ರಾಜ್ಯ
ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ – ವಿ.ಸೋಮಣ್ಣ : ಕಟೀಲ್ ರ ದೂರದೃಷ್ಟಿ, ಶ್ರಮದಿಂದ ಪಕ್ಷ ಇಲ್ಲಿಯವರೆಗೆ ಬೆಳೆದಿದೆ – ಯಡಿಯೂರಪ್ಪ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ, ಇದೀಗ “ನನಗಿಂತ ಬುದ್ಧಿವಂತರು ಸಿಕ್ಕರೆ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿ’ ಎಂದು ಹೇಳುವ ಮೂಲಕ ಪಕ್ಷಕ್ಕೆ ಹೊಸ ಸವಾಲು ಹಾಕಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ. ಒಂದು ವೇಳೆ ನನಗಿಂತ ಬುದ್ಧಿವಂತರು ಯಾರಾದರೂ ಇದ್ದರೆ ಅವರಿಗೇ ಅಧ್ಯಕ್ಷ ಸ್ಥಾನ ಕೊಡಲಿ. ನಾನು ಪಕ್ಷ ಹೇಳುವ ಕೆಲಸ ಮಾಡಿಕೊಂಡಿರುತ್ತೇನೆ ಎಂದು ಹೇಳಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೌಂಡರಿ, ಸಿಕ್ಸರ್ ಬಾರಿಸಲು ಹೋಗಿ ಬೌಲ್ಡ್ ಆಗಿದ್ದೇನೆ. ನಾನು ಸುಮ್ಮನೆ ಕೂತಿರುವವನಲ್ಲ, ನಿದ್ದೆ ಮಾಡಲ್ಲ, ಬೇರೆಯವರಿಗೂ ನಿದ್ದೆ ಮಾಡಲು ಬಿಡಲ್ಲ, ನಾನು ಸನ್ಯಾಸಿ ಅಲ್ಲ, ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆ ಎಂದು ನೋಡಬೇಕು.ನಾನು ಪಕ್ಷ ಹೇಳಿದ ಕೆಲಸ ಮಾಡಿದ್ದೇನೆ. ಎಂಥಹ ಸಂದರ್ಭದಲ್ಲೂ ವಿಚಲಿತನಾಗಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ. ಇಲ್ಲದಿದ್ದರೆ ಬೇಸರ ಇಲ್ಲ ಎಂದೂ ಇದೇ ವೇಳೆ ಸೋಮಣ್ಣ ಹೇಳಿದರು.ಪಕ್ಷ ನೀಡಿದ ಕೆಲಸಗಳನ್ನು ತಲೆ ಮೇಲೆ ಹೊತ್ತು ಮಾಡಿದ್ದೇನೆ.
ಇಲ್ಲಿಯವರೆಗೂ 12 ಚುನಾವಣೆಗಳನ್ನು ನೋಡಿದ್ದೇನೆ. 7 ರಿಂದ 8 ಉಪಚುನಾವಣೆಗಳಲ್ಲಿ ಕೆಲಸ ಮಾಡುವ ಅವಕಾಶವನ್ನು ಪಕ್ಷ ಕೊಟ್ಟಿದೆ. ಆದರೆ ಕಳೆದ ಒಂದೂವರೆ ತಿಂಗಳಿಂದ ನಿರುದ್ಯೋಗಿಯಾಗಿ ಕುಳಿತಿದ್ದೇನೆ. ನನಗೆ ಸುಮ್ಮನೆ ಕುಳಿತು ಅಭ್ಯಾಸವಿಲ್ಲ. ಸದಾ ಚಟುವಟಿಕೆಯಿಂದ ಇರುವವ. ನಾನು ಏನು ಕಳೆದುಕೊಂಡಿದ್ದೇನೋ ಅದನ್ನು ಪಡೆದುಕೊಳ್ಳುತ್ತೇನೆ ಎಂದು ಹೇಳಿದರು.
2019ರ ಚಿಂಚೋಳ್ಳಿ ಮತ್ತು ಕುಂದಗೋಳ ಉಪಚುನಾವಣೆ ವಿಚಾರ ಪ್ರಸ್ತಾಪಿಸಿದ ಸೋಮಣ್ಣ , ಚಿಂಚೋಳಿ ಚುನಾವಣೆಯಲ್ಲಿ ಸೋಮಣ್ಣ, ರವಿಕುಮಾರ್ ಚುನಾವಣಾ ಉಸ್ತುವಾರಿಯಾಗಿದ್ದರೆ ಕುಂದಗೋಳಕ್ಕೆ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದಗೌಡರು ಉಸ್ತುವಾರಿಗಳು ಆಗ ಬಿಜೆಪಿ ಚಿಂಚೋಳಿ ಗೆದ್ದು, ಕುಂದಗೋಳದಲ್ಲಿ ಸೋಲು ಅನುಭವಿಸಿತು ಎಂದು ಯಡಿಯೂರಪ್ಪ ವಿರುದ್ಧ ತಮಗಿರುವ ಅಸಮಧಾನವನ್ನು ವ್ಯಕ್ತಪಡಿಸಿದರು.
ಪ್ರತಿಫಲ ಬಯಸಿ ಕೆಲಸ ಮಾಡಬಾರದು. ನಮ್ಮೆಲ್ಲರಿಗಿಂತ ದೊಡ್ಡವರು ಈ ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. ಯಾರ ಜೊತೆಗೂ ರಾಜೀ ಮಾಡಿಕೊಳ್ಳದೇ ಪಕ್ಷದ ಕೆಲಸ ಮಾಡಬೇಕು. ಆದರೆ ಕೆಲವು ವಿಚಾರಗಳ ಬಗ್ಗೆ ಮಾತಾಡಿದರೆ ಕೆಲವರಿಗೆ ತಪ್ಪಾಗಿ ಕಾಣಿಸುತ್ತದೆ ಎಂದು ಮಾಚಿ ಸಚಿವರು ನೋವು ವ್ಯಕ್ತಪಡಿಸಿದರು.
ಕಟೀಲ್ ಕಾರ್ಯವೈಖರಿಗೆ ಮೆಚ್ಚುಗೆ: ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂಭಾವಿತ, ಸಂಸ್ಕಾರ ಇರುವ ವ್ಯಕ್ತಿ. ಇಡೀ ರಾಜ್ಯವನ್ನು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಪ್ರವಾಸ ಮಾಡಿದ್ದಾರೆ. ಅವರ ಶ್ರಮ ದುಡಿಮೆ, ದೂರದೃಷ್ಟಿ ಚಿಂತನೆಗಳಿಂದ ಪಕ್ಷ ಇಲ್ಲಿವರೆಗೆ ಬೆಳೆದಿದೆ ಎಂದು ಕಟೀಲ್ ಕಾರ್ಯವೈಖರಿಗೆ ಸೋಮಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ
Temperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಕೊರತೆಯ ಮುನ್ಸೂಚನೆಯು ಕೃಷಿ ಹಾಗೂ ಜಲಾಶಯಗಳ ನೀರಿನ ನಿರ್ವಹಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ನೀರಿನ ಮಿತವ್ಯಯ ಹಾಗೂ ಪರ್ಯಾಯ ಬೆಳೆ ಯೋಜನೆಗಳತ್ತ ಗಮನಹರಿಸುವ ಅಗತ್ಯವಿದೆ.
ಮಳೆ ಕೊರತೆಗೆ ಕಾರಣವೇನು?
ಎಲ್ ನಿನೋ ಪ್ರಭಾವ: ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ ಪರಿಸ್ಥಿತಿ ಮುಂದುವರಿದಿದ್ದು, ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ ಹೆಚ್ಚಾಗಿದೆ. ಈ ಪರಿಸ್ಥಿತಿ ವರ್ಷಾಂತ್ಯದವರೆಗೂ ಮುಂದುವರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ತಟಸ್ಥ ಐಒಡಿ: ಹಿಂದೂ ಮಹಾಸಾಗರದಲ್ಲಿನ ಇಂಡಿಯನ್ ಓಷನ್ ಡೈಪೋಲ್ (IOD) ಸದ್ಯ ತಟಸ್ಥ ಸ್ಥಿತಿಯಲ್ಲಿದ್ದು, ಹಿಂಗಾರು ಅವಧಿಯಲ್ಲೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಭಾರತದಲ್ಲಿ ಹೇಗಿರಲಿದೆ ಮಳೆ?
ತಮಿಳುನಾಡು, ಪುದುಚೇರಿ-ಕಾರೈಕಲ್, ಕರಾವಳಿ ಆಂಧ್ರಪ್ರದೇಶ-ಯಾನಾಂ, ರಾಯಲಸೀಮೆ, ಕೇರಳ-ಮಾಹೆ ಸೇರಿದಂತೆ ದಕ್ಷಿಣ ಭಾರತದ ಕೆಲವು ಹವಾಮಾನ ಉಪವಿಭಾಗಗಳಲ್ಲಿ ಹಿಂಗಾರು ಮಳೆ ಸಾಮಾನ್ಯ ಅಥವಾ ವಾಡಿಕೆಯಷ್ಟಿರುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಮಳೆ ವಾಡಿಕೆಯಷ್ಟಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ತಿಳಿಸಿದೆ.
ದೇಶದ ಮಟ್ಟದಲ್ಲಿ ಅಕ್ಟೋಬರ್‌ನಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಆದರೆ ವಾಯವ್ಯ ಭಾರತದ ಕೆಲವು ಭಾಗಗಳು, ದಕ್ಷಿಣ ಪರ್ಯಾಯ ದ್ವೀಪ ಹಾಗೂ ಪೂರ್ವ ಭಾರತದ ಕೆಲವೆಡೆ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.
ಮಳೆಯಷ್ಟೇ ಅಲ್ಲ, ತಾಪಮಾನವೂ ಏರಿಕೆ
ಹಿಂಗಾರು ಮಳೆಯ ಕೊರತೆಯೊಂದಿಗೆ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆ ಇದೆ.
ಈಶಾನ್ಯ ಮತ್ತು ವಾಯವ್ಯ ಭಾರತದ ಕೆಲವು ಭಾಗಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಕಡೆ ಹಗಲಿನ ಗರಿಷ್ಠ ತಾಪಮಾನ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ರೀತಿ ಈಶಾನ್ಯ ಭಾರತ ಹೊರತುಪಡಿಸಿ ಬಹುತೇಕ ಪ್ರದೇಶಗಳಲ್ಲಿ ರಾತ್ರಿಯ ಕನಿಷ್ಠ ತಾಪಮಾನವೂ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಯಿದ್ದು, ಸೆಕೆ ಮುಂದುವರಿಯುವ ಮುನ್ಸೂಚನೆ ಇದೆ.
ರಾಜ್ಯ
Lowest rainfall-ಎಲ್‌ನಿನೋ ಪ್ರಭಾವ: 11 ವರ್ಷಗಳಲ್ಲೇ ಅತಿ ಕಡಿಮೆ ಮಳೆ; ದೇಶಾದ್ಯಂತ ಶೇ.13, ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸದಿಲ್ಲಿ: ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಮಳೆ ಕೊರತೆಯ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವ ಭಾಗದಲ್ಲಿ ಎಷ್ಟು ಮಳೆ ಕೊರತೆ?
ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಶೇ.25ಕ್ಕೂ ಅಧಿಕ ಮಳೆ ಕೊರತೆ ದಾಖಲಾಗಿದ್ದರೆ, ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಶೇ.24ಕ್ಕೂ ಅಧಿಕ ಕೊರತೆ ಉಂಟಾಗಿದೆ.
ದೇಶಾದ್ಯಂತ ಈ ಮುಂಗಾರು ಅವಧಿಯಲ್ಲಿ ಒಟ್ಟು 759.4 ಮಿ.ಮೀ. ಮಳೆಯಾಗಿದೆ. 2001ರ ಬಳಿಕ ಇದು ನಾಲ್ಕನೇ ಅತಿ ಕಡಿಮೆ ಮುಂಗಾರು ಮಳೆಯಾಗಿದ್ದು, 1901ರಿಂದ ಲೆಕ್ಕ ಹಾಕಿದರೆ 13ನೇ ಅತಿ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್‌ನಿನೋ ಪ್ರಭಾವ
ದೇಶಾದ್ಯಂತ ಮಳೆ ಕೊರತೆಗೆ ಎಲ್‌ನಿನೋ ಪರಿಣಾಮವೂ ಪ್ರಮುಖ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್‌ನಿನೋ ಪರಿಸ್ಥಿತಿಯಿಂದ ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಭಾವ ಉಂಟಾಗಿದೆ.
ಕರ್ನಾಟಕದಲ್ಲಿ ಶೇ.30ರಷ್ಟು ಮಳೆ ಕೊರತೆ
ಕರ್ನಾಟಕದಲ್ಲಿ ಎಲ್‌ನಿನೋ ಪರಿಣಾಮ ತೀವ್ರವಾಗಿ ಕಂಡುಬಂದಿದ್ದು, ರಾಜ್ಯದಲ್ಲಿ ಶೇ.30ರಷ್ಟು ಮಳೆ ಕೊರತೆ ದಾಖಲಾಗಿದೆ. ಈಗಾಗಲೇ ರಾಜ್ಯದ 100ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ದಕ್ಷಿಣ ಭಾರತದ ಇತರ ರಾಜ್ಯಗಳ ಪೈಕಿ ಕೇರಳದಲ್ಲಿ ಶೇ.28, ಆಂಧ್ರಪ್ರದೇಶದಲ್ಲಿ ಶೇ.25, ತಮಿಳುನಾಡಿನಲ್ಲಿ ಶೇ.20 ಹಾಗೂ ತೆಲಂಗಾಣದಲ್ಲಿ ಶೇ.18ರಷ್ಟು ಮಳೆ ಕೊರತೆ ದಾಖಲಾಗಿದೆ.
ಇತರ ರಾಜ್ಯಗಳಲ್ಲೂ ಮಳೆ ಅಭಾವ
ಮಣಿಪುರದಲ್ಲಿ ಶೇ.46ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಅಭಾವ ಎದುರಿಸುತ್ತಿರುವ ರಾಜ್ಯಗಳ ಪೈಕಿ ಇದು ಅತ್ಯಧಿಕವಾಗಿದೆ. ಅರುಣಾಚಲ ಪ್ರದೇಶದಲ್ಲಿ ಶೇ.44, ಪಂಜಾಬ್‌ನಲ್ಲಿ ಶೇ.41, ಬಿಹಾರದಲ್ಲಿ ಶೇ.32, ಅಸ್ಸಾಂನಲ್ಲಿ ಶೇ.28 ಹಾಗೂ ಹರಿಯಾಣದಲ್ಲಿ ಶೇ.23ರಷ್ಟು ಕೊರತೆ ದಾಖಲಾಗಿದೆ.
ದಶಕದಲ್ಲೇ ಒಣಹವೆಯ ಮುಂಗಾರು
ಎಲ್‌ನಿನೋ ಪರಿಣಾಮದಿಂದಾಗಿ ಈ ಬಾರಿ ದೇಶದಲ್ಲಿ ದಶಕದಲ್ಲೇ ಅತ್ಯಂತ ಒಣಹವೆಯ ಮುಂಗಾರು ದಾಖಲಾಗಿದೆ. 2015ರಲ್ಲಿ ಕೊನೆಯ ಬಾರಿಗೆ ಇದೇ ರೀತಿಯ ಮಳೆ ಕೊರತೆ ಕಂಡುಬಂದಿದ್ದು, ಆ ವರ್ಷವೂ ದೇಶಾದ್ಯಂತ ಸುಮಾರು ಶೇ.13ರಷ್ಟು ಮಳೆ ಕೊರತೆ ದಾಖಲಾಗಿತ್ತು.
ಜೂನ್‌ನಲ್ಲಿ ತೀವ್ರ ಮಳೆ ಕೊರತೆ
ಮುಂಗಾರು ಆರಂಭದ ಜೂನ್ ತಿಂಗಳಲ್ಲೇ ಮಳೆ ಕೊರತೆ ತೀವ್ರವಾಗಿತ್ತು. ಆ ತಿಂಗಳಲ್ಲಿ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.65ರಷ್ಟು ಮಾತ್ರ ಮಳೆಯಾಗಿತ್ತು. ಜುಲೈನಲ್ಲಿ ಮಳೆಯ ಪ್ರಮಾಣದಲ್ಲಿ ಕೊಂಚ ಚೇತರಿಕೆ ಕಂಡುಬಂದರೂ, ಆಗಸ್ಟ್‌ನಲ್ಲಿ ಮತ್ತೆ ಕೊರತೆ ಉಂಟಾಯಿತು. ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣದಲ್ಲಿ ತುಸು ಸುಧಾರಣೆ ಕಂಡುಬಂದಿದೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ಸ್ಥಳೀಯ9 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ7 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಬಿಗ್ ನ್ಯೂಸ್9 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಮಂಗಳೂರು4 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ9 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಸಿನೆಮಾ8 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್8 hours agoGreen card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ
-
ಅಪರಾಧ4 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















