Connect with us

Uncategorized

Ajith Rai | ಲೋಕಾಯುಕ್ತ ಭರ್ಜರಿ ಬೇಟೆ – ತಹಸೀಲ್ದಾರ್ ಅಜಿತ್ ರೈ ಬಳಿ ಸಿಕ್ಕ ಹಣ, ಒಡವೆ, ಮನೆ, ಮದ್ಯ ನೋಡಿ ಲೋಕಾ ಶಾಕ್..! ಪುತ್ತೂರಿನ ಮನೆಗೂ ದಾಳಿ

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ ನಡೆದಿದೆ. ಅದರಲ್ಲೂ ಪ್ರಮುಖವಾಗಿ ಹೆಚ್ಚು ಸುದ್ದಿಯಲ್ಲಿರುವುದು ಬೆಂಗಳೂರಿನ ಕೆ.ಆರ್.ಪುರಂ ತಹಶೀಲ್ದಾರ್ ಆಗಿರುವ ಪುತ್ತೂರಿನ ಅಜಿತ್ ಕುಮಾರ್ ರೈ (Ajith Rai). ಕೋಟ್ಯಂತರ ರೂ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ, ಕೆ.ಜಿ ಗಟ್ಟಲೆ ಆಭರಣಗಳು, ಬೆಲೆಬಾಳುವ ವಿದೇಶಿ ಮದ್ಯ, ಐಶಾರಾಮಿ ಕಾರು, ಚಂದ್ರಾಲೇಔಟ್ ನಿವಾಸದಲ್ಲಿ 40 ಲಕ್ಷ ನಗದು, ವಾಚ್ ಗಳು ಸೇರಿ ಐಷಾರಾಮಿ ವಸ್ತುಗಳು ಹಾಗೂ ದಾಖಲೆಗಳು ಇತ್ಯಾದಿ ಅಜಿತ್ ಮನೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಅಜಿತ್ ಆಪ್ತರ ಮನೆ, ಸಹೋದರನ ಮನೆ. ಹುಟ್ಟೂರು ಪುತ್ತೂರು ಸೇರಿ ಹಲವು ಕಡೆ ಈ ದಾಳಿ ನಡೆದಿದ್ದು, ಹಲವು ಮಹತ್ವದ ದಾಖಲೆಯನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಷ್ಟಕ್ಕೂ ಯಾರು ಈ ಅಜಿತ್ ಕುಮಾರ್ ರೈ? ಅವರ ಹಿನ್ನೆಲೆ ಏನು? ಯಾವ ಊರು? ಎಷ್ಟು ಅಕ್ರಮ ಆಸ್ತಿ ಲಭಿಸಿದೆ? ಬೇನಾಮಿ ಆಸ್ತಿ ಸಂಪಾದನೆ ಮಾಡಿದ್ದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Ad Widget

Ad Widget <> Ad Widget

ಕೋಟ್ಯಾದಿಪತಿಯಾಗಿರೋ ಅಜಿತ್ ಕುಮಾರ್ ರೈ ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸೊರಕೆಯವರು. ತಂದೆ ದಿ.ಆನಂದ್ ರೈ ಸರ್ಕಾರಿ ಸರ್ವೇಯರ್(ಭೂ ಮಾಪಕ) ಆಗಿ ಕೆಲಸ ಮಾಡುತ್ತಿದ್ದರು. ಸರ್ವೇಯರ್ ಆಗಿದ್ದ ತಂದೆ ಆನಂದ ರೈ 51. ವರ್ಷ ವಯಸ್ಸಿನಲ್ಲಿ ‌ಮರಣ ಹೊಂದಿದ್ದರು. ಮರಣ ನಂತರ ಅನುಕಂಪದ ಆಧಾರದಲ್ಲಿ ಅಜಿತ್ ರೈಗೆ ಸರ್ಕಾರಿ ಕೆಲಸ ಸಿಕ್ಕಿತ್ತು. ಸಣ್ಣ ವಯಸ್ಸಿನಲ್ಲೇ ಕಂದಾಯ ನಿರೀಕ್ಷಕರಾಗಿ ಆಗಿ ಬೆಂಗಳೂರಿನಲ್ಲೇ ಸರ್ಕಾರಿ ಕೆಲಸಕ್ಕೆ ನೇಮಕವಾಗಿದ್ದ ಈತ ಅಲ್ಲಿಂದ ಭಡ್ತಿ ಪಡೆದು ಉಪ ತಹಶೀಲ್ದಾರ್ ಬಳಿಕ ತಹಶಿಲ್ದಾರ್ ಹುದ್ದೆಗೆ ನೇಮಕವಾಗಿದ್ದ. ಓರ್ವ ಸಹೋದರ ಕೂಡ ಬೆಂಗಳೂರಿನಲ್ಲೇ ವಾಸವಾಗಿದ್ದು, ಪುತ್ತೂರಿನ ಸೊರಕೆಯಲ್ಲಿ ತಾಯಿ ಮಾತ್ರ ಇದ್ದಾರೆ. ತಂದೆ ದಿ.ಅನಂದ ರೈ ಅವರು ಸೊರಕೆಯಲ್ಲಿ ಮನೆ ಮತ್ತು ತೋಟ ಮಾಡಿದ್ದಾರೆ. ಸರ್ಕಾರಿ ಕೆಲಸದಲ್ಲಿ ಬಹುತೇಕ ದಕ್ಷಿಣ ಕನ್ನಡ ಜಿಲ್ಲೆಯ ಹೊರಗೆ ಅಜಿತ್ ರೈ ಪೋಸ್ಟಿಂಗ್ ಆಗಿದ್ದರು.



Ad Widget

ಹೀಗಾಗಿ ಅಜಿತ್ ರೈ ದ.ಕ ಜಿಲ್ಲೆಯ ಹೊರಗೆ ಬೆಂಗಳೂರು ಸೇರಿ ಹಲವಡೆ ಕೋಟ್ಯಂತರ ರೂ ಆಸ್ತಿ‌ ಮಾಡಿಟ್ಟಿದ್ದಾರೆ. ಇಂದು ಪುತ್ತೂರಿನಲ್ಲಿರೋ ಮನೆ‌ ಮೇಲೂ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Ad Widget

Ad Widget

ಬಿಬಿಎಂಪಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸಿದ ಅರೋಪದಡಿ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿದ್ದ ಅಜಿತ್‌ ಕುಮಾರ್ ರೈಯನ್ನ ಸರ್ಕಾರ 2022, ನವೆಂಬರ್ ನಲ್ಲಿ ಅಮಾನತು ಮಾಡಲಾಗಿತ್ತು. ಬಿಬಿಎಂಪಿ ವತಿಯಿಂದ ಮಹದೇವಪುರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡುತ್ತಿದ್ದರೂ ಇದಕ್ಕೆ ಕಾನೂನಾತ್ಮಕವಾಗಿ ತೊಡಕು ಉಂಟಾಗುತ್ತಿತ್ತು. ಈ ಪ್ರಕರಣದಲ್ಲಿ ತಹಶೀಲ್ದಾರ್‍‌ ಎಸ್. ಅಜಿತ್‌ ಕುಮಾರ್ ರೈ ಒತ್ತುವರಿದಾರರಿಗೆ ಸಹಕಾರ ನೀಡುವ ಮೂಲಕ ಕಾನೂನಾತ್ಮಕವಾಗಿ ತೆರವು ಮಾಡದಂತೆ ನೋಡಿಕೊಂಡಿದ್ದ.

ಒತ್ತುವರಿ ತೆರವು ಕಾರ್ಯಕ್ಕೆ ತಹಶೀಲ್ದಾರ್ ‍‌ ವತಿಯಿಂದ ನಿರಂತರ ತಕರಾರು ಉಂಟಾಗುವಂತೆ ಮಾಡಿದ್ದ. ಜತೆಗೆ ಒತ್ತುವರಿದಾರರು ನ್ಯಾಯಾಲಯಗಳಿಂದ ಸ್ಟೇ ಆದೇಶ ತರಲು ಕೂಡ ನೆರವಾಗಿದ್ದರು. ಆದರೆ ಅಮಾನತು ಆದೇಶದ ವಿರುದ್ದ ಕೆ.ಎ‌.ಟಿಯಲ್ಲಿ ಪ್ರಶ್ನಿಸಿ ತಡೆ ತೆರವು ಮಾಡಿದ್ದ ಅಜಿತ್ ರೈ ಮತ್ತೆ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿ ನೇಮಕಗೊಂಡಿದ್ದರು.

ಸಹೋದರನ ಮನೆಯಲ್ಲಿ ಸಿಕ್ಕಿದ್ದೆಷ್ಟು?
ತಹಸೀಲ್ದಾರ್ ಅಜಿತ್ ರೈ ಮನೆ ಮೇಲೆ ಲೋಕಾ ದಾಳಿ ಪ್ರಕರಣ ಸಂಬಂಧ ಸಹಕಾರನಗರದಲ್ಲಿ ಲೋಕಾಯುಕ್ತ ಎಸ್ಪಿ ಅಶೋಕ್ ಮಾಹಿತಿ ನೀಡಿ, ತಹಸೀಲ್ದಾರ್ ಅಜಿತ್ ರೈ ವಿರುದ್ಧ ಆದಾಯಕ್ಕೆ ಮೀರಿದ ಆಸ್ತಿಗಳಿಸಿದ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಿಸಿದ್ದೇವೆ. ಹೀಗಾಗಿ ಅಜಿತ್ ರೈ ಗೆ ಸಂಬಂಧಿಸಿದ 12 ಕಡೆ ದಾಳಿ ಮಾಡಲಾಗಿದೆ. ಸಹಕಾರ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಇದುವರೆಗೂ ಸಹೋದರನ ಮನೆಯಲ್ಲಿ 40 ಲಕ್ಷ ಹಣ ,ಸಹಕಾರ ನಗರ ಮನೆಯಲ್ಲಿ 2 ಲಕ್ಷ ಹಣ, 700 ಗ್ರಾಂ ಚಿನ್ನಾಭರಣ ಸಿಕ್ಕಿದೆ. ಎಲ್ಲಾ ಮಹಜರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ಮಹಜರ್ ಬಳಿಕ ಹಣ ,ಚಿನ್ನಾಭರಣ ,ಲಿಕ್ಕರ್, ಕಾರ್ ಗಳ ವಿವರ ಸಿಗಲಿದೆ. ಸಂಜೆ ವೇಳೆಗೆ ಪೂರ್ಣ ಮಾಹಿತಿ ನೀಡಲಾಗುವುದು ಎಂದಿದ್ದಾರೆ.

ಐಶಾರಾಮಿ ಅಪಾರ್ಟ್ಮೆಂಟ್ ನಲ್ಲಿ ವಾಸ:
ಸಹಕಾರ ನಗರದಲ್ಲಿ ಅಜಿತ್ ರೈ ಐಷಾರಾಮಿ ಅಪಾರ್ಟ್ಮೆಂಟ್ ನಲ್ಲಿ ದಾಳಿ ನಡೆದಿದೆ. ಸಹಕಾರನಗರದ ಪಾರ್ಚೂನ್ ಸೆಂಟರ್ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಐಟಿಸಿ ಪಾರ್ಕ್ ಬಳಿ ಈ ಮನೆ ಇದೆ. ಅಪಾರ್ಟ್ಮೆಂಟ್ ನಲ್ಲಿ ಮೂರು ಪ್ಲಾಟ್ ಗಳು ಇದ್ದು, ಒಂದು ಪ್ಲಾಟ್ ಅಂದಾಜು ಮೂರು ಕೋಟಿ ಮೌಲ್ಯ ಹೊಂದಿದೆ. ಮೊದಲನೇ ಮಹಡಿಯಲ್ಲಿ ತಹಸೀಲ್ದಾರ್ ಅಜಿತ್ ರೈ ವಾಸವಿದ್ದು, ಕೋಟಿ ಕೋಟಿ ಖರ್ಚು ಮಾಡಿ ಇಂಟಿರಿಯರ್ ಮಾಡಿಸಿದ್ದಾನೆ.

ಸಹಕಾರ ನಗರದ ಅಜೀತ್ ರೈ ಮನೆಯಲ್ಲಿ ಲಿಕ್ಕರ್ ಬಾಟಲ್ ಗಳ ಪತ್ತೆಯಾಗಿದೆ. ವಿದೇಶಿ ಲಿಕ್ಕರ್ ಗಳು ತಪಾಸಣೆ ವೇಳೆ ಪತ್ತೆಯಾಗಿದ್ದು, ಒಂದೊಂದು ಬಾಟಲ್ 5 ಸಾವಿರದಿಂದ 50 ಸಾವಿರ ಹಾಗೂ ಒಂದು ಲಕ್ಷದವರೆಗೆ ಇವೆ.

ಲೋಕಾಯುಕ್ತ ಡಿವೈಎಸ್ಪಿ ಪ್ರಮೋದ್ ನೇತೃತ್ವದಲ್ಲಿ ನಾಲ್ಕು ಕಾರುಗಳಲ್ಲಿ ಬೆಳ್ಳಂಬೆಳಗ್ಗೆ 4.30ರ ಸಮಯದಲ್ಲಿ ಅಜಿತ್ ರೈ ಮನೆ ಮೇಲೆ ದಾಳಿ ನಡೆದಿದೆ. ಸುಮಾರು 15 ಕ್ಕೂ ಹೆಚ್ಚು ಅಧಿಕಾರಿಗಳು ಅಜಿತ್ ರೈ ವಾಕಿಂಗ್ ಹೋಗುವ ಮುನ್ನ ದಾಳಿ ಮಾಡಿದ್ದು, ಅಜಿತ್ ರೈ ವಾಕಿಂಗ್ ಹೋಗಿದ್ರೆ, ತಪ್ಪಿಸಿಕೊಳ್ಳುವ ಸಾಧ್ಯತೆ ಇತ್ತು. ಅಜಿತ್ ಮನೆಯ ಪಾರ್ಕಿಂಗ್ ನಲ್ಲಿ ಬೈಕ್ ಹಾಗೂ ಕಾರ್ ಗಳ ತಪಾಸಣೆ ನಡೆದಿದೆ. ಐಶಾರಾಮಿ ಕಾರು, ಜೀಪ್ ಪತ್ತೆಯಾಗಿದೆ. ಇದಲ್ಲದೆ, ಮಂಗಳೂರಿನ ಪುತ್ತೂರಿನಲ್ಲಿರುವ ಕೆಯ್ಯೂರು ನಲ್ಲಿರುವ ತಾಯಿ ಮನೆ, ದೇವನಹಳ್ಳಿಯ ಇಳತ್ತೋರೆ ನಲ್ಲಿರುವ ಮನೆ, ದೊಡ್ಡಬಳ್ಳಾಪುರದಲ್ಲಿ ಅಜಿತ್ ಗೆ ಸಂಬಂಧಿಸಿದ ಮನೆ, ಚಂದ್ರಾಲೇಔಟ್ ಮನೆಯಲ್ಲಿ ದಾಳಿ ನಡೆದಿದೆ.

ಇನ್ನು ತಹಶಿಲ್ದಾರ್ ಅಜಿತ್ ರೈಗೆ ಆಪ್ತನಾಗಿರುವ ಗೌರವ್ ಶೆಟ್ಟಿ ಮನೆ ಮೇಲೂ ದಾಳಿ ನಡೆದಿದೆ.

ಬಸವೇಶ್ವರ ನಗರದ ಗೌರವ್ ಶೆಟ್ಟಿ ನೆ ಮೇಲೆ ದಾಳಿ ನಡೆದಿದ್ದು, ಬೆನಾಮಿ ಆಸ್ತಿ ಪತ್ತೆಯಾಗಿದೆ. ಇಷ್ಟು ಮಾತ್ರವಲ್ಲದೆ ಅಜಿತ್ ರೈ ಸಂಬಂಧಿಕರು,ಕುಟುಂಬಸ್ಥರು ಸೇರಿದಂತೆ ಆಪ್ತ ವಲಯದ ಹಲವು ಕಡೆ ದಾಳಿ ನಡೆದಿದೆ.

Ad Widget
Click to comment

Leave a Reply

Uncategorized

Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ

Published

on



Ad Widget

Ad Widget

Ad Widget

Ad Widget

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ, ಆಕಾಶವಾಣಿ ಭವನದ ಆವರಣದಲ್ಲಿ ಎಂಟು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಸುಮಾರು 250 ಮಂದಿಯನ್ನು ದೆಹಲಿ ಪೊಲೀಸರು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ವಶಕ್ಕೆ ಪಡೆದವರಲ್ಲಿ ಸುಮಾರು 50 ಸಂಸದರೂ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನಾಕಾರರನ್ನು ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಕಾಶವಾಣಿ ಭವನದ ಆವರಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಪೊಲೀಸರು, ರಾಹುಲ್ ಗಾಂಧಿ ಅವರೊಂದಿಗೆ ಕೆ.ಸಿ. ವೇಣುಗೋಪಾಲ್, ಪವನ್ ಖೇರಾ, ಕೆ. ಸುರೇಶ್, ಅಮರಿಂದರ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ಸಂಸದರು ಮತ್ತು ಮುಖಂಡರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.

Ad Widget

Ad Widget <> Ad Widget

ಸಂಸತ್ ಭವನದ ರಸ್ತೆಯಲ್ಲಿರುವ ಆಕಾಶವಾಣಿ ಭವನದಿಂದ ಕೇವಲ 300 ಮೀಟರ್ ದೂರದಲ್ಲಿರುವ ಚುನಾವಣಾ ಆಯೋಗದ ಕಚೇರಿಯತ್ತ ವಿರೋಧ ಪಕ್ಷಗಳ ಸಂಸದರು ನಡೆಸುತ್ತಿದ್ದ ಮೆರವಣಿಗೆಯನ್ನು ಪೊಲೀಸರು ತಡೆದಿದ್ದರು.



Ad Widget

ಇದರಿಂದಾಗಿ ರಾಹುಲ್ ಗಾಂಧಿ ಮತ್ತು ಇತರ ಮುಖಂಡರು ಆಕಾಶವಾಣಿ ಭವನದ ಆವರಣ ಪ್ರವೇಶಿಸಿ ಅಲ್ಲಿಯೇ ಧರಣಿ ಕುಳಿತಿದ್ದರು.

Ad Widget

Ad Widget

ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಎಸ್‌ಐಆರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಮಾಧ್ಯಮ ವರದಿಗಳ ಆಧಾರದಲ್ಲಿ, ‘ವೋಟ್ ಚೋರಿ’ ಆರೋಪಿಸಿ ವಿರೋಧ ಪಕ್ಷಗಳ ಸಂಸದರು ಈ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸುಮಾರು ಎಂಟು ಗಂಟೆಗಳಿಗೂ ಹೆಚ್ಚು ಕಾಲ ಮುಂದುವರಿದ ಧರಣಿಯ ಬಳಿಕ, ಪೊಲೀಸರು ಸ್ಥಳ ತೆರವುಗೊಳಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

Ad Widget
Continue Reading

Uncategorized

Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

Uncategorized

ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್‌ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .

Ad Widget

Ad Widget <> Ad Widget

ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ದಸ್ತಗಿರಿ ವಾರೆಂಟ್‌ ಜಾರಿಗೊಳಿಸಿತ್ತು.ವಾರೆಂಟ್‌ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.



Ad Widget

ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading