Connect with us

ರಾಜ್ಯ

PM Fasal Bhima Yojana | ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ಇನ್ನು ಕೇವಲ 4 ದಿನ..! ಅವಧಿ ಮುಗಿಯುತ್ತಾ ಬಂದರೂ ಸರ್ಕಾರ ಮೌನ..! ವಿಮೆಯಿಂದ ಅಡಿಕೆ ಕೈಬಿಡಲಾಗಿದೆಯೇ..? ಸರ್ಕಾರದ ಸುತ್ತೋಲೆ ಇಲ್ಲದೆ ಕೆಲವು ಸಹಕಾರ ಸಂಘಗಳಲ್ಲಿ ಕಾನೂನು ಬಾಹಿರ ಸಂಗ್ರಹಿಸಿವೆ ಭಾರಿ ಮೊತ್ತದ ಹಣ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ವರದಾನವಾಗಿದ್ದ ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್ ಬಿಮಾ ವಿಮಾ (PM Fasal Bhima Yojana) ಯೋಜನೆಯ 2023-24ನೇ ಸಾಲಿನ ವಿಮಾ ಕಂತು ತುಂಬುವ ಅವಧಿಯ ಮುಕ್ತಾಯ ದಿನ ಸಮೀಪಿಸಿದರೂ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ.

Ad Widget

Ad Widget

Ad Widget

Ad Widget

ಬೆಳೆಗಾರರು ಕೃಷಿ ಪ್ರಾಥಮಿಕ ಸಂಘ, ಬ್ಯಾಂಕ್‌ಗಳಿಗೆ ತೆರಳಿ ವಿಚಾರಿಸುತ್ತಿದ್ದರೂ ಸರಕಾರದ ಹಂತದಿಂದ ಯಾವುದೇ ಸುತ್ತೋಲೆ ಬಾರದ ಕಾರಣ ಕಂತು ತುಂಬಲು ಸಾಧ್ಯವಾಗಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಆದೇಶವೇ ಬಂದಿಲ್ಲ
ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಕಂತು ತುಂಬುವ ವಿಧಾನದ ಬಗ್ಗೆ ಆದೇಶ ತೋಟಗಾರಿಕೆ ಇಲಾಖೆಯ ಮೂಲಕ ಸಹಕಾರ ಸಂಘಗಳಿಗೆ ಬರುತ್ತದೆ. ಆದರೆ ಈ ಬಾರಿ ಜೂನ್‌ ಕೊನೆಯಾಗುತ್ತಾ ಬಂದರೂ ಕಂತು ಪಡೆಯುವ ಬಗ್ಗೆ ಅಧಿಸೂಚನೆ, ಸುತ್ತೋಲೆ ತಲುಪಿಲ್ಲ.

Ad Widget

Ad Widget <> Ad Widget

ಟೆಂಡರ್‌ ವಿಳಂಬ
ಈ ಬಗ್ಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ವಿಚಾರಿಸಿದರೆ ವಿಮಾ ಸಂಸ್ಥೆಗಳಿಗೆ ನೀಡಲಾಗಿದ್ದ ಮೂರು ವರ್ಷಗಳ ಅವಧಿ ಮುಕ್ತಾಯಗೊಂಡಿದೆ. ಹೊಸದಾಗಿ ಟೆಂಡರ್‌ ಆಹ್ವಾನಿಸಲಾಗಿದೆ. ಆ ಪ್ರಕ್ರಿಯೆ ತುಸು ವಿಳಂಬವಾದ ಕಾರಣ ಕಂತು ತುಂಬುವ ಪ್ರಕ್ರಿಯೆ ಆರಂಭಗೊಂಡಿಲ್ಲ ಅನ್ನುವ ಉತ್ತರ ಬರುತ್ತಿದೆ. ಆದರೆ ಮೂಲಗಳ ಪ್ರಕಾರ ಟೆಂಡರ್‌ ಪಡೆಯಲು ವಿಮಾ ಕಂಪೆನಿಗಳು ಮುಂದೆ ಬಂದಿಲ್ಲ. ಹೀಗಾಗಿ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ವಿಮಾ ಕಂಪೆನಿಗಳು ಟೆಂಡರ್‌ ಪಡೆ ಯದಿದ್ದರೆ ಯೋಜನೆ ಅನುಷ್ಠಾನ ಇನ್ನಷ್ಟು ವಿಳಂಬವಾಗಲಿದೆ.



Ad Widget

ಅಡಿಕೆಗೆ ಇಲ್ಲ?
ಈ ಬಾರಿ ಹವಾಮಾನ ವಿಮಾ ಯೋಜನೆಯ ವ್ಯಾಪ್ತಿಯಿಂದ ವಾಣಿಜ್ಯ ಬೆಳೆಯಾಗಿರುವ ಕಾರಣಕ್ಕೆ ಅಡಿಕೆಯನ್ನು ಹೊರಗಿಡಲಾಗಿದೆ ಅನ್ನುವ ಅನುಮಾನ ವ್ಯಾಪಕವಾಗಿ ಹಬ್ಬಿದೆ. ಆದರೆ ಇದನ್ನು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ನಿರಾಕರಿಸಿದ್ದಾರೆ.

Ad Widget

Ad Widget

ವಿಳಂಬಕ್ಕೆ ಕಾರಣ?
ಅಡಿಕೆ ಮತ್ತು ಕಾಳು ಮೆಣಸಿನ ಹವಾಮಾನ ಆಧಾರಿತ ಫ‌ಸಲು ವಿಮಾ ಯೋಜನೆ ಮತ್ತು ಭತ್ತದ ಬೆಳೆಗಿರುವ ಫ‌ಸಲು ವಿಮಾ ಯೋಜನೆಯು ದಿನನಿತ್ಯದ ಮಳೆ ಮತ್ತು ಉಷ್ಣಾಂಶ ಮಾಹಿತಿ ಮೇಲೆ ತೀರ್ಮಾನವಾಗುತ್ತದೆ. ರೈತರಿಗೆ ವಿಮೆ ಪಡೆಯಲು ಮಳೆ ಮತ್ತು ಹವಾಮಾನ ಆಧಾರಿತ ಅಂಕಿ ಅಂಶದ ಟರ್ಮ್ ಶೀಟ್‌ ಪ್ರಧಾನ ಪಾತ್ರ ವಹಿಸುತ್ತದೆ. ಈ ಟರ್ಮ್ ಶೀಟ್‌ ಆಧಾರದಲ್ಲಿ ರಾಜ್ಯ ಸರಕಾರ ವಿಮಾ ಏಜೆನ್ಸಿ ನಿಗದಿಪಡಿಸಲು ಟೆಂಡರ್‌ ಕರೆಯುತ್ತದೆ. ಟೆಂಡರ್‌ ಪ್ರಕ್ರಿಯೆ ಮೇ ತಿಂಗಳಲ್ಲಿ ಮುಗಿದು ಜೂ. 30ರ ಒಳಗೆ ರೈತರು ವಿಮಾ ಹಣ ಪಾವತಿಸಬೇಕು. ಈ ಹಿಂದೆ ರಾಜ್ಯ ಸರಕಾರ ನಿಗದಿಪಡಿಸಿರುವ ವಿಮಾ ಶೇರಿನ ಬಗ್ಗೆಯೂ ಕಂಪೆನಿ ಗಳಿಗೆ ಒಪ್ಪಿಗೆ ಇರಲಿಲ್ಲ. ಕಂಪೆನಿ ಗಳು ತೋಟಗಾರಿಕೆ ಮತ್ತು ಕೃಷಿ ಇಲಾಖೆ ನೆರವಿನಿಂದ ರೈತರಿಂದ ಜೂನ್‌ ಅಂತ್ಯದಲ್ಲಿ ವಿಮಾ ಕಂತು ಕಟ್ಟಿಸಿಕೊಳ್ಳದಿದ್ದರೆ ಯೋಜನೆಯ ಉದ್ದೇಶವೇ ವಿಫ‌ಲವಾಗುತ್ತದೆ. ರೈತರಿಗೆ ದೊಡ್ಡ ನಷ್ಟವಾಗಲಿದೆ.

ಕೆಲವು ಕಡೆ ಸಂಗ್ರಹ:

ಏಜೆನ್ಸಿ ರಿನಿವಲ್ ಆಗದೇ, ಟೆಂಡರ್ ಕರೆಯದೇ, ಸರ್ಕಾರದ ಆದೇಶ ಹೊರಡಿಸದಿದ್ದರೂ ಕೆಲವು ಕೃಷಿ ಪತ್ತಿನ ಸಂಘಗಳು ರೈತರಿಂದ ಈಗಾಗಲೇ ಮೇ.31 ರ ಗಡುವು ನೀಡಿ ಸರ್ಕಾರದ ಆದೇಶದಂತೆ ಸಂಗ್ರಹಿಸುತ್ತಿದ್ದೇವೆ ಎನ್ನುವ ನೋಟಿಸ್ ನೀಡಿ ವಿಮಾ ಕಂತು ಸಂಗ್ರಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ಅಡಿಕೆಯನ್ನು ಈ ಬಾರಿ ಸೇರಿಸಲಾಗಿದೆಯ ಎನ್ನುವ ಸ್ಪಷ್ಟತೆ ಇಲ್ಲದಿದ್ದರೂ ಹೆಕ್ಟರ್ ಗೆ ವಿಮಾ ಕಂತು ನಿಗಧಿಯಾಗಿಲ್ಲದಿದ್ದರೂ 6400ರೂ ಯಂತೆ ಬೆಳೆವಿಮೆ ಸಂಗ್ರಹಿಸಿದೆ. ಸಹಕಾರಿ ಸಂಘಗಳಲ್ಲಿ ಈ ಹಣವೇ ಕೋಟಿ ಕೋಟಿ ಸಂಗ್ರಹವಾಗಿದೆ.

ಕೆಲವೊಂದು ಸಹಕಾರಿ ಸಂಘಗಳು ಈ ರೀತಿ ಹಣ ಸಂಗ್ರಹಿಸಿರುವುದು ಅನುಮಾನ ಸೃಷ್ಟಿಸಿದೆ.

36 ಬೆಳೆಗಳಿಗೆ
ಪ್ರಧಾನ ಮಂತ್ರಿ ಫ‌ಸಲ್‌ ವಿಮಾ ಯೋಜನೆ
ಹವಾಮಾನ ಆಧಾರಿತ
ಬೆಳೆ ವಿಮಾ ಯೋಜನೆಯ ವಿಳಂಬದ ನಡುವೆ 2023-24ನೇ ಸಾಲಿನ ಮುಂಗಾರು ಹಂಗಾಮಿ ನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆಯನ್ನು 36 ಕೃಷಿ ಬೆಳೆಗಳಿಗೆ ಅನ್ವಯ ಆಗುವಂತೆ ಅನುಷ್ಠಾನಗೊಳಿಸಲಾಗಿದೆ. ಮೂರು ವರ್ಷಗಳ ಬದಲು ಒಂದೇ ವರ್ಷಕ್ಕೆ ಸೀಮಿತಗೊಳಿಸಿ ಅನುಮೋದನೆ ನೀಡಿದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಭತ್ತಕ್ಕೆ ಈ ವಿಮಾ ಯೋಜನೆ ಅನ್ವಯ ಆಗಲಿದೆ.

ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ವಿಮಾ ನವೀಕರಣ ಆಗಿಲ್ಲ. ಪ್ರೀಮಿಯಂ ಮೊತ್ತದ ವಿಚಾರದಲ್ಲಿಯೂ ಅಂತಿಮ ತೀರ್ಮಾನ ಬಾಕಿ ಇದೆ. ಪ್ರಕ್ರಿಯೆ ಪೂರ್ಣಗೊಳ್ಳಲು ಕೆಲವು ದಿನಗಳು ಬೇಕಿದ್ದು, ಅದಾದ ಬಳಿಕ ಅನುಷ್ಠಾನ ಆಗಲಿದೆ. ವಿಮಾ ಯೋಜನೆಯಿಂದ ಅಡಿಕೆ ಕೃಷಿ ಕೈ ಬಿಡುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ.
-ಶಕೀಲ್‌ ಅಹಮದ್‌, ಇ ಆಡಳಿತ ಯೋಜನಾ ನಿರ್ವಹಣೆ ಘಟಕ
ತೋಟಗಾರಿಕೆ ಜಂಟಿ ನಿರ್ದೇಶಕ, ಬೆಂಗಳೂರು

Ad Widget
Click to comment

Leave a Reply

ರಾಜ್ಯ

Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

Ad Widget <> Ad Widget

ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.



Ad Widget

ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

Ad Widget

Ad Widget

ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.

ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.

Ad Widget
Continue Reading

ರಾಜ್ಯ

Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ

Published

on



Ad Widget

Ad Widget

Ad Widget

Ad Widget

ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಯಾವ ಭಾಗದಲ್ಲಿ ಎಷ್ಟು ಮಳೆ ಕೊರತೆ?
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಶೇ.24ಕ್ಕೂ ಅಧಿಕ ಕೊರತೆ ಉಂಟಾಗಿದೆ.

Ad Widget

Ad Widget <> Ad Widget

ದೇಶಾದ್ಯಂತ ಈ ಮುಂಗಾರು ಅವಧಿಯಲ್ಲಿ ಒಟ್ಟು 759.4 ಮಿ.ಮೀ. ಮಳೆಯಾಗಿದೆ. 2001ರ ಬಳಿಕ ಇದು ನಾಲ್ಕನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರಿಂದ ಲೆಕ್ಕ ಹಾಕಿದರೆ 13ನೇ ಅತಿ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Ad Widget

ಎಲ್‌ನಿನೋ ಪ್ರಭಾವ
ದೇಶಾದ್ಯಂತ ಮಳೆ ಕೊರತೆಗೆ ಎಲ್‌ನಿನೋ ಪರಿಣಾಮವೂ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್‌ನಿನೋ ಪರಿಸ್ಥಿತಿಯಿಂದ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಭಾವ ಉಂಟಾಗಿದೆ.

Ad Widget

Ad Widget

ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಕರ್ನಾಟಕದಲ್ಲಿ ಎಲ್‌ನಿನೋ ಪರಿಣಾಮ ತೀವ್ರವಾಗಿ ಕಂಡುಬಂದಿದ್ದು, ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ. ಈಗಾಗಲೇ ರಾಜ್ಯದ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ದಕ್ಷಿಣ ಭಾರತದ ಇತರ ರಾಜ್ಯಗಳ ಪೈಕಿ ಕೇರಳದಲ್ಲಿ ಶೇ.28, ಆಂಧ್ರಪ್ರದೇಶದಲ್ಲಿ ಶೇ.25, ತಮಿಳುನಾಡಿನಲ್ಲಿ ಶೇ.20 ಹಾಗೂ ತೆಲಂಗಾಣದಲ್ಲಿ ಶೇ.18ರಷ್ಟು ಮಳೆ ಕೊರತೆ ದಾಖಲಾಗಿದೆ.

ಇತರ ರಾಜ್ಯಗಳಲ್ಲೂ ಮಳೆ ಅಭಾವ
ಮಣಿಪುರದಲ್ಲಿ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಅಭಾವ ಎದುರಿಸುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಅರುಣಾಚಲ ಪ್ರದೇಶದಲ್ಲಿ ಶೇ.44, ಪಂಜಾಬ್‌ನಲ್ಲಿ ಶೇ.41, ಬಿಹಾರದಲ್ಲಿ ಶೇ.32, ಅಸ್ಸಾಂನಲ್ಲಿ ಶೇ.28 ಹಾಗೂ ಹರಿಯಾಣದಲ್ಲಿ ಶೇ.23ರಷ್ಟು ಕೊರತೆ ದಾಖಲಾಗಿದೆ.

ದಶಕದಲ್ಲೇ ಒಣಹವೆಯ ಮುಂಗಾರು
ಎಲ್‌ನಿನೋ ಪರಿಣಾಮದಿಂದಾಗಿ ಈ ಬಾರಿ ದೇಶದಲ್ಲಿ ದಶಕದಲ್ಲೇ ಅತ್ಯಂತ ಒಣಹವೆಯ ಮುಂಗಾರು ದಾಖಲಾಗಿದೆ. 2015ರಲ್ಲಿ ಕೊನೆಯ ಬಾರಿಗೆ ಇದೇ ರೀತಿಯ ಮಳೆ ಕೊರತೆ ಕಂಡುಬಂದಿದ್ದು, ಆ ವರ್ಷವೂ ದೇಶಾದ್ಯಂತ ಸುಮಾರು ಶೇ.13ರಷ್ಟು ಮಳೆ ಕೊರತೆ ದಾಖಲಾಗಿತ್ತು.

ಜೂನ್‌ನಲ್ಲಿ ತೀವ್ರ ಮಳೆ ಕೊರತೆ
ಮುಂಗಾರು ಆರಂಭದ ಜೂನ್ ತಿಂಗಳಲ್ಲೇ ಮಳೆ ಕೊರತೆ ತೀವ್ರವಾಗಿತ್ತು. ಆ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.65ರಷ್ಟು ಮಾತ್ರ ಮಳೆಯಾಗಿತ್ತು. ಜುಲೈನಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದರೂ, ಆಗಸ್ಟ್‌ನಲ್ಲಿ ಮತ್ತೆ ಕೊರತೆ ಉಂಟಾಯಿತು. ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣದಲ್ಲಿ ತುಸು ಸುಧಾರಣೆ ಕಂಡುಬಂದಿದೆ.

Ad Widget
Continue Reading

ಕ್ರೈಂ

Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ

Published

on



Ad Widget

Ad Widget

Ad Widget

Ad Widget

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.



Ad Widget

ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.

Ad Widget

Ad Widget

ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading