Connect with us

ವರದಿಗಳು

ಪಾಠ ಮಾಡಿ ಅಂದ್ರೆ ಈ ಹಳ್ಳಿ ಮೇಷ್ಟ್ರು ಮಾಡಿದ್ದೇ ಬೇರೆ…! ವಿದ್ಯಾರ್ಥಿನಿಗೆ ಪೋಲಿ ಮೆಸೇಜ್ ಮಾಡಿ ಕೊಂಡ ಶಿಕ್ಷಕನ ಮೈ ಚಳಿ ಬಿಡಿಸಿದ ಗ್ರಾಮಸ್ಥರು

Published

on



Ad Widget

Ad Widget

Ad Widget

Ad Widget

ಹಾವೇರಿ, ಡಿಸೆಂಬರ್ 01: ವಿದ್ಯಾರ್ಥಿಗಳಿಗೆ ಒಳ್ಳೆಯ ಸಂಸ್ಕಾರ, ನೈತಿಕತೆಯನ್ನು ಹೇಳಿಕೊಡುವ ಮೂಲಕ ಆದರ್ಶ ನಡವಳಿಕೆ ತೋರಬೇಕಾದ ಗುರುವಿನ ಮೇಲೆಯೇ ಗುರುತರ ಆರೋಪವೊಂದು ಹಾವೇರಿ ಜಿಲ್ಲೆಯಲ್ಲಿ ಕೇಳಿ ಬಂದಿದೆ  

Ad Widget

Ad Widget

Ad Widget

Ad Widget

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿರುವ ಶಾಲಾ ಶಿಕ್ಷಕ ತಾನು ಓದು ಕಲಿಸುತ್ತಿರುವ ವಿದ್ಯಾರ್ಥಿನಿಗೆ ಕಾಮ ಪಾಠ ಮಾಡಲು ಹೋಗಿ ತಗಲಾಕಿಕೊಂಡಿದ್ದಾನೆ.  ಅನ್‌ ಲೈನ್‌ ಕ್ಲಾಸಿಗೆಂದು ಎಸ್‌ ಎಸ್‌ ಎಲ್‌ ಸಿ  ವಿದ್ಯಾರ್ಥಿನಿ ನೀಡಿದ ಮೊಬೈಲ್‌ ನಂಬರನ್ನು ದುರ್ಬಳಕೆ ಮಾಡಿಕೊಂಡು ಆಕೆಯ ಪೋಷಕರ ಕೈಗೆ  ಸಿಕ್ಕಿ ಹಾಕಿಕೊಂಡಿದ್ದಾನೆ .

Ad Widget

Ad Widget

Ad Widget alt="Ad Widget"/>

Ad Widget

ಈ ಹಳ್ಳಿ ಮೇಷ್ಟ್ರು ಮಲ್ಲಪ್ಪ ತಳವಾರ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ವಿಷಯ ತಿಳಿಯುತ್ತಲೇ ಶಾಲೆ ಮುಂದೆ ಸೇರಿದ ಪೋಷಕರು ಮತ್ತು ಗ್ರಾಮಸ್ಥರ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

Ad Widget

Ad Widget <> Ad Widget

ಅಷ್ಟಕ್ಕೂ ಆದ್ದದ್ದು ಏನೇಂದರೆ ವರಗುಡ್ಡ ಗ್ರಾಮದ ಪ್ರೌಢಶಾಲೆ ಶಿಕ್ಷಕ ಮಲ್ಲಪ್ಪ ತಳವಾರ 10ನೇ ತರಗತಿ ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ತೆಗೆದುಕೊಂಡ ಆಕೆಗೆ ಅಶ್ಲೀಲ ಮೆಸೇಜ್ ಗಳನ್ನ ಕಳಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ.



Ad Widget

ಆತ ವಿದ್ಯಾರ್ಥಿನಿಗೆ ಕಳುಹಿಸಿದ ಪೋಲಿ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್‌ ಆಗಿದೆ. ಈ ಸಂದೇಶಗಳನ್ನು ಓದಿರುವ ಪ್ರಜ್ನಾವಂತರು ಒಬ್ಬ ಶಿಕ್ಷಕ ಈ ರೀತಿಯೂ ಅಶ್ಲೀಲ ಸಂದೇಶ ಬರೆಯಬಹುದೆ ಎಂದು ಬೆಕ್ಕಸ ಬೆರಗಾಗಿದ್ದಾರೆ .

Ad Widget

Ad Widget

 

ಈತನ  ವರ್ತನೆಯಿಂದ ಕೆಂಡಮಂಡಲಾರದ ಊರಿನ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು, ಕೂಡಲೇ ಆ ಶಿಕ್ಷಕನನ್ನು  ಬಂಧಿಸಿ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸದ್ಯ ವಿದ್ಯಾರ್ಥಿನಿಯ ಕುಟುಂಬ ಮಲ್ಲಪ್ಪನ ವಿರುದ್ಧ ದೂರು ನೀಡಿದ್ದು, ಆತನನ್ನು ಶಾಲೆಯಿಂದ ಅಮಾನತು ಮಾಡಲಾಗಿದ್ದು, ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪಿಎಸ್‍ಐ ವಸಂತ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ

Published

on



Ad Widget

Ad Widget

Ad Widget

Ad Widget

ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.

Ad Widget

Ad Widget <> Ad Widget

ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.



Ad Widget

ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

Continue Reading

ಅಂತರ ರಾಜ್ಯ

Elon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್

Published

on



Ad Widget

Ad Widget

Ad Widget

Ad Widget

ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಭಾರತದಲ್ಲಿ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆಯ ಶುಲ್ಕ ಕೈಗೆಟುಕುವಂತಿರಬೇಕು. ಸೇವೆ ದುಬಾರಿಯಾದರೆ ಗ್ರಾಹಕರು ಅದನ್ನು ಬಳಸುವುದಿಲ್ಲ ಎಂದು ಅಮೆರಿಕದ ಉದ್ಯಮಿ ಇಲಾನ್ ಮಸ್ಕ್ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಮಸ್ಕ್, ಸ್ಪರ್ಧೆಯಿಂದಾಗಿ ಭಾರತದ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಲಭ್ಯವಾಗಲಿದ್ದು, ಇದರಿಂದ ಅವರಿಗೆ ಪ್ರಯೋಜನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರಿಂದ ಉದ್ಯಮಿ ಮುಕೇಶ್ ಅಂಬಾನಿ ಅವರ ಲಾಭ ಕಡಿಮೆಯಾಗಬಹುದಾದರೂ, ಅವರ ಗ್ರಾಹಕರು ಸಂಪೂರ್ಣವಾಗಿ ದೂರವಾಗುವುದಿಲ್ಲ ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಮುಕೇಶ್ ಅಂಬಾನಿ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಾದಿಸುತ್ತಿರುವವರ ವಿರುದ್ಧವೂ ಮಸ್ಕ್ ಟೀಕೆ ವ್ಯಕ್ತಪಡಿಸಿದ್ದಾರೆ. ‘ಅಂಬಾನಿ ಅವರು ನಿಗದಿಪಡಿಸಿರುವ ಕಡಿಮೆ ಶುಲ್ಕದ ಜೊತೆ ಸ್ಪರ್ಧಿಸಲು ಸ್ಟಾರ್‌ಲಿಂಕ್‌ಗೆ ಆಗಲಿಕ್ಕಿಲ್ಲ ಎಂದು ಅವರು (ಬೆಂಬಲಿಗರು) ಒಂದೆಡೆ ವಾದಿಸುತ್ತಾರೆ. ಮತ್ತೊಂದೆಡೆ, ಸ್ಟಾರ್‌ಲಿಂಕ್ ಬಹಳ ಬಲಿಷ್ಠವಾದ ಪ್ರತಿಸ್ಪರ್ಧಿ ಆಗಬಹುದು ಎಂದೂ ಹೇಳುತ್ತಾರೆ’ ಎಂದು ಮಸ್ಕ್ ವಿವರಿಸಿದ್ದಾರೆ. ಅಂಬಾನಿ ಅವರ ಆನ್‌ಲೈನ್ ಬೆಂಬಲಿಗರ ‘ಹಾಸ್ಯಾಸ್ಪದ ವಾದಗಳು’ ತಮಗೆ ಅರ್ಥಪೂರ್ಣವಾಗಿ ಕಾಣುತ್ತಿಲ್ಲ ಎಂದಿದ್ದಾರೆ.



Ad Widget

ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ ಉಪಗ್ರಹ ಇಂಟರ್ನೆಟ್ ಸೇವೆ ಆರಂಭಿಸಲು ಅಗತ್ಯ ಅನುಮತಿಗಳನ್ನು ನೀಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮಸ್ಕ್ ಕಳೆದ ಕೆಲವು ದಿನಗಳಿಂದ ಮುಕೇಶ್ ಅಂಬಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಆದರೆ, ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈವರೆಗೆ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.

Continue Reading

ಅಂತರ ರಾಜ್ಯ

Kasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್‌ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ

Published

on



Ad Widget

Ad Widget

Ad Widget

Ad Widget

ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.

Ad Widget

Ad Widget

Ad Widget

Ad Widget

ಕಾಸರಗೋಡು: ಮದುವೆಯಿಂದ ಹಿಂದೆ ಸರಿದ ಯುವತಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ವರನ ಮನೆಯವರು ನೀಡಿದ ದೂರಿನ ಮೇರೆಗೆ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನಿಶ್ಚಿತಾರ್ಥದ ಸಂದರ್ಭದಲ್ಲಿ ನೀಡಿದ್ದ ಚಿನ್ನಾಭರಣ, ಐಫೋನ್, ನಗದು ಸೇರಿದಂತೆ ಸುಮಾರು ₹7.57 ಲಕ್ಷ ಮೌಲ್ಯದ ಉಡುಗೊರೆಗಳನ್ನು ಹಿಂದಿರುಗಿಸದೆ ವಂಚಿಸಿದ್ದಾರೆ ಎಂಬುದು ಆರೋಪವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ನ್ಯಾಯಾಲಯದ ಆದೇಶದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮದುವೆ ರದ್ದಾದ ಬಳಿಕ ಉಡುಗೊರೆಗಳನ್ನು ಹಿಂದಿರುಗಿಸದ ಕಾರಣ ತಮ್ಮ ಕುಟುಂಬಕ್ಕೆ ₹7,57,037 ನಷ್ಟವಾಗಿದೆ ಎಂದು ವರನ ಕಡೆಯವರು ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಪಡನ್ನಕ್ಕಾಡ್ ಸಮೀಪದ ಯುವಕನಿಗೆ ಉದುಮ ಸಮೀಪದ ಯುವತಿಯೊಂದಿಗೆ ವಿವಾಹ ನಡೆಸಲು 2026ರ ಏಪ್ರಿಲ್‌ನಲ್ಲಿ ನಿಶ್ಚಯಿಸಲಾಗಿತ್ತು. ಈ ಸಂದರ್ಭದಲ್ಲಿ ನಿಶ್ಚಿತಾರ್ಥದ ಭಾಗವಾಗಿ ವಧುವಿಗೆ ಐಫೋನ್, ಚಿನ್ನಾಭರಣ, ವಿವಿಧ ಉಡುಗೊರೆಗಳು ಹಾಗೂ ನಗದು ಸೇರಿದಂತೆ ಸುಮಾರು ₹7.5 ಲಕ್ಷ ಮೌಲ್ಯದ ವಸ್ತುಗಳನ್ನು ವರನ ಕುಟುಂಬದವರು ನೀಡಿದ್ದರು ಎನ್ನಲಾಗಿದೆ.



Ad Widget

ಆದರೆ, ಬಳಿಕ ಯುವತಿ ಮದುವೆಯಿಂದ ಹಿಂದೆ ಸರಿದಿದ್ದು, ಆಕೆಯ ತಾಯಿ ಹಾಗೂ ಮಾವನೊಂದಿಗೆ ಸೇರಿ ಮದುವೆ ರದ್ದುಗೊಳಿಸಲು ಸಂಚು ರೂಪಿಸಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ. ಅಲ್ಲದೆ, ನಿಶ್ಚಿತಾರ್ಥದ ವೇಳೆ ನೀಡಿದ್ದ ಐಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಹಿಂದಿರುಗಿಸಲು ನಿರಾಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Ad Widget

Ad Widget

ಈ ಸಂಬಂಧ ಯುವತಿ, ಆಕೆಯ ತಾಯಿ ಹಾಗೂ ಮಾವನ ವಿರುದ್ಧ ವಂಚನೆ, ನಂಬಿಕೆ ದ್ರೋಹ, ಅಪರಾಧ ಸಂಚು ಸೇರಿದಂತೆ ವಿವಿಧ ಆರೋಪಗಳಡಿ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading