯ್ಯಬೇಕಾಗಿದೆ. ನಾನು ಈ ಸಾಧನೆ ಮಾಡಬಲ್ಲೆನೇ ಎನ್ನುವ ಅನುಮಾನವನ್ನು ಹೊರಹಾಕಿ ನಾನು ಸಾಧಿಸಿ ತೋರಿಸುತ್ತೇನೆ ಎನ್ನುವ ಆತ್ಮವಿಶ್ವಾಸ ಹುಟ್ಟಬೇಕು. ಜೀವನದಲ್ಲಿ ಬಹು ಎತ್ತರದಲ್ಲಿ ಬೆಳೆಯಬೇಕೆಂಬ ಹಂಬಲ ಎಷ್ಟೋ ವಿದ್ಯಾರ್ಥಿಗಳಲ್ಲಿದೆ, ಇದಕ್ಕೆ ಪೂರಕವಾಗಿ ಪೋಷಕರು ನಿರಂತರವಾಗಿ ಸಹಕರಿಸುತ್ತಿರುತ್ತಾರೆ ಎಂದು ಅವರು ವಿವರಿಸಿದರು.

Ad Widget

Ad Widget <> Ad Widget

ಬಲೂನ್‌ನ ಬಣ್ಣಗಳಿಗೆ ಮರುಳಾಗದೆ,ಅದರಲ್ಲಿ ತುಂಬಿದ ಗಾಳಿಯನ್ನು ಯೋಚಿಸಬೇಕೆಂಬ ಮಾದರಿಯಂತೆ ವಿದ್ಯಾರ್ಥಿಯೂ ಜೀವನದಲ್ಲಿ ಎತ್ತರಕ್ಕೇರಬೇಕಾದರೆ ನಮ್ಮಲ್ಲಿ ನಾವು ಏನ್ನನ್ನು ಅಳವಡಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯವಾಗಿರುತ್ತದೆ. ಜೀವನದಲ್ಲಿ ಗುರಿಯನ್ನು ಮುಟ್ಟುವ ಕನಸು ಕಾಣುತ್ತಾ , ಬದುಕಿನ ಪಯಣವನ್ನು ಖುಷಿಪಡುವುದರ ಮೂಲಕ ಎಲ್ಲಾ  ಸನ್ನಿವೇಶಗಳನ್ನು ಕಲಿತು ಮುನ್ನಡೆಯಬೇಕು ಎಂದು ಕಾರ್ಣಿಕ್‌ ತಮ್ಮ  ದಿಕ್ಸೂಚಿ  ಭಾಷಣದಲ್ಲಿ  ತಿಳಿಸಿದರು.



Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ವಿವೇಕಾನಂದ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೊಂದು ದಿನ  ಉನ್ನತ ಸ್ಥಾನಕ್ಕೇರುತ್ತಾರೆ. ಈ ಮೂಲಕ ವಿವೇಕಾನಂದ ಸಂಸ್ಥೆಯ ಹೆಸರನ್ನು ಎಲ್ಲೆಡೆಯೂ ಪಸರಿಸುತ್ತಾರೆ. ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ಸಿಕ್ಕಿದ ವೇದಿಕೆಯನ್ನು ಸದುಪಯೋಗಪಡಿಸಿಕೊಂಡು ಸಾಧನೆಗೈಯುತ್ತಾ ನಮ್ಮ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕು.   ಪ್ರತಿಭಾನ್ವಿತರಾಗಲು ನಿತ್ಯ ನಿರಂತರ ಸಾಧನೆ ಅತ್ಯಗತ್ಯ. ಪ್ರತಿಭೆಗಳು ಸಮಾಜದ ಬೇರೆ ಬೇರೆ ಕ್ಷೇತ್ರದಲ್ಲಿ ರೂಪುಗೊಂಡು ದೇಶದ ಪರಮ ವೈಭವವನ್ನು ತೋರಿಸುವ ಕೆಲಸವನ್ನು ಕೈಗೊಳ್ಳಬೇಕು. ಭಾರತ ಮಾತೆಗೆ ಸಮಸ್ಯೆ ಬಂದಾಗ ನಮ್ಮ ಪಾತ್ರ ಏನು ಎಂದು ನಮಗೆ ತಿಳಿಯಬೇಕು. ಈ ಮೂಲಕ ಪ್ರತಿಭಾನ್ವಿತರು ಉತ್ತಮ ಸಮಾಜದ ನಿರ್ಮಾಣದ ಕಡೆಗೆ ಗಮನ ಹರಿಸಬೇಕೆಂದು ನುಡಿದರು.

Ad Widget

Ad Widget

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹರಿಕಿರಣ್ ಕೆ ಮಾತನಾಡಿ, ಇಡೀ ರಾಜ್ಯವೇ ವಿವೇಕಾನಂದ  ಸಂಸ್ಥೆಯನ್ನು ಗುರುತಿಸುವಷ್ಟು ಬೆಳೆದಿದೆ ಎಂಬುವುದು ಸಂತೋಷದ ವಿಷಯ. ಜೀವನದಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಧೃತಿಗೆಡದೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಎದುರಿಸಬೇಕೆಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. 

ವಿಶೇಷ ಸನ್ಮಾನ:

ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳು ಸೇರಿದಂತೆ 2022-23 ನೇ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಶ್ರೇಣಿಯಲ್ಲಿ ಸಾಧನೆಗೈದ 342 ವಿದ್ಯಾರ್ಥಿಗಳನ್ನು ಹಾಗೂ ರಾಷ್ಟ್ರ  ಮತ್ತು ರಾಜ್ಯ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ವಾಣಿಜ್ಯ ವಿಭಾಗದಲ್ಲಿ 565ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 3ನೇ ಸ್ಥಾನ ಪಡೆದ ಆದಿತ್ಯನಾರಾಯಣ ಪಿ. ಎಸ್. ವಿಜ್ಞಾನ ವಿಭಾಗದಲ್ಲಿ 592 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 5ನೇ ಸ್ಥಾನ ಹಾಗೂ ಇಂಜಿನಿಯರಿಂಗ್ ನಲ್ಲಿ 2739ನೇ Rank ಗಳಿಸಿದ ದೀಪ್ತಿಲಕ್ಷ್ಮೀ  ಕೆ,  ವಿಜ್ಞಾನ ವಿಭಾಗದಲ್ಲಿ 592 ಅಂಕಗಳನ್ನು ಗಳಿಸುವುದರ ಮೂಲಕ ರಾಜ್ಯಕ್ಕೆ 5ನೇ ಸ್ಥಾನ ಹಾಗೂ ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 2539ನೇ  ರ್ಯಾಂಕ್‌ , ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 3480 ನೇ  Rank ಗಳಿಸಿದ ಆಶ್ರಯ ಪಿ., ಕಲಾ ವಿಭಾಗದಲ್ಲಿ 591 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 3ನೇ ಸ್ಥಾನವನ್ನು ಪಡೆದ ಮಂಜುಶ್ರೀ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 39 ನೇ  Rank, ಇಂಜಿನಿಯರಿಂಗ್ ನಲ್ಲಿ 130ನೇ Rank ̧  ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ 116 ನೇ Rank ಗಳಿಸಿದ ವರ್ಷಿತ್ ಜೆ, ಇಂಜಿನಿಯರಿಂಗ್ ನಲ್ಲಿ 366 ನೇ Rank ಗಳಿಸಿದ ವಿಪುಲ್ ಎಸ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 409 ನೇ Rank  ಮತ್ತು ಇಂಜಿನಿಯರಿಂಗ್ ನಲ್ಲಿ 599ನೇ Rank ಗಳಿಸಿದ ರಾಜ್‌ಕಿರಣ್ ಟಿ. ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 507 ನೇ Rank ಮತ್ತು  ಇಂಜಿನಿಯರಿಂಗ್ ನಲ್ಲಿ 1659ನೇ  Rank ಗಳಿಸಿದ ವೇದಾಕ್ಷ ಎಂ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 1331  ನೇ Rank ಹಾಗೂ ಇಂಜಿನಿಯರಿಂಗ್ ನಲ್ಲಿ 3265ನೇ  Rank  ಗಳಿಸಿದ ಗೌತಮಿ ಪೈ ಎ, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ  536 ನೇ Rank ಹಾಗೂ ಇಂಜಿನಿಯರಿಂಗ್ ನಲ್ಲಿ 1103ನೇ Rank  ಗಳಿಸಿದ ಮನಸ್ವಿ ಭಟ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 361 ನೇ  Rank ಹಾಗೂ  ಇಂಜಿನಿಯರಿಂಗ್ ನಲ್ಲಿ 855 ನೇ Rank ಗಳಿಸಿದ ಶ್ರೀರಾಮ್ ಭಟ್, ಎಗ್ರಿಕಲ್ಚರ್ ಬಿಯಸ್ಸಿಯಲ್ಲಿ 924 ನೇ Rank  ಹಾಗೂ ಇಂಜಿನಿಯರಿಂಗ್ ನಲ್ಲಿ 2268ನೇ  Rank ಗಳಿಸಿದ ಸ್ತುತಿಶೀಲ, ಜೆ.ಇ.ಇ. ಎಡ್ವನ್ಸ್ಡ್ ಪರೀಕ್ಷೆಯಲ್ಲಿ ಯಸ್.ಟಿ. ವಿಭಾಗದಲ್ಲಿ 1561‌  Rank ಗಳಿಸಿದ ಅಮೋಘ್ ಎ.ಪಿ, ಸಿ ಎ ಪರೀಕ್ಷೆಯಲ್ಲಿ ಸಾಧನೆಗೈದ ದೀಪ್ನಾ ಮತ್ತು ಪೂರ್ವಿಕ್ ಇವರನ್ನು ಶಾಲು ಹೊದಿಸಿ ವಿಶೇಷವಾಗಿ ಸನ್ಮಾನಿಸಲಾಯಿತು.

ನಂತರ ವಿದ್ಯಾರ್ಥಿಗಳಾದ ಮಂಜುಶ್ರೀ, ಆಶ್ರಯ ಪಿ,ಚಿತ್ತಾರ ಪಟೇಲ್,ದೀಪ್ತಿಲಕ್ಷೀ, ವರ್ಷಿತ್ ಕಾಲೇಜಿನ ಅನುಭವಗಳನ್ನು ಹಂಚಿಕೊಂಡರು.

ಕಾಲೇಜಿನ ಉಪನ್ಯಾಸಕ ಶ್ರೀಧರ ಶೆಟ್ಟಿಗಾರ್ ಮಾತನಾಡಿ ಪ್ರತಿಭಾ ಪ್ರದೀಪ್ತಿ ಕಾರ್ಯಕ್ರಮ ಎಂಬ ಹೆಸರು ಕೇವಲ ಅಂಕಕ್ಕೆ ಸೀಮಿತವಾಗದೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸುವುದು ಎಂದರ್ಥ. ಸಾಧಕ ವಿದ್ಯಾರ್ಥಿಗಳಿಗೆ ಮಾಡುವ ಸನ್ಮಾನಗಳು ಎಲ್ಲರ ಪಾಲಿಗೆ ಆಶೀರ್ವಾದವಾಗಿ ಪರಿಣಮಿಸಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಗಲಿ. ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಸಮಾಜದ ಕೀರ್ತಿಯನ್ನು ಎತ್ತಿಹಿಡಿಯುವಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳಯಬೇಕು. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಗುರುರಾಜ ಎಂ. ಪಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಸ್ವಾಗತಿಸಿ ಉಪನ್ಯಾಸಕ ಪರಮೇಶ್ವರ ಶರ್ಮ ವಂದಿಸಿದರು. ಉಪನ್ಯಾಸಕಿ ದಯಾಮಣಿ ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ

Published

on



Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

Ad Widget

Ad Widget <> Ad Widget

ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.



Ad Widget

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

Ad Widget

Ad Widget

ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ. ಹಾಗೂ ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು.

6ನೇ ತರಗತಿಯ ಆರಾಧ್ಯ ಸ್ವಾಗತಿಸಿದರು. 9ನೇ ತರಗತಿಯ ಮಾನ್ಯಲಕ್ಷೀ ಎನ್ ಪಿ ಯೋಧರ ಪರಿಚಯಗೈದರು. 9ನೇ ತರಗತಿಯ ಕುವೀರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಬಿ ಪಿ ಸಹಕರಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.

Ad Widget

Ad Widget <> Ad Widget

ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.



Ad Widget

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ad Widget

Ad Widget

ಡಾಟಾಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಗಗನ್‌ದೀಪ್ ಸ್ವಾಗತಿಸಿ, ನಿಹಾರಿಕಾ ಅತಿಥಿಗಳನ್ನು ಪರಿಚಯಿಸಿದರು. ಆಶ್ಲೇಷ್ ವಂದನಾರ್ಪಣೆಗೈದರು. ಶ್ರೇಯಾ ಎಮ್. ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನ ಎನ್ ಸಿ ಸಿ ವಿದ್ಯಾರ್ಥಿಗಳು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ತೃತೀಯ ಬಿಸಿಎ ವಿದ್ಯಾರ್ಥಿನಿ ಸಿಕ್ಯೂಎಂಎಸ್ ಬಿ.ಆಶಾಕಿರಣ್ ಮತ್ತು ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಸಿಪಿಎಲ್ ಎಸ್.ಎಂ ದರ್ಶನ್ ಇವರು ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್‌ನಲ್ಲಿ ಭಾಗವಹಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುಜರಾತ್‌ನಲ್ಲಿ ಸ್ಪೆಷಲ್ ನ್ಯಾಷನಲ್ ಇಂಟಿಗ್ರೇಷನ್ ಕ್ಯಾಂಪ್ ನಡೆಯುತ್ತಿದ್ದು, ಈ ಕ್ಯಾಂಪ್‌ನಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ನವೆಂಬರ್ ೧ರಂದು ನಡೆಯುವ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗಣ್ಯ ವ್ಯಕ್ತಿಯಾಗಿ ಆಗಮಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಎನ್.ಸಿ.ಸಿ ಘಟಕದ ಮುಖ್ಯಸ್ಥ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್.ಸಿ.ಸಿ ಘಟಕ, ಐಕ್ಯೂಎಸಿ ಘಟಕ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ ಶುಭಾಶಯಗಳನ್ನು ಕೋರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading